Thursday, February 9, 2023

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ನಾವೆಲ್ಲರೂ ಅನುಭವಿಸುತ್ತಿರುವ ಸ್ವಾತಂತ್ರ್ಯ ಹಲವಾರು ವೀರಪುರುಷರು ಮತ್ತು ವೀರ ವನಿತೆಯರ ತ್ಯಾಗ ಬಲಿದಾನದ ಕೊಡುಗೆ ಎಂದು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಿ ಕುಶಾಲಪ್ಪ ಗೌಡ ಹೇಳಿದರು.


ಅವರು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಿನ್ನೆ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಮಾಡಿ ಮಾತನಾಡಿ ‘ಮುಂದಿನ ತಲೆಮಾರು ರಾಷ್ಟ್ರಭಕ್ತಿಯ ಕಾರ್ಯಕ್ರಮಗಳಲ್ಲಿ ತಮ್ಮನ್ನು ಸದಾ ತೊಡಗಿಸಿಕೊಂಡು ಈ ರಾಷ್ಟ್ರವನ್ನು ಕಟ್ಟಿದ ಮಹಾ ಚೇತನಗಳನ್ನು ಸದಾ ಸ್ಮರಿಸುವ ಕೆಲಸ ಮಾಡಬೇಕೆಂದು’ ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದರು.


ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಗಣೇಶ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ, ಶಿಕ್ಷಣ ಸಂಸ್ಥೆಗಳ ಸದಸ್ಯರಾದ ಉಷಾ ವೆಂಕಟರಮಣ ಗೌಡ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ ಯದುಪತಿ ಗೌಡ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮಿನಾರಾಯಣ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಸುಹಾಸಿನಿ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ನಾರಾಯಣಗೌಡ, ಉಪಾಧ್ಯಕ್ಷೆ ಉಷಾ ಹಾಗೂ ಹಲವಾರು ಪೋಷಕರು ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು. ಕಾಲೇಜಿನ ಉಪ ಪ್ರಾಂಶುಪಾಲರದ ವಿಷ್ಣು ಪ್ರಕಾಶ್ ಎಂ ಕಾರ್ಯಕ್ರಮವನ್ನು ನಿರ್ವಹಿಸಿದರು.


ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳು ಹಾಗೂ ಪ್ರೌಢಶಾಲೆಗಳಿಗೆ ಏರ್ಪಡಿಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.


ವಾಣಿ ಶಿಕ್ಷಣ ಸಂಸ್ಥೆಯ ಎರಡು ಸಾವಿರದಷ್ಟು ವಿದ್ಯಾರ್ಥಿಗಳು ವಿವಿಧ ಬಣ್ಣದ ಸಮವಸ್ತ್ರಗಳಿಂದ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗಿಗಳಾದರು. ಶಾಲೆಯ ಬ್ಯಾಂಡ್ ಸೆಟ್ ತಂಡ ಆಕರ್ಷಕ ರೀತಿಯಲ್ಲಿ ಅತಿಥಿಗಳನ್ನು ವೇದಿಕೆಗೆ ಬರಮಾಡಿಕೊಂಡಿತು.

LEAVE A REPLY

Please enter your comment!
Please enter your name here

Hot Topics

ಚಾರ್ಮಾಡಿಯಲ್ಲಿ ಶಿಕಾರಿಗಳ ಗುಂಡೇಟಿಗೆ ಕಡವೆ ಬಲಿ..!

ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ನಿನ್ನೆ ನಡೆದಿದೆ.ಬೆಳ್ತಂಗಡಿ : ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ...

ಸುರತ್ಕಲ್ ‌ಫಾಝಿಲ್ ಕೊಲೆ ಆರೋಪಿಯಿಂದ ಹಣಕ್ಕಾಗಿ ಬೆದರಿಕೆ: ಉಳ್ಳಾಲ ಠಾಣೆಯಲ್ಲಿ ‌ಪ್ರಕರಣ ದಾಖಲು

ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಡೂರು ಬಳಿ ನಡೆದಿದೆ.ಉಳ್ಳಾಲ: ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ...

ಸುರತ್ಕಲ್ ವ್ಯಾಪ್ತಿಯಲ್ಲಿ ಲಘು ಅಪಘಾತ: ಇತ್ತಂಡಗಳ ಮಧ್ಯೆ ಹೊಯ್‌ಕೈ- ಮಾತಿನ ಚಕಮಕಿ..!

ಮಂಗಳೂರು : ಮಂಗಳೂರು ಹೊವಲಯದ  ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್ ಪುರ ಎಂಬಲ್ಲಿ ಬುಧವಾರ ರಾತ್ರಿ ಬೈಕ್- ಕಾರ್ ನಡುವೆ ಲಘು ಅಪಘಾತ ಸಂಭವಿಸಿದ್ದು, ಇದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಕೆಲ ಕಾಲ...