Connect with us

LATEST NEWS

ಉಡುಪಿಯ ಐದು ಕ್ಷೇತ್ರಗಳ ನಾಲ್ವರು ಹಾಲಿ ಶಾಸಕರಿಗೆ ಟಿಕೆಟ್‌ ಮಿಸ್‌..!?

Published

on

ಉಡುಪಿ: ಉಡುಪಿ ಜಿಲ್ಲೆಯಲ್ಲಿ 5 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 4 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್‌ ಮಿಸ್‌ ಆಗುವ ಸಾಧ್ಯತೆ ಇದೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.


ಉಡುಪಿ ಕ್ಷೇತ್ರದಲ್ಲಿ ರಘುಪತಿ ಭಟ್‌ ಬದಲಿಗೆ ಯಶ್ಪಾಲ್‌ ಸುವರ್ಣಗೆ ಟಿಕೆಟ್‌ ಸಿಗಲಿದೆ. ಕಾಪು ಕ್ಷೇತ್ರದಲ್ಲಿ ಲಾಲಾಜಿ ಮೆಂಡನ್‌ ಬದಲಿಗೆ ಗುರ್ಮೆ ಸುರೇಶ್‌ ಶೆಟ್ಟಿ, ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಚುನಾವಣಾ ನಿವೃತ್ತಿ ಘೋಷಿಸಿದ್ದು, ಕಿರಣ್‌ ಕೊಡ್ಗಿಗೆ ಟಿಕೆಟ್‌ ಸಿಗಲಿದೆ. ಬೈಂದೂರು ಸುಕುಮಾರ ಶೆಟ್ಟಿಗೆ ಟಿಕೆಟ್‌ ಸಿಗುವುದು ಡೌಟ್‌ ಎನ್ನಲಾಗುತ್ತಿದೆ.

ಬೈಂದೂರು ಕ್ಷೇತ್ರದಲ್ಲಿ ಬಿಎಸ್‌ವೈ ಕಟ್ಟಾ ಶಿಷ್ಯ ಸುಕುಮಾರ ಶೆಟ್ಟಿ ಬದಲಿಗೆ ಯಾರು ಅಭ್ಯರ್ಥಿಯಾಗುತ್ತಾರೆ ಎಂಬುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಕಾರ್ಕಳದಲ್ಲಿ ಬಹುತೇಕ ಹಾಲಿ ಶಾಸಕ ಸುನೀಲ್‌ ಕುಮಾರ್‌ ಗೆ ಟಿಕೆಟ್‌ ಸಿಗಲಿದೆ ಎನ್ನುತ್ತೆ ಬಿಜೆಪಿ ಪಡಸಾಲೆ. ಈ ಮಧ್ಯೆ ಮೊದಲ ಪಟ್ಟಿ ಇಂದು ರಾತ್ರಿಯೊಳಗೆ ಬಿಡುಗಡೆಯಾಗುವ ಸಾಧ್ಯತೆ ಇದೆ.

Click to comment

Leave a Reply

Your email address will not be published. Required fields are marked *

LATEST NEWS

ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ

Published

on

ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಪ್ರಕರಣದ ಆರೋಪ ಎದುರಿಸುತ್ತಿರೋ ಪ್ರಜ್ವಲ್ ರೇವಣ್ಣ ಜರ್ಮನಿಯಲ್ಲಿದ್ದಾರೆ ಎನ್ನಲಾಗಿದೆ. ಇದೀಗ ಎಸ್ಐಟಿ ಅಧಿಕಾರಿಗಳು ಲುಕ್‌ ಔಟ್ ನೋಟಿಸ್ ಹೊರಡಿಸಿದ್ದಾರೆ.


ಸಂಸದ ಪ್ರಜ್ವಲ್‌ ಹಾಗೂ ಎಚ್‌.ಡಿ.ರೇವಣ್ಣ ವಿರುದ್ಧ ಲೈಂ*ಗಿಕ ದೌರ್ಜ*ನ್ಯ ಆರೋಪ ಕೇಳಿಬಂದಿದೆ. ಈ ಬಗ್ಗೆ ವೀಡಿಯೋ ಹಾಸನ ಜಿಲ್ಲೆಯಾದ್ಯಂತ ಸದ್ದು ಮಾಡಿದೆ. ಈ ಬಗ್ಗೆ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರನ್ನೂ ದಾಖಲಿಸಿದ್ದಾರೆ. ಪ್ರಕರಣದ ಕುರಿತು ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ರಚನೆ ಮಾಡಿದ್ದು, ಎಸ್ಐಟಿ ತಂಡ ಈಗಾಗಲೇ ತನಿಖೆ ಚುರುಕುಗೊಳಿಸಿದ್ದಾರೆ.
ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಅದಕ್ಕೂ ಮೊದಲೇ ಪ್ರಜ್ವಲ್‌ ದೇಶದಿಂದ‌ ಪರಾರಿಯಾಗಿದ್ದಾರೆ. ವಿಚಾರಣೆಗೆ ನೋಟಿಸ್ ನೀಡಿದರೂ ಹಾಜರಾಗಿಲ್ಲ.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಪ್ರಕರಣ ; ವೀಡಿಯೋ ಹರಿಬಿಟ್ಟ ಕಾರ್ತಿಕ್ ನಾಪತ್ತೆ! ಮಲೇಷ್ಯಾಕ್ಕೆ ಹೋಗಿರುವ ಶಂಕೆ

ಸಮಯಾವಕಾಶ ಕೇಳಿದ್ದ ಪ್ರಜ್ವಲ್ :

ಸದ್ಯಕ್ಕೆ ಜರ್ಮನಿಯವಲ್ಲಿರುವ ಪ್ರಜ್ವಲ್ ರೇವಣ್ಣ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಹಾಗಾಗಿ, ತಮಗೆ ಏಳು ದಿನಗಳ ಕಾಲಾವಕಾಶ ಬೇಕು ಎಂದು ತಮ್ಮ ವಕೀಲರ ಮೂಲಕ ಮನವಿ ಸಲ್ಲಿಸಿದ್ದರು. ಆದರೆ, ಆ ಮನವಿಯ ಹೊರತಾಗಿಯೂ ಎಸ್ಐಟಿ ಲುಕ್ ಔಟ್ ನೋಟಿಸ್ ಜಾರಿಗೊಳಿಸಿದೆ.

Continue Reading

dehali

ನಾಯಿಗಳಿಗೂ ಬಂತು ಆಧಾರ್‌ ಕಾರ್ಡ್‌.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?

Published

on

ದೆಹಲಿ: ಕೇಂದ್ರ ಸರಕಾರ ದೇಶದಾದ್ಯಂತ ಆಧಾರ್ ಕಾರ್ಡ್‌ಅನ್ನು ಕಡ್ಡಾಯಗೊಳಿಸಿದೆ. ಭಾರತೀಯ ನಾಗರಿಕರನ್ನು ಗುರುತಿಸುವುದಕ್ಕಾಗಿ ಹಾಗೂ ದೇಶದ ಭದ್ರತೆ ದೃಷ್ಠಿಯಿಂದ ಆಧಾರ್ ಕಾರ್ಡ್‌ನ್ನು ಜಾರಿಗೊಳಿಸಿದೆ. ಹಾಗಾಗಿ ಜನರು ತಮ್ಮ ಆಧಾರ್ ಕಾರ್ಡ್‌ಗಳ ಅಪ್ಡೇಟ್ ಮಾಡಲು, ಹೊಸ ಆಧಾರ್‌ ಮಾಡಿಸಲು ಸೈಬರ್ ಸೆಂಟರ್ ಗಳು ಸರಕಾರಿ ಕಛೇರಿಗಳ ಮುಂದೆ ಮುಗಿ ಬೀಳುತ್ತಾರೆ. ಇದೀಗ ನಾಯಿಗಳಿಗೂ ಮುಂದಿನ ದಿನಗಳಲ್ಲಿ ಇಂತಹ ಪರಿಸ್ಥಿತಿ ಬಂದರೆ ಆಶ್ಚರ್ಯವಿಲ್ಲ. ಯಾಕಂದ್ರೆ ಇದೀಗ ನಾಯಿಗಳಿಗೂ ಆಧಾರ್ ಹೊಂದಿರಬೇಕು ಎನ್ನುವ ನಿಯಮ ಜಾರಿಗೆ ಬಂದಿದೆ.

dog

ದೆಹಲಿಯಲ್ಲಿ ಆಧಾರ್ ಕಾರ್ಡ್‌ ಹೋಲ್ಡರ್‌ಗಳಾದ 100 ನಾಯಿಗಳು!

ಈಗಾಗಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಾಯಿಗಳಿಗೆ ಆಧಾರ್ ಕಾರ್ಡ್ ನೀಡಲಾಗಿದೆಯಂತೆ. ಸರ್ವೆ ಪ್ರಕಾರ ಈಗಾಗಲೇ ದೆಹಲಿಯಲ್ಲಿ 100 ನಾಯಿಗಳಿಗೆ ಆಧಾರ್ ಕಾರ್ಡ್‌ಅನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ. ಈ 100 ನಾಯಿಗಳು ದೆಹಲಿಯ ಟರ್ಮಿನಲ್ 1 ವಿಮಾನ ನಿಲ್ದಾಣ, ಇಂಡಿಯಾ ಗೇಟ್ ಮತ್ತು ಪ್ರಾಣಿ ಕಾರ್ಯಕರ್ತೆ ಮಾನವಿ ರೈ ನಡೆಸುತ್ತಿರುವ ದೆಹಲಿಯ ನಾಯಿ ಆಶ್ರಯ ಸೇರಿದಂತೆ ವಿವಿಧ ಸ್ಥಳಗಳಿಗೆ ಸೇರಿವೆ ಎನ್ನಲಾಗಿದೆ. ದಾರಿ ತಪ್ಪಿದ ನಾಯಿಗಳನ್ನು ರಕ್ಷಿಸುವ ಹಾಗೂ ಅವುಗಳನ್ನು ಸ್ಥಳಾಂತರಿಸುವ ದೃಷ್ಟಿಯಲ್ಲಿ ಎನ್‌ಜಿಒ ಗಳು ಈ ನಿಯಮವನ್ನು ಜಾರಿಗೆ ತಂದಿದ್ದಾರೆ.

dog

ನಾಯಿಗೂ ಬಂತು ಸ್ಕ್ಯಾನರ್‌ ಒಳಗೊಂಡ ಟ್ಯಾಗ್ ಕಾರ್ಡ್:

ಏಪ್ರಿಲ್ 27ರಂದು ನಾಯಿಗಳಿಗೆ ಆಧಾರ್ ಕಾರ್ಡ್ ನೀಡುವ ಕ್ರಮಕ್ಕೆ ಚಾಲನೆ ನೀಡಿದ್ದು, ಇಂದಿನಿಂದ ಈ ಕೆಲಸ ಪ್ರಾರಂಭವಾಗಿದೆ. ಇದಕ್ಕೆ ಸಂಬಂಧಪಟ್ಟ ನಾಯಿಗಳಿಗೆ ಆಧಾರ್ ಕಾರ್ಡ್ ಟ್ಯಾಗ್ ಮಾಡಲಾಗಿದೆ. ಈ ಬಗ್ಗೆ ಪ್ರಾಣಿ ಕಾರ್ಯಕರ್ತೆ ಮಾನವಿ ರೈ ಅವರು ನಾಯಿಗಳಿಗೆ ಈ ಆಧಾರ್ ಕಾರ್ಡ್ ಜೀವಸೆಲೆ . ಇಂದು ಈ ಕ್ಯೂಆರ್ ಆಧಾರಿತ ಟ್ಯಾಗ್ ಗಳು ನಮ್ಮ ನಾಯಿಗಳಿಗೆ ವಿಶೇಷವಾಗಿ ಸಂಕಷ್ಟದ ಸಮಯದಲ್ಲಿ ಜೀವಸೆಲೆಯಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಮುಂದೆ ನೋಡಿ..; ತಮಿಳು ಚಿತ್ರರಂಗಕ್ಕೆ ಎಂಟ್ರಿಕೊಟ್ಟ ‘ಬಿಗ್‌ ಬಾಸ್’ ರೂಪೇಶ್ ಶೆಟ್ಟಿ

Pawfriend.in ಎಂಬ ಎನ್‌ಜಿಒ ಇದನ್ನು ಆವಿಷ್ಕಾರ ಮಾಡಿದ್ದು  ನಾಯಿಗಳಿಗೆ ನೀಡುವ ಆಧಾರ್ ಕಾರ್ಡ್‌ನಲ್ಲಿ ಕ್ಯೂ ಆರ್‌ ಕೋಡ್‌ಅನ್ನು ಕೂಡಾ ಅಳವಡಿಸಿದ್ದಾರೆ.  ಇದು ಮೈಕ್ರೋಚಿಪ್‌ಗಳನ್ನು ಒಳಗೊಂಡಿದ್ದು, ನಾಯಿಗಳು ಒಂದು ವೇಳೆ ಕಳೆದು ಹೋದಲ್ಲಿ ಈ ಟ್ಯಾಗ್‌ಗಳಲ್ಲಿರುವ ಕ್ಯೂಆರ್‌ಕೋಡ್‌ ಅನ್ನು ಸ್ಕ್ಯಾನ್‌ ಮಾಡಿದ್ರೆ ನಾಯಿಯ ಕುರಿತು ವಿವರಗಳನ್ನು ಪಡೆಯಬಹುದಾಗಿದೆ. ಇದು ನಾಯಿಯ ಯಜಮಾನನಿಗೆ ಬಹಳ ಸಹಾಯಕಾರಿಯಾಗಿದೆ.

 

 

Continue Reading

LATEST NEWS

ಪ್ರಜ್ವಲ್ ರೇವಣ್ಣ ಪ್ರಕರಣ ; ವೀಡಿಯೋ ಹರಿಬಿಟ್ಟ ಕಾರ್ತಿಕ್ ನಾಪತ್ತೆ! ಮಲೇಷ್ಯಾಕ್ಕೆ ಹೋಗಿರುವ ಶಂಕೆ

Published

on

ಬೆಂಗಳೂರು : ಸದ್ಯ ಪ್ರಜ್ವಲ್ ರೇವಣ್ಣ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿದೆ. ಅತ್ತ ಲೈಂ*ಗಿಕ ದೌರ್ಜ*ನ್ಯ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ಜರ್ಮನಿಯಲ್ಲಿದ್ದಾರೆ ಎನ್ನಲಾಗಿದೆ. ಇತ್ತ ಈ ವೀಡಿಯೋ ಹರಿಬಿಟ್ಟಿರುವುದು ತಾನು ಎಂದು ಒಪ್ಪಿಕೊಂಡಿದ್ದ ಕಾರ್ತಿಕ್ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಆತ ಎಸ್ ಐ ಟಿ ಕಣ್ಣು ತಪ್ಪಿಸಿ ಮಲೇಷ್ಯಾ ತೆರಳಿದ್ದಾರೆ ಎನ್ನಲಾಗಿದೆ.


ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ನಿವಾಸಿಯಾಗಿರುವ ಕಾರ್ತಿಕ್, ಪ್ರಜ್ವಲ್ ರೇವಣ್ಣ ಬಳಿ 15 ವರ್ಷ ಕಾರು ಚಾಲಕನಾಗಿ ಕೆಲಸ ಮಾಡಿದ್ದರು.​ ಬಳಿಕ ಪರಸ್ಪರ ಮನಸ್ತಾಪದಿಂದ ಕಾರ್ತಿಕ್ ಕೆಲಸ ಬಿಟ್ಟಿದ್ದರು ಎನ್ನಲಾಗಿದೆ.

ಏನು ಹೇಳಿದ್ದ ಕಾರ್ತಿಕ್?

ಎರಡು ದಿನಗಳ ಹಿಂದೆ ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿ ಕಾರ್ತಿಕ್ ಹರಿಬಿಟ್ಟಿದ್ದ. ಈ ವೀಡಿಯೋದಲ್ಲಿ, ಹದಿನೈದು ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೇನೆ. ಒಂದು ವರ್ಷದಿಂದ ಕೆಲಸ ಬಿಟ್ಟಿದ್ದೇನೆ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದರು. ಹಿಂಸೆ ಕೊಟ್ಟರು ಹಲ್ಲೆ ಮಾಡಿದರು. ಆದ್ದರಿಂದ ಅವರ ಮನೆಯಿಂದ ಹೊರಬಂದೆ ಎಂದಿದ್ದರು.
ದೇವರಾಜೇಗೌಡ ಇವರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ. ಯಾವುದೇ ಅಶ್ಲೀಲ ವಿಡಿಯೋ ರಿಲೀಸ್ ಮಾಡಬಾರದು ಎಂದು ನನ್ನ ವಿರುದ್ಧ ಪ್ರಜ್ವಲ್ ರೇವಣ್ಣ ಸ್ಟೇ ತರುತ್ತಾರೆ. ನಿನ್ನ ಬಳಿ ಇರುವ ವಿಡಿಯೋ, ಫೋಟೋಸ್, ನಾನು ಯಾರಿಗೂ ತೋರಿಸಲ್ಲ ಕೊಡು ಎಂದು ದೇವರಾಜೇಗೌಡ ಕೇಳಿದ್ದರು. ನಾನು ನಂಬಿ ನನ್ನ ಬಳಿಯಿದ್ದ ವಿಡಿಯೋದ ಒಂದು ಕಾಪಿ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಗೊತ್ತಿಲ್ಲ ಎಂದಿದ್ದರು.

ಇದನ್ನೂ ಓದಿ  : ಶಾಸ್ತ್ರೋಕ್ತವಾಗಿ ಮದುವೆ ಆಗದೇ ಇದ್ದರೆ ಮದುವೆಯೇ ಊರ್ಜಿತವಲ್ಲ : ಸುಪ್ರೀಂ ಕೋರ್ಟ್‌

ದೇವರಾಜೇಗೌಡರನ್ನು ಬಿಟ್ಟರೆ ಬೇರೆ ಯಾರಿಗೂ ಕೊಟ್ಟಿಲ್ಲ. ಕಾಂಗ್ರೆಸ್‌ನವರಿಗಂತೂ ನಾನು ವಿಡಿಯೋ ಕೊಟ್ಟಿಲ್ಲ. ಕಾಂಗ್ರೆಸ್ ಅವರ ಮೇಲೆ ನಂಬಿಕೆ ಇಲ್ಲದೇ ದೇವರಾಜೇಗೌಡರ ಹತ್ತಿರ ಕೊಟ್ಟಿದ್ದೆ. ಪೆನ್‌ಡ್ರೈವ್ ಯಾರು ಹಂಚಿದರೂ ಗೊತ್ತಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಎಸ್‌ಐಟಿ ಮುಂದೆ ಹಾಜರಾಗಿ ಎಲ್ಲಾ ಹೇಳಿ ಕೊಳ್ಳುತ್ತೇನೆ. ನಂತರ ಮಾಧ್ಯಮದ ಮುಂದೆ ಎಲ್ಲಾ ವಿವರವಾಗಿ ಹೇಳುತ್ತೇನೆ ಎಂದು ಹೇಳಿದ್ದರು.

ಎಸ್ ಐ ಟಿ ನೋಟೀಸ್ ನೀಡಿಲ್ಲ :

ವೀಡಿಯೋ ಮಾಡಿ ಹರಿಬಿಟ್ಟಿರುವ ಕಾರ್ತಿಕ್, ಎಸ್ಐಟಿ ಮುಂದೆ ಹಾಜರಾಗುವುದಾಗಿ ಹೇಳಿದ್ದರು. ತಾನೇ ಖುದ್ದು ಎಸ್ಐಟಿ ಮುಂದೆ ಹಾಜರಾಗುವ ಹೇಳಿಕೆ ನೀಡಿದ್ದರು. ಪೆನ್ ಡ್ರೈವ್ ವಕೀಲ ದೇವರಾಜೇ ಗೌಡಗೆ ಕೊಟ್ಟಿದ್ದು ನಾನೇ ಎಂದು ಕಾರ್ತಿಕ್ ಹೇಳಿದ್ದ. ವೀಡಿಯೋಗಳ ಮೂಲಕ ವ್ಯಕ್ತಿ ನಾನೇ ಅಂದರೂ ಇನ್ನು ಆತನನ್ನು ವಿಚಾರಣೆಗೆ ಒಳಪಡಿಸಿಲ್ಲ. ವಿಚಾರಣೆಗೆ ಹಾಜರಾಗುವಂತೆ ಕಾರ್ತಿಕ್‌ಗೆ ನೊಟೀಸ್ ಅನ್ನೂ ಎಸ್ಐಟಿ ನೀಡಿರಲಿಲ್ಲ. ಈ ನಡುವೆ ಕಾರ್ತಿಕ್ ನಾಪತ್ತೆಯಾಗಿದ್ದಾರೆ.

Continue Reading

LATEST NEWS

Trending