ವಿಶ್ವದಾದ್ಯಂತ ಕೊರೋನಾ ಮರಣ ಮೃದಂಗ: ಭಾರತದಲ್ಲಿ 81 ಜನರಿಗೆ ಸೋಂಕು
Published
5 years agoon
By
Adminವಿಶ್ವದಾದ್ಯಂತ ಕೊರೋನಾ ಮರಣ ಮೃದಂಗ: ಭಾರತದಲ್ಲಿ 81 ಜನರಿಗೆ ಸೋಂಕು
ಹೊಸದಿಲ್ಲಿ: ಮಾರಣಾಂತಿಕ ಕೊರೋನಾ ವೈರಸ್ ಇಂದು ಇಡೀ ವಿಶ್ವಕ್ಕೆ ಬೆದರಿಕೆ ಒಡ್ಡಿದೆ. ವಿವಿಧ ದೇಶಗಳಲ್ಲಿ ಸುಮಾರು 5 ಸಾವಿರಕ್ಕೂ ಅಧಿಕ ಜನ ಈ ವೈರಸ್ ಬಲಿಯಾಗಿದ್ದರೆ, ಸುಮಾರು 10.000ಕ್ಕೂ ಹೆಚ್ಚು ಜನರಿಗೆ ಈ ಸೋಂಕು ತಗುಲಿದೆ. ಭಾರತದಲ್ಲೂ 81 ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
ಬ್ರೆಜಿಲ್ ಪ್ರಧಾನಿ ಜೈರ್ ಮೆಸ್ಸಿಯಾಸ್ ಬೋಲ್ಸನಾರೊ, ಅಸ್ಟ್ರೇಲಿಯಾದ ಗೃಹ ಸಚಿವ ಪೀಟರ್ ಡಟನ್ ಮತ್ತು ಕೆನಡಾ ಪ್ರಧಾನಿ ಜಸ್ಟಿನ್ ಹೆಂಡತಿ ಸೋಫಿಗೂ ಅವರೂ ಇದೀಗ ಕೊರೋನಾ ಸೋಂಕಿಗೆ ತುತ್ತಾಗು ತುರ್ತು ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ರೆಜಿಲ್ ದೇಶದ ಪ್ರಧಾನಿ ಜೈರ್ ಮೆಸ್ಸಿಯಾಸ್ ಬೋಲ್ಸನಾರೋ ಕಾರ್ಯಕ್ರಮದ ನಿಮಿತ್ತ ಕಳೆದ ವಾರ ಅಮೆರಿಕದ ಪ್ರಧಾನಿ ಡೊನಾಲ್ಡ್ ಟ್ರಂಪ್ ಅವರನ್ನು ಬೇಟಿಯಾಗಿದ್ದಾರೆ.
ಆದರೆ, ಇಂದು ಅವರ ರಕ್ತ ಪರೀಕ್ಷೆ ನಡೆಸಿದಾಗ ಅವರ ದೇಹದಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ. ಹೀಗಾಗಿ ನಿನ್ನೆ ಬೋಲ್ಸನಾರೋ ಅವರನ್ನು ಭೇಟಿ ಮಾಡಿದ್ದ ಡೊನಾಲ್ಡ್ ಟ್ರಂಪ್ ಅವರಿಗೂ ಇದೀಗ ಕೊರೋನಾ ಭೀತಿ ಉಂಟಾಗಿದ್ದು, ತನ್ನ ಎಲ್ಲಾ ಪ್ರವಾಸವನ್ನು ಈಗಾಗಲೇ ಅವರು ರದ್ದುಗೊಳಿಸಿದ್ದಾರೆ.
ಅಂತಾರಾಷ್ಟ್ರೀಯ ಮಕ್ಕಳ ಹಕ್ಕುಗಳ ಕುರಿತಾದ ಮತ್ತೊಂದು ಕಾರ್ಯಕ್ರಮದಲ್ಲಿ ಟ್ರಂಪ್ ಪುತ್ರಿ ಇವಾಂಕ ಟ್ರಂಪ್ ಆಸ್ಟ್ರೇಲಿಯಾದ ಗೃಹ ಸಚಿವ ಪೀಟರ್ ಡಟನ್ ಅವರನ್ನು ಭೇಟಿ ಮಾಡಿದ್ದರು. ಆದರೆ, ದುರಾದೃಷ್ಟವಶಾತ್ ಪೀಟರ್ ಡಟನ್ ಅವರಿಗೂ ಕೊರೋನಾ ಸೋಂಕು ತಗುಲಿರುವುದಾಗಿ ವರದಿಯಾಗಿದೆ. ಇದಲ್ಲದೆ, ಕೆನಡಾದ ಪ್ರಥಮ ಮಹಿಳೆ ಮತ್ತು ಅಲ್ಲಿನ ಪ್ರಧಾನಿ ಜಸ್ಟಿನ್ ಅವರ ಹೆಂಡತಿ ಸೋಫಿ ಕೆಲವು ದಿನಗಳ ಹಿಂದಷ್ಟೇ ಬ್ರಿಟನ್ನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ಅಲ್ಲಿನ ಸಮಾವೇಶದಲ್ಲಿ ಪಾಲ್ಗೊಂಡು ಬುಧವಾರ ಅವರು ಕೆನಡಾಗೆ ವಾಪಾಸಾಗಿದ್ದರು.
ಕೆನಡಾಗೆ ಮರಳಿದ ನಂತರ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ವೈದ್ಯಕೀಯ ತಪಾಸಣೆ ವೇಳೆ ಸೋಫಿ ಗ್ರೆಗೋಯರ್ಗೆ ಕೊರೋನಾ ವೈರಸ್ ತಗುಲಿರುವುದು ಖಚಿತವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಸೋಫಿ ಅವರನ್ನು ತಪಾಸಣೆ ನಡೆಸಿದಾಗ ಈ ಸಂಗತಿ ದೃಢಪಟ್ಟಿದೆ. ಅವರನ್ನು ಐಸೋಲೇಟೆಡ್ ಸ್ಥಳದಲ್ಲಿ ಇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮಾರಕ ಕೊರೋನಾ ವೈರಸ್ ಭಾರತದಲ್ಲೂ ದೇಶದಲ್ಲಿ ತನ್ನ ರುದ್ರನರ್ತನ ತೋರುತ್ತಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 69ರ ವೃದ್ಧೆ ಮಾರಕ ವೈರಸ್ಗೆ ಬಲಿಯಾಗಿದ್ದಾರೆ. ಎರಡು ದಿನದ ಅಂತರದಲ್ಲಿ ದೇಶದಲ್ಲಿ ಇಬ್ಬರು ಮಾರಕ ಸೋಂಕಿನಿಂದ ಬಲಿಯಾಗಿದ್ದಾರೆ. ಕರ್ನಾಟಕದ ಕಲಬುರಗಿಯಲ್ಲಿ 75 ವರ್ಷದ ವೃದ್ಧ ಕೊರೋನಾ ವೈರಸ್ನಿಂದ ಮೃತಪಟ್ಟಿದ್ದರು. ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 69 ವರ್ಷದ ವೃದ್ಧೆ ಬಲಿಯಾಗಿದ್ದು ಆತಂಕ ಹೆಚ್ಚಾಗಿದೆ.
You may like
LATEST NEWS
ಮೊಸಳೆ ತಲೆ ಬುರುಡೆ ಕಳ್ಳ ಸಾಗಣೆ ಯತ್ನ; ಕೆನಡಾ ಮೂಲದ ವ್ಯಕ್ತಿ ಅರೆಸ್ಟ್
Published
7 hours agoon
09/01/2025By
NEWS DESK4ಮಂಗಳೂರು/ನವದೆಹಲಿ : ಮೊಸಳೆಯ ತಲೆಬುರುಡೆ ಕಳ್ಳಸಾಗಣೆಗೆ ಯತ್ನಿಸಿದ ಆರೋಪದಲ್ಲಿ ಕೆನಡಾ ಮೂಲದ ವ್ಯಕ್ತಿಯನ್ನು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಟರ್ಮಿನಲ್ 3ರಲ್ಲಿ ಕೆನಡಾ ಮೂಲದ ವ್ಯಕ್ತಿ ಮಾಂಟ್ರಿಯಲ್‌ಗೆ ವಿಮಾನ ಹತ್ತಲು ಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಮೊಸಳೆಯ ಮರಿಯನ್ನು ಹೋಲುವ ಸುಮಾರು 770 ಗ್ರಾಂ ತೂಕದ ಚೂಪಾದ ಹಲ್ಲುಗಳನ್ನು ಹೊಂದಿರುವ ತಲೆಬುರುಡೆ ಪತ್ತೆಯಾಗಿದೆ.
ದೆಹಲಿ ಸರ್ಕಾರದ ಅಧೀನದಲ್ಲಿರುವ ಅರಣ್ಯ ಮತ್ತು ವನ್ಯಜೀವಿ ಇಲಾಖೆಯು ನಡೆಸಿದ ಶೋಧ ಕಾರ್ಯದಲ್ಲಿ ಅದು ಮೊಸಳೆ ಮರಿಯ ತಲೆಬುರುಡೆ ಎಂಬುದಾಗಿ ದೃಢಪಟ್ಟಿದೆ. 1972ರ ವನ್ಯ ಜೀವಿ ಕಾಯ್ದೆಯಡಿಯಲ್ಲಿ ಸಂರಕ್ಷಿತ ಜಾತಿಗೆ ಸೇರಿದ ತಲೆಬುರುಡೆ ಇದಾಗಿದೆ. ಹೆಚ್ಚಿನ ವೈಜ್ಞಾನಿಕ ತಪಾಸಣೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
LATEST NEWS
ಶರಣಾದ ನಕ್ಸಲರನ್ನು NIA ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ ಪೊಲೀಸರು!
Published
7 hours agoon
09/01/2025By
NEWS DESK2ಬೆಂಗಳೂರು: ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಮೋಸ್ಟ್ ವಾಂಟೆಡ್ 6 ಜನ ನಕ್ಸಸಲರು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದರು. ಬಳಿಕ ಅವರನ್ನ ವಶಕ್ಕೆ ಪಡೆದ ಪೊಲೀಸರು ಇಂದು ಅವರನ್ನು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ್ದಾರೆ.
ಹೌದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಂಕಿರಣದ ಎನ್ಐಐ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಕ್ಸಲರನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಇದೀಗ ಹಾಜರುಪಡಿಸಿದ್ದಾರೆ. ಇದಕ್ಕೂ ಮೊದಲು 6 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟ್ ಮುಂದೆ ಇದೀಗ ಹಾಜರುಪಡಿಸಿದ್ದಾರೆ.
LATEST NEWS
ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
Published
8 hours agoon
09/01/2025By
NEWS DESK4ಮಂಗಳೂರು/ಬೆಂಗಳೂರು : ಅತ್ಯಾ*ಚಾರ, ಅಶ್ಲೀ*ಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದೆ. ಈ ಮೂಲಕ ಹಲವು ತಿಂಗಳುಗಳ ಬಳಿಕ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಯಿತು.
ಈ ಸಂದರ್ಭ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ, ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಅ*ತ್ಯಾಚಾರ ಆರೋಪ ಹಾಗೂ ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಜನವರಿ 13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿ ಮಾಡುವುದಕ್ಕೆ ನಿಗದಿಯಾಗಿತ್ತು. ಇದನ್ನು ಪ್ರಶ್ನಿಸಿ ಪ್ರಜ್ವಲ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಪ್ರಜ್ವಲ್‌ಗೆ ಸ್ವಲ್ಪ ರಿಲೀಫ್ ಕೊಟ್ಟಿದೆ.
ಇದನ್ನೂ ಓದಿ : ಫ್ರಿಡ್ಜ್‌ನಲ್ಲಿ ನಿಂಬೆಹಣ್ಣಿನ ತುಂಡನ್ನು ಇಟ್ಟರೆ ಏನಾಗುತ್ತೆ ಗೊತ್ತಾ..?
2024ರಲ್ಲಿ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದಂತೆ ಅಶ್ಲೀ*ಲ ವೀಡಿಯೋಗಳು ವೈರಲ್ ಆಗಿದ್ದವು. ಇದು ದೇಶವನ್ನೇ ಬೆಚ್ಚಿ ಬೀಳಿಸಿತ್ತು. ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು.