Connect with us

LATEST NEWS

ಭಾರತದಲ್ಲಿ ಒಂದೇ ದಿನ 3,038 ಹೊಸ ಸೋಂಕಿತರ ಪತ್ತೆ, 9 ಸಾವು- ಸಕ್ರೀಯ ಪ್ರಕರಣಗಳ ಸಂಖ್ಯೆ 21,179ಕ್ಕೇರಿಕೆ..!

Published

on

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದೇ ದಿನ 3,038 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ ಈ ಮೂಲಕ ದೇಶದಲ್ಲಿರುವ ಸೋಂಕಿತರ ಸಕ್ರಿಯ ಪ್ರಕರಣಗಳ ಸಂಖ್ಯೆ 21,179ಕ್ಕೇರಿಕೆಯಾಗಿದೆ. 

ನವದೆಹಲಿ : ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದೇ ದಿನ 3,038 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ ಈ ಮೂಲಕ ದೇಶದಲ್ಲಿರುವ ಸೋಂಕಿತರ ಸಕ್ರಿಯ ಪ್ರಕರಣಗಳ ಸಂಖ್ಯೆ 21,179ಕ್ಕೇರಿಕೆಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ನವೀಕರಿಸಲಾದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ 3,038 ಹೊಸ ಕೊರೋನವೈರಸ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳು 21,179 ಕ್ಕೆ ಏರಿದೆ.

ಅಂತೆಯೇ ಇದೇ ಅವಧಿಯಲ್ಲಿ ದೇಶದಲ್ಲಿ ಒಂಬತ್ತು ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ಸಾವಿನ ಸಂಖ್ಯೆ 5,30,901 ಕ್ಕೆ ಏರಿದೆ.

ದೆಹಲಿ ಮತ್ತು ಪಂಜಾಬ್‌ನಿಂದ ತಲಾ ಎರಡು ಸಾವುಗಳು ವರದಿಯಾಗಿದ್ದರೆ, 24 ಗಂಟೆಗಳ ಅವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ ಮತ್ತು ಉತ್ತರಾಖಂಡದಿಂದ ತಲಾ ಒಂದು ಸಾವುಗಳು ವರದಿಯಾಗಿವೆ ಮತ್ತು ಕೇರಳದಲ್ಲಿ ಎರಡು ಸಾವುಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ.

ಅಂತೆಯೇ ಕೋವಿಡ್ ಪ್ರಕರಣಗಳ ಸಂಖ್ಯೆ 4.47 ಕೋಟಿ (4,47,29,284) ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಸಕ್ರಿಯ ಪ್ರಕರಣಗಳು ಈಗ ಒಟ್ಟು ಸೋಂಕುಗಳ 0.05 ಪ್ರತಿಶತವನ್ನು ಒಳಗೊಂಡಿವೆ ಮತ್ತು ರಾಷ್ಟ್ರೀಯ COVID-19 ಚೇತರಿಕೆ ದರವು 98.76 ಪ್ರತಿಶತದಷ್ಟು ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಅಂತೆಯೇ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,41,77,204 ಕ್ಕೆ ಏರಿದೆ, ಆದರೆ ಕೋವಿಡ್ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ.

ರಾಜ್ಯದಲ್ಲಿ ರಾಜ್ಯದಲ್ಲಿ ದಾಖಲಾಗದ ಒಟ್ಟು ಪ್ರಕರಣಗಳ ಪೈಕಿ ಬೆಂಗಳೂರು ಒಂದರಲ್ಲೇ ಒಂದೇ ದಿನಕ್ಕೆ 109 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಈ ಮೂಲಕ ನಗರದ ಕೋವಿಡ್ ಪಾಸಿಟಿವಿಟಿ ದರ ಶೇಕಡಾ 4.11ಕ್ಕೆ ಏರಿಕೆ ಆಗುವ ಮೂಲಕ ನಗರ ನಿವಾಸಿಗಳಲ್ಲಿ ಹಾಗೂ ಆರೋಗ್ಯ ಇಲಾಖೆಯಲ್ಲಿ ಆತಂಕ ಸೃಷ್ಟಿ ಮಾಡಿದೆ.

ಇನ್ನೂ ರಾಜ್ಯದಲ್ಲಿ ಒಂದೇ ಬಾರಿಗೆ 284 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇದರಿಂದ ಕರ್ನಾಟಕ ರಾಜ್ಯದ ಕೊವಿಡ್ ಪಾಸಿಟಿವಿಟಿ ದರ (ರೇಟ್) ಶೇಕಡಾ 3.22 ಕ್ಕೆ ತಲುಪಿದೆ.

ಕರ್ನಾಟಕದಲ್ಲಿ ಒಬ್ಬರ ಕೊರೊನಾ ಸೋಂಕಿತ ರೋಗಿ ಮೃತಪಟ್ಟಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಪುತ್ತೂರಿನಲ್ಲಿ ಭೀ*ಕರ ಅಪಘಾ*ತ; ರಿಕ್ಷಾ ಚಾಲಕ ಸಾ*ವು

Published

on

ಪುತ್ತೂರು : ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಡಿ*ಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃ*ತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ನಸುಕಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ.

ಆಟೋ ರಿಕ್ಷಾ ಚಾಲಕ 30 ವರ್ಷದ ಜೈಸನ್ ಮೃ*ತಪಟ್ಟವರು. ಪುತ್ತೂರಿಗೆ ಬರುತ್ತಿದ್ದ ಬಸ್ ಮತ್ತು ವಿರುದ್ಧ ದಿಕ್ಕಿನಿಂದ ಚಲಿಸುತ್ತಿದ್ದ ರಿಕ್ಷಾ ನಡುವೆ ಡಿ*ಕ್ಕಿ ಸಂಭವಿಸಿದೆ.

ಇದನ್ನೂ ಓದಿ : ಕಡೆ ಕ್ಷಣ ವರನಿಂದ ತಾಳಿ ಕಟ್ಟಲು ನಿರಾಕರಿಸಿದ ವಧು; ಮುರಿದು ಬಿದ್ದ ಮದುವೆ

ಅಪಘಾತದ ತೀವ್ರತೆಗೆ ರಿಕ್ಷಾ ನಜ್ಜುಗುಜ್ಜಾಗಿದೆ. ಚಾಲಕ ಜೈಸನ್ ರಿಕ್ಷಾದ ಒಳಗೆ ಸಿಲುಕಿ ಹಾಕಿಕೊಂಡಿದ್ದರು. ಪುತ್ತೂರು ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಜೈಸನ್‌ ಅವರನ್ನು ಹೊರತೆಗೆದಿದ್ದಾರೆ. ಆದರೆ, ಜೈಸನ್ ಆಗಲೇ ಇಹಲೋಕ ತ್ಯಜಿಸಿದ್ದರು.

Continue Reading

DAKSHINA KANNADA

ಕಡೆ ಕ್ಷಣ ವರನಿಂದ ತಾಳಿ ಕಟ್ಟಲು ನಿರಾಕರಿಸಿದ ವಧು; ಮುರಿದು ಬಿದ್ದ ಮದುವೆ

Published

on

ಉಪ್ಪಿನಂಗಡಿ: ಇತ್ತೀಚಿನ ದಿನಗಳಲ್ಲಿ ಕಡೆ ಕ್ಷಣದಲ್ಲಿ ಅದೆಷ್ಟೋ ಮದುವೆಗಳು ಮುರಿದು ಬಿದ್ದ ಘಟನೆ ನಡೆದಿದೆ. ಹಾಗೆಯೇ ಇಲ್ಲೊಂದು ಮದುವೆ ಮಂಟಪದಲ್ಲಿ ಕೊನೆಯ ಕ್ಷಣ ವರನಿಂದ ತಾಳಿ ಕಟ್ಟಲು ವಧು ನಿರಾಕರಸಿದ ಕಾರಣ ಮದುಮೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ನಡೆದಿದೆ.

ಕೊಣಾಲು ಗ್ರಾಮದ ಕೋಲ್ಪೆ ದಿ। ಬಾಬು ಗೌಡ ಅವರ ಪುತ್ರ ಉಮೇಶ ಅವರ ಮದುವೆಯು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ದಿ। ಕೊರಗಪ್ಪ ಗೌಡ ಅವರ ಪುತ್ರಿ ಸರಸ್ವತಿ ಅವರೊಂದಿಗೆ ನಿಗದಿಯಾಗಿತ್ತು. ಎ.26 ರಂದು ಬೆಳಗ್ಗೆ 11.35ರ ಮೂಹೂರ್ತದಲ್ಲಿ ಕಾಂಚನ ಪೆರ್ಲದ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಮದುವೆ ನಿಗದಿಯಾಗಿತ್ತು. ಅದರಂತೆ ವರ ಹಾಗೂ ವಧುವಿನ ಕಡೆಯವರು ಮದುವೆಯ ದಿಬ್ಬಣದಲ್ಲಿ ಬಂದಿದ್ದರು. ವಧು ದಾರೆ ಸೀರೆ ಹಾಕಿ ಪರಸ್ಪರ ಹೂಮಾಲೆ ಕೂಡ ಹಾಕಿದ್ದರು. ಆದರೆ ತಾಳಿ ಕಟ್ಟಲು ಮುಂದಾದಗ ನನಗೆ ಈ ಮದುವೆ ಇಷ್ಟ ವಿಲ್ಲ ಎಂದು ವಧು ಹೇಳಿದ್ದಾಳೆ.

ಇದರಿಂದ ಎರಡೂ ಕಡೆಯವರು ಕಂಗಾಲಾಗಿ ವಧುವಿನ ಮನವೊಲಿಕೆಗೆ ಮುಂದಾದರು. ಆದರೆ ವಧು ಒಪ್ಪಲಿಲ್ಲ. ಬಳಿಕ ಎರಡೂ ಕಡೆ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದರು.

ಔತಣ ಕೂಟಕ್ಕೆ ಸಿದ್ಧತೆ:

ವರನ ಮನೆಯಲ್ಲಿ ಮಧ್ಯಾಹ್ನದ ಔತಣ ಕೂಟಕ್ಕೆ ಸುಮಾರು 500 ಜನರಿಗೆ ಮಾಂಸಾಹಾರಿ ಊಟ ತಯಾರಾಗಿತ್ತು. 1 ಸಾವಿರದಷ್ಟು ಐಸ್‌ಕ್ರೀಮ್ ವ್ಯವಸ್ಥೆಯನ್ನು ಮಾಡಲಾಗಿತ್ತು. ಮದುವೆ ಮುರಿದು ಬಿದ್ದ ಕಾರಣ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಮತ್ತೆ ಮದುವೆಯಾಗಲು ಒಪ್ಪಿದ ವಧು:

ಪೊಲೀಸ್ ಠಾಣೆಯಲ್ಲಿ ನಡೆದ ಮಾತುಕತೆ ವೇಳೆ ವಧು ಸರಸ್ವತಿ ಮತ್ತೆ ಮದುವೆ ಆಗಲು ಒಪ್ಪಿದ್ದರು. ಆದರೆ ಆಗ ವರ ಉಮೇಶ್ ಅವರು ಮದುವೆ ಆಗಲು ನಿರಾಕರಿಸಿದರು. ಇದರಿಂದಾಗಿ ಎರಡೂ ಕಡೆಯವರು ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆಯಿಸಿಕೊಂಡು ತಮ್ಮ ತಮ್ಮ ಮನೆಗಳಿಗೆ ತೆರಳಿದರು.

Continue Reading

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

LATEST NEWS

Trending