Wednesday, December 1, 2021

ಭಾರತ-ಪಾಕಿಸ್ತಾನ ಕ್ರಿಕೇಟ್ ಪಂದ್ಯಾಟದಲ್ಲಿ ಭಾರತಕ್ಕೆ ಹೀನಾಯ ಸೋಲು: ಕೊಡಗಿನ ವ್ಯಕ್ತಿ ಹೃದಯಾಘಾತದಿಂದ ಸಾವು

ಮಡಿಕೇರಿ: ನಿನ್ನೆ ನಡೆದ ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಸೋತ ಹಿನ್ನೆಲೆಯಲ್ಲಿ ಸೋಮವಾರಪೇಟೆ ತಾಲೂಕಿನ ದೊಡ್ಡಮಳ್ತೆ ಗ್ರಾಮದಲ್ಲಿ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ದೊಡ್ಡಮಳ್ತೆ ಗ್ರಾಮದ ಅಣ್ಣಯ್ಯಗೌಡ ಅವರ ಪುತ್ರ ಡಿ.ಎ.ಉದಯ(55) ಮೃತಪಟ್ಟವರು. ನಿನ್ನೆ ರಾತ್ರಿ ಟಿವಿಯಲ್ಲಿ ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದಾಗ ಭಾರತ ಸೋತ ಹತ್ತು ನಿಮಿಷದಲ್ಲೇ ಮನೆಯಲ್ಲೇ ತೀವ್ರವಾಗಿ ಹೃದಯಾಘಾತವಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.

ತಕ್ಷಣ ಉದಯ ಅವರನ್ನು ಮನೆಯಲ್ಲಿ ಇದ್ದ ಕುಟುಂಬದ ಸದಸ್ಯರು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದ್ದಾರೆ.

ಆದರೆ ಮಾರ್ಗ ಮದ್ಯೆಯೇ ಉದಯ ಅವರು ಮೃತಪಟ್ಟಿರುವ ಬಗ್ಗೆ ಸೋಮವಾರಪೇಟೆ ಅಸ್ಪತ್ರೆಯ ವೈದ್ಯರು ದೃಢಪಡಿಸಿದ್ದಾರೆ.

ಟೀಂ ಇಡಿಯಾದ ಅಭಿಮಾನಿ ಹಾಗೂ ಕಾಫಿ ಬೆಳೆಗಾರರಾಗಿದ್ದರು ಉದಯ ರವರ ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...