Tuesday, January 26, 2021

ಜಪ್ಪಿನಮೊಗರು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ: ಶಾಸಕ ಕಾಮತ್..

ಜಪ್ಪಿನಮೊಗರು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ: ಶಾಸಕ ಕಾಮತ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಜಪ್ಪಿನಮೊಗರು ವಾರ್ಡಿನಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅನುದಾನದಡಿ ವಿವಿಧ ಕಾಮಗಾರಿಗಳ ಗುದ್ದಲಿಪೂಜೆ ಹಾಗೂ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆಯನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅದ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆಯವರು ನೆರವೇರಿಸಿದರು.ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು ಜಪ್ಪಿನಮೊಗರು ವಾರ್ಡಿನ ಅಭಿವೃದ್ಧಿಗೆ ಶಾಸಕನಾಗಿ ನಾನು ಬದ್ಧನಾಗಿದ್ದೇನೆ.

ವಿವಿಧ ಇಲಾಖೆಗಳ ಅನುದಾನ ಜೋಡಿಸಿ ತುರ್ತು ಆಗಬೇಕಿರುವ ಕಾಮಗಾರಿಗಳಿಗೆ ಒತ್ತು ನೀಡಲಾಗುವುದು. ಈ ನಿಟ್ಟಿನಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ಸಹಕಾರ ನೀಡಬೇಕೆಂದು ಅದ್ಯಕ್ಷರಲ್ಲಿ ಮನವಿ ಮಾಡಿದರು.

ಈ ಸಂದರ್ಭ ಉಪಮೇಯರ್ ವೇದಾವತಿ, ಕಾರ್ಪೊರೇಟರ್ ವೀಣಾ ಮಂಗಳ, ಬಿಜೆಪಿ ಮುಖಂಡರಾದ ಜಿ. ಸುರೇಂದ್ರ, ಕಿರಣ್ ರೈ, ಸುಜಾತ, ಸವಿತಾ ಶೆಟ್ಟಿ, ಸಂದೇಶ್ ಶೆಟ್ಟಿ, ದೀಪಕ್,ಸುಕೇಶ್ ಭರತ್ ರಾಜ್ ಶೆಟ್ಟಿ, ಪ್ರವೀಣ್ ಕುಮಾರ್, ಸುಪ್ರೀಂ ಡಿಸೋಜಾ, ಹರೀಶ್, ಬೆನಕ, ಶ್ರೀಧರ್ ಶೆಟ್ಟಿ, ಸಚಿನ್ ರೈ, ಪವನ್ ರಾಜ್ ಶೆಟ್ಟಿ, ಸಂತೋಷ್ , ಉದಯ್,ರಾಮ್ ಪ್ರಸಾದ್, ಸ್ಥಳೀಯರಾದ ವಿನ್ಸೆಂಟ್ ಡಿಸೋಜಾ, ನಾಗೇಂದ್ರ, ಗಣೇಶ್ ಶೆಟ್ಟಿ, ಸತೀಶ್ ಅಡಪ, ಲೋಹಿತ್ ಶೆಟ್ಟಿ,ಅಧಿಕಾರಿ ವರ್ಗದವರು ಹಾಗೂ ಬಿಜೆಪಿ ಬೂತಿನ ಅಧ್ಯಕ್ಷ ಕಾರ್ಯದರ್ಶಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.