ಶಿವಮೊಗ್ಗದಲ್ಲಿರುವ ವಿಮಾನ ನಿಲ್ದಾಣವನ್ನು ಫೆಬ್ರವರಿ 27 ರಂದು ಪ್ರಧಾನಿ ಮೋದಿಯವರು ಉದ್ಘಾಟನೆ ಮಾಡಲಿದ್ದು, ವಿಮಾನ ನಿಲ್ದಾಣದಲ್ಲಿ ಮಂಗಳವಾರ ಪ್ರಾಯೋಗಿಕವಾಗಿ ನಡೆಸಲಾದ ವಿಮಾನ ಹಾರಾಟ ಮತ್ತು ಲ್ಯಾಂಡಿಂಗ್ ಕಾರ್ಯ ಯಶಸ್ವಿಯಾಗಿದೆ.
ಶಿವಮೊಗ್ಗ : ಶಿವಮೊಗ್ಗದಲ್ಲಿರುವ ವಿಮಾನ ನಿಲ್ದಾಣವನ್ನು ಫೆಬ್ರವರಿ 27 ರಂದು ಪ್ರಧಾನಿ ಮೋದಿಯವರು ಉದ್ಘಾಟನೆ ಮಾಡಲಿದ್ದು, ವಿಮಾನ ನಿಲ್ದಾಣದಲ್ಲಿ ಮಂಗಳವಾರ ಪ್ರಾಯೋಗಿಕವಾಗಿ ನಡೆಸಲಾದ ವಿಮಾನ ಹಾರಾಟ ಮತ್ತು ಲ್ಯಾಂಡಿಂಗ್ ಕಾರ್ಯ ಯಶಸ್ವಿಯಾಗಿದೆ.
ವಿಮಾನ ನಿಲ್ದಾಣಕ್ಕೆ ದೇಶದ ಭದ್ರತಾಪಡೆಯ ಸಿಬ್ಬಂದಿಯನ್ನು ಹೊತ್ತಿದ್ದ ಭಾರತೀಯ ವಾಯುಸೇನೆಯ ವಿಮಾನವು ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದೆ.
ಹೀಗಾಗಿ, ಉದ್ಘಾಟನೆ ಕಾರ್ಯಕ್ರಮದ ಒಂದು ವಾರದ ಮುನ್ನವೇ ಪ್ರಾಯೋಗಿಕ ವಿಮಾನ ಹಾರಾಟವನ್ನು ಆರಂಭಿಸಲಾಗಿದೆ.
ಈ ವೇಳೆ ಯಾವುದೇ ಅವಘಡಗಳು ಹಾಗೂ ದುರಸ್ತಿ ಮಾಡುವ ಕಾರ್ಯಗಳು ಬಾಕಿ ಇದ್ದರೂ ಅವುಗಳನ್ನು ಸರಿಪಡಿಸಲಾಗುತ್ತದೆ.
ಆದರೆ, ಭದ್ರತಾಪಡೆಯ ವಿಮಾನ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದ್ದು, ಈ ಬಗ್ಗೆ ಅಂತಿಮ ಸಿದ್ಧತೆಗಳು ಕೂಡ ನಡೆಯುತ್ತಿದ್ದು, ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕವಿ ಕುವೆಂಪು ಅವರ ಹೆಸರಿನಲ್ಲಿ ನಿರ್ಮಾಣವಾದ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.