DAKSHINA KANNADA
ಸುರತ್ಕಲ್ ಟೋಲ್ ತೆರವಿಗೆ ಮುಂದುವರೆದ ಹೋರಾಟ : ಅಕ್ಟೋಬರ್ 28 ರಿಂದ ಅನಿರ್ಧಿಷ್ಟಕಾಲ ಧರಣಿ ಸತ್ಯಾಗ್ರಹ..!
Published
2 years agoon
By
Adminಅಕ್ಟೋಬರ್ 28 ರಿಂದ ಸುರತ್ಕಲ್ ಟೋಲ್ ಗೇಟ್ ಸಮೀಪ ಬೇಡಿಕೆ ಈಡೇರುವವರಗೆ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ಚದಲ್ಲಿ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿ ನಡೆಸಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನಿರ್ಧರಿಸಿದೆ.
ಮಂಗಳೂರು : ತೀರ ವಿವಾದ ಸೃಷ್ಟಿಸಿದ ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಬಂಧಿಸಿ ಸರಕಾರ ಪದೇ ಪದೆ ಮಾತು ತಪ್ಪುತ್ತಿದೆ.
ತೆರವಿನ ತೀರ್ಮಾನ ಆಗಿದೆ ಎಂದು ಅಧಿಕೃತವಾಗಿ ಪ್ರಕಟಿಸುವ ಸರಕಾರ ಹಾಗೂ ಅಧೀನ ಅಧಿಕಾರಿಗಳು ಟೋಲ್ ತೆರವಿಗೆ ಸಂಬಂಧಿಸಿ ವಾರ, ತಿಂಗಳು ಎಂದು ವರ್ಷದಿಂದ ಕಾಲಹರಣ ಮಾಡುತ್ತಿರುವುದು ಜನರ ಸಹನೆಯ ಕಟ್ಟೆ ಒಡೆಯುವಂತೆ ಮಾಡಿದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.
ಈ ಬಗ್ಗೆ ಹೋರಾಟ ಸಮಿತಿ ಸುದ್ದಿಗೋಷ್ಟಿ ಕರೆದು ಮುಂದಿನ ಹೋರಾಟದ ರೂಪುರೇಷೆಗಳ ವಿವರ ನೀಡಿತು. ಹೋರಾಟ ಸಮಿತಿ ಸಮಚಾಲಕರಾದ ಮುನೀರ್ ಕಾಟಿಪಳ್ಳ ಅವರು ಮಾತನಾಡಿ ಜುಲೈ ತಿಂಗಳ ಆರಂಭದಿಂದ ಇಂದು, ನಾಳೆ ಎಂದು ಜನರನ್ನು ವಂಚಿಸುತ್ತಿರುವುದು ಖಂಡನೀಯ.
ಅಕ್ಟೋಬರ್ 18 ರ ಟೋಲ್ ಗೇಟ್ ಮುತ್ತಿಗೆ ಸಂದರ್ಭ ಜನಾಕ್ರೋಶ ಮುಗಿಲು ಮುಟ್ಟಿದಾಗ ಸ್ವತಹ ಸಂಸದರೇ 20 ದಿನಗಳ ಕಾಲಾವಧಿ ನೀಡುವಂತೆ ಕೋರಿದ್ದಾರೆ.
ಆ ಅವಧಿ ನವಂಬರ್ 07 ಕ್ಕೆ ಕೊನೆಗೊಳ್ಳುತ್ತದೆ.
ಟೋಲ್ ಮುಚ್ಚುವ ತೀರ್ಮಾನ ಜಾರಿಗೊಳಿಸುವುದು, ನೀಡಿದ ಭರವಸೆಯಂತೆ ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಅಕ್ಟೋಬರ್ 28 ರಿಂದ ಸುರತ್ಕಲ್ ಟೋಲ್ ಗೇಟ್ ಸಮೀಪ ಬೇಡಿಕೆ ಈಡೇರುವವರಗೆ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ಚದಲ್ಲಿ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿ ನಡೆಸಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನಿರ್ಧರಿಸಿದೆ.
ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಈಗ ಹೋರಾಟ ಸಮಿತಿಯ ಹಾಗೂ ಜೊತೆಗಿರುವ ಸಮಾನ ಮನಸ್ಕ ಸಂಘಟನೆಯ ಹೋರಾಟವಾಗಿ ಮಾತ್ರ ಉಳಿದಿಲ್ಲ.
ಅಕ್ಟೋಬರ್ 18 ರಂದು ಎಲ್ಲಾ ರೀತಿಯ ದಮನಗಳ ನಡುವೆಯೂ ಟೋಲ್ ಗೇಟ್ ಮುತ್ತಿಗೆಗೆ ಅಪಾರ ಜನ ಬೆಂಬಲ ದೊರಕಿರುವುದು ಟೋಲ್ ವಿರೋಧಿ ಹೋರಾಟ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಸಮಸ್ತ ಜನತೆಯ ಹೋರಾಟವಾಗಿ ಪರಿವರ್ತನೆಗೊಂಡಿರುವುದನ್ನು ಎತ್ತಿತೋರಿಸುತ್ತದೆ.
ಇಷ್ಟು ದೊಡ್ಡ ಪ್ರಮಾಣದ ಜನಾಗ್ರಹದ ಹೊರತಾಗಿಯೂ ಟೋಲ್ ಸಂಗ್ರಹ ಸ್ಥಗಿತಗೊಳಿಸಲು ಬಿಜೆಪಿ ಸರಕಾರ ಹಾಗೂ ಅವಿಭಜಿತ ದ.ಕ. ಜಿಲ್ಲೆಯ ಸಂಸದ, ಶಾಸಕರುಗಳು ಮುಂದಾಗದಿರುವುದು ಜನಸಾಮಾನ್ಯರ ಬೇಡಿಕೆಗಳ ಕುರಿತು ಅವರಿಗಿರುವ ಅನಾದಾರ, ಅಸಹನೆಯನ್ನು ಎತ್ತಿತೋರಿಸುತ್ತದೆ.
ಹಾಗೂ ನವಯುಗ್ ನಂತಹ ದೈತ್ಯ ಕಂಪೆನಿಗಳ ಹಿತಾಸಕ್ತಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿರುವುದನ್ನು ಜಾಹೀರು ಪಡಿಸಿದೆ.
ಇದು ಖಂಡನೀಯ. ಸಂಸದ ನಳಿನ್ ಕುಮಾರ್ ಕಟೀಲ್ 20 ದಿನಗಳ ಕಾಲಾವಧಿ ಕೋರಿರುವುದು, ಉಳಿದ ಶಾಸಕರುಗಳು ಕನಿಷ್ಟ ಪ್ರತಿಕ್ರಿಯೆಯನ್ನೂ ನೀಡದಿರುವುದು ಟೋಲ್ ಗೇಟ್ ಮುಚ್ಚುವ ತೀರ್ಮಾನ ಜಾರಿಯಾಗುವ ಕುರಿತು ನಮಗೆ ಅನುಮಾನಗಳನ್ನು ಹುಟ್ಟು ಹಾಕಿದೆ.
ಮುತ್ತಿಗೆ ಸಂದರ್ಭದ ಬೆಳವಣಿಗೆಗಳು ದೊಡ್ಡ ವಿವಾದವಾಗಿ ಪರಿವರ್ತನೆಗೊಂಡಾಗಲು ಬಾಯಿ ಬಿಚ್ಚದ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಈಗ ದಿಢೀರ್ ಆಗಿ ಟೋಲ್ ಗೇಟ್ ಮುಚ್ಚುವ ಅವಧಿಯನ್ನು ನವಂಬರ್ ತಿಂಗಳ ಕೊನೆಯವರಗೆ ಮುಂದೂಡಿರುವುದು, ಸಂಸದ ನಳಿನ್ ಕುಮಾರ್ ಕಟೀಲ್ ಈ ಕುರಿತು ಪ್ರತಿಕ್ರಿಯಿಸದಿರುವುದು ಸರಕಾರ ಹಾಗೂ ಸಂಸದ, ಶಾಸಕರುಗಳ ಮೇಲಿನ ಭರವಸೆಯನ್ನು ಪೂರ್ತಿ ಕಳಚಿ ಹಾಕಿದೆ.
ಆದುದರಿಂದ ಸಂಸದ ನಳಿನ್ ಕೇಳಿದ ಕಾಲಾವಧಿಯಂತೆ ನವಂಬರ್ 07 ರ ಒಳಗಡೆ ಸುರತ್ಕಲ್ ಟೋಲ್ ಗೇಟ್ ಸುಲಿಗೆಗೆ ಅಂತ್ಯ ಹಾಡುವಂತೆ ಒತ್ತಾಯಿಸಿ ಹಗಲು ರಾತ್ರಿ ಧರಣಿ ಆರಂಭಿಸುತ್ತಿದ್ದೇವೆ.
ಅವಿಭಜಿತ ಜಿಲ್ಲೆಯ ಸಂಸದರು, ಶಾಸಕರುಗಳು ಮನಸ್ಸು ಮಾಡಿದರೆ ಸುರತ್ಕಲ್ ಟೋಲ್ ಗೇಟ್ ತೆರವು 24 ಗಂಟೆಯ ಅವಧಿಯಲ್ಲಿ ನಿಯಮಬದ್ದವಾಗಿಯೇ ಆಗಿಹೋಗುತ್ತದೆ.
ಆದರೆ ವ್ಯಾಪಾರಿ ಹಿತಾಸಕ್ತಿಗಳ ಪರವಹಿಸಿ ಜನವಿರೋಧಿ ನಿಲುವುಗಳಿಗೇ ಅಂಟಿಕೊಂಡಿರುವ ಜನಪ್ರತಿನಿಧಿಗಳು ಜನಾಭಿಪ್ರಾಯವನ್ನು ತಿರಸ್ಕರಿಸುತ್ತಿದ್ದಾರೆ.
ನವಯುಗ್ ಕಂಪೆನಿಯ ಬಾಹುಗಳಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಬಂಧಿಯಾಗಿದ್ದಾರೆ, ಜನತೆಗಿಂತ ಕಂಪೆನಿಗಳಿಗೆ ಪೂರ್ತಿನಿಷ್ಟರಾಗಿದ್ದಾರೆ ಎಂಬುದು ಇವರ ಈಗಿನ ನಡವಳಿಕೆಯಿಂದ ಹೆಚ್ಚು ಸ್ಪಷ್ಟವಾಗುತ್ತಿದೆ.
ಪೊಲೀಸ್ ಕೇಸು ವಾಪಸಾತಿಗೆ ಆಗ್ರಹ
ಟೋಲ್ ಗೇಟ್ ಮುತ್ತಿಗೆ ಶಾಂತಿಯುತವಾಗಿ ನಡೆದಿದ್ದರೂ ಶಾಸಕ, ಸಂಸದರುಗಳ ಕುಮ್ಮಕ್ಕಿನಿಂದ ಟೋಲ್ ಗುತ್ತಿಗೆದಾರರ ಮೂಲಕ ಬಿಜೆಪಿ ಸಂಸದ, ಶಾಸಕರುಗಳು ಹೋರಾಟ ಸಮಿತಿಯ ಮೇಲೆ ಎರಡು ಮೊಕದ್ದಮೆಗಳನ್ನು ಹೂಡಿಸಿದ್ದಾರೆ.
ಇಂತಹ ಮೊಕದ್ದಮೆ, ಪೊಲೀಸ್ ಬಲಪ್ರಯೋಗದಿಂದ ಹೋರಾಟವನ್ನು ಹಿಮ್ಮೆಟ್ಟಿಸಲು ಸಾಧ್ಯವಿಲ್ಲ.
ಟೋಲ್ ಗೇಟ್ ಮುಚ್ಚುವುದು ಮಾತ್ರ ಹೋರಾಟ ಕೊನೆಗೊಳಿಸಲು ಇರುವ ದಾರಿ. ಆಧಾರರಹಿತ ಸುಳ್ಳು ಮೊಕದ್ದಮೆಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ನಾವು ಇದೇ ಸಂದರ್ಭ ಆಗ್ರಹಿಸುತ್ತಿದ್ದೇವೆ.
ಬದಲಿಗೆ ಸುಳ್ಳು ಮೊಕದ್ದಮೆಯ ಆಧಾರದಲ್ಲಿ ಹೋರಾಟಗಾರರನ್ನು ಬಂಧಿಸಲು ಮುಂದಾದರೆ ನಾವು ಜೈಲು ಸೇರಲು ಸಿದ್ದರಾಗಿದ್ದೇವೆ. ಈ ಕುರಿತು ಕಾನೂನು ಹೋರಾಟಕ್ಕೆ ನಮ್ಮ ಜೊತೆಗಿರುವ ಜನಪರ ವಕೀಲರ ವೇದಿಕೆ ಸಿದ್ದತೆ ನಡೆಸುತ್ತಿದೆ.
ಜನತೆಯಲ್ಲಿ ಮನವಿ
ಟೋಲ್ ಗೇಟ್ ವಿರೋಧಿ ಹೋರಾಟ ಪಕ್ಷಾತೀತವಾಗಿ ನಡೆಯುತ್ತಿದೆ. ದ.ಕ. ಉಡುಪಿ ಜಿಲ್ಲೆಗಳ ಒಕ್ಕೊರಲ ಜನಾಭಿಪ್ರಾಯವನ್ನು ಈ ಹೋರಾಟದಲ್ಲಿ ಕ್ರೋಢೀಕರಿಸುವ ಯತ್ನವನ್ನು ಪ್ರಾಮಾಣಿಕವಾಗಿ ಮಾಡುತ್ತಿದೆ.
ಟೋಲ್ ಗೇಟ್ ತೆರವುಗೊಳ್ಳದೆ ನಮ್ಮ ಹೋರಾಟ ನಿಲ್ಲದು. ಜನತೆ ಇಟ್ಟಿರುವ ನಂಬಿಕೆಯನ್ನು ಹುಸಿಗೊಳಿಸದು. ಹಗಲು ರಾತ್ರಿ ಅನಿರ್ಧಿಷ್ಟಾವಧಿ ಧರಣಿಯನ್ನು ಯಶಸ್ಸುಗೊಳಿಸಲು ಜನತೆ ಒಗ್ಗಟ್ಟಿನ ಬೆಂಬಲ ನೀಡಬೇಕು ಎಂದು ವಿನೀತವಾಗಿ ಮನವಿ ಮಾಡುತ್ತಿದ್ದೇವೆ.
ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ, ಪುರುಷೋತ್ತಮ ಚಿತ್ರಾಪುರ, ರಘು ಎಕ್ಕಾರು, ಶೇಖರ ಹೆಜಮಾಡಿ, ಕಿಶನ್ ಹೆಗ್ಡೆ ಕೊಲ್ಕೆಬೈಲು, ದಿನೇಶ್ ಕುಂಪಲ, ಬಿ ಕೆ ಇಮ್ತಿಯಾಜ್, ಮುಹಮ್ಮದ್ ಕುಂಜತ್ತಬೈಲ್, ಪ್ರತಿಭಾ ಕುಳಾಯಿ, ದಯಾನಂದ ಶೆಟ್ಟಿ, ಶ್ರೀನಾಥ್ ಕುಲಾಲ್, ರಮೇಶ್ ಟಿ ಎನ್. ಮತ್ತಿತರರು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
1 day agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ