Connect with us

    LATEST NEWS

    ಹೆಚ್ಚಾದ ಮಂಗನ ಕಾಯಿಲೆ, ಜನರಲ್ಲಿ ಆತಂಕ..! ಸರಕಾರದ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ

    Published

    on

    ಉತ್ತರ ಕನ್ನಡ/ಮಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ವಿಪರೀತ ಜಾಸ್ತಿಯಾಗಿದ್ದು, ಜನರಲ್ಲಿ ಆತಂಕ ಸೃಷ್ಠಿಸಿದೆ. ಜಿಲ್ಲೆಯಲ್ಲಿ ಕೆಎಫ್‌ಡಿ ಸೋಂಕಿತರ ಸಂಖ್ಯೆ 108 ದಾಟಿದ್ದು, ಸಿದ್ದಾಪುರ ಒಂದು ತಾಲೂಕಿನಲ್ಲೇ ಇದು 100 ರ ಗಡಿ ದಾಟಿದೆ. ಸಿದ್ದಾಪುರದ ಕೊರ್ಲಕೈ ಗ್ರಾಮದಲ್ಲಿ ಅತೀ ಹೆಚ್ಚು ಸೋಂಕಿತರು ಪತ್ತೆಯಾಗಿದ್ದು, ಕೆಎಫ್‌ಡಿ ನಿಯಂತ್ರಣಕ್ಕೆ ಜಿಲ್ಲಾಡಳಿತ ವಿಫಲವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    monkey disease

    ವರ್ಷದ ಆರಂಭದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಮಂಗನ ಕಾಯಿಲೆಯ ಮೊದಲ ಕೇಸ್ ಕಾಣಸಿತ್ತು. ಆದ್ರೆ ಈ ಹಿಂದೆ ಈ ಕಾಯಿಲೆಗೆ ನೀಡುತ್ತಿದ್ದ ಲಸಿಕೆ ಪರಿಣಾಮಕಾರಿ ಅಲ್ಲ ಎಂಬ ಕಾರಣಕ್ಕೆ ಲಸಿಕೆ ಹಿಂಪಡೆಯಲಾಗಿದೆ. ಹೀಗಾಗಿ ಈ ಕಾಯಿಲೆಯ ಚಿಕಿತ್ಸೆಗೆ ಲಸಿಕೆ ಇಲ್ಲದೆ ಕೇವಲ ಸೊಳ್ಳೆ ಉಣುಗು ಹಾಗೂ ತಿಗಣೆ ಕಚ್ಚದಂತೆ ಡಿ.ಎಮ್.ಪಿ ಆಯಿಲ್‌ ನೀಡುತ್ತಿತ್ತು. ಆದ್ರೆ ಇದೀಗ ಈ ಆಯಿಲ್ ಕೂಡಾ ಪರಿಣಾಮಕಾರಿಯಾಗಿ ಕೆಲಸ ಮಾಡಿಲ್ಲ. ಈ ಕಾರಣದಿಂದ ಕೆಎಫ್‌ಡಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಭಾದಿಸಿದ್ದು, ಈಗಾಗಲೆ 9 ಜನರ ಜೀವವನ್ನು ಆಹುತಿ ಪಡೆದುಕೊಂಡಿದೆ.

    Read More..; ತಾಯಿಯನ್ನು ಮನೆಯಿಂದ ಹೊರಹಾಕಿದ್ದ ಮಗ-ಸೊಸೆ..! ತಹಶೀಲ್ದಾರ್ ನೆರವಿನಿಂದ ತಾಯಿ ಮರಳಿ ಮನೆಗೆ..!

    ಮಂಗನ ಕಾಯಿಲೆಯನ್ನು ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಅಂತ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಮೃತ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರದಲ್ಲೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ವೈದ್ಯಕೀಯ ಮೂಲಭೂತ ವ್ಯವಸ್ಥೆಯನ್ನೂ ಹೆಚ್ಚಿಸದೇ ಆರೋಗ್ಯ ಇಲಾಖೆ ನಿರ್ಲಕ್ಷ್ಯ ತಾಳಿದೆ ಅಂತ ಜನರು ಆರೋಪಿಸಿದ್ದಾರೆ. ಒಟ್ಟಾರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಕೆಎಫ್‌ಡಿ ಪ್ರಕರಣ ನಿಯಂತ್ರಿಸಲು ಸರ್ಕಾರ ಮುಂದಾಗದೇ ಇರುವುದು ಹಾಗೂ ಸೂಕ್ತ ಲಸಿಕೆಯನ್ನು ಜನರಿಗೆ ನೀಡದೇ ಇರುವುದು ಜನರ ಆತಂಕವನ್ನು ಹೆಚ್ಚು ಮಾಡಿದೆ.

    LATEST NEWS

    ಏರ್ ಪೋರ್ಟ್ ಗೆ ಪ್ರಿಯಕರ ಡ್ರಾಪ್ ಮಾಡಲಿಲ್ಲವೆಂದು ಕೋರ್ಟ್ ಮೆಟ್ಟಿಲೇರಿದ ಯುವತಿ!

    Published

    on

    ಮಂಗಳೂರು : ಇತ್ತೀಚೆಗಿನ ದಿನಗಳಲ್ಲಿ ಸಂಬಂಧಗಳು ಅರಳಲು ಹೆಚ್ಚು ಸಮಯ ಪಡೆಯುತ್ತಿಲ್ಲ. ಜೊತೆಗೆ ಮುರಿಯಲೂ ಕೂಡ. ಸಣ್ಣದೊಂದು ಮನಸ್ತಾಪ ಸಂಬಂಧವನ್ನು ದೂರ ಮಾಡುತ್ತದೆ. ಇತ್ತೀಚೆಗೆ ಇಂತಹುದೇ ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿದ ಗೆಳತಿಯೊಬ್ಬಳು ತನ್ನ ಪ್ರಿಯಕರನ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ್ದಾಳೆ.


    ಫ್ಲೈಟ್ ಮಿಸ್​​ ಆಗಲು ಪ್ರಿಯಕರ ಕಾರಣ :

    ವರದಿಗಳ ಪ್ರಕಾರ, ಈ ಘಟನೆ ನಡೆದಿರುವುದು ನ್ಯೂಜಿಲೆಂಡ್ ನಲ್ಲಿ. ಪ್ರಿಯಕರ ತನ್ನನ್ನು ವಿಮಾನ ನಿಲ್ದಾಣಕ್ಕೆ ಬಿಡಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡು ಯುವತಿಯೊಬ್ಬಳು ಪ್ರಕರಣ ದಾಖಲಿಸಿದ್ದಾಳೆ. ಆತನಿಂದಾಗಿ ತನ್ನ ಫ್ಲೈಟ್ ಮಿಸ್​​ ಆಯ್ತು, ಇದಲ್ಲದೇ ಮರುದಿನ ಬೇರೆ ಫ್ಲೈಟ್ ನಲ್ಲಿ ಹೋಗಲು ಹೆಚ್ಚುವರಿ ಹಣವನ್ನು ಖರ್ಚು ಮಾಡಬೇಕಾಗಿತ್ತು ಎಂಬುದು ಯುವತಿಯ ದೂರು.

    ಪ್ರಿಯಕರನ ಮೇಲೆ ತೀವ್ರ ಕೋಪಕೊಂಡಿದ್ದ ಯುವತಿ ಆರು ವರ್ಷಗಳ ತನ್ನ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡಿದ್ದಾಳೆ. ಅಲ್ಲದೆ, ವಿಮಾನಕ್ಕಾಗಿ ಪಾವತಿಸಿದ ಹಣವನ್ನು ಆತ ನೀಡುವಂತೆ ನ್ಯಾಯಾಲಯದ ನ್ಯಾಯಾಧೀಶರಲ್ಲಿ ಮನವಿ ಮಾಡಿದ್ದಾಳೆ.

    ಇದನ್ನೂ ಓದಿ :  ನನ್ನದೂ ತಪ್ಪಿದೆ, ಯುವ ಹೇಳಿದ್ದಕ್ಕೆ ನಾನು ಮುಂದುವರೆದೆ…ಸಪ್ತಮಿ ಗೌಡ ಆಡಿಯೋ ವೈರಲ್!?

    ಕೋರ್ಟ್ ಸಲಹೆ ಏನು?

    ಯುವತಿಯ ವಾದವನ್ನು ಆಲಿಸಿದ ನ್ಯಾಯಾಧೀಶ ರೆಫ್ರಿ ಕ್ರಿಶ್ಯಾ ಕೌವಿ, ಯುವತಿ ಹೇಳಿದ ಅಪರಾಧಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ವಾಗ್ದಾನವನ್ನು ಉಲ್ಲಂಘಿಸಿದ್ದಕ್ಕಾಗಿ ಯಾರನ್ನೂ ಶಿಕ್ಷಿಸುವುದು ಅಸಾಧ್ಯ ಎಂದು ತೀರ್ಪು ನೀಡಿದ್ದಾರೆ.
    ಅಲ್ಲದೇ, ಇಂತಹ ಸಣ್ಣ ವಿಚಾರಗಳಿಗೆ ಸಂಬಂಧ ಕಡಿದುಕೊಳ್ಳುವುದು ಸರಿಯಲ್ಲ ಎಂದು ಕಿವಿ ಮಾತು ಹೇಳಿದ್ದಾರೆ.

    Continue Reading

    LATEST NEWS

    ಸೂರಜ್ ರೇವಣ್ಣ ಪರ ದೂರು ನೀಡಿದ್ದ ಶಿವಕುಮಾರ್ ನಾಪತ್ತೆ!

    Published

    on

    ಮಂಗಳೂರು/ಹಾಸನ : ಸೂರಜ್ ರೇವಣ್ಣ ಅವರನ್ನು ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜ*ನ್ಯ ಪ್ರಕರಣ ಸಂಬಂಧ ಬಂಧಿಸಲಾಗಿದೆ. ಈ ಪ್ರಕರಣವನ್ನೂ ಸಿಐಡಿ ತನಿಖೆಗೂ ವಹಿಸಲಾಗಿದೆ.

    ಆದರೆ, ಇತ್ತ ಹೊಳೆನರಸೀಪುರದಲ್ಲಿ ಸಂತ್ರಸ್ತನ ವಿರುದ್ಧವೇ ದೂರು ದಾಖಲಾಗಿದ್ದು, ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎನ್ನುವಾತ ಸಂತ್ರಸ್ತನ ವಿರುದ್ಧ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ಆದ್ರೆ, ಇದೀಗ ಸಂತ್ರಸ್ತನ ದೂರಿನ ಅನ್ವಯ ಸೂರಜ್​ನನ್ನು ಪೊಲೀಸರು ಅರೆಸ್ಟ್ ಮಾಡುತ್ತಿದ್ದಂತೆಯೇ ಆಪ್ತ ಶಿವಕುಮಾರ್ ನಾಪತ್ತೆಯಾಗಿದ್ದಾನೆ.


    ಸೂರಜ್ ರೇವಣ್ಣ ಪರವಾಗಿ ದೂರು ನೀಡಿದ ನಂತರ ಶಿವಕುಮಾರ್ ಸಂಪರ್ಕ ಸಾಧ್ಯವಾಗುತ್ತಿಲ್ಲ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಶಿವಕುಮಾರ್ ನಾಪತ್ತೆಯಾಗಿದ್ದಾನೆ.

    ಇದನ್ನೂ ಓದಿ : ನಾಳೆಯಿಂದ ಸಂಸತ್ ಅಧಿವೇಶನ..! ಎನ್‌ಡಿಎ ಮುಂದಿದೆ ಹಲವು ಸವಾಲು..!

    ಸಂತ್ರಸ್ತನ ವಿರುದ್ಧ ಶಿವಕುಮಾರ್​​ ನೀಡಿದ್ದ ದೂರಿಗೆ ಸಾಕ್ಷಿ ನೀಡಲು ಹೋಗಿಯೇ ಸೂರಜ್ ರೇವಣ್ಣ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಇದೀಗ ಈ ಪ್ರಕರಣ ಸಾಕಷ್ಟು ಅನುಮಾನ ಹುಟ್ಟು ಹಾಕಿದೆ.

    Continue Reading

    LATEST NEWS

    ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಿಬಿಐಗೆ ವಹಿಸಿದ ಕೇಂದ್ರ

    Published

    on

    ಮಂಗಳೂರು/ ನವದೆಹಲಿ : ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET) ನಡೆದಿರುವ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ತನಿಖೆಯನ್ನು ಕೇಂದ್ರ ಸರ್ಕಾರ ಸಿಬಿಐಗೆ ಒಪ್ಪಿಸಿದೆ.


    ಈ ಮಧ್ಯೆ ಭಾನುವಾರ ( ಜೂನ್ 23 ) ದಂದು ನೀಟ್ ಯುಜಿ ಪರೀಕ್ಷೆಯಲ್ಲಿ ಗ್ರೇಸ್ ಅಂಕ ಪಡೆದ 1,563 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ತೀರ್ಮಾನಿಸಿತ್ತು. ಭಾನುವಾರ ಮಧ್ಯಾಹ್ನ 2 ಗಂಟೆಯಿಂದ ಪರೀಕ್ಷೆ ಆರಂಭವಾಗಬೇಕಾಗಿತ್ತಾದ್ರೂ ಇದೀಗ ಪರೀಕ್ಷೆಯನ್ನು ಮುಂದೂಡಿರುವುದಾಗಿ ತಿಳಿಸಿದೆ. ಇದರಿಂದ ದೂರದ ಊರುಗಳಿಂದ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು(ಜೂ.23) ಪರೀಕ್ಷೆ ನಡೆಸಿ ಜೂನ್ 30 ರಂದು ಫಲಿತಾಂಶ ಪ್ರಕಟಿಸುವುದಾಗಿ ಹೇಳಲಾಗಿತ್ತಾದ್ರೂ, ಈಗ ಪರೀಕ್ಷೆಯನ್ನೇ ಏಕಾ ಏಕಿ ರದ್ದು ಮಾಡಿದ್ದು ಯಾಕೆ? ಎಂದು ವಿದ್ಯಾರ್ಥಿಗಳು ಪ್ರಶ್ನೆ ಮಾಡಿದ್ದಾರೆ.

    ಇದನ್ನೂ ಓದಿ : ಸಂಸದ ಹೆಚ್ ಡಿಕೆ ನಿರ್ಧಾರಕ್ಕೆ ಬ್ರೇಕ್; ದೇವದಾರಿ ಗಣಿಗಾರಿಕೆ ತಡೆಗೆ ರಾಜ್ಯ ಸರ್ಕಾರ ಸೂಚನೆ

    ಆದ್ರೆ ನೀಟ್-ಪಿಜಿ ಪ್ರವೇಶ ಪರೀಕ್ಷೆಯ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

    Continue Reading

    LATEST NEWS

    Trending