Connect with us

    ಯಾರೋ 2000 ರೂ.ಸಿಗುತ್ತೆ ಅಂತ ಸುಳ್ಳು ಸುದ್ದಿ ಹಬ್ಬಿಸಿದ್ರೆ.. ಇವರು ಲಾಕ್ ಡೌನ್ ಅನ್ನೇ ಉಲ್ಲಂಘಿಸೋದಾ.?

    Published

    on

    ಯಾರೋ 2000 ರೂ.ಸಿಗುತ್ತೆ ಅಂತ ಸುಳ್ಳು ಸುದ್ದಿ ಹಬ್ಬಿಸಿದ್ರೆ.. ಇವರು ಲಾಕ್ ಡೌನ್ ಅನ್ನೇ ಉಲ್ಲಂಘಿಸೋದಾ.?

    ಮಂಗಳೂರು: ಯಾರಾದ್ರೂ ಬಿಟ್ಟಿ ಹಣ ಕೊಡ್ತಾರೆ ಅಂದ್ರೆ ಸಿಕ್ಕಿದ್ದೇ ಸೀರುಂಡೆ ಅಂತ ಜನ ಓಡೋಡಿ ಬರ್ತಾರೆ. ಅದೂ ಈ ಕೊರೊನಾ ಸಂಕಷ್ಟದ ಸಮಯದಲ್ಲಂತೂ ಬಿಟ್ಟಿ ಹಣ ಸಿಗುತ್ತೆ ಅಂದ್ರೆ ಹೇಗಾಗ್ಬೇಡ.?.

    ಆದ್ರೆ ಸಿಕ್ರೆ ಓಕೆ ಇಲ್ಲಾಂದ್ರೆ, ಇದೀಗ ಹಣ ಸಿಗುತ್ತೆ ಅಂತ ಗಂಟೆಗಟ್ಟಲೇ ಬಿಸಿಲಿನಲ್ಲಿ ಕಾದು ಸುಟ್ಟ ಬದನೆಕಾಯಿಯಾದ ಸ್ವಾರಸ್ಯಕರ ಘಟನೆಯೊಂದು ಮಂಗಳೂರಿನಲ್ಲಿ ನಡೆದಿದೆ.

    ಹೌದು.. ನಗದು ದೊರೆಯುತ್ತದೆ ಎಂದು ಜನಜಂಗುಳಿ ಸೇರಿಕೊಂಡು ಲಾಕ್ ಡೌನ್ ಸಂಪೂರ್ಣ ಉಲ್ಲಂಘನೆಯಾದ ಘಟನೆ ಮಂಗಳೂರಿನ ಕೂಳೂರಿನಲ್ಲಿ ನಡೆದಿದೆ‌.

    ಕೂಳೂರಿನ ಶ್ರೀದೇವಿ ಪ್ರಸಾದ್ ಎಂಬ ಖಾಸಗಿ ಕಟ್ಟಡದಲ್ಲಿ ಕೂಲಿ ಕಾರ್ಮಿಕರ ಮಾಹಿತಿ ಪಡೆದು ಹಣ ಅಕೌಂಟ್ ಗೆ ಹಾಕಲಾಗುತ್ತದೆ ಎಂದು ತಪ್ಪು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರವನ್ನು ಗಾಳಿಗೆ ತೂರಿ, ಬರೋಬ್ಬರಿ 600 ರಿಂದ 750 ಮಂದಿ ಗುಂಪು ಸೇರಿದ್ದರು.

    ಇದನ್ನು ಗಮನಿಸಿದ ಕೆಲವರು ಯಾಕಾಗಿ ನಿಂತಿದ್ದೀರಿ ಎಂದು ಕೇಳಿದ್ದಾರೆ. ಅದಕ್ಕೆ ‘ನಮ್ಮ ಬ್ಯಾಂಕ್ ಖಾತೆಗೆ 2000 ರೂ. ಹಣ ಬರುತ್ತದೆ’ ಎಂದು ನಾವೆಲ್ಲಾ ಬಂದು ನಿಂತಿದ್ದೇವೆ ಎಂದು ಸರತಿ ಸಾಲಿನಲ್ಲಿ ನಿಂತವರಿಂದ ಉತ್ತರ ಬರುತ್ತಿತ್ತು.

    ಯಾರು ಹೇಳಿದ್ದು ಎಂದರೆ, ಯಾರಿಂದಲೂ ನಿಖರವಾದ ಉತ್ತರ ಇರಲಿಲ್ಲ.

    ಎಲ್ಲರೂ ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಗಳನ್ನು ಹಿಡಿದುಕೊಂಡು ಮಧ್ಯಾಹ್ನ 11.30 ಯಿಂದ 3.30ರ ವರೆಗೆ ಸರತಿ ಸಾಲು ನಿಂತು ಜನಜಂಗುಳಿ ಸೇರಿತ್ತು.

    ಮಾಹಿತಿ ಪಡೆಯುವವರ ಬಳಿ ಯಾಕಾಗಿ ಕೂಲಿ ಕಾರ್ಮಿಕರ ಬ್ಯಾಂಕ್ ಖಾತೆ ಸಂಖ್ಯೆ ಪಡೆಯಲಾಗುತ್ತಿದೆ ಎಂದು ಕೇಳಿದರೆ, ನಮಗೆ ಡಿಸಿ ಕಚೇರಿಯಿಂದ ಕೂಲಿ ಕಾರ್ಮಿಕರ ಮಾಹಿತಿ ಪಡೆಯಲು ಹೇಳಿದ್ದಾರೆ.

    ಆದರೆ ಯಾರಿಗೂ 2000 ರೂ. ಬ್ಯಾಂಕ್ ಖಾತೆಗೆ ಹಾಕುತ್ತಿಲ್ಲ ಎಂಬ ಉತ್ತರ ಬಂತು.

    ಬಳಿಕ ಸ್ವಲ್ಪ ಹೊತ್ತಿನಲ್ಲಿ ಕಾರ್ಮಿಕ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಅವರನ್ನು ಕೂಲಿ ಕಾರ್ಮಿಕರು ಮುತ್ತಿಗೆ ಹಾಕಿದ್ದು, ಅವರು ಭರ್ರ್.. ಅಂತ ಕಾರು ಚಲಾಯಿಸಿ ಹೊರಟೇ ಹೋಗಿದ್ದಾರೆ.

    ಅಲ್ಲದೆ ಮಾಹಿತಿ ಪಡೆಯುವವರೂ ತಮ್ಮ ತಮ್ಮ ಬೈಕ್ ಏರಿ ಅಲ್ಲಿಂದ ಪರಾರಿ ಆಗಿದ್ದಾರೆ. ಒಟ್ಟಿನಲ್ಲಿ 2000 ಸಿಗುತ್ತದೆ ಎಂದು ಬಂದವರು ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ಮನೆ ದಾರಿ ಹಿಡಿದರು.

    ಆದರೆ ಈ ಬಗ್ಗೆ ಪೊಲೀಸ್ ಇಲಾಖೆಗೆ, ಸ್ಥಳೀಯ ಕಾರ್ಪೊರೇಟರ್, ಮಹಾನಗರ ಪಾಲಿಕೆಯ ಆಯುಕ್ತರು ಯಾರಿಗೂ ಸರಿಯಾದ ಮಾಹಿತಿ ಇಲ್ಲ.

    ಒಟ್ಟಿನಲ್ಲಿ ಲಾಕ್ ಡೌನ್ ಹಾಗೂ ಸಾಮಾಜಿಕ ಅಂತರ ಎರಡೂ ಉಲ್ಲಂಘನೆ ಆದದ್ದಂತೂ ಸತ್ಯ.

    ಈ ಬಗ್ಗೆ ಜಿಲ್ಲಾಡಳಿತ ತನಿಖೆ ನಡೆಸಿ, ಜನರಿಗೆ ತಪ್ಪು ಮಾಹಿತಿ ನೀಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕಾಗಿದೆ‌.

    ಇದೆಲ್ಲಾ ನೋಡುತ್ತಿದ್ದರೆ ಲಾಕ್ ಔಟ್ ಉಲ್ಲಂಘನೆಯಾಗ್ಲಿ ಅಂತ ಯಾರೋ ಉದ್ದೇಶಪೂರ್ವಕವಾಗಿ ಮಾಡಿದಂತೆ ಮೇಲ್ನೋಟಕ್ಕೆ ಕಂಡು ಬರುತ್ತದೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಹಳ್ಳ ಹಿಡಿದ ಸ್ಮಾರ್ಟ್‌ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್

    Published

    on

    ಮಂಗಳೂರು: ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್‌ ಪಾಸ್‌ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್‌ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.

    ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್‌ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.

    ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ವಶ; ಓರ್ವ ಬಂಧನ

    ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.

    Continue Reading

    LATEST NEWS

    11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ

    Published

    on

    ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ  ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.

    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.

    ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್​ ಮನೆಮದ್ದು ಟ್ರೈ ಮಾಡಿ

    ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    FILM

    ಕನ್ನಡದ ಸೀರಿಯಲ್‌ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ

    Published

    on

    ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್‌ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು  ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.

    ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ  ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್‌ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್‌ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.

    ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!

    ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್‌ಮೆಂಟ್‌ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್‌ಮೆಂಟ್‌ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್‌ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್‌ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.

    Continue Reading

    LATEST NEWS

    Trending