Connect with us

    NATIONAL

    ಭಾರತದಲ್ಲಿ ಕೊರೊನಾ ಸೋಂಕಿನಿಂದ ಚೇತರಿಸಿಕೊಳ್ಳುವವರ ಸಂಖ್ಯೆ ಹೆಚ್ಚಳ : ಗಣನೀಯವಾಗಿ ಇಳಿಕೆ ಕಂಡ ಸಾವುಗಳು..!

    Published

    on

    ಭಾರತದಲ್ಲಿ ಕೊರೊನಾ ಸೋಂಕಿನಿಂದ ಚೇತರಿಸಿಕೊಳ್ಳುವವರ ಸಂಖ್ಯೆ ಹೆಚ್ಚಳ : ಗಣನೀಯವಾಗಿ ಇಳಿಕೆ ಕಂಡ ಸಾವುಗಳು..!

    ನವದೆಹಲಿ:ಭಾರತದಲ್ಲಿ ಒಂದು ಕಡೆ ಕೊರೊನಾ ವೃದ್ದಿಸಿದರೆ ಮತ್ತೊಂದೆಡೆ ಕೊರೊನಾದಿಂದ ಚೇತರಿಸಿಕೊಳ್ಳುವವರ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡಿದೆ.

    ದೇಶದಲ್ಲಿ ನಿನ್ನೆ ಚೇತರಿಕೆ ಪ್ರಮಾಣವನ್ನು ಶೇ 67.62 ಕ್ಕೆ ತಲುಪಿದೆ, ಪ್ರಕರಣದ ಸಾವಿನ ಪ್ರಮಾಣದಲ್ಲೂ ಇಳಿಕೆ ಕಂಡಿದ್ದು ಶೇಕಡಾ 2.07 ಕ್ಕೆ ಇಳಿದಿದೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಮಾಹಿತಿ ನೀಡಿದೆ.

    ಸೋಂಕಿತರ ಚೇತರಿಕೆ ಕೊರೊನಾವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳನ್ನು 7,32,835 ಮೀರಿಸಿದೆ ಎಂದು ಅದು ಹೇಳಿದೆ.

    ದೇಶದಲ್ಲಿ COVID-19 ನ 5,95,501 ಸಕ್ರಿಯ ಪ್ರಕರಣಗಳಿವೆ, ಇದು ಒಟ್ಟು ಪ್ರಕರಣಗಳ ಶೇಕಡಾವಾರು ಪ್ರಮಾಣದಲ್ಲಿ ಜುಲೈ 24 ರಂದು 34.17 ಶೇಕಡಾದಿಂದ ದಿನಾಂಕದಂದು 30.31 ಕ್ಕೆ ಗಮನಾರ್ಹ ಕುಸಿತ ಕಂಡಿದೆ ಎಂದು ಸಚಿವಾಲಯ ತಿಳಿಸಿದೆ.

    ಒಟ್ಟು 46,121 ಕೊರೊನಾ ರೋಗಿಗಳನ್ನು 24 ಗಂಟೆಗಳ ಅವಧಿಯಲ್ಲಿ ಬಿಡುಗಡೆ ಮಾಡಲಾಗಿದೆ.

    ಕೇಂದ್ರ ಮತ್ತು ರಾಜ್ಯ ಮತ್ತು ಕೇಂದ್ರಾಡಳಿತ ಸರ್ಕಾರಗಳು ”test, track, treat’ ‘ ಕಾರ್ಯತಂತ್ರವನ್ನು ಕೇಂದ್ರೀಕರಿಸಿದೆ,

    ಆಸ್ಪತ್ರೆಯ ಮೂಲಸೌಕರ್ಯ ಮತ್ತು ಪರೀಕ್ಷಾ ಸೌಲಭ್ಯಗಳನ್ನು ಹೆಚ್ಚಿಸಿವೆ ಮತ್ತು ಕೇಂದ್ರವು ಸಲಹೆ ನೀಡಿದ ಆರೈಕೆ ಪ್ರೋಟೋಕಾಲ್ ಮೂಲಕ ಆಸ್ಪತ್ರೆಗೆ ದಾಖಲಾದ ರೋಗಿಗಳ ಚಿಕಿತ್ಸೆಗೆ ಒತ್ತು ನೀಡಿದೆ.

    ಈ ಎಲ್ಲಾ ಅಂಶಗಳು ದೇಶದಲ್ಲಿ ಕೊರೊನಾ ಕಟ್ಟಿಹಾಕಲು ಸಹಕಾರಿಯಾಗಲಿಎಂದು ವಿಶ್ಲೇಸಿಸಲಾಗಿದೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    2024 ರ ಒಲಿಂಪಿಕ್ಸ್‌ನಲ್ಲಿ ಪದಕದ ನಿರೀಕ್ಷೆ ಹುಟ್ಟಿಸಿದ ಭಾರತೀಯ ಕ್ರೀಡಾಪಟುಗಳು..!

    Published

    on

    ಪ್ಯಾರೀಸ್/ಮಂಗಳೂರು: ಜುಲೈ 26ರಿಂದ ಆರಂಭವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್‌ಗೆ ಈಗಾಗಲೇ ಭಾರತದಿಂದ 112 ಜನ ಕ್ರೀಡಾಪಟುಗಳು ತೆರಳಿದ್ದಾರೆ. 16 ವಿವಿಧ ಕ್ರೀಡೆಯಲ್ಲಿ ಸುಮಾರು 69 ಪದಕಗಳಿಗಾಗಿ ಈ ಕ್ರೀಡಾಪಟುಗಳು ಸ್ಪರ್ಧಿಸಲಿದ್ದಾರೆ. ಅಥ್ಲೆಟಿಕ್ಸ್‌ನಲ್ಲಿ 29 ಕ್ರೀಡಾಪಟುಗಳು ಭಾಗವಹಿಸಿದ್ದು 16 ಪದಕಗಳಿಗಾಗಿ ಸ್ಪರ್ಧಿಸಲಿದ್ದಾರೆ.

    ಶೂಟಿಂಗ್ ವಿಭಾಗದಲ್ಲಿ 21 ಕ್ರೀಡಾಪಟುಗಳಿದ್ದು, ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಫೇವರೇಟ್‌ ಸ್ಪರ್ಧಾಳುಗಳು ಇದರಲ್ಲಿದ್ದಾರೆ. ಇವರಲ್ಲಿ ದೀಪಿಕಾ ಕುಮಾರಿ ಮತ್ತು ತರುಣದೀಪ್ ರೈ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿದ್ದು, ಉದ್ಘಾಟನಾ ಸಮಾರಂಭಕ್ಕೂ ಮೊದಲು ಅರ್ಹಾತಾ ಸುತ್ತಿನಲ್ಲಿ ಸ್ಪರ್ಧಿಸಲಿದ್ದಾರೆ.

    ಪದಕದ ನಿರೀಕ್ಷೆ ಹುಟ್ಟಿಸಿರುವ ಆರ್ಚರಿ ವಿಭಾಗ..
    ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಮೊದಲ ಪದಕ ಗೆಲ್ಲುವ ಅವಕಾಶ ಜುಲೈ 27 ರಂದು ಲಭಿಸಲಿದೆ. 10 ಮೀಟರ್ ಏರ್‌ ರೈಫಲ್‌ ನ ಮಿಕ್ಸೆಡ್ ವಿಭಾಗದಲ್ಲಿ ಭಾರತೀಯ ಶೂಟರ್‌ಗಳು ಭಾಗವಹಿಸಲಿದ್ದಾರೆ. ಈ ವಿಭಾಗದಲ್ಲಿ ಭಾರತದ ಎರಡು ತಂಡಗಳು ಭಾಗವಹಿಸಲಿದ್ದು, ಸಂದೀಪ್ ಸಿಂಗ್ ಹಾಗೂ ಎಲವೆನಿಲ್ ವಲರಿವನ್ ಮತ್ತು ಅರ್ಜುನ್ ಬಾಬುತಾ ಹಾಗೂ ರಿಮಿತಾ ಜಿಂದಾಲ್ ಈ ಮಿಶ್ರ ರೈಫಲ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಇನ್ನು ಮನು ಭಾಕರ್ ಎರಡು ವ್ಯಯಕ್ತಿಕ ಪಿಸ್ತೂಲ್ ವಿಭಾಗದ 10 ಮೀಟರ್‌ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ.

    2024ರ ಪ್ಯಾರಿಸ್‌ ಒಲಿಂಪಿಕ್ಸ್ ನಲ್ಲಿ ಐವರು ಆಳ್ವಾಸ್ ಹಳೆ ವಿದ್ಯಾರ್ಥಿಗಳು..!

    ಜಾವಲಿನ್, ಬ್ಯಾಡ್ಮಿಂಟನ್, ಬಾಕ್ಸಿಂಗ್‌ ವಿಭಾಗದಲ್ಲಿ ಪದಕ ವಿಜೇತರು
    ಜಾವಲಿನ್ ವಿಭಾಗದಲ್ಲಿ ಚಾಂಪಿಯನ್ ನೀರಜ್ ಚೋಪ್ರಾ ಭಾರತದ ಚಿನ್ನದ ಪದಕದ ನಿರೀಕ್ಷೆ ಹುಟ್ಟಿಸಿದ್ದಾರೆ. ಜಾವಲಿನ್ ವಿಭಾಗದ ಅರ್ಹತಾ ಸುತ್ತು ಆಗಸ್ಟ್ 6 ರಂದು ಆರಂಭವಾಗಿ ಫೈನಲ್ ಆಗಸ್ಟ್ 8 ರಂದು ನಡೆಯಲಿದೆ. ಜುಲೈ 27 ರಿಂದ ಆಗಸ್ಟ್ 5 ರ ತನಕ ಬ್ಯಾಡ್ಮಿಂಟನ್ ಪಂದ್ಯಾವಳಿಗಳು ನಡೆಯಲಿದ್ದು, ಎರಡು ಬಾರಿಯ ಚಾಂಪಿಯನ್ ಪಿವಿ ಸಿಂಧು ಮತ್ತೆ ಪದಕದ ನಿರೀಕ್ಷೆ ಹುಟ್ಟು ಹಾಕಿದ್ದಾರೆ. ಇನ್ನು 2020 ರ ಟೋಕಿಯೋ ಒಲಿಂಪಿಕ್‌ನಲ್ಲಿ ಬೆಳ್ಳಿ ಪದಕ ಗೆದ್ದು ಸಾಧನೆ ಮಾಡಿದ 49 ಕೆಜಿ ವಿಭಾಗದ ವೇಟ್‌ ಲಿಫ್ಟರ್‌ ಮೀರಾಬಾಯಿ ಆಗಸ್ಟ್‌ 7 ರಂದು ಪದಕದ ಭೇಟೆಗೆ ಇಳಿಯಲಿದ್ದಾರೆ. ಇವರ ಜೊತೆಗೆ ಪದಕದ ನಿರೀಕ್ಷೆಯಲ್ಲಿ ಮಹಿಳಾ ಬಾಕ್ಸಿಂಗ್ ವಿಭಾಗದಲ್ಲಿ ಟೋಕಿಯೋ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಲೋವ್ಲಿನಾ ಬೋರ್ಗೋಹೈನ್ ಇದ್ದಾರೆ. ಹಾಗೇ ಇದೇ ಮೊದಲ ಬಾರಿ ಒಲಿಂಪಿಕ್ಸ್ ಪ್ರವೇಶಿಸಿರುವ ಎರಡು ಬಾರಿ ವಿಶ್ವ ಚಾಂಪಿಯನ್ ಆಗಿರುವ ನಿಖತ್ ಜರೀನ್ ಅವರೂ ಪದಕದ ಮೇಲೆ ಕಣ್ಣಿಟ್ಟಿದ್ದಾರೆ.

    ಆರ್ಚರಿ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಈಕ್ವೆಸ್ಟ್ರಿಯನ್, ಗಾಲ್ಫ್, ಹಾಕಿ, ಜೂಡೋ, ರೋಯಿಂಗ್, ಸೈಲಿಂಗ್, ಶೂಟಿಂಗ್, ಈಜು, ಕುಸ್ತಿ, ಟೇಬಲ್ ಟೆನ್ನಿಸ್ ಮತ್ತು ಟೆನ್ನಿಸ್ ಇವು ಪ್ಯಾರಿಸ್ 2024 ರಲ್ಲಿ 16 ಕ್ರೀಡಾ ಭಾರತೀಯ ಅಥ್ಲೀಟ್‌ಗಳು ಸ್ಪರ್ಧಿಸಲಿದ್ದಾರೆ. ಭಾರತವು ಟೋಕಿಯೊ 2020 ರಿಂದ ಒಂದು ಚಿನ್ನ ಸೇರಿದಂತೆ ಏಳು ಪದಕಗಳ ದಾಖಲೆಯೊಂದಿಗೆ ಮರಳಿದೆ ಮತ್ತು ಪ್ಯಾರಿಸ್ 2024 ನಲ್ಲಿ ಎಣಿಕೆಯನ್ನು ಉತ್ತಮಗೊಳಿಸಲು ನೋಡುತ್ತದೆ.

    Continue Reading

    LATEST NEWS

    Trending