Thursday, December 2, 2021

ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ತೆ ಮತ್ತು ಆರೋಪಿ ಮದುವೆಯಾದರೂ ಕೇಸು ರದ್ದಾಗಲ್ಲ: ಹೈಕೋರ್ಟ್

ಬೆಂಗಳೂರು: ಅತ್ಯಾಚಾರ ಎಸಗಿ ಪೋಕ್ಸೋ ಪ್ರಕರಣ ದಾಖಲಾಗಿ ಆರೋಪಿ ಮತ್ತು ಸಂತ್ರಸ್ತೆ ರಾಜಿಯಾದ ಮಾತ್ರಕ್ಕೆ ಕೇಸ್ ರದ್ದು ಮಾಡಲು ಸಾಧ್ಯವಿಲ್ಲ.

ಪ್ರಕರಣ ರದ್ದು ಮಾಡಿದರೆ ಸಮಾಜದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟು ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.


ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ತೆಯನ್ನೇ ಮದುವೆಯಾಗಿದ್ದ ಆರೋಪಿ ವಿರುದ್ಧದ ಕೇಸ್ ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದೆ. ಸಂತ್ರಸ್ತೆಯನ್ನು ಆರೋಪಿ ಮದುವೆಯಾಗಿದ್ದರೂ ಅತ್ಯಾಚಾರ ಪ್ರಕರಣ ರದ್ದಾಗುವುದಿಲ್ಲವೆಂದು ಸ್ಪಷ್ಟಪಡಿಸಿದೆ.
ವಿಜಯಪುರದ ಬಸವನ ಬಾಗೇವಾಡಿಯ ಆರೋಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್‌ ಅವರ ಪೀಠ, ಪ್ರಕರಣದಲ್ಲಿ ಆರೋಪಿ ಮತ್ತು ಸಂತ್ರಸ್ತೆ ರಾಜಿಯಾದ ಮಾತ್ರಕ್ಕೆ ಕೇಸ್ ರದ್ದು ಮಾಡಲು ಸಾಧ್ಯವಿಲ್ಲ.

ಪ್ರಕರಣ ರದ್ದು ಮಾಡಿದರೆ ಸಮಾಜದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ.
ಅಪ್ರಾಪ್ತ ವಯಸ್ಕಳನ್ನು ಪ್ರೀತಿಸಿದ್ದ ಆರೋಪಿ ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದು, ಅತ್ಯಾಚಾರ ಎಸಗಿದ್ದ ಬಾಲಕಿ ಗರ್ಭಿಣಿಯಾದ ನಂತರ ಆಕೆಯನ್ನು ಅಪಹರಿಸಿದ್ದ.

ಬಾಲಕಿಯ ಕುಟುಂಬದವರು ನೀಡಿದ ದೂರಿನ ಅನ್ವಯ ಪೊಲೀಸರು ಕೊಲ್ಲಾಪುರದಲ್ಲಿದ್ದ ಆತನನ್ನು ಬಂಧಿಸಿ ಅತ್ಯಾಚಾರ, ಅಪಹರಣ,
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.
ಈ ಪ್ರಕರಣವನ್ನು ರದ್ದುಪಡಿಸಬೇಕೆಂದು ಅರೋಪಿ ಮತ್ತು ಸಂತ್ರಸ್ತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಮದುವೆಯಾಗಿ ಒಂದು ಮಗುವಿದೆ. ಈ ಪ್ರಕರಣ ರದ್ದುಪಡಿಸಿ ಇಬ್ಬರೂ ಒಟ್ಟಿಗೆ ಬಾಳಲು ಅವಕಾಶ ಕಲ್ಪಿಸಬೇಕೆಂದು ಅರ್ಜಿದಾರರ ಪರ ವಕೀಲರು ಕೋರಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...