Thursday, April 22, 2021

ಕೊರೊನಾ 2ನೇ ಅಲೆಯಿಂದ ತತ್ತರಿಸಿದ ಭಾರತ- ಪ್ರತಿ ದಿನ ಲಕ್ಷ ಜನರಿಗೆ ಕೊರೊನಾ ಸೋಂಕು..!

ನವದೆಹಲಿ : ಭಾರತದಲ್ಲಿ ಕೊರೊನಾ ದಿನದಿಂದ ದಿನಕ್ಕೇ ಏರುತ್ತಲೇ ಇದ್ದು ಪ್ರತಿದಿನ ಸರಾಸರಿ ಒಂದು ಲಕ್ಷ ಜನರು ಕೊರೊನಾ ಸೋಂಕಿಗೆ ಒಳಗಾಗುತ್ತಿದ್ದಾರೆ.

ಕರ್ನಾಟಕ ಸೇರಿದಂತೆ ದೇಶದ 8 ರಾಜ್ಯಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ತೀವ್ರಗತಿಯಲ್ಲಿ ಏರುತ್ತಿರುವುದು ಕಳವಳ ತಂದಿದೆ.

ಜೊತೆಗೆ ನೆರೆಯ ಮಹಾರಾಷ್ಟ್ರ, ತಮಿಳುನಾಡು,ಚತ್ತೀಸ್​ಗಢ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಂಜಾಬ್ ರಾಜ್ಯಗಳಲ್ಲೂ ಕೊರೋನಾ ಏರುಗತಿಯಲ್ಲಿದೆ.

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 93,249 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಈ ಮೂಲಕ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 1,24,85,509ಕ್ಕೆ ಏರಿಕೆಯಾದಂತಾಗಿದೆ. ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ಕೊರೊನಾಗೆ 513 ಜನರು ಬಲಿಯಾಗಿದ್ದಾರೆ.

ಈ ಮೂಲಕ ಈವರೆಗೆ ಕೊರೊನಾ ಸೋಂಕು ತಗುಲಿ ಮೃತಪಟ್ಟ ಭಾರತೀಯರ ಸಂಖ್ಯೆ 1,64,623ನ್ನು ತಲುಪಿದೆ. ಅದಗ್ಯೂ ಇದುವರೆಗೆ ಕೊವಿಡ್​ನಿಂದ 1,16,29,289 ಜನರು ಗುಣಮುಖರಾಗಿದ್ದಾರೆ,

ಸದ್ಯ ದೇಶದಲ್ಲಿ ಇರುವ ಸಕ್ರಿಯ ಪ್ರಕರಣಗಳ ಸಂಖ್ಯೆ 6,91,597. ಕೊವಿಡ್ ಲಸಿಕೆ ವಿತರಣೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಭಾರತದಲ್ಲಿ ಈವರೆಗೆ 7,59,79,651 ಜನರಿಗೆ ಕೊವಿಡ್ ಲಸಿಕೆ ನೀಡಲಾಗಿದೆ.

ಕೊರೊನಾದಿಂದ ಗುಣಮುಖರಾಗುವ ರಾಷ್ಟ್ರೀಯ ಶೇಕಡಾ ಪ್ರಮಾಣ 93.14ಕ್ಕೆ ಕುಸಿದಿದೆ.

ಕೊವಿಡ್​ ಲಸಿಕೆಗೆ ಹೆಸರು ನೋಂದಣಿ ಪ್ರಕ್ರಿಯೆ ತಡೆಹಿಡಿಯಲು ರಾಜ್ಯಸರ್ಕಾರಗಳಿಗೆ ಕೇಂದ್ರ ಸೂಚನೆ :
ಕೊವಿಡ್ ಲಸಿಕೆ ಪಡೆಯಲು ಆರೋಗ್ಯ ಕಾರ್ಯಕರ್ತರು ಹಾಗೂ ಫ್ರಂಟ್‌ಲೈನ್ ವಾರಿಯರ್ಸ್‌ ಹೆಸರು ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಆರೋಗ್ಯ, ಕುಟುಂಬ ಕಲ್ಯಾಣ ಸಚಿವಾಲಯದಿಂದ ರಾಜ್ಯ ಸರ್ಕಾರಗಳಿಗೆ ಸೂಚನೆ ಬಂದಿದೆ.

ಈ ಹಿನ್ನೆಲೆಯಲ್ಲಿ ಸದ್ಯ ಆರೋಗ್ಯ ಕಾರ್ಯಕರ್ತರು ಹಾಗೂ ಫ್ರಂಟ್​ಲೈನ್​ ವಾರಿಯರ್ಸ್​ಗಳಿಗೆ ಲಸಿಕೆ ಪಡೆಯಲು ಅವಕಾಶದಿಂದ ವಂಚಿತರಾಗುವ ಸಾಧ್ಯತೆಗಳಿವೆ.

ಫ್ರಂಟ್​ಲೈನ್​ ವಾರಿಯರ್ಸ್​ ಹೆಸರಲ್ಲಿ ಬೇರೆಯವರು ಹೆಸರು ನೋಂದಣಿ ಮಾಡಿಕೊಳ್ಳುತ್ತಿದ್ದ ಕಾರಣ ಪ್ರಕ್ರಿಯೆಯನ್ನು ತಡೆಯಲಾಗಿದೆ.

ಆರೋಗ್ಯ ಕಾರ್ಯಕರ್ತರು ಹಾಗೂ ಫ್ರಂಟ್‌ಲೈನ್ ವಾರಿಯರ್ಸ್ ಹೆಸರಿನಲ್ಲಿ ಜನರು ಲಸಿಕೆ ಪಡೆಯಲು ನೋಂದಣಿ ಮಾಡಿಕೊಳ್ಳುತ್ತಿದ್ದ ಪರಿಣಾಮ ಈ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...