Thursday, August 11, 2022

  ಭಾರತ ಸಾಗರಯಾನ ಶೃಂಗಸಭೆ 2021;  ಉದ್ಘಾಟನೆ ಪ್ರಧಾನಿ ನರೇಂದ್ರಮೋದಿ ..!

  ಭಾರತ ಸಾಗರಯಾನ ಶೃಂಗಸಭೆ 2021;  ಉದ್ಘಾಟನೆ ಪ್ರಧಾನಿ ನರೇಂದ್ರಮೋದಿ ..! 

ಮಂಗಳೂರು: ಭಾರತ ಸಾಗರಯಾನ ಶೃಂಗಸಭೆ-2021 ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು ಈ ಸಂದರ್ಭ ಮಾತನಾಡಿದ ಅವರು ಸಾಗರಯಾನ ವಲಯದಲ್ಲಿ ಪ್ರಗತಿಯ ಬಗ್ಗೆ ಭಾರತ ಗಂಭೀರ ಚಿಂತನೆ ನಡೆಸಿದೆ ಮತ್ತು ವಿಶ್ವದ ಪ್ರಮುಖ ನೀಲ ಆರ್ಥಿಕತೆಯಾಗಿ ಭಾರತ ಹೊರಹೊಮ್ಮುತ್ತಿದೆ ಎಂದರು.

2030ರ ವೇಳೆಗೆ 23ಜಲಮಾರ್ಗಗಳನ್ನು ಕಾರ್ಯಾಚಣೆಗೊಳಿಸುವ ಗುರಿಯನ್ನು ಭಾರತ ಹೊಂದಿದೆ. ಹಡಗು ಮತ್ತು ಜಲಸಾರಿಗೆ ಸಚಿವಾಲಯವು 2.25 ಲಕ್ಷ ಕೋಟಿ ರೂ ಹೂಡಿಕೆ ಸಾಮರ್ಥ್ಯವಿರುವ 400 ಹೂಡಿಕೆ ಯೋಗ್ಯ ಯೋಜನೆಗಳ ಪಟ್ಟಿಯನ್ನು ಸಿದ್ಧಪಡಿಸಿದೆ ಎಂದು ಹೇಳಿ  ಭಾರತದ ಅಭಿವೃದ್ಧಿ ಪಥದಲ್ಲಿ ಪಾಲುದಾರರಾಗುವಂತೆ ವಿಶ್ವ ಸಮುದಾಯಕ್ಕೆ ಕರೆ ನೀಡಿದರು. ಭಾರತವು ಸಾಗರಯಾನ ವಲಯದಲ್ಲಿ ಬೆಳೆಯುವ ಮತ್ತು ವಿಶ್ವದ ಪ್ರಮುಖ ʻನೀಲಿ ಆರ್ಥಿಕತೆʼಯಾಗಿ ಹೊರಹೊಮ್ಮುವ ಬಗ್ಗೆ ಬಹಳ ಗಂಭೀರವಾಗಿ ಯೋಚಿಸುತ್ತಿದೆ. ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸುವುದು ಮತ್ತು ಸುಧಾರಣಾ ಪ್ರಯಾಣಕ್ಕೆ ಉತ್ತೇಜಿಸುವುದರ ಮೂಲಕ ʻಆತ್ಮನಿರ್ಭರ ಭಾರತ್‌ʼ ಕನಸನ್ನು ಮತ್ತಷ್ಟು ಬಲಗೊಳಿಸುವ ಗುರಿಯನ್ನು ಭಾರತವು ಹೊಂದಿದೆ ಎಂದು ಪ್ರಧಾನಿ ಹೇಳಿದರು. ಇಡೀ ವಲಯವನ್ನು ತುಂಡುತುಂಡಾಗಿ ಪರಿಗಣಿಸುವ ಬದಲು, ಅಖಂಡವಾಗಿ ನೋಡುವತ್ತ ಗಮನ ಹರಿಸಲಾಗುವುದು. 2014ರಲ್ಲಿ 870 ದಶಲಕ್ಷ ಟನ್‌ನಷ್ಟಿದ್ದ ಪ್ರಮುಖ ಬಂದರುಗಳ ಸಾಮರ್ಥ್ಯವನ್ನು ಈಗ 1,550 ದಶಲಕ್ಷ ಟನ್‌ಗಳಿಗೆ ಹೆಚ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಭಾರತದ ಬಂದರುಗಳು ಈಗ  ʻನೇರ ಬಂದರಿಗೆ ತಲುಪಿಸುವುದುʼ,ʻನೇರ ಬಂದರು ಪ್ರವೇಶʼ ಮತ್ತು ಸುಲಭ ಡೇಟಾ ಹರಿವಿಗಾಗಿ ʻಉನ್ನತೀಕರಿಸಿದ ಪೋರ್ಟ್ ಕಮ್ಯುನಿಟಿ ಸಿಸ್ಟಮ್ʼ (ಪಿಸಿಎಸ್) ನಂತಹ ವ್ಯವಸ್ಥೆಗಳನ್ನು ಹೊಂದಿವೆ.ನಮ್ಮ ಬಂದರುಗಳು ಒಳಬರುವ ಮತ್ತು ಹೊರಹೋಗುವ ಸರಕುಗಳ ಕಾಯುವ ಅವಧಿಯನ್ನು ಕಡಿಮೆಮಾಡಿವೆ. ವಿಶ್ವ ದರ್ಜೆಯ ಮೂಲಸೌಕರ್ಯವುಳ್ಳ ಮೆಗಾ ಬಂದರುಗಳನ್ನು ವಧವನ್, ಪಾರದೀಪ್ ಮತ್ತು ಕಾಂಡ್ಲಾದ ದೀನದಯಾಳ್ ಬಂದರಿನಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ  ಡೆನ್ಮಾರ್ಕ್‌ನ ಸಾರಿಗೆ ಸಚಿವ ಬೆನ್ನಿ ಎಂಗ್ಲೆಬ್ರೆಕ್ಟ್‌, ಗುಜರಾತ್ ಮತ್ತು ಆಂಧ್ರಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಮನ್ಸುಖ್ ಮಾಂಡವಿಯಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಸ್ವಾತಂತ್ರ್ಯ ಸಂಭ್ರಮಕ್ಕೆ ಅಹಿತಕರ ಘಟನೆ ಆಗದಂತೆ ದ.ಕದಲ್ಲಿ ಟೈಟ್ ಸೆಕ್ಯೂರಿಟಿ

ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತೋತ್ಸವಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ಇನ್ನೊಂದೆಡೆ ಪೊಲೀಸರು ಬಂದೋಬಸ್ತು ಬಿಗಿಗೊಳಿಸಿದ್ದಾರೆ.ಯಾವುದೇ ಸಂಭಾವ್ಯ ಅಹಿತಕರ ಘಟನೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ಬಿಗಿ ಕಣ್ಗಾವಲು ಇರಿಸಿದ್ದಾರೆ. ಜಿಲ್ಲಾದ್ಯಂತ ಪ್ರಮುಖ...

ಪಿ.ಯು.ಸಿ ಪೂರಕ ಪರೀಕ್ಷೆ: ಆ.12ರಿಂದ ಆ.25ರವರೆಗೆ ನಿಷೇಧಾಜ್ಞೆ

ಮಂಗಳೂರು: ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ಹಿನ್ನೆಲೆ ಜಿಲ್ಲಾ ಪೊಲೀಸ್‌ ಘಟಕ ವ್ಯಾಪ್ತಿಯ 4 ಪರೀಕ್ಷಾ ಕೇಂದ್ರಗಳಲ್ಲಿ ಆ.12ರಿಂದ ಆ.25ರ ವರೆಗೆ ನಿಷೇಧಾಜ್ಞೆ ಹೊರಡಿಸಲಾಗಿದೆ.ಪರೀಕ್ಷೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ...

ಆ.14 ರಂದು ಮಂಗಳೂರು ಪುರಭವನದಲ್ಲಿ ನಾಟಕ ಪ್ರದರ್ಶನ ಮತ್ತು ಮೆಗಾ ಮ್ಯಾಜಿಕ್

ಮಂಗಳೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆ.14 ರ ಭಾನುವಾರ ಸಂಜೆ 5 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಮತ್ತು ಕನ್ನಡ ಮತ್ತು...