Connect with us

DAKSHINA KANNADA

ಹೆಚ್ಚುತ್ತಿದೆ ರಸ್ತೆ,ನದಿಗಳಲ್ಲಿ ತ್ಯಾಜ್ಯದ ಸಂಗ್ರಹ : ಪರಿಸರ ಉಳಿಸುವಂತೆ ಹಸಿರು ದಳದಿಂದ ಆರಂಭವಾಗಿದೆ ಜಾಗೃತಿಯ ಆಗ್ರಹ..! 

Published

on

ಹೆಚ್ಚುತ್ತಿದೆ ರಸ್ತೆ,ನದಿಗಳಲ್ಲಿ ತ್ಯಾಜ್ಯದ ಸಂಗ್ರಹ : ಪರಿಸರ ಉಳಿಸುವಂತೆ ಹಸಿರು ದಳದಿಂದ ಆರಂಭವಾಗಿದೆ ಜಾಗೃತಿಯ ಆಗ್ರಹ..! 

 ಪರಿಸರ ಕಾಳಜಿ – ಜಾಗೃತಿ ಹೊಣೆ ಇವರಿಗೆ ಮಾತ್ರವೇ..!?

ಮಂಗಳೂರು : ನದಿಗೆ,ರಸ್ತೆ ಬದಿಗೆ ತ್ಯಾಜ್ಯ ಎಸೆಯದಂತೆ ಹಲವು ರೀತಿಯ ಕ್ರಮಗಳನ್ನು ಕೈಗೊಂಡರೂ,ಜನ ಮಾತ್ರ ಈ ಅವ್ಯವಸ್ಥೆಯಿಂದ ಹೊರ ಬಂದಿಲ್ಲ.

ನಿರಂತರವಾಗಿ ರಸ್ತೆ ಹಾಗು ನದಿಗಳಿಗೆ ತ್ಯಾಜ್ಯ ಹಾಕುವುದರಿಂದಾಗಿ ರಸ್ತೆ ತುಂಬಾ ದುರ್ವಾಸನೆ ಹಾಗೂ ನದಿ ನೀರು ಮಲಿನವಾಗುತ್ತಿದೆ.  

ಈ ನಿಟ್ಟಿನಲ್ಲಿ ಜನರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಇದೀಗ ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಆರಂಭಗೊಂಡಿದೆ.

ಮುಖ್ಯವಾಗಿ ಮಂಗಳೂರು ಹೊರವಲಯದ ನೇತ್ರಾವತಿ ನದಿಗೆ ಪ್ರತಿನಿತ್ಯ 2 ರಿಂ3 ಕ್ವಿಂಟಾಲ್ ನಷ್ಟು ಪ್ರಮಾಣದ ತ್ಯಾಜ್ಯಗಳನ್ನು ಎಸೆಯಲಾಗುತ್ತಿದೆ‌.

ಮುಖ್ಯವಾಗಿ ಕೋಳಿ ಹಾಗೂ‌ ಮಾಂಸದ ತ್ಯಾಜ್ಯಗಳು, ಮನೆಯಲ್ಲಿ ಬಳಸಿ ಬಿಸಾಕಿದ ತ್ಯಾಜ್ಯಗಳು, ಅಂಗಡಿಗಳ ಕೊಳೆತ ಸಾಮಾನುಗಳು ಹೀಗೆ ವಿವಿಧ ಪ್ರಕಾರದ ತ್ಯಾಜ್ಯಗಳನ್ನು ನೇತ್ರಾವತಿ ನದಿಗೆ ಸುರಿಯುವುದರಿಂದ ನದಿ ನೀರು ದಿನದಿಂದ ದಿನಕ್ಕೆ ಮಲಿನವಾಗುತ್ತಿದೆ.

ಮಂಗಳೂರು ನಗರ ಸೇರಿದಂತೆ ಪುತ್ತೂರು, ಬಂಟ್ವಾಳದ ಜನರಿಗೆ ಕುಡಿಯುವ ನೀರು ಪೂರೈಸುವ ನೇತ್ರಾವತಿಗೆ ಈ ಮಟ್ಟದಲ್ಲಿ ತ್ಯಾಜ್ಯಗಳನ್ನು ಎಸೆಯಲಾಗುತ್ತಿದ್ದು, ಇದರ ತಡೆಗೆ ಹಲವು ಕ್ರಮಗಳನ್ನು ಕೈಗೊಂಡರೂ,ಜನ ಮಾತ್ರ ಈ ವ್ಯವಸ್ಥೆಯಿಂದ ಹೊರ ಬರುತ್ತಿಲ್ಲ.

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದ್ದ ಹಿನ್ನಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನೇತ್ರಾವತಿ ಸೇತುವೆಯ ಇಕ್ಕೆಲಗಳಲ್ಲಿ ಇತ್ತೀಚೆಗಷ್ಟೇ ತಂತಿ ಬೇಲಿಯನ್ನು ಅಳವಡಿಸುವ ಮೂಲಕ ನದಿಗೆ ಹಾರುವುದನ್ನು ತಕ್ಕ ಮಟ್ಟಿಗೆ ನಿಯಂತ್ರಣಕ್ಕೆ ತರಲಾಗಿದೆ.

ತಂತಿ ಬೇಲಿ ಅಳವಡಿಸಿರುವುದರಿಂದ ನದಿಗೆ ತ್ಯಾಜ್ಯ ಹಾಕುವವರಿಗೂ ತೊಂದರೆಯಾಗಿದ್ದು, ಈ ಕಸವೆಲ್ಲಾ ಇದೀಗ ಸೇತುವೆಯು ಆರಂಭಗೊಳ್ಳುವ ಹಾಗೂ ಮುಗಿಯುವ ಸ್ಥಳಕ್ಕೆ ಶಿಫ್ಟ್ ಆಗಿದೆ. ಈ ಮೂಲಕ ನದಿಯ ಬ್ಯಾಕ್ ವಾಟರ್ ಪ್ರದೇಶಕ್ಕೆ ತ್ಯಾಜ್ಯವನ್ನು ಸುರಿಯಲಾಗುತ್ತಿದೆ.

ಈ ನೀರಿನ ಮೂಲಕ ತ್ಯಾಜ್ಯಗಳು ಮತ್ತೆ ನದಿ ಸೇರುತ್ತಿದೆ. ಅಲ್ಲದೆ ಹೆದ್ದಾರಿಯ ಇಕ್ಕೆಲಗಳಲ್ಲೂ ಕಸವನ್ನು ಎಲ್ಲೆಂದರಲ್ಲಿ ಚೆಲ್ಲುವ ಮೂಲಕ ಇಡೀ ಹೆದ್ದಾರಿಯನ್ನೇ ದುರ್ವಾಸನೆಯುಕ್ತವಾಗಿ ಮಾಡಲಾಗುತ್ತಿದೆ.

ಜನರಿಗೆ ಇದರ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವೊಂದು ಕಳೆದ ಒಂದು ವಾರದಿಂದ ನೇತ್ರಾವತಿ ಸೇತುವೆಯ ಬಳಿ ನಡೆಯುತ್ತಿದೆ.

ಹಸಿರು ದಳ ಹಾಗೂ ಇತರ ಸಂಘಟನೆಗಳು ಸೇರಿ ಈ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ತ್ಯಾಜ್ಯ ಸುರಿಯಲು ಬರುವ ವಾಹನಗಳಿಗೆ ಪ್ಲೇ ಕಾರ್ಡ್, ಭಿತ್ತಿಪತ್ರಗಳ ಮೂಲಕ ಜಾಗೃತಗೊಳಿಸಲಾಗುತ್ತಿದೆ.

ಕೇವಲ ದಕ್ಷಿಣಕನ್ನಡ ಜಿಲ್ಲೆಯ ತ್ಯಾಜ್ಯವಲ್ಲದೆ ,ಪಕ್ಕದ ಕೇರಳ ಭಾಗದಿಂದಲೂ ನೇತ್ರಾವತಿ ನದಿಗೆ ವಾಹನಗಳ ಮೂಲಕ ಆಗಮಿಸಿ ತ್ಯಾಜ್ಯಗಳನ್ನು ಸುರಿಯಲಾಗುತ್ತಿದೆ ಎನ್ನುವ ಆರೋಪವನ್ನು ಸ್ಥಳೀಯರು ಮಾಡುತ್ತಿದ್ದು, ಇದೀಗ ಸ್ಥಳೀಯ ನಿವಾಸಿಗಳೂ ಈ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ರಸ್ತೆ ಬದಿಯಲ್ಲಿ ತ್ಯಾಜ್ಯಗಳನ್ನು ಸುರಿಯದಂತೆ ಕಾನೂನು ಇದ್ದರೂ,ಇದರ ಸರಿಯಾದ ಪಾಲನೆಯಾಗದ ಕಾರಣ ದಕ್ಷಿಣಕನ್ನಡ ಜಿಲ್ಲೆಯ ಬಹುತೇಕ ರಸ್ತೆಗಳ ಇಕ್ಕೆಲಗಳು ಇಂದು ಮಿನಿ ಡಂಪಿಗ್ ಯಾರ್ಡ್ ಗಳಾಗಿ ಬದಲಾಗಿವೆ.

ಈ ವ್ಯವಸ್ಥೆಯನ್ನು ತಡೆಯಬೇಕಾದ ಸ್ಥಳೀಯಾಡಳಿತಗಳು ಕಣ್ಣಿದ್ದೂ ಕುರುಡರಂತಾದ ಕಾರಣ ಇದೀಗ ಪರಿಸರ ಕಾಳಜಿಯ ಜನರೇ ರಸ್ತೆಗೆ ಇಳಿದು ಜಾಗೃತಿ ಹಾಗೂ ಹೋರಾಟಕ್ಕೆ ಮುಂದಾಗಿದ್ದಾರೆ.

bangalore

ಮಹಿಳೆಯ ಅತಿಯಾದ ಕಾಮದಾಹ…! ದಾಹಕ್ಕೆ ಅಂತ್ಯ ಹಾಡಿದ ಯುವಕ..!

Published

on

ಬೆಂಗಳೂರು : ಆಕೆ 48 ವರ್ಷ ಪ್ರಾಯದ ಮಹಿಳೆಯಾಗಿದ್ದು, ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸಿ ಕೊಟ್ಟಿದ್ದಾಳೆ. ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿದ್ದ ಆಕೆಯ ದೇಹ ನಗ್ನವಾಗಿ ಬೆಡ್‌ರೂಮಿನಲ್ಲಿ ಪತ್ತೆಯಾಗಿತ್ತು. ಎಪ್ರಿಲ್ 19 ರಂದು ನಡೆದಿದ್ದ ಈ ಘಟನೆಯನ್ನು ಭೇದಿಸಿದ ಪೊಲೀಸರಿಗೆ ಶಾಕ್ ಆಗುವಂತ ವಿಚಾರಗಳು ಗೊತ್ತಾಗಿದೆ.

ಕೊಡಿಗೆ ಹಳ್ಳಿಯ ಭದ್ರಪ್ಪ ಲೇಔಟ್‌ನಲ್ಲಿ ನಡೆದಿದ್ದ ಶೋಭಾ ಎಂಬ ಮಹಿಳೆಯ ಕೊ*ಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವ ನವೀನ್ ಎಂಬ ಯುವಕನನ್ನು ಕೊಡಿಗೆ ಹಳ್ಳಿಯ ಪೊಲೀಸರು ಬಂದಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟ ವಿಚಾರ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ. ಬಳಿಕ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ ಶೋಭಾಳ ಕಾಮದಾಹ ಬೆಳಕಿಗೆ ಬಂದಿದೆ.

ಇದನ್ನೂ ಓದಿ ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?

ಶೋಭಾಳಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಿತನಾಗಿದ್ದ ನವೀನ್ ಬಳಿಕ ಸ್ನೇಹಿತನಾಗಿ, ಅದು ಪ್ರೀತಿಗೆ ತಿರುಗಿ ಬಳಿಕ ಇಬ್ಬರ ನಡುವೆ ಅನೈತಿಕ ಸಂಬಂಧದವರೆಗೂ ಬಂದು ನಿಂತಿತ್ತು. ಮಗನ ವಯಸ್ಸಿನ ಹುಡುಗನ ಜೊತೆಯಲ್ಲಿ ನಿರಂತರ ಸೆಕ್ಸ್ ಮಾಡುತ್ತಿದ್ದ ಶೋಭಾಳ ಅತಿಯಾದ ಕಾಮಧಾಹದಿಂದ ಬೇಸತ್ತು ಆಕೆಯನ್ನು ಕೊಲೆ ಮಾಡಿದ್ದಾಗಿ ಹೇರೋಹಳ್ಳಿ ಮೂಲದ ಆರೋಪಿ ನವೀನ್ ಹೇಳಿಕೆ ನೀಡಿದ್ದಾನೆ.

ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್‌ಗೆ ಸೆಕ್ಸ್‌ಗೆ ಒತ್ತಾಯಿಸಿದ್ದು ನಿರಾಕರಿಸಿದಾಗ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ. ಈಕೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್‌ ಬೆಡ್‌ ರೂಮಿನಲ್ಲೇ ಆಕೆಯ ಕಥೆ ಮುಗಿಸಿದ್ದ.

48ರ ಮಹಿಳೆಗೆ ಯುವಕರ ಮೇಲೆ ಹುಚ್ಚು

48ರ ಶೋಭಾ ಕೇವಲ ನವೀನ್ ಮಾತ್ರವಲ್ಲದೇ ಅನೇಕ ಯುವಕರ ಸಹವಾಸ ಬೆಳೆಸಿದ್ದಳು. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿದ್ದು, ನವೀನ್‌ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ. ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಆ್ಯಪ್‌ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20 ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು. ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೇ ಅಲ್ಲದೆ ಆ ಯುವಕರ ಮದುವೆಗೂ ಅಡ್ಡಿ ಪಡಿಸಿ ಮದುವೆ ನಿಲ್ಲಿಸಿದ್ದಳು.

ಇದನ್ನೂ ಓದಿ ರಿಯಾಲಿಟಿ ಶೋಗಳಲ್ಲೂ ಕಾಸ್ಟಿಂಗ್ ಕೌಚ್! ಡ್ಯಾನ್ಸಿಂಗ್ ಕ್ವೀನ್ ಬಿಚ್ಚಿಟ್ಟ ಸತ್ಯವೇನು?

ಕೊಲೆಯಾದ ದಿನವೂ ನವೀನ್‌ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್‌ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು‌ ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್‌, ಶೋಭಾಳ ಕತ್ತು ಹಿಸುಕಿ ಕೊ*ಲೆ‌ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.

Continue Reading

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

DAKSHINA KANNADA

ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?

Published

on

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಜನರು ರಾತ್ರಿಯ ಹೊತ್ತನ್ನು ಮೊಬೈಲ್, ಆನ್ಲೈನ್ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಕಳೆಯುತ್ತಾರೆ. ಇದು ಅವರಿಗೆ ನಿದ್ರಾಹೀನತೆ ಸಮಸ್ಯೆಗೂ ಕಾರಣವಾಗುತ್ತದೆ. ರಾತ್ರಿ ಬೇಗ ಮಲಗದೇ ಇರುವುದು ಮತ್ತು ಮಧ್ಯಾಹ್ನ ನಿದ್ದೆ ಮಾಡುವುದು ಹೀಗೆ ಮಾಡಿದರೆ ಆರೋಗ್ಯ ಹಾಳಾಗುತ್ತದೆ. ರಾತ್ರಿಯ ಹೊತ್ತು ಚಿಕ್ಕ ಮಕ್ಕಳು ಅಪ್ಪ ಅಮ್ಮನ ಒಟ್ಟಿಗೆ ಮಲಗುತ್ತಾರೆ. ಅದೇ ರೀತಿ ಗಂಡ ಹೆಂಡತಿಯರು ಒಟ್ಟಿಗೆ ಮಲಗುವುದು ಸರ್ವೇ ಸಾಮಾನ್ಯ.

ಮದುವೆಯ ನಂತರ ಸಾಮಾನ್ಯವಾಗಿ ಗಂಡ ಹೆಂಡತಿ ಒಟ್ಟಿಗೆ ಮಲಗುತ್ತಾರೆ. ಇದು ಸಮಾಜದ ಸಾಮಾನ್ಯ ನಿಯಮ ಸಹ ಹೌದು ಎನ್ನಬಹುದು. ಮದುವೆಯ ನಂತರ ಪತಿ-ಪತ್ನಿಯರ ನಡುವಿನ ಚರ್ಚೆಗಳು, ಮಾತುಗಳು ಸಾಮಾನ್ಯವಾಗಿ ಮಲಗುವ ಸಮಯದಲ್ಲೇ ಆಗುತ್ತದೆ. ಇನ್ನು ಪತಿ-ಪತ್ನಿಯರು ಪ್ರತ್ಯೇಕವಾಗಿ ಮಲಗುವುದರಿಂದಲೂ ಹಲವಾರು ರೀತಿಯ ಪ್ರಯೋಜನಗಳಿವೆ ಎಂದು ವರದಿ ಮೂಲಕ ತಿಳಿದುಬಂದಿದೆ.

ಮೊದಲಿಗೆ, ಈ ವಿಷಯದ ಬಗ್ಗೆ ಮಾಡಿದ ಎಲ್ಲಾ ಸಂಶೋಧನೆಗಳು ಗಂಡ ಮತ್ತು ಹೆಂಡತಿ ಪ್ರತ್ಯೇಕವಾಗಿ ಮಲಗುವುದು ತಪ್ಪಲ್ಲ ಎಂದು ತೋರಿಸುತ್ತದೆ ಮತ್ತು ಪ್ರತಿ ದಂಪತಿಗಳು ತಮ್ಮದೇ ಆದ ನಿಯಮಗಳನ್ನು ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ತಿಳಿಸಿದೆ. ಆದರೆ ಅನೇಕ ಬಾರಿ ಜನರು ಇಂತಹ ಮಾತುಗಳನ್ನು ಕೇಳಲು ವಿಭಿನ್ನವಾಗಿ ಪ್ರತಿಕ್ರಿಯಿಸುತ್ತಾರೆ ಮತ್ತು ಈ ದಂಪತಿಗಳ ಜೀವನದಲ್ಲಿ ಏನೋ ಸರಿಯಾಗಿಲ್ಲ ಎಂದು ಭಾವಿಸುತ್ತಾರೆ.

ಆದರೆ ಅಷ್ಟೇ ಅಲ್ಲ, ಕೆಲವೊಮ್ಮೆ ಬೇರೆ ಬೇರೆ ಕೋಣೆಗಳಲ್ಲಿ ದಂಪತಿಗಳಿಗೆ ಮಲಗುವುದರಿಂದ ದಂಪತಿಗಳಿಗೆನೇ ಹೆಚ್ಚು ಅನುಕೂಲಕರವಾಗಿರುತ್ತದೆ. ಸಂಶೋಧನೆಯ ಪ್ರಕಾರ ನೀವು ಪ್ರತ್ಯೇಕವಾಗಿ ಏಕೆ ಮಲಗುವುದರಿಂದ ಯಾವುದೇ ನಿದ್ರಾ ಭಂಗವನ್ನು ಉಂಟುಮಾಡುವುದಿಲ್ಲ. ಇದರಿಂದ ಸುಖಕರವಾಗಿ ನಿದ್ರೆ ಮಾಡಬಹುದು.

ರಾತ್ರಿಯಲ್ಲಿ ಗೊರಕೆ ಹೊಡೆಯುವುದು, ಒದೆಯುವುದು, ದೇಹದ ಉಷ್ಣತೆಯ ಬದಲಾವಣೆ ವಿಭಿನ್ನವಾಗಿರುತ್ತದೆ. ನೀವು ಕೆಲವೊಮ್ಮೆ ಪ್ರತ್ಯೇಕವಾಗಿ ಮಲಗಲು ಪ್ರಯತ್ನಿಸಿದರೆ ನಿಮ್ಮ ದೇಹವು ಅರಾಮವಾಗಲು ಸಹಾಯಕವಾಗುತ್ತದೆ. ಸ್ವಲ್ಪ ಸಮಯದ ಅಂತರವು ನಿಮ್ಮ ಸಂಬಂಧವನ್ನು ಹೆಚ್ಚು ಉತ್ತಮಗೊಳಿಸುತ್ತದೆ. ನಿಮಗೆ ವಿಶ್ರಾಂತಿ ಪಡೆಯಲು ಸಮಯ ಸಿಗುತ್ತದೆ.


ಜೊತೆಗೆ ಕೆಲವೊಮ್ಮೆ ದಂಪತಿಗಳ ನಡುವೆ ಮನಸ್ಥಾಪವಾದಾಗ ಈ ರೀತಿ ಕೆಲ ದಿನ ದೂರ ಮಲಗಿದರೆ ಆ ವಿರಹ ವೇದನೆಯಿಂದ ಕೋಪವೂ ತಣ್ಣಗಾಗುತ್ತದೆ. ದೈಹಿಕ ಅನ್ಯೋನ್ಯತೆ ಮತ್ತು ಭಾವನಾತ್ಮಕ ಪ್ರೀತಿಯ ಅವಶ್ಯಕತೆ ಯಾವಾಗಲೂ ಇರುತ್ತದೆ ಮತ್ತು ಆದ್ದರಿಂದ ಕೆಲವೊಮ್ಮೆ ಪ್ರತ್ಯೇಕವಾಗಿ ಮಲಗುವುದು ಉತ್ತಮ. ಜೊತೆಗೆ ಕೆಲವೊಮ್ಮೆ ಜ್ವರ ರೀತಿಯ ಅನಾರೋಗ್ಯವಿದ್ದಾಗ ದೂರ ಮಲಗಿದರೆ ಒಬ್ಬರಿಂದ ಒಬ್ಬರಿಗೆ ಅದು ಹರಡುವುದಿಲ್ಲ.

ಇದನ್ನೂ ಓದಿ ULLALA : ಮಲಗಿದ್ದಲ್ಲೇ ಹೃದಯಾಘಾ*ತಕ್ಕೆ ಬ*ಲಿಯಾದ ಯುವಕ

ಕೆಲವೊಮ್ಮೆ ದಂಪತಿಗಳಿಗೆ ಸ್ವಲ್ಪ ಅಂತರ ಕಾಯ್ದುಕೊಳ್ಳುವುದು ಅವರ ಲೈಂಗಿಕ ಜೀವನಕ್ಕೆ ಒಳ್ಳೆಯದು ಎಂದು ಸಂಶೋಧನೆ ಸೂಚಿಸುತ್ತದೆ. ಇದರಿಂದ ದಣಿವು ಆಗುವುದು ಕಡಿಮೆ ಆಗುತ್ತದೆ. ಪರಿಣಾಮವಾಗಿ, ಲೈಂಗಿಕ ಜೀವನವನ್ನು ಸುಧಾರಿಸಬಹುದು.

Continue Reading

LATEST NEWS

Trending