ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!
ಮಂಗಳೂರು: ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್ ಸಮೀಪ ನಡೆದಿದೆ.
ವಿನೋದ್ ಸಾಲಿಯಾನ್ 40 ರಚನಾ ಸಾಲಿಯನ್ 38 ಮತ್ತು ಅವರ ಪುತ್ರ ಸಾಧ್ಯ ಸಾಲಿಯನ್ 8ವರ್ಷದ ಬಾಲಕ ಸೇರಿದಂತೆ ದಂಪತಿಗಳು ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮೂಲತಃ ಹಳೆಯಂಗಡಿಯ ನಿವಾಸಿಯಾದ ವಿನೋದ್ ಸಾಲ್ಯಾನ್ ಕುಟುಂಬ, ಕಳೆದ ಹಲವಾರು ವರ್ಷಗಳಿಂದ ಮುಂಬೈಯಲ್ಲಿ ಹೋಟೆಲ್ ಉದ್ಯಮ ಮಾಡಿಕೊಂಡಿದ್ದು, ಕಳೆದ ಒಂದು ವರ್ಷದ ಹಿಂದೆ ಊರಿಗೆ ಬಂದು ಹಳೆಯಂಗಡಿಯ ಕಲ್ಲಾಪು ರೈಲ್ವೇ ಗೇಟ್ ಬಳಿ ಬಾಡಿಗೆ ಮನೆ ಮಾಡಿಕೊಂಡಿದ್ದು, ಊರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ
ಶನಿವಾರ ಎಂದಿನಂತಿದ್ದ ದಂಪತಿಗಳು ಭಾನುವಾರ ದಿನ ಪೂರ್ತಿ ಮನೆಯ ಬಾಗಿಲು ತೆರೆಯದ ಕಾರಣ ಸಂಶಯಗೊಂಡ ಅಕ್ಕಪಕ್ಕದ ಮನೆಯವರು ಇಂದು ಬೆಳಿಗ್ಗೆ ಮನೆಯ ಕಿಟಕಿ ಬಾಗಿಲು ಮುರಿದು ಪರಿಶೀಲಿಸಿದಾಗ ಆತ್ಮಹತ್ಯೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಸ್ಥಳೀಯರು ಮಾಹಿತಿ ನೀಡಿದ ಮೇರೆಗೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.