Connect with us

DAKSHINA KANNADA

ಸೆ.24 ರಂದು ಮಂಗಳೂರಿನಲ್ಲಿ ‘ಬಿಲ್ಲವ ಹಾಸ್ಟೆಲ್’ ಉದ್ಘಾಟನೆ

Published

on

ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್‌ ನಿಂದ ಕುಂಜತ್ತಬೈಲಿನಲ್ಲಿ ದಾಮೋದರ ಆರ್. ಸುವರ್ಣ ಸ್ಮಾರಕ ‘ಬಿಲ್ಲವ ಹಾಸ್ಟೆಲ್’ ನಿರ್ಮಿಸಲಾಗಿದ್ದು, ಸೆ.24 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಅಖಿಲ ಭಾರತ ಬಿಲ್ಲವರ ಯುನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣ ಹೇಳಿದ್ದಾರೆ.

ಮಂಗಳೂರು: ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್‌ ನಿಂದ ಕುಂಜತ್ತಬೈಲಿನಲ್ಲಿ ದಾಮೋದರ ಆರ್. ಸುವರ್ಣ ಸ್ಮಾರಕ ‘ಬಿಲ್ಲವ ಹಾಸ್ಟೆಲ್’ ನಿರ್ಮಿಸಲಾಗಿದ್ದು, ಸೆ.24 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಅಖಿಲ ಭಾರತ ಬಿಲ್ಲವರ ಯುನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ನವೀನ್ ಅವರು, ಪುರಭವನದಲ್ಲಿ ಲೋಕಾರ್ಪಣಾ ಸಭಾ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.

ದೀಪ ಪ್ರಜ್ವಲನೆಯನ್ನು ಮಾಜಿ ಕೇಂದ್ರ ವಿತ್ತ ಸಚಿವ ಬಿ ಜನಾರ್ದನ ಪೂಜಾರಿಯವರು ನಡೆಸಲಿದ್ದಾರೆ.

ಸಭಾಧ್ಯಕ್ಷತೆಯನ್ನು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಡಿ ಸುವರ್ಣ ವಹಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಬಿಡುಗಡೆಗೊಳಿಸಲಿದ್ದಾರೆ.

ಮಾಜಿ ಸಂಸದ ಡಿ.ವಿ. ಸದಾನಂದ ಗೌಡ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಮಂದಿ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಉದ್ಯಮಿ ಸುಶೀರ್ ಕುಮಾರ್, ಇಂಜಿನಿಯರ್ ಬಾಬ ಅಲಂಕಾರ್ ಅವರನ್ನು ಸನ್ಮಾನಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಬಿಲ್ಲವರ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ಸುಖಲಾಕ್ಷಿ ಸುವರ್ಣ, ಕೋಶಾಧಿಕಾರಿ ಕಾಶೀನಾಥ್, ಜೊತೆ ಕಾರ್ಯದರ್ಶಿ ಯೋಗೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಬಿಲ್ಲವ ಹಾಸ್ಟೆಲ್:

ಮಂಗಳೂರು ನಗರದಿ೦ದ 6 ಕಿ.ಮೀ. ದೂರದ ಕುಂಜತ್ತಬೈಲ್‌ನ ಪ್ರಶಾಂತ ವಾತಾವರಣದಲ್ಲಿ ಸುಮಾರು 1 ಎಕರೆ ವ್ಯಾಪ್ತಿಯಲ್ಲಿ 5.25 ಕೋಟಿ ರೂ. ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಿಸಲಾಗಿದ್ದು ಬಿಲ್ಲವ ಹಾಗೂ ಹಿಂದುಳಿದ ಸಮುದಾಯದಲ್ಲಿ ಉನ್ನತ ವೃತ್ತಿ ಶಿಕ್ಷಣ ಬಯಸುವ ವಿದ್ಯಾರ್ಥಿಗಳ ಅನುಕೂಲತೆಗಾಗಿ ಹಾಸ್ಟೆಲ್ ನಿರ್ಮಿಸಲಾಗಿದೆ.

ಸುಮಾರು 5 ಮಹಡಿಯ ಕಟ್ಟಡ ಇದಾಗಿದ್ದು, ಒಟ್ಟು 19,500 ಚದರ ಅಡಿ ವಿಸ್ತೀರ್ಣ ಹೊಂದಿದೆ.

ನೆಲ ಅಂತಸ್ತಿನಲ್ಲಿ ಆಡಳಿತ ಕಚೇರಿ, ಗ್ರಂಥಾಲಯ ಹಾಗೂ ವಸತಿ ಕೊಠಡಿಗಳು, 1ನೇ ಹಾಗೂ 3ನೇ ಮಹಡಿಯಲ್ಲಿ ವಸತಿ ಕೊಠಡಿ ಮತ್ತು 2ನೇ ಮಹಡಿಯಲ್ಲಿ ಸಭಾಂಗಣ ಒಳಗೊಂಡಿದೆ.

ತಳಮಹಡಿಯಲ್ಲಿ ಅಡುಗೆ ಕೋಣೆ, ಉಗ್ರಾಣ ಕೋಣೆಗಳಿವೆ.

ಸುಮಾರು 100 ಮಂದಿ ವಿದ್ಯಾರ್ಥಿಗಳಿಗೆ ವ್ಯವಸ್ಥಿತವಾದ ವಸತಿ ಸೌಲಭ್ಯವಿದ್ದು, ವೃತ್ತಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆಯಾಗಿದೆ.

DAKSHINA KANNADA

ಈ 7 ರೈಲು ನಿಲ್ದಾಣಗಳಲ್ಲಿ ಸಿಗುತ್ತೆ ಅತೀ ಕಡಿಮೆ ಬೆಲೆಗೆ ತಿಂಡಿ, ಊಟ

Published

on

ಮಂಗಳೂರು: ಭಾರತೀಯ ರೈಲ್ವೆ ಮಂಡಳಿಯು ಕರ್ನಾಟಕದ ಏಳು ನಿಲ್ದಾಣಗಳು ಸೇರಿದಂತೆ ದೇಶದ 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ಕಂಪಾರ್ಟ್ಮೆಂಟ್ ಕೋಚ್‌ಗಳ ಬಳಿ ಕಡಿಮೆ ದರದಲ್ಲಿ ಉತ್ತಮ ಆಹಾರವನ್ನು ಒದಗಿಸುವ ಕೌಂಟರ್‌ಗಳನ್ನು ತೆರೆದಿದೆ.

ಕರ್ನಾಟಕದಲ್ಲಿ ದಕ್ಷಿಣ ರೈಲ್ವೆ ಅಡಿಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ವಿಭಾಗಗಳಲ್ಲಿ ಸಬ್ಸಿಡಿ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ. ಹಾಗೆಯೇ ನೈರುತ್ಯ ರೈಲ್ವೆಯ ಅಡಿಯಲ್ಲಿ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಈ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ.

ಈ ಯೋಜನೆಯು ಭಾರತೀಯ ರೈಲ್ವೆಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಮತ್ತು ಭಾರತೀಯ ರೈಲ್ವೆಯ ಜಂಟಿ ಉಪಕ್ರಮವಾಗಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರೋಗ್ಯಕರ ಆಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹಿಂದೆ ಜನತಾ ಊಟದ ಸೇವೆಯ ಅಡಿಯಲ್ಲಿ ರೈಲ್ವೆ ನಿಲ್ದಾಣದ ರೆಸ್ಟೋರೆಂಟ್‌ಗಳಲ್ಲಿ ಕಡಿಮೆ ದರದ ಆಹಾರ ಲಭ್ಯವಿತ್ತು. ಈಗ ಕೌಂಟರ್‌ಗಳು ನೇರವಾಗಿ ಪ್ಲಾಟ್‌ಫಾರ್ಮ್‌ಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ.

ಪ್ರಸ್ತುತ 100 ರೈಲು ನಿಲ್ದಾಣಗಳಲ್ಲಿ 150 ಪ್ಲಾಟ್ಫಾರ್ಮ್ಗಳು ಈ ಸೌಲಭ್ಯವನ್ನು ನೀಡುತ್ತವೆ. ಬೆಳಗಿನ ಉಪಹಾರ 20 ರೂ., ಲಘು ಊಟ 50 ರೂ., 3 ರೂ.ಗೆ 200 ಎಂಎಲ್ ನೀರು ನೀಡಲಾಗುತ್ತದೆ. ಈ ಮಾಹಿತಿಯನ್ನು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆ ಈ ಯೋಜನೆಯು ರೈಲು ಪ್ರಯಾಣಿಕರ ಆಹಾರ ಸಮಸ್ಯೆಯನ್ನು ಪರಿಹರಿಸಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.

Continue Reading

DAKSHINA KANNADA

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮೇ 19, 20ರಂದು ಆರೆಂಜ್ ಅಲರ್ಟ್‌

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18 ರಿಂದ 21 ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಆರೆಂಜ್ ಅಲರ್ಟ್‌ ಇರುವ ದಿನಗಳಲ್ಲಿ ಮಿಂಚು, ಗುಡುಗು, ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀ ನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಕೆಲವೆಡೆ 6.45 ಸೆಂ.ಮೀ ನಿಂದ 11.55 ಸೆಂ.ಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

DAKSHINA KANNADA

ಕಾರಿನಲ್ಲಿ ಮಗುವನ್ನು ಮರೆತು ಹೋದ ತಾಯಿ..! ಕಾರಿನಲ್ಲೇ ಮಗುವಿನ ಅಂತ್ಯ…!

Published

on

ಮಂಗಳೂರು ( ರಾಜಸ್ಥಾನ ) :  ಮಕ್ಕಳ ಬಗ್ಗೆ ಪೋಷಕರು ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳಬೇಕು. ಆದ್ರೆ, ತಂದೆ ಮತ್ತು ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿ ಅಸುನೀಗಿದ್ದಾಳೆ. ಹೌದು, ಮಗು ಕಾರಿನಲ್ಲಿ ಉಸಿರುಗಟ್ಟಿ ಸಾ*ವನಪ್ಪಿದ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಮೃ*ತ ಮಗುವನ್ನು ಕೋಟಾದ ಇಂದ್ರ ಕಾಲೋನಿಯ ನಿವಾಸಿ ಪ್ರದೀಪ್ ಅವರ ಮಗಳು ಗರ್ವಿ (3) ಎಂದು ಗುರುತಿಸಲಾಗಿದೆ.

ಮದುವೆ ಸಂಭ್ರಮದಲ್ಲಿ ಕಳೆದುಹೋದ ದಂಪತಿ :

ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಾಲಕಿ ತನ್ನ ಪೋಷಕರೊಂದಿಗೆ ಕಾರಿನಲ್ಲಿ ಬಂದಿದ್ದರು. ಈ ವೇಳೆ ತಾಯಿ ತನ್ನ ಇನ್ನೊಬ್ಬ ಮಗಳ ಜೊತೆ ಕಾರಿನಿಂದ ಇಳಿದಿದ್ದಾರೆ. ಆದರೆ, ಬಾಲಕಿ ಗರ್ವಿ ಮಾತ್ರ ಕಾರಿನಲ್ಲೇ ಇದ್ದಳು. ಇತ್ತ ತಂದೆ ಕಾರನ್ನು ಪಾರ್ಕ್ ಮಾಡಿ, ಮಗು ಗರ್ವಿ ಕೂಡ ಅವಳ ತಾಯಿಯ ಜೊತೆಗಿದ್ದಾಳೆ ಎಂದು ಭಾವಿಸಿ, ಕಾರನ್ನು ಲಾಕ್ ಮಾಡಿ ತೆರಳಿದ್ದರು.

ಮದುವೆ ಸಮಾರಂಭದಲ್ಲಿ ಗಂಡ ಹೆಂಡತಿ ಇಬ್ಬರು ಮೈಮರೆತಿದ್ದರು. ಬ್ಯುಸಿಯಲ್ಲಿ ಯಾರೂ ತಮ್ಮ ಇನ್ನೊಂದು ಮಗುವಿನ ಬಗ್ಗೆ ಆಲೋಚಿಸಲೇ ಇದೆ. ಸುಮಾರು ಎರಡು ಗಂಟೆಗಳ ಬಳಿಕ ಪೋಷಕರಿಗೆ ಮಗು ಇಲ್ಲದ ಬಗ್ಗೆ ತಿಳಿದು ಬಂದಿದೆ. ಈ ವೇಳೆ ಇಡೀ ಮದುವೆ ಸಭಾಂಗಣ ಹುಡುಕಾಡಿದ್ದಾರೆ. ಬಳಿಕ ಕಾರಿನ ಬಳಿ ಬಂದಾಗ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಗು ಅಷ್ಟರಲ್ಲೇ ಸಾ*ವನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ಸಂಭ್ರಮದಲ್ಲಿ ಮೈಮರೆತ ತಂದೆ – ತಾಯಿಯಿಂದಾಗಿ ಪುಟ್ಟ ಜೀವವೊಂದು ಬ*ಲಿಯಾಗಿದೆ.

Continue Reading

LATEST NEWS

Trending