Thursday, September 29, 2022

ಬಿ.ಸಿ ರೋಡಿನ ಬಾನೆತ್ತರದಲ್ಲಿ ಹಾರಾಡಿದ ತ್ರಿವರ್ಣ ಧ್ವಜ

ಬಂಟ್ವಾಳ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಬಂಟ್ವಾಳದ ಬಿ.ಸಿ ರೋಡಿನ ವಿಜಯಲಕ್ಮೀ ಗ್ರೂಪ್ ವತಿಯಿಂದ ಬಾನೆತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಯಿತು.


20×30 ಅಳತೆಯ ರಾಷ್ಟ್ರ ಧ್ವಜವನ್ನು ಕ್ರೇನ್ ಮೂಲಕ ಸುಮಾರು 174 ಅಡಿ ಎತ್ತರದಲ್ಲಿ ಬಾನೆತ್ತರಕ್ಕೆ ಹಾರಾಟ ನಡೆಸಿದ್ದು, ಇದು ಬಂಟ್ವಾಳದ ಜನತೆಯ ಮನಸೂರೆಗೊಂಡಿತು. ಇದೇ ವೇಳೆ ರಾಷ್ಟ್ರ ಗೀತೆ ಮೊಳಗಿದ್ದು,

ಈ ಸಂದರ್ಭದಲ್ಲಿ ಬಿಸಿ ರೋಡಿನಲ್ಲಿ ಎಲ್ಲೆಂದರಲ್ಲಿ ನೆರೆದಿದ್ದ ಜನಸಮೂಹ ನಿಂತ ಸ್ಥಳದಲ್ಲಿಯೇ ಧ್ವಜ ವಂದನೆ ಸಲ್ಲಿಸಿದರು. ಶಾಸಕ ರಾಜೇಶ್ ಉಳಿಪ್ಪಾಡಿಗುತ್ತು ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ‌ತಹಶೀಲ್ದಾರ್ ಡಾ| ಸ್ಮಿತಾರಾಮು, ಡಿ.ವೈ.ಎಸ್.ಪಿ‌.ಪ್ರತಾಪ್ ಸಿಂಗ್ ಥೋರಾಟ್, ವಿಜಯಲಕ್ಮೀ ಗ್ರೂಪ್‌ನ ರಾಘವೇಂದ್ರ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

PFIನ್ನು ಕರ್ನಾಟಕದಲ್ಲಿ ಪೋಷಿಸಿದ್ದು ಕಾಂಗ್ರೆಸ್‌-ಸಚಿವ ಸುನಿಲ್ ವಾಗ್ದಾಳಿ

ಉಡುಪಿ: 'ಪಿಎಫ್‌ಐ ಸಂಘಟನೆಯ ಕಾರ್ಯಕರ್ತರನ್ನು ಕಾಂಗ್ರೆಸ್ ಪೋಷಿಸಿದ್ದೆ ಪಿಎಫ್ ಐ ಇಷ್ಟು ದೊಡ್ಡ ಪ್ರ‌ಮಾಣದಲ್ಲಿ ಕರ್ನಾಟಕದಲ್ಲಿ ಬೆಳೆಯಲು ಕಾರಣವಾಗಿತ್ತು. 175 ಜನರ ಮೇಲೆ ಇದ್ದ ಕೇಸ್ ಅನ್ನು ಸಿದ್ದರಾಮಯ್ಯ ಕಾಲದಲ್ಲಿ ವಾಪಾಸ್ ಪಡೆದಿತ್ತು....

ಪುತ್ತೂರು: PFI ಪ್ರಧಾನ ಕಛೇರಿಗೆ ಬೆಳಿಗ್ಗೆಯಿಂದಲೇ ಬೀಗ-ಗುಪ್ತಸಭೆ ನಡೆಸುತ್ತಿದ್ದ ಆರೋಪ

ಪುತ್ತೂರು: ದೇಶದಾದ್ಯಂತ ಪಿಎಫ್ಐ ಹಾಗೂ ಅದರ ಬೆಂಬಲಿತ ಸಂಘಟನೆಗಳಿಗೆ ಕೇಂದ್ರ ಗೃಹ ಸಚಿವಾಲಯ ನಿಷೇಧ ಹೇರಿರುವ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಪಿಎಫ್ಐ ನ ಪ್ರಧಾನ...

PFI ಬ್ಯಾನ್‌ಗೆ ಕೇಂದ್ರ ಕೊಟ್ಟ ಕಾರಣಗಳೇನು ಗೊತ್ತಾ…?

ಹೊಸದಿಲ್ಲಿ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿ ಇಂದು ಬೆಳಿಗ್ಗೆ ಆದೇಶ ಹೊರಡಿಸಿದ ಬೆನ್ನಲ್ಲೇ ಪಿಎಫ್‌ಐ ಬ್ಯಾನ್‌ಗೆ...