Connect with us

    LATEST NEWS

    ಹಕ್ಕಿಜ್ವರಕ್ಕೆ ದೇಶದಲ್ಲಿ ಮೊದಲ ಬಲಿ: H5N1 ವೈರಸ್ ಸೋಂಕಿಗೆ 11 ವರ್ಷದ ಬಾಲಕ ಸಾವು..!

    Published

    on

    ನವದೆಹಲಿ: ಕೊರೋನಾ 2ನೇ ಅಲೆಯಿಂದ ಭಾರತ ಈಗಷ್ಟೇ ಸುಧಾರಿಸಿಕೊಳ್ಳುತ್ತಿದ್ದು, ಅದಾಗಲೇ ಮೂರನೇ ಅಲೆ  ಆರಂಭವಾಗಿದೆ. ಈ ಮಧ್ಯೆ ಕೆಲ ದಿನಗಳಿಂದ ಆತಂಕ ಹುಟ್ಟಿಸಿದ್ದ ಹಕ್ಕಿ ಜ್ವರಕ್ಕೆ ದೇಶದಲ್ಲಿ ಮೊದಲ ಬಲಿಯಾಗಿದೆ.

    ದೆಹಲಿಯ ಏಮ್ಸ್​ನಲ್ಲಿ ಹಕ್ಕಿ ಜ್ವರಕ್ಕೆ ಚಿಕಿತ್ಸೆ ಪಡೆಯುತ್ತಿದ್ದ 11 ವರ್ಷದ ಬಾಲಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದು ಈ ವರ್ಷ ಹಕ್ಕಿ ಜ್ವರದಿಂದ ಸಾವನ್ನಪ್ಪಿದ ದೇಶದ ಮೊದಲ ಪ್ರಕರಣವಾಗಿದೆ.

    ದೆಹಲಿಯ ಆಲ್​ ಇಂಡಿಯಾ ಇನ್​ಸ್ಟಿಟ್ಯೂಟ್ ಆಫ್​ ಮೆಡಿಕಲ್ ಸೈನ್ಸ್​ (ಏಮ್ಸ್)ನಲ್ಲಿ ಹಕ್ಕಿಜ್ವರದಿಂದ ಬಾಲಕ ಸಾವನ್ನಪ್ಪಿದ್ದು, ಆತಂಕವನ್ನು ಹೆಚ್ಚಿಸಿದೆ.

    ಏಮ್ಸ್​ನ ಮಕ್ಕಳ ವಿಭಾಗದಲ್ಲಿ ದಾಖಲಾಗಿದ್ದ ಬಾಲಕನಿಗೆ ಕಳೆದ ಕೆಲವು ದಿನಗಳಿಂದಲೂ ಹೆಚ್5ಎನ್1(ಹಕ್ಕಿಜ್ವರ)ಕ್ಕೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ.

    ಹರ್ಯಾಣದ ಈ ಬಾಲಕನನ್ನು ಅಧಿಕ ಜ್ವರ ಮತ್ತು ಕಫದ ಕಾರಣದಿಂದ 10 ದಿನಗಳ ಹಿಂದೆ ಏಮ್ಸ್’ಗೆ ದಾಖಲಿಸಲಾಗಿತ್ತು.

    ಮೊದಲಿಗೆ ಬಾಲಕನ ಪರಿಶೀಲಿಸಿದ ವೈದ್ಯರು, ಕೋವಿಡ್-19 ಸೋಂಕು ತಗುಲಿರಬೇಕು ಎಂದು ಚಿಂತಿಸಿದ್ದರು. ಆದರೆ ಪರೀಕ್ಷೆ ನಡೆಸಿದ ವೇಳೆ ವೈದ್ಯಕೀಯ ವರದಿ ನೆಗೆಟಿವ್ ಎಂದು ಬಂದಿತ್ತು.

    ನಂತರ ಆಳವಾದ ಸಂಶೋಧನೆ ಕೈಗೊಂಡಾಗ ಹಕ್ಕಿಜ್ವರಕ್ಕೆ ಕಾರಣವಾಗುವ ಇನ್‍ಫ್ಲುಯೆಂಜಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು ಎಂದು ಮೂಲಗಳು ಮಾಹಿತಿ ನೀಡಿವೆ.

    ಕಳೆದ ಹದಿನೈದು ವರ್ಷಗಳಿಂದ ಭಾರತದಲ್ಲಿ ಹಕ್ಕಿಜ್ವರ ಕಾಣಿಸಿಕೊಳ್ಳುತ್ತಿದ್ದು, ಮುಖ್ಯವಾಗಿ ಕೋಳಿಗಳನ್ನು ಬಾಧಿಸುತ್ತಿದೆ.

    ಆದಾಗ್ಯೂ ಈ ರೋಗದಿಂದ ಮನುಷ್ಯರು ಮೃತಪಟ್ಟಿರುವ ನಿದರ್ಶನ ಇದುವರೆಗೆ ವರದಿಯಾಗಿರಲಿಲ್ಲ. ಇದೀಗ ಹಕ್ಕಿ ಜ್ವರದಿಂದ ಬಾಲಕ ಮೃತಪಟ್ಟಿರುವುದು ಸಾರ್ವಜನಿಕ ಆರೋಗ್ಯ ತಜ್ಞರಿಗೆ ಎಚ್ಚರಿಕೆ ಸಂದೇಶ ರವಾನೆಯಾದಂತಾಗಿದೆ.

    ಏವಿಯನ್​ ಇನ್​ಫ್ಲ್ಯೂಯೆಂಜಾ, ಹೆಚ್5ಎನ್1 ವೈರಸ್​ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವುದರೊಂದಿಗೆ ಮನುಷ್ಯರಿಗೂ ತಗುಲುತ್ತದೆ. ಹಾಗೇ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಇನ್ನು ಹಕ್ಕಿ ಜ್ವರ ಮನುಷ್ಯನಿಗೆ ತಗುಲುವುದು ತೀರ ಅಪರೂಪ. ಆದರೆ ಹಾಗೊಮ್ಮೆ ಕಾಣಿಸಿಕೊಂಡರೆ ಸಾವಿನ ಸಾಧ್ಯತೆ ಶೇ. 60ರಷ್ಟು ಇರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

    ಹಕ್ಕಿಗಳ ಸಂಪರ್ಕಕ್ಕೆ ಬರುವ ಇತರ ಪ್ರಾಣಿಗಳು ಮತ್ತು ಮನುಷ್ಯರಿಗೆ ಈ ಸೋಂಕು ಹರಡುತ್ತದೆ. ಇದು ಸಾಂಕ್ರಾಮಿಕವಾಗಿರುವುದರಿಂದ ಸಹಜವಾಗಿಯೇ ಆತಂಕಕ್ಕೆ ಹೆಚ್ಚಾಗುವಂತೆ ಮಾಡಿದೆ. ಆದರೆ, ಸೂಕ್ತ ಮುತುವರ್ಜಿ ವಹಿಸಿದರೆ ಪ್ರಾಣಾಪಾಯ ಎದುರಾಗದಂತೆ ತಡೆಯಬಹುದಾಗಿದೆ.

    LATEST NEWS

    ಮಹಾರಾಷ್ಟ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಖಾತೆ ?

    Published

    on

    ಮಂಗಳೂರು/ಮುಂಬೈ: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ನೇತೃತ್ವದ ಸಂಪುಟದ ಸಚಿವರಿಗೆ ಶನಿವಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.

    ಗೃಹ ಖಾತೆಯ ಜೊತೆಗೆ ಇಂಧನ, ಕಾನೂನು ಮತ್ತು ನ್ಯಾಯಾಂಗ, ಸಿಬ್ಬಂದಿ ಆಡಳಿತ, ವಾರ್ತಾ ಮತ್ತು ಪ್ರಚಾರ ಇಲಾಖೆಯ ಖಾತೆಗಳನ್ನು ಸಿಎಂ ದೇವೇಂದ್ರ ಫಡ್ನವೀಸ್ ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ.

    ಉಪಮುಖ್ಯಮಂತ್ರಿ ಏಕನಾಥ ಶಿಂದೆ ಅವರಿಗೆ ನಗರಾಭಿವೃದ್ದಿ, ವಸತಿ ಮತ್ತು ಲೋಕೋಪಯೋಗಿ ಖಾತೆಗಳು ಹಂಚಿಕೆಯಾಗಿದ್ದರೆ, ಮತ್ತೋರ್ವ ಉಪ ಮುಖ್ಯಮಂತ್ರಿ ಅಜಿತ್ ಪವರ್ ಅವರಿಗೆ ಹಣಕಾಸು ಮತ್ತು ಯೋಜನೆ ಹಾಗೂ ಅಬಕಾರಿ ಖಾತೆ ಹಂಚಿಕೆಯಾಗಿವೆ.

    ಇದನ್ನೂ ಓದಿ: ತೆಲಂಗಾಣ ಸರ್ಕಾರದಿಂದ ಟಾಲಿವುಡ್‌ಗೆ ಭಾರೀ ದೊಡ್ಡ ಹೊಡೆತ !!

    ಉಳಿದಂತೆ ಉದಯ್ ಸಾಮಂತ್ ಅವರಿಗೆ ಕೈಗಾರಿಕೆ, ಪಂಕಜಾ ಮುಂಡೆ ಅವರಿಗೆ ಪರಿಸರ, ಮಾಣಿಕ್ರಾವ್ ಕೊಕಾಟೆ ಅವರಿಗೆ ಕೃಷಿ ಖಾತೆಗಳನ್ನು ನೀಡಲಾಗಿದೆ. ಧನಂಜಯ್ ಮುಂಡೆ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಅಶೋಕ್ ಅವರಿಗೆ ಬುಡಕಟ್ಟು ಅಭಿವೃದ್ದಿ, ಆಶಿಶ್ ಶೆಲಾರ್ ಅವರಿಗೆ ಐಟಿ ಮತ್ತು ಸಂಸ್ಕೃತಿ ಇಲಾಖೆಯ ಉಸ್ತುವಾರಿ ವಹಿಸಲಾಗಿದೆ.

    ಇನ್ನೂ ಬಿಜೆಪಿಯ ಚಂದ್ರಶೇಖರ್ ಬಾವಂಕುಲೆಗೆ ಕಂದಾಯ, ಶಿವಸೇನೆಯ ದಾದಾಜಿ ಭುಸೆಗೆ ಶಾಲಾ ಶಿಕ್ಷಣ ಖಾತೆ ನೀಡಲಾಗಿದೆ. ಜಲಸಂಪನ್ಮೂಲ ಖಾತೆಯನ್ನು ಬಿಜೆಪಿಯ ಇಬ್ಬರು ಸಚಿವರುಗಳಾದ ರಾಧಾಕೃಷ್ಣ ವಿಖೆ ಪಾಟೇಲ್ ಮತ್ತು ಗಿರೀಶ್ ಮಹಾಜನ್ ನಡುವೆ ಹಂಚಿಕೆ ಮಾಡಲಾಗಿದೆ.

    ಡಿಸೆಂಬರ್ 5ರಂದು ಫಡ್ನವೀಸ್, ಏಕನಾಥ ಶಿಂಧೆ, ಅಜಿತ್ ಪವರ್ ಸಿಎಂ, ಡಿಸಿಎಂಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಡಿಸೆಂಬರ್ 15 ರಂದು 39 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

     

     

    Continue Reading

    LATEST NEWS

    ಬಾಂಗ್ಲಾ ಹಿಂದೂಗಳ ಮೇಲೆ ದಾ*ಳಿ ; ಭಾರತೀಯರ ಮುಗಿಸಲು ಉ*ಗ್ರರ ಸಂಚು!

    Published

    on

    ಮಂಗಳೂರು/ಕೋಲ್ಕತಾ: ದೇಗುಲಗಳ ಮೇಲೆ, ಹಿಂದೂಗಳ ಮೇಲೆ ಅಲ್ಲಿನ ಮ*ತಾಂಧರು ದಾಳಿ ನಡೆಸುತ್ತಿರುವ ಘಟನೆ ಬಾಂಗ್ಲಾದೇಶದಲ್ಲಿ ನಡೆಯುತ್ತಿದ್ದು, ಇದೀಗ ನಿಷೇಧಿತ ಉ*ಗ್ರ ಸಂಘಟನೆಯೊಂದು ಭಾರತದೊಳಗೆ ನುಗ್ಗಿ ಹಿಂದೂ ನಾಯಕರ ಹ*ತ್ಯೆ ಮತ್ತು ರಸ್ತೆ ಕಾರಿಡಾರ್‌ ಸ್ಫೋ*ಟದ ಮೂಲಕ ಆರ್ಥಿಕ ವಿನಾಶಕ್ಕೆ ಸಂಚು ರೂಪಿಸುತ್ತಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

    ಕಳೆದ ಕೆಲ ಹಿಂದೆ ಪಶ್ಚಿಮ ಬಂಗಾಳ, ಕೇರಳ ಮತ್ತು ಅಸ್ಸಾಂನಲ್ಲಿ ಬಾಂಗ್ಲಾದೇಶ ಮೂಲದ ಅನ್ಸರ್‌ ಅಲ್‌ ಇಸ್ಲಾಂ ಸಂಘಟನೆಗೆ ಸೇರಿದ 8 ಶಂಕಿತ ಉ*ಗ್ರರನ್ನು ಬಂಧಿಸಲಾಗಿತ್ತು. ಈಶಾನ್ಯ ರಾಜ್ಯಗಳಲ್ಲಿನ ಪ್ರಮುಖ ಹಿಂದೂ ನಾಯಕರ ಹ*ತ್ಯೆಯ ಉದ್ದೇಶವನ್ನು ಉ*ಗ್ರರು ಹೊಂದಿದ್ದಾರೆ. ಜೊತೆಗೆ ಪಶ್ಚಿಮ ಬಂಗಾಳದ ಸಿಲಿಗುರಿಗೆ ಈಶಾನ್ಯ ರಾಜ್ಯಗಳ ನಂಟು ಬೆಸೆಯುವ ‘ಚಿಕನ್‌ ನೆಕ್‌’ ಎಂದು ಕರೆಯಲಾಗುವ ಸಿಲಿಗುರಿ ಕಾರಿಡಾರ್‌ ರಸ್ತೆ ಸ್ಫೋ*ಟಗೊಳಿಸುವ ಮೂಲಕ ಇಡೀ ಪ್ರದೇಶದಲ್ಲಿ ಅ*ಸ್ಥಿರತೆ ಸೃಷ್ಟಿಸಲು ಯತ್ನಿಸಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ. ಇದು ಈಶಾನ್ಯ ರಾಜ್ಯಗಳಿಗೆ ಭಾರತವನ್ನು ಬೆಸೆಯುವ ಏಕೈಕ ರಸ್ತೆ ಮಾರ್ಗವಾಗಿದೆ.

    ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವಧಿಯಲ್ಲಿ ನಡೆದಿದ್ದ ಬಾಂಗ್ಲಾ ಪ್ರಜೆಗಳ ಬಲವಂತದ ನಾ*ಪತ್ತೆ ಹಿಂದೆ ಭಾರತದ ಕೈವಾಡವಿದೆ ಎಂದು ಬಾಂಗ್ಲಾದ ಮಧ್ಯಂತರ ಸರ್ಕಾರ ರಚಿಸಿರುವ ಸಮಿತಿಯ ವರದಿ ಹೇಳಿದೆ. ಬಾಂಗ್ಲಾದ ಸುದ್ದಿ ಸಂಸ್ಥೆ, ಸಂಗ್ಬಾದ್ ಸಂಸ್ಥೆಯು ಬಲವಂತದ ನಾ*ಪತ್ತೆಯ ಕುರಿತಾದ ತನಿಖಾ ವರದಿಯನ್ನು ಉಲ್ಲೇಖಿಸಿ ವರದಿ ನೀಡಿದ್ದು, ‘ಬಾಂಗ್ಲಾದೇಶದ ಬಲವಂತದ ನಾ*ಪತ್ತೆ ಪ್ರಕರಣಗಳಲ್ಲಿ ಭಾರತೀಯರ ಪಾಲ್ಗೊಳ್ಳುವಿಕೆ ಸಾರ್ವಜನಿಕ ದಾಖಲೆಯ ವಿಷಯವಾಗಿದೆ. ಭಾರತದಲ್ಲಿ ಇನ್ನೂ ಬಂಧಿಯಾಗಿರುವ ಯಾವುದೇ ಬಾಂಗ್ಲಾದೇಶದ ನಾಯಕರನ್ನು ಗುರುತಿಸಲು ತಮ್ಮ ಪ್ರಯತ್ನಗಳನ್ನು ವಿಸ್ತರಿಸಲು ವಿದೇಶಾಂಗ ಮತ್ತು ಗೃಹ ಸಚಿವಾಲಯಗಳಿಗೆ ಶಿಫಾರಸ್ಸು ಮಾಡುತ್ತೇವೆ. ಬಾಂಗ್ಲಾದೇಶದ ಹೊರಗೆ ಈ ಜಾಡು ಅನುಸರಿಸುವುದು ನ್ಯಾಯದ ವ್ಯಾಪ್ತಿಯನ್ನು ಮೀರುತ್ತದೆ’ ಎಂದು ತನಿಖಾ ಆಯೋಗದ ವರದಿ ಉಲ್ಲೇಖಿಸಿದೆ.

    Continue Reading

    International news

    ಮಹತ್ವದ ನಿರ್ಧಾರ ಕೈಗೊಂಡ ಬೈಡನ್: 4.3 ಶತಕೋಟಿ ಡಾಲರ್ ವಿದ್ಯಾರ್ಥಿ ಸಾಲ ಮನ್ನಾ

    Published

    on

    ಮಂಗಳೂರು/ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಜೋ ಬೈಡನ್ ನಿವೃತ್ತಿಯಾಗುವುದಕ್ಕೂ ಮುನ್ನ ವಿದ್ಯಾರ್ಥಿ ಸಾಲವನ್ನು ಮನ್ನಾ ಮಾಡುವ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

    ಇದನ್ನೂ ಓದಿ: ರಷ್ಯಾದ ಮೇಲೆ ಉಕ್ರೇನ್ ಡ್ರೋನ್ ದಾಳಿ; ಬೆಚ್ಚಿಬಿದ್ದ ಕಜಾನ್ ಜನತೆ !

    4.28 ಶತಕೋಟಿ ಡಾಲರ್ ಮೊತ್ತದ ವಿದ್ಯಾರ್ಥಿ ಸಾಲವನ್ನು ಮನ್ನಾ ಮಾಡುವ ಯೋಜನೆಯನ್ನು ಅಧ್ಯಕ್ಷರು ಘೋಷಿಸಿದ್ದಾರೆ. ಇದರೊಂದಿಗೆ ವಿದ್ಯಾರ್ಥಿ ಸಾಲದಿಂದ ಮುಕ್ತರಾದವರ ಸಂಖ್ಯೆ ಸುಮಾರು 5 ದಶಲಕ್ಷಕ್ಕೆ ತಲುಪಿದೆ ಎಂದು ಶ್ವೇತಭವನದ ಹೇಳಿಕೆಯಲ್ಲಿ ತಿಳಿಸಿದೆ.

    Continue Reading

    LATEST NEWS

    Trending