ವಾರಾಣಾಸಿ: ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅನಾರೋಗ್ಯದಿಂದ ನಿನ್ನೆ ನಿಧನ ಹೊಂದಿದ್ದಾರೆ.
ಪ್ರಧಾನಿ ಮೋದಿ ಸೇರಿ ಹಲವರು ಕಂಬನಿ ಮಿಡಿದಿದ್ದಾರೆ. ಈ ಮಧ್ಯೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಮಾಜಿ ಸಿಎಂ ಎಂಬ ಹಿನ್ನೆಲೆ ಸರ್ಕಾರಿ ಗೌರವದ ಅಂಗವಾಗಿ ಅವರ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರಧ್ವಜದ ಮೇಲೆ ಬಿಜೆಪಿ ಪಕ್ಷದ ಧ್ವಜ ಹಾಕಿ ಎಡವಟ್ಟು ಮಾಡಿಕೊಂಡಿದೆ.
ಇದನ್ನು ಕರ್ನಾಟಕ ಕಾಂಗ್ರೆಸ್ ಟೀಕಿಸಿ ‘ಬಿಜೆಪಿಗರು ಯಾವ ಪರಿಸ್ಥಿತಿಯಲ್ಲೂ ಪಕ್ಷದ ಹಾಗೂ ಮೋದಿ ಬ್ರಾಂಡಿಂಗ್ ಮಾಡುವ ಅವಕಾಶ ಬಿಡರು, ಶವವಾದರೂ ಸರಿಯೇ! ಕಲ್ಯಾಣ್‌ಸಿಂಗ್ ಮೃತದೇಹಕ್ಕೆ ಹೊದಿಸಿದ್ದ ರಾಷ್ಟ್ರಧ್ವಜದ ಮೇಲೆ ಬಿಜೆಪಿ ಧ್ವಜ ಹಾಕುವ ಮೂಲಕ ರಾಷ್ಟ್ರಧ್ವಜದ ಮೇಲಿರುವ ತಮ್ಮ ಸುಪ್ತದ್ವೇಷ ಹೊರಹಾಕಿ ಅವಮಾನಿಸಿದ್ದಾರೆ.
ಇದು ಬಿಜೆಪಿಯ ನಕಲಿ ದೇಶಭಕ್ತಿ ಅನಾವರಣಗೊಂಡಿದೆ’ ಎಂದು ಟ್ವಿಟ್ಟರ್‌ನಲ್ಲಿ ಟೀಕಿಸಿದೆ.