ಕಳೆದ 2 ವರ್ಷಗಳಿಂದ ಮೆತ್ತಗಿದ್ದ ಮಹಾಮಾರಿ ಕೊರೊನಾ ಮತ್ತೆ ಅಟ್ಟಹಾಸ ಮುಂದುವರೆಸಿದೆ. ಸದ್ದಿಲ್ಲದೇ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ನವದೆಹಲಿ : ಕಳೆದ 2 ವರ್ಷಗಳಿಂದ ಮೆತ್ತಗಿದ್ದ ಮಹಾಮಾರಿ ಕೊರೊನಾ ಮತ್ತೆ ಅಟ್ಟಹಾಸ ಮುಂದುವರೆಸಿದೆ. ಸದ್ದಿಲ್ಲದೇ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,590 ಹೊಸ ಪ್ರಕರಣಗಳು ಪತ್ತೆಯಾಗಿವೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ ಆಗುತ್ತಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 8,601 ಗಡಿ ದಾಟಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಮಹಾಮಾರಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 5,30,824ಕ್ಕೆ ಏರಿಕೆಯಾಗಿದೆ. ಭಾರತದ ಕೋವಿಡ್ 19 ಒಟ್ಟು ಸಂಖ್ಯೆ 4,47,02,257ಕ್ಕೆ ಏರಿಕೆಯಾಗಿದೆ.
ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,61,922ಕ್ಕೆ ತಲುಪಿದೆ.
ಆರೋಗ್ಯ ಸಚಿವಾಲಯದ ವರದಿ ಪ್ರಕಾರ ಮಹಾರಾಷ್ಟ್ರದಿಂದ ಮೂರು ಮತ್ತು ಕರ್ನಾಟಕ, ರಾಜಸ್ಥಾನ ಮತ್ತು ಉತ್ತರಾಖಂಡದಲ್ಲಿ ತಲಾ ಒಬ್ಬೊಬ್ಬರು ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.