DAKSHINA KANNADA
ಉಳ್ಳಾಲ ಕ್ಷೇತ್ರದಲ್ಲಿ ಯು.ಟಿ. ಖಾದರ್ ಅಭಿವೃದ್ಧಿ ಕಾರ್ಯದಲ್ಲಿ ಶೂನ್ಯ-ಕುಂಟಾರು ರವೀಶ್ ತಂತ್ರಿ
ಮಂಗಳೂರು ಕ್ಷೇತ್ರದಿಂದ ಸತತವಾಗಿ ಶಾಸಕರಾಗಿ ಆಯ್ಕೆಯಾದ ಯು.ಟಿ. ಖಾದರ್ ಹಲವು ವರ್ಷಗಳಿಂದ ಮೂಲಸೌಕರ್ಯವನ್ನು ಒದಗಿಸುವಲ್ಲಿ ಯು.ಟಿ.ಖಾದರ್ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕುಂಟಾರು ರವೀಶ್ ತಂತ್ರಿ ಹೇಳಿದರು.
ಮಂಗಳೂರು: ಮಂಗಳೂರು ಕ್ಷೇತ್ರದಿಂದ ಸತತವಾಗಿ ಶಾಸಕರಾಗಿ ಆಯ್ಕೆಯಾದ ಯು.ಟಿ. ಖಾದರ್ ಹಲವು ವರ್ಷಗಳಿಂದ ಮೂಲಸೌಕರ್ಯವನ್ನು ಒದಗಿಸುವಲ್ಲಿ ಯು.ಟಿ.ಖಾದರ್ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಕೇರಳ ಭಾಗದ ಉಸ್ತುವಾರಿ ಕುಂಟಾರು ರವೀಶ್ ತಂತ್ರಿ ಸುದ್ದಿಗೋಷ್ಟಿಯಲ್ಲಿ ಹೇಳಿದರು.
ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಅವರು ಹಾಲಿ ಶಾಸಕರು ಉಳ್ಳಾಲದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಎಂದರು.
ಸಾಕಷ್ಟು ಅನುದಾನ ಒದಗಿಸಿದ್ದರೂ ಕ್ಷೇತ್ರದಲ್ಲಿ ಒಳಚರಂಡಿ ವ್ಯವಸ್ಥೆ ಸಮರ್ಪಕವಾಗಿ ಕಾರ್ಯಗತವಾಗಿಲ್ಲ.
2013 ರಲ್ಲಿ ಆಯ್ಕೆಗೊಂಡಾಗ ಕುಡಿಯುವ ನೀರಿನ ಸಂಪರ್ಕ ಯೋಜನೆ ಒದಗಿಸುವ ಭರವಸೆ ಹತ್ತು ವರ್ಷಗಳು ಕಳೆದರೂ ಪೂರ್ತಿಯಾಗಿಲ್ಲ ಎಂದು ತಂತ್ರಿ ಅವರು ಆರೋಪಿಸಿದರು.
ಕ್ಷೇತ್ರದಲ್ಲಿ ಸುತ್ತಾಟ ನಡೆಸಿದಾಗ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರಿಗೆ ಜನರ ಬೆಂಬಲ ಕಂಡು ಬಂದಿದ್ದು, ಅವರು ಈ ಸಲ ಮಂಗಳೂರು ಕ್ಷೇತ್ರದಲ್ಲಿ ಬಿಜೆಪಿ ಜಯ ದಾಖಲಿಸಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ವಕ್ತಾರ ಜಗದೀಶ ಶೇಣವ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ರಣದೀಪ್ ಕಾಂಚನ್, ರತನ್ ರಮೇಶ್ ಪೂಜಾರಿ ಉಪಸ್ಥಿತರಿದ್ದರು.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.