Connect with us

19ನೇ ಪ್ರಕರಣದಲ್ಲೂ ಸೈನೈಡ್ ಮೋಹನ್‌ ಆರೋಪ ಸಾಬೀತು ಫೆ.15ಕ್ಕೆ ಶಿಕ್ಷೆಯ ಪ್ರಮಾಣ ಪ್ರಕಟ

Published

on

19ನೇ ಪ್ರಕರಣದಲ್ಲೂ ಸೈನೈಡ್ ಮೋಹನ್‌ ಆರೋಪ ಸಾಬೀತು ಫೆ.15ಕ್ಕೆ ಶಿಕ್ಷೆಯ ಪ್ರಮಾಣ ಪ್ರಕಟ

ಮಂಗಳೂರು : ಕುಖ್ಯಾತ ಸ್ರೀ ಹಂತಕ ಸೈನಡ್ ಮೋಹನನ 19 ನೇ ಪ್ರಕರಣದಲ್ಲೂ ದೋಷಿ ಎಂದು ಸಾಬೀತಾಗಿದೆ.

ಕಾಸರಗೋಡಿನ ಯುವತಿಯನ್ನು ಮದುವೆ ಆಗುವುದಾಗಿ ನಂಬಿಸಿ ಮೈಸೂರಿಗೆ ಕರೆದೊಯ್ದು ಅತ್ಯಾಚಾರ ಎಸಗಿ ಬಳಿಕ ಸೈನೆಡ್ ನೀಡಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಣಿ ಸ್ತ್ರೀ ಹಂತಕ ಕುಖ್ಯಾತಿಯ ಸೈನೆಡ್ ಮೋಹನ್‌ನ ಆರೋಪವು ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದೆ.

ಈ ಪ್ರಕರಣದಲ್ಲಿ ಒಟ್ಟು 48 ಸಾಕ್ಷಿಗಳು ಹಾಗೂ 70 ದಾಖಲೆಗಳನ್ನು ನ್ಯಾಯಾಲಯ ಗಣನೆಗೆ ತೆಗೆದುಕೊಂಡಿತ್ತು.

ಶಿಕ್ಷೆಯ ಪ್ರಮಾಣವು ಫೆಬ್ರವರಿ.15ರಂದು ಪ್ರಕಟಗೊಳ್ಳಲಿದೆ. ಇದು ಸಯನೈಡ್ ಮೋಹನ್‌ನ 19ನೇ ಪ್ರಕರಣವಾಗಿದ್ದು, ಇನ್ನು 1 ಪ್ರಕರಣ ಮಾತ್ರ ವಿಚಾರಣೆಗೆ ಬಾಕಿ ಇದೆ. ಆರೋಪಿಯ ವಿರುದ್ಧ ಪೊಲೀಸರು ದಾಖಲಿಸಿದ್ದ ಕೊಲೆ , ಅಪಹರಣ ಅತ್ಯಾಚಾರ , ವಿಷ ಪದಾರ್ಥ ಉಣಿಸಿದ ಆರೋಪ, ಚಿನ್ನಾಭರಣ ಸುಲಿಗೆ , ವಿಷ ಉಣಿಸಿ ಸುಲಿಗೆ ಮಾಡಿದ ಆರೋಪ , ಮದುವೆ ಆಗುವುದಾಗಿ ನಂಬಿಸಿ ವಂಚನೆ , ಸಾಕ್ಷ್ಯ ನಾಶದ ಆರೋಪಗಳು ಸಾಬೀತಾಗಿವೆ ಎಂದು ನ್ಯಾಯಾಧೀಶರಾದ ಸಯೀದುನ್ನಿಸಾ ತೀರ್ಪು ನೀಡಿದ್ದಾರೆ.

ಕಾಸರಗೋಡಿನ 23 ವರ್ಷ ಪ್ರಾಯದ ಬೀಡಿ ಕಟ್ಟುತ್ತಿದ್ದ ಯುವತಿ 2006ರಲ್ಲಿ ತನ್ನ ಸಂಬಂಧಿಕರ ಮದುವೆಗೆ ಹೋಗಿದ್ದಾಗ ಅಲ್ಲಿ ಮೋಹನನ ಪರಿಚಯ ಆಗಿತ್ತು. ಆತ ತನ್ನನ್ನು ಶಿಕ್ಷಕ ಹಾಗೂ ಆಕೆಯದ್ದೇ ಜಾತಿಯವನು ಎಂದು ಪರಿಚಯಿಸಿದ್ದ.

ಮದುವೆಯ ಬಗೆ ಮಾತುಕತೆ ನಡೆದು ಆತ ಆಕೆಯನ್ನು ಮದುವೆ ಆಗುವುದಾಗಿ ನಂಬಿಸಿ ಒಂದು ವಾರದೊಳಗೆ ನಿರ್ಧಾರ ತಿಳಿಸುವುದಾಗಿ ಹೇಳಿದ್ದನು.

ಬಳಿಕ 2006 ಜೂನ್ 3 ರಂದು ಯುವತಿ ತಾನು ದೇವಸ್ಥಾನಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆಯಿಂದ ಹೊರಟಿದ್ದಳು. ಮೋಹನ ಆಕೆಯನ್ನು ಮೈಸೂರಿನ ಲಾಡ್ಜ್‌ಗೆ ಕರೆದೊಯ್ದು ಅಲ್ಲಿ ಒಂದು ರಾತ್ರಿ ಉಳಕೊಂಡು ಮರುದಿನ ಪೂಜೆಗೆಂದು ಹೇಳಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಕರೆದೊಯ್ದು ಸೈನೆಡ್ ನೀಡಿದ್ದ.

ಆಕೆ ಶೌಚಾಲಯಕ್ಕೆ ತೆರಳಿದ ವೇಳೆ ಕುಸಿದು ಬಿದ್ದಿದ್ದಳು. ಮಾಹಿತಿ ತಿಳಿದ ಪೊಲೀಸ್ ಠಾಣೆಯ ಸಿಬ್ಬಂದಿ ಬಸವರಾಜ್ ಕುಸಿದು ಬಿದ್ದಿದ್ದ ಯುವತಿಯನ್ನು ಆಸ್ಪತ್ರೆಗೆ ಸಾಗಿಸಿದ್ದರು.

ಆದರೆ, ಅಲ್ಲಿನ ವೈದ್ಯರು ಪರಿಶೀಲಿಸಿದಾಗ ಯುವತಿ ಸಾವನ್ನಪ್ಪಿರುವುದು ಗೊತ್ತಾಗಿತ್ತು.ಯುವತಿ ನಾಪತ್ತೆಯಾದ ಬಗ್ಗೆ ಮನೆಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

2009ರಲ್ಲಿ ಮೋಹನ್ ಬಂಧನದ ಬಳಿಕ ಈ ಯುವತಿಯ ಸಾವಿನ ಪ್ರಕರಣ ಬೆಳಕಿಗೆ ಬಂದಿತ್ತು.

ವಿಡಿಯೋಗಾಗಿ..

Click to comment

Leave a Reply

Your email address will not be published. Required fields are marked *

LATEST NEWS

ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

Published

on

ಉಡುಪಿ : ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಬೆಂಗಳೂರು ಪ್ರವಾಸ ಮಾಡ್ತಿದ್ದಾರೆ. ಮೂರು ಬಾರಿ ಕಾರಣಾಂತರದಿಂದ ಉಡುಪಿಗೆ ಬರಲು ಸಾಧ್ಯವಾಗಿರಲಿಲ್ಲ. ಪ್ರಧಾನಮಂತ್ರಿ ಕಚೇರಿಯಿಂದ ಅನುಮತಿ ಪಡೆದು ಉಡುಪಿ ಬಂದಿದ್ದೇನೆ. ಕರಾವಳಿ ಜನರ ರಕ್ತದಲ್ಲಿ ಹಿಂದುತ್ವ ಇದೆ. ಮೋದಿಯ 10 ವರ್ಷದ ಆಡಳಿತವನ್ನು ಜಗತ್ತು ಕೊಂಡಾಡಿದೆ. ಎಲ್ಲಾ ಅಸಾಧ್ಯಗಳನ್ನು ಪ್ರಧಾನಿ ಮೋದಿ ಸಾಧ್ಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.


ಉಡುಪಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಡೀ ದೇಶದ ಜನರಲ್ಲಿ ವಿಶ್ವಾಸ -ಭರವಸೆ ಮೂಡಿಸಿದ್ದು ಮೋದಿ. ರಾಮಮಂದಿರ, ಆರ್ಟಿಕಲ್ 370 ರದ್ದು, ಅಭಿವೃದ್ಧಿ ಎಲ್ಲವೂ ಮೋದಿ ಕಾಲದಲ್ಲಿ ಆಗಿದೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ. ನಾವು ರಕ್ಷಣೆ ಮಾಡ್ತೇವೆ ಎಂದು ಖರ್ಗೆ ಹೇಳ್ತಾರೆ. ಮೋದಿ ಮತ್ತೆ ಪ್ರಧಾನಿ ಆಗಬಾರದು ಅಂತ ಖರ್ಗೆ ಕರೆ ಕೊಡ್ತಾರೆ. ಕಾಂಗ್ರೆಸ್ಸಿಗರು ಅಂಬೇಡ್ಕರ್ ಅವರನ್ನು ಬದುಕಿದ್ದಾಗಲೇ ಕಗ್ಗೊ*ಲೆ ಮಾಡಿದ್ದಾರೆ. ಅಂಬೇಡ್ಕರ್ ರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಬಾಬಾ ಸಾಹೇಬರ ಅಂತ್ಯ ಸಂಸ್ಕಾರಕ್ಕೂ ಅವಕಾಶ ಕೊಟ್ಟಿಲ್ಲ. ಅಂಬೇಡ್ಕರ್ ರ ಪಂಚ ತೀರ್ಥಕ್ಷೇತ್ರ ಅಭಿವೃದ್ಧಿ ಮಾಡಿದ್ದು ಮೋದಿ – ಬಿಜೆಪಿ ಸರಕಾರ ಎಂದರು.

ಇದನ್ನೂ ಓದಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Continue Reading

DAKSHINA KANNADA

ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!

Published

on

ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.

ಅಸ್ಥಿಪಂಜರ

ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.

Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್‌:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Published

on

ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್‌ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್‌ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!

Continue Reading

LATEST NEWS

Trending