Friday, August 12, 2022

ಸೌದಿ ಅರೇಬಿಯಾ: ಹಜ್‌ ಯಾತ್ರಿಗಳ ಸೇವೆಯಲ್ಲಿ ಇಂಡಿಯಾ ಫ್ರೆಟರ್ನಿಟಿ ಫೋರಂ(I.F.F.)

ರಿಯಾದ್‌: ಕೊಲ್ಲಿ ರಾಷ್ಟ್ರದಲ್ಲಿ ನಿರಂತರವಾಗಿ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಇಂಡಿಯ ಫ್ರೆಟರ್ನಿಟಿ ಫೋರಂ (ಐ.ಎಫ್.ಎಫ್) ಪ್ರತೀ ವರ್ಷದಂತೆ ಈ ವರ್ಷವೂ ಹಜ್‌ ಯಾತ್ರಾರ್ಥಿಗಳ ಸೇವೆಯಲ್ಲಿ ಸಕ್ರಿಯವಾಗಿದೆ.


2022 ರ ಹಜ್‌ಗೆ ಈಗಾಗಲೇ ಭಾರತದಿಂದ ಎಪ್ಪತ್ತು ಸಾವಿರದಷ್ಟು ಯಾತ್ರಾರ್ಥಿಗಳು ಮೆಕ್ಕಾ ಪ್ರವೇಶಿಸಿದ್ದಾರೆ. ಇಂಡಿಯನ್ ಫ್ರೆಟರ್ನಿಟಿ ಫೋರಮ್(IFF) ಕಳೆದ ಇಪ್ಪತು ವರ್ಷದಿಂದ ನಿರಂತರವಾಗಿ ಮದೀನಾ, ಮೆಕ್ಕಾ, ಅಝೀಝಿಯಾ, ಮಿನಾ ಹಾಗೂ ಅರಫಾ ಪ್ರದೇಶಗಳಲ್ಲಿ ಹಾಜಿಗಳ ಸೇವೆ ಸಲ್ಲಿಸುತ್ತಾ ಬಂದಿದೆ.
ಈ ಬಾರಿ ಅಝೀಝಿಯಾದ ಯಾತ್ರಾರ್ಥಿಗಳ ವಾಸ ಸ್ಥಳದಿಂದ ಪವಿತ್ರ ಹರಮ್‌ಗೆ ಜುಮಾ ನಮಾಝ್‌ಗೆ ಬರುವಂತಹ ಯಾತ್ರಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಅವರ ವಾಸಸ್ಥಳಕ್ಕೆ ತಲುಪಿಸುಂತಹ ವ್ಯವಸ್ಥೆಗಳನ್ನು ಮಾಡುತ್ತಿದೆ. ಅದೇ ರೀತಿ ಹರಂ ನಿಂದ ಅಶಕ್ತ ಯಾತ್ರಾರ್ಥಿಗಳ ಮಾನವೀಯ ಸೇವೆಯಲ್ಲಿ ನಿರತರಾಗಿದ್ದಾರೆ.


ಅಲ್ಲದೇ ಅಝೀಝಿಯಾದಲ್ಲಿ ಕೆಲವು ಹಾಜಿಗಳಿಗೆ ಫಲಹಾರ, ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಮಹಿಳಾ ಹಾಜಿಗಳಿಗೆ ಬೇಕಾಗಿ ಸೇವೆ ಮಾಡಲು ಮಹಿಳಾ ಸ್ವಯಂ ಸೇವಕರೂ ಕೂಡ ಸೇವೆಯಲ್ಲಿ ನಿರತರಾಗಿದ್ದಾರೆ.

ಜೊತೆಗೆ ದಿನದ 24 ಗಂಟೆಯೂ‌ ಹಾಜಿಗಳ‌ ಸೇವೆಗೆ ನಮ್ಮ ತಂಡ ನಿರಂತರ ಸನ್ನದ್ದವಾಗಿದೆಯೆಂದು ಇಂಡಿಯ ಫ್ರೆಟರ್ನಿಟಿ ಫೋರಂ IFF ತಂಡದ ವೈಸ್ ಕ್ಯಾಪ್ಟನ್ ಆಗಿರುವ ಶಾಕಿರ್ ಹಕ್ ನೆಲ್ಯಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಶರತ್ ಮಡಿವಾಳ ಹತ್ಯೆಗೆ 5 ವರ್ಷ : ಇನ್ನೂ ಸಿಕ್ಕಿಲ್ಲ ಓರ್ವ ಆರೋಪಿ- ಅರೆಸ್ಟಾದವರೆಲ್ಲರೂ ರಿಲೀಸ್..!

ವಿಶೇಷ ವರದಿಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಹಾಗೂ ರಾಜ್ಯ ರಾಜಕೀಯ ಇತಿಹಾಸದಲ್ಲಿ ಹಲವರನ್ನು ಮನೆಗೆ ಕಳುಹಿಸಿ ಮತ್ತೆ ಕೆಲವರನ್ನು ವಿಧಾನಸಭೆಯ ಮೊಗಸಾಲೆಗೆ ಕಳುಹಿಸಿದ್ದ ಬಂಟ್ವಾಳ ಶರತ್ ಮಡಿವಾಳ ಕೊಲೆ ಪ್ರಕರಣ ನಡೆದು ಐದು...

ಉಡುಪಿ: ಮನೆಯ ಹಿಂಬಾಗಿಲು ಒಡೆದು ಚಿನ್ನಾಭರಣ ಕಳವು-ಆರೋಪಿ ಅಂದರ್

ಉಡುಪಿ: ಮನೆಯ ಹಿಂಬಾಗಿಲು ಒಡೆದು ಚಿನ್ನಾಭರಣ ಮತ್ತು ನಗದನ್ನು ಕಳವು ಮಾಡಿದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.ಕುಂಬಾಸಿ ವಿನಾಯಕ ನಗರ ನಿವಾಸಿ ಸುಭಾಷ್ ಚಂದ್ರ ಆಚಾರ್ಯ (40) ಬಂಧಿತ ಆರೋಪಿ. ಇವರು ಮೂಲತಃ ಮರವಂತೆಯ...

ಮಂಗಳೂರಿನಲ್ಲಿರುವ ರಸ್ತೆ ಹೊಂಡ ಗುಂಡಿಗಳ ವಿರುದ್ಧ patholeseazaadi ಅಭಿಯಾನ

ಮಂಗಳೂರು: ನಗರದ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್ ಬಳಿ ಕಳೆದ ಆ.5 ರಂದು ರಸ್ತೆ ಗುಂಡಿ ತಪ್ಪಿಸಲು ಹೋಗಿ ಎಂಜಿನಿಯರಿಂಗ್‌ ವಿದ್ಯಾರ್ಥಿ ಆತಿಶ್ (20) ಮೃತಪಟ್ಟ ನಂತರ ರಾಷ್ಟ್ರೀಯ ಹೆದ್ದಾರಿ ಸಹಿತ ಮಂಗಳೂರು ನಗರದಲ್ಲಿರುವ...