LATEST NEWS
ಉಡುಪಿ ಜಿಲ್ಲೆಯಲ್ಲಿ ಸ್ವಾತಂತ್ರ್ಯೋತ್ಸವ – ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವೆ ಹೆಬ್ಬಾಳಕರ್
ಉಡುಪಿ ಜಿಲ್ಲೆಯ ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಸಮಿತಿಯ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ ನಡೆಯಿತು.
ಉಡುಪಿ: ಉಡುಪಿ ಜಿಲ್ಲೆಯ ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಸಮಿತಿಯ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ ನಡೆಯಿತು.
ಹುತಾತ್ಮರಿಗೆ ಗೌರವ ಸಮರ್ಪಣೆ ಸಲ್ಲಿಸಲಾಯಿತು. ಸಮಾವೇಶದ ಬಳಿಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ದೇಶಭಕ್ತಿ ಗೀತೆ ಪ್ರಸ್ತುತಿಗೊಂಡಿತು.
ಜಿಲ್ಲಾ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅತಿಥಿ ಗಣ್ಯರ ಸುಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸಿ ಶುಭ ಸಂದೇಶ ನೀಡಿದರು.
ಗೌರವ ಸ್ವೀಕಾರ ಬಳಿಕ ಪಥ ಸಂಚಲನ ನಡೆಯಿತು.
ಪಥಸಂಚಲನ ವಿಸರ್ಜನೆಯ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಉಡುಪಿ ಶಾಸಕರಾದ ಯಶಪಾಲ್ ಸುವರ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೇಂದ್ರ ಹಾಕೆ ಸೇರಿದಂತೆ ಇನ್ನಿತರ ಹಲವಾರು ಮಂದಿ ಅತಿಥಿ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
LATEST NEWS
ಸಾಫ್ಟ್‌ವೇರ್ ಇಂಜಿನಿಯರ್‌ಗೆ ಹೃದಯಾಘಾತ ; 29ರ ಹರೆಯದ ಆದಿತ್ಯ ಭಟ್ ವಿಧಿವಶ
ಉಜಿರೆ: ಅತ್ತಾಜೆಯ ರಮೇಶ್ ಭಟ್ ಮತ್ತು ಶಾರದಾ ದಂಪತಿ ಪುತ್ರ 29ರ ಹರೆಯದ ಆದಿತ್ಯ ಭಟ್ ಎಂಬವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅಕ್ಟೋಬರ್ 11ರಂದು ಮನೆಯಲ್ಲಿ ನಡೆಯ ಆಯುಧ ಪೂಜೆಯ ಸಂಭ್ರಮದಲ್ಲಿ ಸಂಪೂರ್ಣ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಆದಿತ್ಯಗೆ ಎದೆನೋವು ಕಾಣಿಸಿಕೊಂಡ ನಂತರ ಹೃದಯಾಘಾತವಾಗಿದೆ.
ಇದನ್ನೂ ಓದಿ : ಸುರತ್ಕಲ್: ರಸ್ತೆ ಕಾಮಗಾರಿಗೆ ಅಗೆದಿದ್ದ ಹೊಂಡಕ್ಕೆ ಬಿದ್ದ ಸವಾರ !!!
ಪ್ರತಿಭಾನ್ವಿತರಾಗಿದ್ದ ಅದಿತ್ಯ ರವರು ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದು ಜರ್ಮನಿಯಲ್ಲಿ ತನ್ನದೇ ಸ್ಪಾರ್ಟ್ ಅಪ್ ಕಂಪೆನಿ ಮುನ್ನಡೆಸುತ್ತಿದ್ದರು. ಇವರು ತಂದೆ ರಮೇಶ್ ಭಟ್, ತಾಯಿ ಶಾರದಾ ಹಾಗೂ ಸಹೋದರಿ ಹಾಗೂ ಕುಟುಂಬ ವರ್ಗವನ್ನು ಅಗಲಿದ್ದಾರೆ.
LATEST NEWS
ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಎಕ್ಸ್‌ಪ್ರೆಸ್ ರೈಲು; ಬೋಗಿಗಳಲ್ಲಿ ಬೆಂಕಿಯಬ್ಬರ !!!!
ಮಂಗಳೂರು/ತಮಿಳುನಾಡು: ಮೈಸೂರಿನಿಂದ ದರ್ಭಾಂಗಕ್ಕೆ ಹೋಗುತ್ತಿದ್ದ ಬಾಗ್ಮತಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಘಟನೆ ನಿನ್ನೆ (ಅ.11) ರಾತ್ರಿ 8.30 ರ ಸುಮಾರಿಗೆ ತಮಿಳುನಾಡಿನ ಕವರೈಪೆಟ್ಟೈ ಎಂಬಲ್ಲಿ ನಡೆದಿದೆ.
ಕವರೈಪೆಟ್ಟೈ ನಿಲ್ಧಾಣಕ್ಕೆ ಎಕ್ಸ್‌ಪ್ರೆಸ್ ರೈಲು ಪ್ರವೇಶಿಸುವಾಗ ಹಳಿ ಬದಲಾವಣೆಯಾಗಿ ಲೂಪ್ ಲೈನನ್‌ಗೆ ಸ್ಥಳಾಂತರಗೊಂಡಿದ್ದ ಪರಿಣಾಮದಿಂದಾಗಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ರೈಲಿನ ಪಾರ್ಸೆಲ್ ವ್ಯಾನ್‌ಗೆ ಬೆಂಕಿ ಹೊತ್ತಿಕೊಂಡಿದ್ದು, 12-13 ಭೋಗಿಗಳು ಹಳಿತಪ್ಪಿದೆ. ಆ ಭಾಗದಲ್ಲಿ ರೈಲು ಸಂಚಾರ ಮುಚ್ಚಲಾಗಿದ್ದು , ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ.
ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ಮೇಲೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ನಿಗಾ ವಹಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಚೆನ್ನೈನ ಸರ್ಕಾರಿ ಸ್ಟಾನ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಚಿವ ಅವಧಿ ನೇಸರ್ ಹಾಗೂ ಉನ್ನತ ಅಧಿಕಾರಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮೈಸೂರು-ದರ್ಭಾಂಗ ಭಾಗಮತಿ ಎಕ್ಸ್‌ಪ್ರೆಸ್‌ನಲ್ಲಿದ್ದ ಪ್ರಯಾಣಿಕರಿಗೆ ಪ್ರಯಾಣ ಮುಂದುವರೆಸಲು ಮತ್ತೊಂದು ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದ್ದು, ಇಂದು (ಅ.12) ಮುಂಜಾನೆ ಚೆನ್ನೈ ಸೆಂಟ್ರಲ್ ರೈಲು ನಿಲ್ಧಾಣದಿಂದ ಬೆಳಿಗ್ಗೆ 4.45 ರ ಸುಮಾರಿಗೆ ಹೊರಟಿತು. ಪ್ರಯಾಣಿಕರಿಗೆ ಅಹಾರ ಹಾಗೂ ನೀರಿನ್ನು ಒದಗಿಸಲಾಗಿತ್ತು.
ಎನ್‌ಡಿಆರ್‌ಎಫ್ ತಂಡ ಹಾಗೂ ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
chikkamagaluru
ಮುಳ್ಳಯ್ಯನಗಿರಿಯಲ್ಲಿ ಪ್ರಪಾತಕ್ಕೆ ಉರುಳಿದ ಕಾರು..!
ಚಿಕ್ಕಮಗಳೂರು : ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಿರುವಿನಲ್ಲಿ ಪ್ರವಾಸಿಗರ ಕಾರೊಂದು ಪ್ರಪಾತಕ್ಕೆ ಉರುಳಿ ಬಿದ್ದಿದೆ. ಸುಮಾರು 250 ಅಡಿ ಆಳದ ಪ್ರಪಾತಕ್ಕೆ ಕಾರು ಉರುಳಿ ಬಿದ್ದಿದ್ದು, ಪ್ರಯಾಣಿಕರು ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಕಾರಿನಲ್ಲಿ ಹೈದರಾಬಾದ್ ಮೂಲದ ಐವರು ಪ್ರವಾಸಿಗರು ಮುಳ್ಳಯ್ಯನಗಿರಿ ವೀಕ್ಷಣೆಗೆ ಬಂದಿದ್ದರು. ಕಡಿದಾದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪ್ರಪಾತಕ್ಕೆ ಉರುಳಿ ಬಿದ್ದಿದೆ. ತಕ್ಷಣ ಘಟನೆ ವೀಕ್ಷಿಸಿದ ಕೆಲವರು ಪ್ರಪಾತಕ್ಕೆ ಬಿದ್ದಿದ್ದ ಪ್ರವಾಸಿಗರನ್ನು ಕಾರಿನಿಂದ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗಾಯಾಳುಗಳನ್ನು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯ ವ್ಯಾಪ್ತಿಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- LATEST NEWS6 days ago
ಶಿಕ್ಷಕಿಯ ಅ*ಶ್ಲೀಲ ವಿಡಿಯೋ ಹಂಚಿಕೆ; ನಾಲ್ವರು ವಿದ್ಯಾರ್ಥಿಗಳ ಬಂಧನ
- FILM4 days ago
ಎರಡನೇ ಮದುವೆಯಾಗುತ್ತಿರುವ ಬಿಗ್ಬಾಸ್ ಕಂಟೆಸ್ಟೆಂಟ್
- BIG BOSS7 days ago
ಮಹಿಳೆಯರ ಒಳ ಉಡುಪಿನ ಬಗ್ಗೆ ಲಾಯರ್ ಜಗದೀಶ್ ಮಾತು.. ಏನಿದು ವಿವಾದ?
- DAKSHINA KANNADA5 days ago
ಮಂಗಳೂರು : ರಾತ್ರಿ ಹೊತ್ತಲ್ಲಿ ಯುವಕನ ಬೆತ್ತಲೆ ಓಡಾಟ; ಭಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರು