ನವದೆಹಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದೂ ಸಹ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಾಗಿದ್ದು, ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ 35 ಪೈಸೆ ಹೆಚ್ಚಿಸಿವೆ.
ಕಳೆದ ಕೆಲ ದಿನಗಳಿಂದ ತೈಲ ಬೆಲೆ ಏರಿಕೆ ಎಗ್ಗಿಲ್ಲದೆ ಹೆಚ್ಚಳವಾಗುತ್ತಿದೆ. ನಿನ್ನೆ ಸಹ 35 ಪೈಸೆ ಹೆಚ್ಚಿಸಲಾಗಿತ್ತು. ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 106.89 ರೂಪಾಯಿ ಹಾಗೂ ಡೀಸೆಲ್ ದರ 95.62 ರೂಪಾಯಿ ಇದೆ.
ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 112.78 ಕ್ಕೆ ಹಾಗೂ ಲೀಟರ್ ಡೀಸೆಲ್ 103.63 ರೂ. ಗೆ ಮಾರಾಟವಾಗುತ್ತಿದೆ.
115.54 ರೂ.ಗೆ ಪೆಟ್ರೋಲ್ ಮತ್ತು 104.89 ರೂ.ಗೆ ಡೀಸೆಲ್ ಖರೀದಿಸಲಾಗುತ್ತಿದೆ. ಹೈದರಾಬಾದ್ನಲ್ಲಿ ಸಹ ತೈಲ ಏರಿಕೆಯಿಂದ ವಾಹನ ಸವಾರರು ಕಂಗಾಲಾಗಿದ್ದು, ಲೀಟರ್ ಪೆಟ್ರೋಲ್ಗೆ 111.18 ರೂ. ಹಾಗೂ ಲೀಟರ್ ಡೀಸೆಲ್ಗೆ 104.32 ರೂ. ಇದೆ.
ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 110.61 ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 101.49 ರೂ. ಗೆ ಏರಿಕೆಯಾಗಿದೆ.
ಬೆಂಗಳೂರು ಸೇರಿದಂತೆ ಅನೇಕ ನಗರಗಳಲ್ಲಿ ಡೀಸೆಲ್ ಬೆಲೆ ನೂರರ ಗಡಿ ದಾಟಿದೆ.ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಸೇರಿದಂತೆ ತೈಲ ಕಂಪನಿಗಳು ಅಬಕಾರಿ ಸುಂಕಗಳ ಆಧಾರದ ಮೇಲೆ ಇಂಧನ ದರವನ್ನು ಹೆಚ್ಚಿಸುತ್ತಿರುತ್ತವೆ.