Connect with us

DAKSHINA KANNADA

ಮಹಿಳೆಗೆ ಡ್ಯಾಶ್‌ ಹೊಡೆದು ಬಳಿಕ ಆಕೆಯ ಜತೆ ಅಶ್ಲೀಲ ವರ್ತನೆ; ಆರೋಪಿ ವಶ

Published

on

ಪುತ್ತೂರು : ಅಂಗನವಾಡಿಗೆ ಮಗುವನ್ನು ಬಿಟ್ಟು ಮನೆಗೆ ಬರುತ್ತಿದ್ದ ಮಹಿಳೆಯ ಜತೆ ಕಾಮುಕ ಪುರುಷನೊಬ್ಬ ಆಶ್ಲೀಲವಾಗಿ ವರ್ತಿಸಿದ ಘಟನೆ ಪುತ್ತೂರಿನ ಕುಂಜುರುಪಂಜ ಎಂಬಲ್ಲಿ ನಡೆದಿದೆ.

ಅಸಭ್ಯವಾಗಿ ವರ್ತಿಸಿದ ವ್ಯಕ್ತಿ ಬಶೀರ್ ಎಂದು ತಿಳಿದು ಬಂದಿದೆ. ಕಾಮುಕ ಬಶೀರ್ ಮೊದಲಿಗೆ ಮಹಿಳೆಗೆ ಡ್ಯಾಶ್ ಹೊಡೆದಿದ್ದಾನೆ. ಬಳಿಕ ಆಕೆಯನ್ನು ಮನೆ ತನಕ ಹಿಂಬಾಲಿಸಿ, ಮನೆಯ ಎದುರು ಭಾಗದಲ್ಲೇ ಮರ್ಮಾಂಗವನ್ನು ತೋರಿಸಿ, ಆಶ್ಲೀಲವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಮಂಗಳೂರು: ಸಾವ೯ಜನಿಕ ಸ್ಥಳದಲ್ಲಿ ಸಿಗರೇಟ್ ಸೇದುತ್ತಿದ್ದವರಿಗೆ ದಂಡ

ಈ ವೇಳೆ ಮಹಿಳೆ ಜೋರಾಗಿ ಕಿರುಚಿಕೊಂಡಿದ್ದಾಳೆ. ಅಷ್ಟರಲ್ಲಿ ಅಕ್ಕಪಕ್ಕದ ಮನೆಯವರು ಆಗಮಿಸಿ, ಕಾಮುಕ ಬಶೀರನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ವಿಷಯ ತಿಳಿದು ತಕ್ಷಣ ಸಂಪ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಆತನನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಬಶೀರ್ ಈ ಮೊದಲು ಕೂಡಾ ಇದೇ ದಾರಿಯಲ್ಲಿ ಹೋಗುವ ಮತ್ತು ಬರುವ ಯುವತಿಯರ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಮಾಹಿತಿ ಇದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಬಂಟ್ವಾಳ: ಅದ್ಧೂರಿಯಾಗಿ ನಡೆದ “ಯಕ್ಷದ್ರುವ ವಿದ್ಯಾರ್ಥಿ ಸಮ್ಮಿಲನ-25” ಕಾರ್ಯಕ್ರಮ

Published

on

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಹಾಗೂ ಪ್ರಾದೇಶಿಕ ಘಟಕಗಳ ಸಹಯೋಗ ದೊಂದಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮತ್ತು ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ವೈ.ಭರತ್ ಶೆಟ್ಟಿ ಅವರ ನೇತೃತ್ವದಲ್ಲಿ ‘ಯಕ್ಷದ್ರುವ ವಿದ್ಯಾರ್ಥಿ ಸಮ್ಮಿಲನ-2025’ ಕಾರ್ಯಕ್ರಮವು ಬುಧವಾರ ಗಂಜಿಮಠದ ಒಡ್ಡೂರು ಫಾರ್ಮ್ ಹೌಸ್‌ನಲ್ಲಿ ನಡೆಯಿತು.

ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಡಾ.ಭರತ್ ಶೆಟ್ಟಿ, ದೀಪಬೆಳಗಿಸಿ ಉದ್ಘಾಟನೆ ನೆರವೇರಿಸಿದರು. ಯಕ್ಷಧ್ರುವ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಪ್ರಮುಖರಾದ ಚಂದ್ರಹಾಸ ಶೆಟ್ಟಿ ರಂಗೋಲಿ, ದೇವದಾಸ್ ಶೆಟ್ಟಿ, ಸರಪಾಡಿ ಅಶೋಕ್ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

ಯಕ್ಷಧ್ರುವ – ಯಕ್ಷಶಿಕ್ಷಣದಲ್ಲಿ ತರಬೇತಿ ಪಡೆದ ಸುಮಾರು 1000 ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ರಂಗ ಪ್ರವೇಶ ಮಾಡಿದರು. ಬಂಟ್ವಾಳ ಕ್ಷೇತ್ರದ 10 ಹಾಗೂ ಮಂಗಳೂರು ನಗರ ಉತ್ತರ ಕ್ಷೇತ್ರದ 10 ಸರಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರತ್ಯೇಕ ಪ್ರತ್ಯೇಕವಾದ ಎರಡು ರಂಗಸ್ಥಳದಲ್ಲಿ ತಮ್ಮ ಪ್ರದರ್ಶನ ನೀಡಿದರು.

ಕೀರ್ತಿಶೇಷ ಮಿಜಾರುಗುತ್ತು ಆನಂದ ಆಳ್ವ ವೇದಿಕೆಯಲ್ಲಿ ಬಂಟ್ವಾಳ ಕ್ಷೇತ್ರದ 10 ಶಾಲೆಯ ವಿದ್ಯಾರ್ಥಿಗಳು ಹಾಗೂ ಕೀರ್ತಿಶೇಷ ಡಾ. ವೈ. ಚಂದ್ರಶೇಖರ ಶೆಟ್ಟಿ ವೇದಿಕೆಯಲ್ಲಿ ಉತ್ತರ ಕ್ಷೇತ್ರದ 11 ಶಾಲೆಗಳ ವಿದ್ಯಾರ್ಥಿಗಳು ರಂಗಪ್ರವೇಶ ಮಾಡಿದರು.

Continue Reading

DAKSHINA KANNADA

ಮಂಗಳೂರು: ಹೊಸಬೆಟ್ಟು ಬೀಚ್ ಬಳಿ ನೀರಾಟಕ್ಕಿಳಿದ ನಾಲ್ವರಲ್ಲಿ ಮೂವರು ಸಾವು, ಓರ್ವನ ರಕ್ಷಣೆ

Published

on

ಮಂಗಳೂರು: ನಗರದ ಹೊರವಲಯದ ಸುರತ್ಕಲ್‌ ಬಳಿ ಇರುವ ಹೊಸಬೆಟ್ಟು ಬೀಚ್ ನ ನಿರ್ಮಾಣ ಹಂತದ ಜೆಟ್ಟಿ ಬಳಿ ಇರುವ ಬೀಚ್ ಗೆ ಪ್ರವಾಸಕ್ಕೆ ಬಂದ ಮೂವರು ಯುವಕರು ನೀರುಪಾಲಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ ನಿವಾಸಿ ಮಂಜುನಾಥ್‌ ಎಸ್(31), ಶಿವಮೊಗ್ಗ ಜಿಲ್ಲೆಯ ಶಿವಕುಮಾರ್, ಬೆಂಗಳೂರು ಜೆಪಿ ನಗರ ನಿವಾಸಿ ಸತ್ಯವೇಲು(30) ಹಾಗೂ ಬೀದರ್‌ ಜಿಲ್ಲೆ ಹಂಗಾರಗಾ ನಿವಾಸಿ ಪರಮೇಶ್ವರ್ (30 ) ಎಂಬವರು ಬೀಚಿಗೆ ತಿರುಗಾಡಲು ಬಂದಿದ್ದು, ಸಮುದ್ರದಲ್ಲಿ ಈಜಾಟಕ್ಕೆ ಇಳಿದ ವೇಳೆ ಈ ದುರಂತ ಸಂಭವಿಸಿದೆ.

ನಾಲ್ವರು ನೀರಿನಲ್ಲಿ ಮುಳುಗುತ್ತಿದ್ದ ವೇಳೆ ಸ್ಥಳೀಯ ಮೀನುಗಾರರು ಹಂಗಾರಗಾ ನಿವಾಸಿ ವಿಶ್ವಂಬರ್ ಎಂಬವರ ಪುತ್ರ ಪರಮೇಶ್ವರ(30) ನನ್ನು ರಕ್ಷಿಸಿದ್ದಾರೆ. ಮೃತಪಟ್ಟವರನ್ನು ಚಿತ್ರದುರ್ಗ ಜಿಲ್ಲೆಯ ಮಂಜುನಾಥ ಎಸ್‌ ಮತ್ತು ಶಿವಮೊಗ್ಗದ ಶಿವಕುಮಾರ್ ಎಂದು ಗುರುತಿಸಲಾಗಿದೆ.

ಚಿತ್ರದುರ್ಗದ ಮಂಜುನಾಥ ನೀರುಪಾಲಾಗಿದ್ದು, ದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ಸುರತ್ಕಲ್‌ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಎರಡು ಶವಗಳನ್ನು ನಗರದ ಎ.ಜೆ.ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ನಕ್ಸಲರ ಶರಣಾಗತಿ; ಈ ಪ್ರಕ್ರಿಯೆ ಮೊದಲೇ ನಡೆಯಬೇಕಿತ್ತು ಎಂದ ವಿಕ್ರಂ ಗೌಡನ ಸಹೋದರ

Published

on

ನವೆಂಬರ್ 18 ರಂದು ನಡೆದಿದ್ದ ನಕ್ಸಲ್ ವಿಕ್ರಮ್ ಗೌಡ ಎನ್ಕೌಂಟರ್ ಬಳಿಕ ನಡೆದ ಬೆಳವಣಿಗೆಯಲ್ಲಿ ಇದೀಗ ಆರು ಜನ ನಕ್ಸಲರು ಮುಖ್ಯವಾಹಿನಿಗೆ ಕಾಲಿಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶರಣಾಗತಿ ಆಗುವ ಮೂಲಕ ನಕ್ಸಲ್ ಹೋರಾಟಕ್ಕೆ ಅಂತ್ಯ ಹಾಡಿದ್ದಾರೆ.

ನಾಗರಿಕ ಸಮಿತಿ ಮತ್ತು ಶರಣಾಗತಿ ಸಮಿತಿ ಸರ್ಕಾರದ ಜೊತೆ ಮಾತುಕತೆ ನಡೆಸಿ ಈ ಶರಣಾಗತಿ ಮಾಡಿಸಿದ್ದಾರೆ. ಆದರೆ ಇದು ವಿಕ್ರಂ ಗೌಡ ಅವರ ಸಹೋದರ ಹಾಗೂ ಸಹೋದರಿಯರಿಗೆ ಬೇಸರ ತರಿಸಿದ್ದು, ನಮ್ಮ ಅಣ್ಣ ಜೀವಂತವಾಗಿದ್ದಾಗ ಈ ಪ್ರಕ್ರಿಯೆ ನಡೆಯಬೇಕಿತ್ತು ಎಂದಿದ್ದಾರೆ. ನಕ್ಸಲರು ಶರಣಾಗುತ್ತಿರುವುದು ಒಳ್ಳೆಯ ವಿಚಾರವಾಗಿದ್ದು, ಅವರೂ ನಮ್ಮಂತೆ ಜೀವಿಸಲಿ ಎಂದಿರುವ ಸಹೋದರ ಸುರೇಶ್ ಗೌಡ ಈ ಯೋಜನೆ ಮೊದಲೇ ತಂದಿದ್ದರೆ ನನ್ನ ಅಣ್ಣ ಕೂಡಾ ಬದುಕಿ ಉಳಿಯುತ್ತಿದ್ದ ಎಂದು ಹೇಳಿದ್ದಾರೆ.

ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ವಿಕ್ರಂ ಗೌಡ ಸಹೋದರಿ ಸುಗುಣ ನಕ್ಸಲ್ ಶರಣಾಗತಿ ಪ್ಯಾಕೇಜ್ ನಮಗೂ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಶರಣಾಗತಿಗೆ ಸಮಿತಿಯವರು ಮೊದಲೇ ಪ್ರಯತ್ನಿಸಿದ್ದರೆ ನನ್ನ ಅಣ್ಣನ ಜೀವ ಉಳಿಯುತ್ತಿತ್ತು. ಜೈಲಿನಲ್ಲಿಯಾದರೂ ಆತ ಇರುತ್ತಿದ್ದ. ಆದರೆ ಆತನನ್ನು ಎನ್ಕೌಂಟರ್ ಮಾಡಿದ ಕಾರಣ ಇಂದು ಆತ ನಮ್ಮೊಂದಿಗಿಲ್ಲ. ನಾವು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕಷ್ಟದ ಜೀವನ ನಡೆಸುತ್ತಿದ್ದೇವೆ. ನಮ್ಮನ್ನು ಯಾವ ಸಮಿತಿಯೂ ಬಂದು ಭೇಟಿ ಮಾಡಿಲ್ಲ. ನಮಗೂ ನಕ್ಸಲ್ ಶರಣಾಗತಿಯ ಪ್ಯಾಕೇಜ್ ನೀಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Continue Reading

LATEST NEWS

Trending

Exit mobile version