Connect with us

UDUPI

ಉಡುಪಿ: ಗಿರಿಜಾ ಹೆಲ್ತ್‌ಕೇರ್ ಸೆಂಟರ್‌ನಲ್ಲಿ ಸ್ವಾತಂತ್ರ್ಯಸಂಭ್ರಮ & ಉಚಿತ ವೀಲ್‌ಚೇರ್ ವಿತರಣೆ

Published

on

ಉಡುಪಿ: ಗಿರಿಜಾ ಗ್ರೂಪ್ ಅಪ್ ಕನ್ಸರ್ನ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅಸಹಾಯಕರಿಗೆ ಉಚಿತ ವೀಲ್‌ಚೇರ್ ವಿತರಣೆ ಹಾಗೂ ಧ್ವಜಾರೋಹಣ ಕಾರ್ಯಕ್ರಮ ನಿನ್ನೆ ಉಡುಪಿಯ ಹೆಲ್ತ್‌ಕೇರ್ ಹಾಗೂ ಸರ್ಜಿಕಲ್ ಸೆಂಟರ್ ಮುಂಭಾಗದಲ್ಲಿ ನಡೆಯಿತು.


ಉಡುಪಿ ಜಿಲ್ಲೆಯ ಅಸಿಸ್ಟೆಂಟ್ ಔಷಧಿ ನಿಯಂತ್ರಕ ಶಂಕರ್ ನಾಯ್ಕ್ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ‘ಸ್ವಾತಂತ್ರ್ಯದ ಮಹತ್ವ, ಹೋರಾಟಗಾರರ ಬಲಿದಾನ, ನಮ್ಮ ಮಕ್ಕಳಲ್ಲಿ ರಾಷ್ಟ್ರಪ್ರೇಮ ಹೇಗೆ ಬೆಳೆಸಬಹುದು.

ಅಲ್ಲದೆ ಔಷಧ ವ್ಯಾಪರಸ್ಥರಾದ ನಾವು ಯಾವ ರೀತಿಯಲ್ಲಿ ಜನರಿಗೆ ಸೇವೆ ಸಲ್ಲಿಸಬಹುದು ಎಂಬುದರ ಬಗ್ಗೆ ಮಾಹಿತಿ ನೀಡಿದರು.


ಉಡುಪಿಯ ಎಂಪಿರಿಯಂ ಮೆಡಿಕಲ್ ಮಾಲಕ ರಮೇಶ್ ನಾಯಕ್ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ನಗರ ಸಭಾ ಸದಸ್ಯೆ ಮಾನಸ ಪೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಆರ್ಥಿಕವಾಗಿ ಅಶಕ್ತರಾದ ಕೆ ಪಿ ಕುಂದರ್ ಅವರಿಗೆ ಸಮಾಜ ಸೇವಕ ನಿತ್ಯಾನಂದ್ ಒಳಕಾಡು ಅವರ ಸೂಚನೆಯ ಮೇರೆಗೆ ಗಿರಿಜಾ ಹೆಲ್ತ್ ಕೇರ್ ಅಂಡ್ ಸರ್ಜಿಕಲ್ಸ್ ವತಿಯಿಂದ ಉಚಿತ ವೀಲ್ ಚೇರ್ ನೀಡಲಾಯಿತು.


ಬಂದ ಅತಿಥಿಗಳು ಗಿರಿಜಾ ಸಂಸ್ಥೆ ಮಾಡುವ ಸಮಾಜಮುಖಿ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Click to comment

Leave a Reply

Your email address will not be published. Required fields are marked *

FILM

ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ‘ಗಬ್ಬರ್ ಸಿಂಗ್’ ತುಳು ಚಲನಚಿತ್ರ ಬಿಡುಗಡೆ

Published

on

ಉಡುಪಿ : ಬಹು ನಿರೀಕ್ಷಿತ ತುಳು ಚಿತ್ರ “ಗಬ್ಬರ್ ಸಿಂಗ್” ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಬಿಡುಗಡೆ ಸಮಾರಂಭವೂ ನಡೆಯಿತು.

ತೊಟ್ಟಂ ಚರ್ಚ್ ನ ಧರ್ಮಗುರು ಫಾದರ್ ಡೆನಿಸ್ ಡೆಸಾ, ಶಂಕರಪುರದ ಸಾಯಿ ಈಶ್ವರ ಗುರೂಜಿ, ಮಿಯಾರ್ ಮಸೀದಿಯ ಮೌಲ್ವಿ  ಅಬುಲ್ ಹಸನ್, ರಾಜಕೀಯ ಮುಖಂಡರಾದ ಗೀತಾಂಜಲಿ ಸುವರ್ಣ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ, ಸರಳಾ ಕಾಂಚನ್, ಶಿಲ್ಪಾ ಭಟ್, ಉಡುಪಿ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕೃಷ್ಣಮೂರ್ತಿ ಆಚಾರ್ಯ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಚಿತ್ರದ ಕಲಾವಿದರಾದ ವೀಣಾ ಎಸ್ ಶೆಟ್ಟಿ, ಸಂದೀಪ್ ಭಕ್ತ, ಆದ್ಯ, ಚಂದ್ರಹಾಸ್ ಕಪ್ಪೆಟ್ಟು, ಕಿಶೂ ಎಂಟರ್‌ಪ್ರೈಸಸ್ ವ್ಯವಸ್ಥಾಪಕ ನಿರ್ದೇಶಕರಾದ ಕಿಶೋರ್ ಗೊನ್ಸಾಲ್ವಿಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದರು.

ಇದನ್ನೂ ಓದಿ : ಕೋಸ್ಟಲ್ ವುಡ್ ಅಂಗಳದಲ್ಲಿ ‘ಗಬ್ಬರ್ ಸಿಂಗ್’ ಹವಾ ಶುರು

‘ಗಬ್ಬರ್ ಸಿಂಗ್’ ಚಿತ್ರವು ಕೌಟುಂಬಿಕ ಅಂಶಗಳನ್ನು ಒಳಗೊಂಡಿರುವ ಆಕ್ಷನ್ ಥ್ರಿಲ್ಲರ್ ಆಗಿದೆ. ಕಥೆ ಮತ್ತು ಚಿತ್ರಕಥೆಯನ್ನು ಸತೀಶ್ ಪೂಜಾರಿ ಬಾರ್ಕೂರು ರಚಿಸಿದ್ದು, ಪ್ರದೀಪ್ ನಿರ್ದೇಶನವಿದೆ. ತುಳು ಚಿತ್ರರಂಗದ ಹೆಸರಾಂತ ನಟರುಗಳು ಈ ಚಿತ್ರದಲ್ಲಿ ಪಾತ್ರವಾಗಿದ್ದಾರೆ.

Continue Reading

DAKSHINA KANNADA

ಕೋಸ್ಟಲ್ ವುಡ್ ಅಂಗಳದಲ್ಲಿ ‘ಗಬ್ಬರ್ ಸಿಂಗ್’ ಹವಾ ಶುರು

Published

on

ಮಂಗಳೂರು : ಬಹುನಿರೀಕ್ಷಿತ ಚಿತ್ರ ‘ಗಬ್ಬರ್ ಸಿಂಗ್’ ಇಂದು (ಮೇ 3) ತೆರೆಗಪ್ಪಳಿಸಿದೆ. ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ “ಗಬ್ಬರ್ ಸಿಂಗ್” ಮಂಗಳೂರಿನ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ತೆರೆಕಂಡಿದೆ.


ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿ ಎಂ.ಶೇಖರ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಚಲನಚಿತ್ರಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿ ನಿರ್ಮಾಪಕ ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ, ತುಳು ಸಿನಿಮಾ ತೆರೆಕಾಣದೆ ಕೆಲವು ಸಮಯ ಆಗಿದೆ. ಬೇಸಿಗೆ ಕಾಲದಲ್ಲಿ ತರೆಕಾಣುತ್ತಿರುವ ಗಬ್ಬರ್ ಸಿಂಗ್ ಸಿನಿಮಾ ಹಾಸ್ಯಭರಿತವಾಗಿದ್ದು, ಪ್ರೇಕ್ಷಕರಿಗೆ ಸಂಪೂರ್ಣ ಮನರಂಜನೆ ಒದಗಿಸಿದೆ. ಭೋಜರಾಜ್ ವಾಮಂಜೂರು ಅವರ ಹಾಸ್ಯಕ್ಕೆ ಒತ್ತು ಕೊಟ್ಟ ಪಾತ್ರ ಜೊತೆಗೆ ಗಿರೀಶ್ ಶೆಟ್ಟಿಯವರ ಖಡಕ್ ವಿಲನ್ ಪಾತ್ರ, ನಾಯಕ ಶರಣ್ ಶೆಟ್ಟಿ, ನಾಯಕಿ ವೆನ್ಸಿಟಾ ಡಯಾಸ್ ಪಾತ್ರಗಳು ಗಮನ ಸೆಳೆಯುತ್ತದೆ ಎಂದರು.

ಸಮಾರಂಭದಲ್ಲಿ ಡಾ ಮೆಲ್ವಿನ್ ಡಿ ಸೋಜಾ, ರಂಜಿತಾ ಹೇಮನಾಥ ಶೆಟ್ಟಿ ಕಾವು, ಭೋಜರಾಜ ವಾಮಂಜೂರು, ತುಳು ಚಲನ ಚಿತ್ರನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್, ಉದ್ಯಮಿ ಗಿರೀಶ್ ಎಂ ಶೆಟ್ಟಿಕಟೀಲ್, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮೋಹನ್ ಕೊಪ್ಪಲ, ತಮ್ಮಲಕ್ಷ್ಮಣ, ಮಧು ಸುರತ್ಕಲ್, ಚಂದ್ರಶೇಖರ ನಾನಿಲ್ ಹಳೆಯಂಗಡಿ, ಜಯಾನಂದ ಅಮೀನ್, ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಶರಣ್ ಶೆಟ್ಟಿ, ನಟಿ ವೆನ್ಸಿಟಾ ಡಯಾಸ್, ರಾಹುಲ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.

ಎಲ್ಲೆಲ್ಲಿ ತೆರೆಗೆ?

ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಸಿನಿಪೊಲೀಸ್, ಪಿವಿಆರ್, ಉಡುಪಿಯಲ್ಲಿ ಕಲ್ಪನಾ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್ ಚಿತ್ರ ಮಂದಿರಗಳಲ್ಲಿ “ಗಬ್ಬರ್ ಸಿಂಗ್” ಸಿನಿಮಾ ತೆರೆ ಕಂಡಿದೆ.

ನೈಜಘಟನೆಯಾಧಾರಿತ ಚಿತ್ರ :


‘ಗಬ್ಬರ್ ಸಿಂಗ್’ ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆಯನ್ನು ಹೆಣೆಯಲಾಗಿದೆ. ಉತ್ತಮ‌ ಕತೆ, ನವಿರಾದ ಹಾಸ್ಯದೊಂದಿಗೆ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

ಇದನ್ನೂ ಓದಿ : ಅಜೆಕಾರು : ಮನೆ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾ*ವು

ತಾರಾಂಗಣ :

ನಾಯಕ ನಟನಾಗಿ ಶರಣ್ ಶೆಟ್ಟಿ, ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಯಾದಾಗ ಮತ್ತೆ ಶಾಂತಿ ನೆಲೆಸುವಂತೆ ಮಾಡುವ ಖಡಕ್ ಅಧಿಕಾರಿ ಪಾತ್ರದಲ್ಲಿ ಶರಣ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. “ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ.

ಸಿನಿಮಾ ಕತೆ, ಚಿತ್ರಕತೆ, ಸತೀಶ್ ಪೂಜಾರಿ ಬಾರ್ಕೂರ್, ಮಧು ಸುರತ್ಕಲ್ ಸಂಭಾಷಣೆ, ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.

Continue Reading

LATEST NEWS

ಅಜೆಕಾರು : ಮನೆ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾ*ವು

Published

on

ಕಾರ್ಕಳ : ಭಾರೀ ಸೆಕೆಯಿಂದಾಗಿ ಮನೆಯೊಳಗಡೆ ಮಲಗಲಾಗದೇ ಮನೆ ಟೆರೇಸ್ ಮೇಲೆ ಮಲಗಲು ಹೋಗಿದ್ದ ಶಿಕ್ಷಕ ಗಾಢ ನಿದ್ದೆಯಲ್ಲಿ ಉರುಳಿ ಬಿದ್ದು ಸಾ*ವನ್ನಪ್ಪಿದ ಘಟನೆ ಅಜೆಕಾರು ಕುಮೇರಿಯಲ್ಲಿ ನಡೆದಿದೆ. ಸುಂದರ ನಾಯ್ಕ(55) ಇಹಲೋಕ ತ್ಯಜಿಸಿದ ಶಿಕ್ಷಕ.

ಸುಂದರ ಅವರು ಆಶ್ರಯ ನಗರದ ನಿವಾಸಿಯಾಗಿದ್ದು, ಕಾರ್ಕಳ ತಾಲೂಕಿನ ಎಣ್ಣೆಹೊಳೆ ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದರು. ಸೆಕೆಯ ಹಿನ್ನೆಲೆಯಲ್ಲಿ ಮನೆಯ ಟೆರೇಸ್ ಮೇಲೆ ಮಲಗಿದ್ದರು. ರಾತ್ರಿ ಸುಮಾರು 10:30 ರ ವೇಳೆಗೆ ಟೆರೇಸ್ ಮೇಲೆ ಮಲಗಲು ತೆರಳಿದ್ದ ಇವರನ್ನು ಮನೆ ಮಂದಿ ಬೆಳಿಗ್ಗೆ 6:30ಕ್ಕೆ ಎಬ್ಬಿಸಲೆಂದು ಹೋದಾಗ ಇವರು ಟೆರೇಸ್‌ನಿಂದ ಕೆಳಕ್ಕೆ ಬಿದ್ದಿರುವುದು ಕಂಡು ಬಂದಿದೆ.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಪ್ರಕರಣ ; ವೀಡಿಯೋ ಹರಿಬಿಟ್ಟ ಕಾರ್ತಿಕ್ ನಾಪತ್ತೆ! ಮಲೇಷ್ಯಾಕ್ಕೆ ಹೋಗಿರುವ ಶಂಕೆ

ಗಾಢ ನಿದ್ರೆಯಲ್ಲಿ ಆಯತಪ್ಪಿ ಟೆರೇಸ್ ಮೇಲಿಂದ ಕೆಳಗೆ ಬಿದ್ದು ಮೃ*ತಪಟ್ಟಿರುವುದಾಗಿ ಶಂಕೆ ವ್ಯಕ್ತವಾಗಿದೆ. ಮೃತ ಶಿಕ್ಷಕ ಸುಂದರ್ ನಾಯ್ಕ್ ಪತ್ನಿ ಪುತ್ರಿಯರನ್ನು ಅಗಲಿದ್ದಾರೆ.

Continue Reading

LATEST NEWS

Trending