DAKSHINA KANNADA
ಶಕ್ತಿ ವಿದ್ಯಾಸಂಸ್ಥೆಯಲ್ಲಿ ನಿರ್ಮಾಣಗೊಂಡ ನೂತನ ಮೇಜರ್ ಧ್ಯಾನ್ ಚಂದ್ ಒಳಾಂಗಣ ಕ್ರೀಡಾಂಗಣ ಸಂಕೀರ್ಣ ಲೋಕಾರ್ಪಣೆ
Published
1 day agoon
By
NEWS DESK4ಮಂಗಳೂರು : ಶಕ್ತಿ ನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕ್ರೀಡೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನೂತನ ಮೇಜರ್ ಧ್ಯಾನ್ ಚಂದ್ ಒಳಾಂಗಣ ಕ್ರೀಡಾಂಗಣದ ಸಂಕೀರ್ಣವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಲೋಕಾರ್ಪಣೆಗೊಳಿಸಿದರು.
ದೀಪ ಬೆಳಗಿಸಿ ಮೇಜರ್ ಧ್ಯಾನ್ ಚಂದ್ ಒಳಾಂಗಣ ಕ್ರೀಡಾಂಗಣದ ನಾಮಫಲಕವನ್ನು ಅನಾವರಣಗೊಳಿಸಿ ವಿದ್ಯಾರ್ಥಿಗಳ ಜೊತೆ ಶಟಲ್ ಕಾಕ್ ಅಂಕಣದಲ್ಲಿ ಆಡುವುದರ ಮೂಲಕ ಚಾಲನೆ ನೀಡಿದರು. ಬಳಿಕ ಮಾತಾಡಿದ ಅವರು, ಜೀವನದಲ್ಲಿ ನಾವು ಅಯ್ಕೆ ಮಾಡಿರುವ ಗುರಿ ಮತ್ತು ಅದರಲ್ಲಿ ಉನ್ನತವಾದ ವಿಚಾರವನ್ನು ನಮ್ಮಲ್ಲಿ ಅಳವಡಿಸಲು ಪ್ರಯತ್ನಸಬೇಕು ಪ್ರಯತ್ನಿಸಬೇಕು. ಇದೇ ತರಹ ಗುರಿಯಿಟ್ಟುಕೊಂಡು ಸಾಧನೆ ಮಾಡಿದವರು ಮೇಜರ್ ಧ್ಯಾನ್ ಚಂದ್. ಇಂದಿಗೂ ಇಡಿ ವಿಶ್ವದಲ್ಲಿ ಧ್ಯಾನ್ ಚಂದ್ ಎಂದರೆ ಹಾಕಿ, ಹಾಕಿ ಎಂದರೆ ಧ್ಯಾನ್ ಚಂದ್. ಇವರ ಬಗ್ಗೆ ಶಾಲಾ ಪಠ್ಯ ಪುಸ್ತಕದಲ್ಲಿ ಮಕ್ಕಳು ಹೆಚ್ಚು ಹೆಚ್ಚು ಓದುವಂತಾಗಬೇಕು. ನಮ್ಮ ಜೀವನ ಒಮ್ಮೆ ಮಾತ್ರ ಬರುವುದು. ಈ ಸುಂದರವಾದ ಜೀವನವನ್ನು ಭಯ ಮುಕ್ತವಾಗಿ ಉತ್ಸಾಹದಿಂದ ಮುನ್ನಡೆಸಬೇಕು.
ಸ್ವಾತಂತ್ರ್ಯ ಪೂರ್ವದಲ್ಲಿ ಸೈನ್ಯದಲ್ಲಿ ಹಾಗೂ ಹಾಕಿಯಲ್ಲಿ ಸಾಧನೆ ಮಾಡಿ ಬದುಕಿದವರು ಮೇಜರ್ ಧ್ಯಾನ್ ಚಂದ್. ಇಂದು ಭಾರತ ವಿಶ್ವದ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿದೆ. ಭಾರತಕ್ಕೆ ಒಂದು ಸಾಂಸ್ಕೃತಿಕ ಹಿನ್ನೆಲೆ, ಪರಂಪರೆ ಇದೆ. ಈ ಪರಂಪರೆಯನ್ನು ರೂಪುಗೊಳಿಸಿ ಬೆಳೆಸಿದ ಮಹಾನ್ ಪುರುಷರ ವ್ಯಕ್ತಿತ್ವದ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಭಾರತ ಒಂದು ವಿಶಿಷ್ಟ ಸಂಸ್ಕೃತಿಯ ಜೀವನ ಪದ್ಧತಿ ಇರುವ ದೇಶ. ನಮ್ಮ ದೇಶ ವಿಶ್ವಕ್ಕೆ ಶಾಂತಿಯನ್ನು ಹೇಳಿಕೊಟ್ಟ ವಿಶಿಷ್ಟವಾದ ರಾಷ್ಟ್ರ. ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ನಾಯಕತ್ವದ ಅವಶ್ಯಕತೆ ಇದೆ. ನಾಯಕನಾದವನು ನಡೆ ನುಡಿಗಳಿಂದ ಇನ್ನೊಬ್ಬರಿಗೆ ಮಾದರಿಯಾಗುತ್ತಾನೆ. ಪರಿಸ್ಥಿತಿಗಳನ್ನು ಅರ್ಥಮಾಡಿಕೊಂಡು ತಂಡವನ್ನು ನಡೆಸುವವನೆ ನಿಜವಾದ ನಾಯಕ. ನಾವೆಲ್ಲ ನಾಯಕತ್ವದ ಮನಸ್ಥಿತಿಯನ್ನು ರೂಢಿಸಿಕೊಂಡು ಭವಿಷ್ಯದ ನಾಯಕರಾಗಿ ತಯಾರಾಗಬೇಕು. ದಕ್ಷಿಣ ಕನ್ನಡ ಜಿಲ್ಲೆಯ ಈ ಮಣ್ಣು ಪವಿತ್ರವಾದ ಮಣ್ಣು. ರಾಜ್ಯದ ವಿವಿಧ ಜಿಲ್ಲೆಗಳಿಂದ ಇಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಭಾಗ್ಯವಂತರು. ಈ ಶಕ್ತಿ ವಿದ್ಯಾ ಸಂಸ್ಥೆ ಮಕ್ಕಳಿಗೆ ಶಕ್ತಿಯನ್ನು ನೀಡಲಿ. ಭವಿಷ್ಯದಲ್ಲಿ ಸಧೃಢ ರಾಷ್ಟ್ರವನ್ನು ರೂಪಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಇರಲಿ ಎಂದು ಮಕ್ಕಳಿಗೆ ಶುಭ ಹಾರೈಸಿದರು.
ಈ ಸಂದರ್ಭ ಸಂಸ್ಥೆಯ ಪ್ರಧಾನ ಸಲಹೆಗಾರರಾದ ರಮೇಶ್ ಕೆ. ಪ್ರಸ್ತಾವಿಕವಾಗಿ ಶಕ್ತಿ ವಿದ್ಯಾ ಸಂಸ್ಥೆಯ ಕ್ರೀಡಾ ಸಾಧನೆಯ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕ ಡಾ.ಕೆ.ಸಿ.ನಾಯ್ಕ್ ಅಧ್ಯಕ್ಷತೆಯನ್ನು ವಹಿಸಿ ಶುಭ ಹಾರೈಸಿದರು. ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ವಿಶ್ವ ಹಿಂದೂ ಪರಿಷತ್ ಮಂಗಳೂರು ಅಧ್ಯಕ್ಷ ಹೆಚ್. ಕೆ .ಪುರುಷೋತ್ತಮ, ವಕೀಲ ಪುರುಷೋತ್ತಮ ಭಟ್, ಮಹೇಶ್ ಜೋಗಿ, ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಹೆಚ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಕ್ತಿ ವಸತಿ ಶಾಲೆ ಪ್ರಾಂಶುಪಾಲೆ ಬಬಿತಾ ಸೂರಜ್ ಸ್ವಾಗತಿಸಿದರು. ಕನ್ನಡ ಶಿಕ್ಷಕ ಶರಣಪ್ಪರವರು ನಿರೂಪಿಸಿ ವಂದಿಸಿದರು.
ಒಳಾಂಗಣ ಕ್ರೀಡಾಂಗಣದ ವಿಶೇಷತೆ ಏನು?
ಈ ಸಂಕೀರ್ಣವು ಸುಮಾರು ೩೦೦೦ಚ.ಅಡಿಯಲ್ಲಿ ನಿರ್ಮಾಣಗೊಂಡಿದ್ದು, ಈ ಒಳಾಂಗಣ ಕ್ರೀಡಾಂಗಣದಲ್ಲಿ ಶಟಲ್ ಬ್ಯಾಂಡ್ಮಿಂಟನ್, ಟೇಬಲ್ ಟೆನ್ನಿಸ್, ಚೆಸ್, ಕ್ಯಾರಮ್ ಹಾಗೂ ಇತರೆ ಕ್ರೀಡೆಗಳು ಒಳಗೊಂಡಿರುತ್ತದೆ. ಈ ಕ್ರೀಡಾಂಗಣದಲ್ಲಿ ಸುಸಜ್ಜಿತವಾದ ಹೊನಲು ಬೆಳಕಿನ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ.
೨೦೨೨-೨೩ರ ಶೈಕ್ಷಣಿಕ ವರ್ಷದಿಂದ ೨೦೨೪-೨೫ನೇ ಶೈಕ್ಷಣಿಕ ವರ್ಷದ ವರೆಗೆ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿನ ಕ್ರೀಡಾ ವಿಭಾಗದ ೫೮೮ ವಿದ್ಯಾರ್ಥಿಗಳು ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಾಲಿಬಾಲ್, ಕಬ್ಬಡಿ, ಶಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಈಜು, ಕಿಕ್ ಬಾಕ್ಸಿಂಗ್, ಚೆಸ್, ಕರಾಟೆ, ಟಾಯಿಕ್ವಾಂಡೊ ಮುಂತಾದ ಕ್ರೀಡಾ ಕ್ಷೇತ್ರದಲ್ಲಿ ಪ್ರಶಸ್ತಿಯನ್ನು ಸಂಸ್ಥೆಗೆ ತಂದು ಕೊಟ್ಟಿರುತ್ತಾರೆ.
ಇದನ್ನೂ ಓದಿ : ಕಬ್ಬಿಣದ ಯುಗವು ತಮಿಳುನಾಡಿನ ನೆಲದಿಂದ ಪ್ರಾರಂಭವಾಯಿತು: ಸಿಎಂ ಎಂಕೆ ಸ್ಟಾಲಿನ್ ಹೇಳಿಕೆ
ಇದರ ಜೊತೆಗೆ ಸಂಸ್ಥೆಯ ೨೯ ವಿದ್ಯಾರ್ಥಿಗಳು ಕ್ರೇಂದ್ರ ಸರ್ಕಾರದ SGFI (School Games Federation Of India)ಗೆ ಆಯ್ಕೆಯಾಗಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಈ ಹಿನ್ನಲೆಯಲ್ಲಿ ಸಂಸ್ಥೆಯ ಸಂಸ್ಥಾಪಕ ಡಾ. ಕೆ.ಸಿ.ನಾಯ್ಕ್ ಅವರು ಹಾಕಿ ಮಾಂತ್ರಿಕ ಹಾಗೂ ಸ್ವಾತಂತ್ರ್ಯ ಪೂರ್ವದಲ್ಲಿ ಭಾರತಕ್ಕೆ ೩ ಬಾರಿ ವಿಶ್ವ ಒಲಂಪಿಕ್ಸ್ನಲ್ಲಿ ಚಿನ್ನದ ಪದಕವನ್ನು ತಂದು ಕೊಟ್ಟಿರುವ ಮೇಜರ್ ಧ್ಯಾನ ಚಂದ್ ಅವರ ಹೆಸರಿನಲ್ಲಿ ಈ ಒಳಾಂಗಣ ಕ್ರೀಡಾಂಗಣವನ್ನು ನಿರ್ಮಾಣ ಮಾಡಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಲೋಕಾರ್ಪಣೆಗೊಳಿಸಿರುವುದು ವಿಶೇಷವಾಗಿದೆ.
ಮುಂದಿನ ದಿನಗಳಲ್ಲಿಯೂ ಶಕ್ತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದು ಭಾರತವನ್ನು ಕ್ರೀಡಾ ಕ್ಷೇತ್ರದಲ್ಲಿ ಮುನ್ನಡೆಸಬೇಕೆಂಬುದು ಇವರ ಉದ್ದೇಶವಾಗಿದೆ.
DAKSHINA KANNADA
ಮಂಗಳೂರು ಉದ್ಯಮಿಗೆ ಭೂ*ಗತ ಪಾ*ತಕಿಯಿಂದ ಬೆ*ದರಿಕೆ ಕರೆ!
Published
2 hours agoon
26/01/2025By
NEWS DESK4ಮಂಗಳೂರು : ಹಲವು ವರ್ಷಗಳ ಸದ್ದಡಗಿದ್ದ ಭೂಗತ ಲೋಕದ ಸದ್ದು ಮಂಗಳೂರಿನಲ್ಲಿ ಮತ್ತೆ ಕೇಳಿಸಿದೆ. ವಿದೇಶದಲ್ಲಿ ಕುಳಿತು ಮಂಗಳೂರಿನ ಉದ್ಯಮಿಗೆ ಹಫ್ತಾ ನೀಡುವಂತೆ ಬೆದರಿಕೆ ಕರೆ ಬಂದಿದ್ದು, ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಈ ಹಿಂದೆ ಮಂಗಳೂರು ಕಾಸರಗೋಡು ಜಿಲ್ಲೆಯಲ್ಲಿ ಹಲವಾರು ಅಪರಾಧ ಪ್ರಕರಣಗಳ ಹಿಂದೆ ಇದ್ದ ಕಲಿ ಯೋಗೀಶ ಮತ್ತೆ ಫೀಲ್ಡ್‌ಗೆ ಇಳಿದಿದ್ದಾನೆ ಎಂಬ ಅನುಮಾನ ಮೂಡಿದೆ.
ರವಿ ಪೂಜಾರಿ, ಬನ್ನಂಜೆ ರಾಜ ಮೊದಲಾದ ಪಾ*ತಕಿಗಳ ಬಂಧನದ ಬಳಿಕ ಬಹುತೇಕ ಎಲ್ಲಾ ಭೂ*ಗತ ಪಾ*ತಕಿಗಳ ಸದ್ದು ಅಡಗಿ ಹೋಗಿತ್ತು. ಹೀಗಾಗಿ ಒಂದಷ್ಟು ಉದ್ಯಮಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟು ತಮ್ಮ ವ್ಯವಹಾರ ನಡೆಸ್ತಾ ಇದ್ರು. ಆದ್ರೆ ಈಗ ಬಜಪೆಯ ಉದ್ಯಮಿ ರೊನಾಲ್ಡ್ ಎಂಬವರಿಗೆ ಕಲಿ ಯೋಗೀಶನ ಹೆಸರಿನಲ್ಲಿ ಫೋನ್ ಮಾಡಿ ಬೆ*ದರಿಕೆ ಹಾಕಿರುವುದಾಗಿ ಪೊಲೀಸರಿಗೆ ದೂರು ನೀಡಲಾಗಿದೆ.
ಇದನ್ನೂ ಓದಿ : ಗೀಸರ್ ರಿಪೇರಿಗಂತ ಬಂದ ರಹಸ್ಯ ಕ್ಯಾಮರಾ ಇಟ್ಟ…ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾತ ಸಿಕ್ಕಿ ಬಿದ್ದಿದ್ಹೇಗೆ?
ಜನವರಿ 17 ರಂದು ಈ ಕರೆ ಬಂದಿದ್ದು 3 ಕೋಟಿ ನೀಡಬೇಕು, ಇಲ್ಲವಾದಲ್ಲಿ ಮನೆಯವರೆಲ್ಲರನ್ನೂ ಕೊ*ಲ್ಲುವುದಾಗಿ ಬೆ*ದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.
DAKSHINA KANNADA
ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ
Published
3 hours agoon
26/01/2025By
NEWS DESK4ಮಂಗಳೂರು : ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ಇಂದು(ಜ.26) ಬಾಳೆಪುಣಿಯ ಸ್ವಗೃಹದಲ್ಲಿ ನಿ*ಧನರಾಗಿದ್ದಾರೆ. ಅವರು ಪತ್ನಿ ಹಾಗೂ ಪುತ್ರನನ್ನು ಅ*ಗಲಿದ್ದಾರೆ.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ 26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಮಂಗಳೂರು ಮಿತ್ರ , ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಸರಳ, ಸಜ್ಜನಿಕೆಯ ಬಾಳೆಪುಣಿ ಅವರು ಜನಾನುರಾಗಿಯಾಗಿದ್ದರು.
ಇದನ್ನೂ ಓದಿ: ಮಾಜಿ ಕ್ರಿಕೆಟಿಗ ಸೆಹ್ವಾಗ್-ಆರತಿ ದಾಂಪತ್ಯದಲ್ಲಿ ಬಿರುಕು ?
ಹರೇಕಳ ಹಾಜಬ್ಬ ಅವರನ್ನು ಮೊದಲ ಬಾರಿಗೆ ನಾಡಿಗೆ ಪರಿಚಯಿಸಿದ ಕೀರ್ತಿ ಗುರುವಪ್ಪ ಬಾಳೆಪುಣಿ ಅವರದು. ಪತ್ರಿಕೋದ್ಯಮದ ಅವರ ಮೇರು ಸಾಧನೆಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ರಾಜ್ಯ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ, ರಾಷ್ಟ್ರೀಯ ಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಅವರ ಮುಡಿಗೇರಿದೆ.
DAKSHINA KANNADA
ಮಂಗಳೂರಿನಲ್ಲಿ ಜಿಲ್ಲೆಯ ಮೊದಲ ಮಕ್ಕಳ ಮಾದರಿ ಸಂಸತ್ ಅಧಿವೇಶನ
Published
4 hours agoon
26/01/2025By
NEWS DESK2ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಮಕ್ಕಳ ಮಾದರಿ ಸಂಸತ್ತು ಮಂಗಳೂರಿನಲ್ಲಿ ಶನಿವಾರ ನಡೆಯಿತು.
ಎಸ್ ಡಿಎಂ ಶಾಲೆ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಆಯೋಜಿಸಿದ್ದ ಈ ಅಧಿವೇಶನದಲ್ಲಿ ಪ್ರಮಾಣ ವಚನ, ಭಾಷಣ, ಪ್ರಶ್ನೋತ್ತರ ಅವಧಿ, ಗಮನ ಸೆಳೆಯುವ ನಿರ್ಣಯಗಳು ಮತ್ತು ಶೂನ್ಯ ವೇಳೆ ಸೇರಿದಂತೆ ಸಂಸದೀಯ ಕಾರ್ಯವಿಧಾನಗಳನ್ನು ಪುನರಾವರ್ತಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ಸಂಸದೀಯ ಕಾರ್ಯವಿಧಾನಗಳನ್ನು ಮಕ್ಕಳಿಗೆ ಪರಿಚಯಿಸಲು ಮಾದರಿ ಸಂಸತ್ತಿನಂತಹ ಉಪಕ್ರಮಗಳ ಮಹತ್ವವನ್ನು ಒತ್ತಿ ಹೇಳಿದರು.
LATEST NEWS
ಮನೆಯ ಕಪಾಟಿನಿಂದ ಬಟ್ಟೆಗಳು ಕೆಳಗೆ ಬೀಳುತ್ತದೆಯೇ? ಈ ಟಿಪ್ಸ್ ಸಹಾಯದಿಂದ ಕಬೋರ್ಡ್ ಈ ರೀತಿ ಜೋಡಿಸಿ
ಗೃಹಲಕ್ಷ್ಮಿ ಹಣ ಕೂಡಿಟ್ಟು ಶೌಚಾಲಯ ನಿರ್ಮಿಸಿದ ಮಹಿಳೆ
ಮಂಗಳೂರಿನಲ್ಲಿ ಜಿಲ್ಲೆಯ ಮೊದಲ ಮಕ್ಕಳ ಮಾದರಿ ಸಂಸತ್ ಅಧಿವೇಶನ
ಬಿಗ್ ಬಾಸ್ ಸ್ಪರ್ಧಿ ಗೌತಮಿ ಜಾದವ್ ಸಂಸಾರದಲ್ಲಿ ಬಿರುಕು?
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕು*ಸಿದು ಬಿ*ದ್ದ ಪೊಲೀಸ್ ಕಮಿಷನರ್ ..!
ಆರ್ಸಿಬಿಗೆ ಆಘಾತ; ಕೈಕೊಟ್ಟ ಸ್ಟಾರ್ ಪ್ಲೇಯರ್
Trending
- BIG BOSS4 days ago
ಗೌತಮಿ-ಧನರಾಜ್ ಬೆನ್ನಲ್ಲೇ ಈ ವಾರ ಫಸ್ಟ್ ಎಲಿಮಿನೇಟ್ ಆಗೋದ್ಯಾರು ?
- BIG BOSS6 days ago
ಬಿಗ್ ಬಾಸ್ ತೊರೆಯುವ ಬಗ್ಗೆ ಮತ್ತೊಮ್ಮೆ ಘೋಷಣೆ ಮಾಡಿದ ಕಿಚ್ಚ
- BIG BOSS3 days ago
ಭಾವನೆಗಳ ಮಹಾಪೂರ ನೀನು, ಕನಸುಗಳ ಶಿಖರ ನೀನು: ಭವ್ಯಾಗೆ ತ್ರಿವಿಕ್ರಮ್ ಪ್ರಪೋಸ್
- BIG BOSS6 days ago
ಬಿಗ್ ಬಾಸ್ ಸೀಸನ್ 11ರ ವಿನ್ನರ್ ಒಬ್ಬರಲ್ಲ ಇಬ್ಬರು… ಅಷ್ಟಕ್ಕೂ ಟ್ರೋಫಿ ನೀಡಿದ ಸುಳಿವೇನು ?