Connect with us

    LATEST NEWS

    ತೈಲವನ್ನು ಜೆಲ್‌ರೂಪವಾಗಿ ಪರಿವರ್ತಿಸುವ ರಾಸಾಯನಿಕ ಕಂಡುಹಿಡಿದ ಎಂಆರ್‌ಪಿಎಲ್

    Published

    on

    ಮಂಗಳೂರು: ಹಡಗಿನಿಂದ ಸಮುದ್ರಕ್ಕೆ ಸೋರಿಕೆಯಾಗುವ ತೈಲದಿಂದ ಭಾರೀ ಹಾನಿ ಉಂಟಾಗುವ ಹಿನ್ನೆಲೆಯಲ್ಲಿ ಹೀಗೆ ಸೋರಿಕೆಯಾಗುವ ತೈಲವನ್ನು ಘನರೂಪದ ಜೆಲ್ ವಸ್ತುವಾಗಿ ಪರಿವರ್ತಿಸಿ ತೈಲವು ಸಮುದ್ರದಲ್ಲಿ ಹರಡದಂತೆ ಮಾಡುವ ಪರಿಣಾಮಕಾರಿಯಾಗಿರುವ ರಾಸಾಯನಿಕವೊಂದನ್ನು ಎಂಆರ್‌ಪಿಎಲ್ ಕಂಪನಿ ಕಂಡು ಹಿಡಿದಿದ್ದು, ಇದೀಗ ಈ ರಾಸಾಯನಿಕಕ್ಕೆ ಭಾರತ ಸರಕಾರದ ಪೇಟೆಂಟ್ ಕಚೇರಿಯು ಪೇಟೆಂಟ್ ನೀಡಿದ್ದ ಆರ್ಗಾನಿಕ್ ಜನರೇಟರ್ಸ್ ಎನ್ನುವ ಹೆಸರನ್ನು ನೀಡಿದೆ.

    ಈ ಮೂಲಕ ಎಂಆರ್‌ಪಿಎಲ್ ಕಂಪೆನಿಗೆ ದೊರಕಿರುವ ಮೂರನೇ ಪೇಟೆಂಟ್ ಇದಾಗಿದ್ದು, ಇದಕ್ಕೆ 375827 ಪೇಟೆಂಟ್ ಸಂಖ್ಯೆ ದೊರೆತಿದೆ.

    ಇನ್ಮುಂದೆ ಎಂಆರ್‌ಪಿಎಲ್ ಹೊರತುಪಡಿಸಿ ಬೇರೆ ಯಾರೂ ಕೂಡಾ ಈ ರಾಸಾಯನಿಕವನ್ನು ಉತ್ಪಾದನೆ ಮಾಡುವ, ಮಾರಾಟ ಮಾಡುವ ಹಕ್ಕು ಇರುವುದಿಲ್ಲ ಎಂದು ಸಂಸ್ಥೆ ಹೇಳಿದೆ.

    ಈ ಉತ್ಪನ್ನ ಸಾವಯವ ಆಗಿದ್ದು, ಕಡಿಮೆ ವೆಚ್ಚ ತಗಲುವ ರಾಸಾಯನಿಕವಾಗಿದೆ. ಅಲ್ಲದೆ ಇದು ಬಹಳ ವೇಗವಾಗಿ ತೈಲವನ್ನು ಜೆಲ್ ರೂಪಕ್ಕೆ ಪರಿವರ್ತಿಸುತ್ತದೆ.

    ಶೇಕಡಾ 3-4ರಷ್ಟು ರಾಸಾಯನಿಕವನ್ನು ಬಳಸುವುದರಿಂದ ಪರಿಸರಕ್ಕೂ ಯಾವುದೇ ಹಾನಿ ಇಲ್ಲ ಎಂದು ಕಂಪೆನಿ ಹೇಳಿದೆ.

    ಸಾಗರದ ಆಳದಲ್ಲಿ ಭಾರೀ ಹಡಗುಗಳು ಒಂದಕ್ಕೊಂದು ಡಿಕ್ಕಿ ಹೊಡೆದು ಉಂಟಾಗುವ ದುರಂತದಿಂದ, ಇಲ್ಲದೇ ತಾಂತ್ರಿಕ ವೈಫಲ್ಯಕ್ಕೀಡಾಗಿ ಉರುಳಿ ಬಿದ್ದು ಕಡಲಿಗೆ ಭಾರೀ ಪ್ರಮಾಣದ ತೈಲ ಸೋರಿಕೆಯಾಗುವ ಸಂದರ್ಭ ಅದರಿಂದ ಮೀನಿನ ಸಂತತಿ ನಾಶವಾಗುತ್ತಿತ್ತು. ಅನೇಕ ಜಲಜೀವರಾಶಿಗಳಿಗೆ ಪ್ರಾಣಕ್ಕೆ ಕಂಟಕವಾಗುತ್ತಿತ್ತು.

    ಇಂತಹ ಸಂದರ್ಭದಲ್ಲಿ ಈ ಜೆಲ್‌ ಇನ್ಮುಂದೆ ರಾಸಾಯನಿಕ ಸೋರಿಕೆಯಾದರೂ ಅದನ್ನು ಕಡಲಿನಲ್ಲಿ ಹರಡಲು ಬಿಡದೇ ಕೂಡಲೇ ಜೆಲ್‌ ಆಗಿ ಪರಿವರ್ತಿಸುವುದರಿಂದ ಅದರಿಂದ ಉಂಟಾಗುವ ಅಪಾಯವನ್ನು ತಡೆಗಟ್ಟಬಹುದಾಗಿದೆ.

    DAKSHINA KANNADA

    ತಡೆಬೇಲಿಗೆ ಡಿಕ್ಕಿ ಹೊಡೆದು ಅಂಡರ್‌ಪಾಸ್‌ ಗೆ ಉರುಳಿದ ವಾಹನ; ಹಲವರಿಗೆ ಗಾಯ

    Published

    on

    ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಎನ್ ಐ ಟಿ ಕೆ ಅಂಡರ್ ಪಾಸ್ ಬಳಿ ಬೈಕ್ ಗೆ ಬೋಲೇರೋ ಪಿಕಪ್ ಡಿಕ್ಕಿಯಾಗಿ ಬೈಕ್ ಸವಾರ ಸಹಿತ ನಾಲ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

    ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಗೆ ಸುರತ್ಕಲ್ ಎನ್ಐಟಿಕೆ ಅಂಡರ್ ಪಾಸ್ ಬಳಿ ಬೊಲೆರೋ ಪಿಕಪ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಹಾಗೂ ಪಿಕಪ್ ಹೆದ್ದಾರಿ ಬದಿಯ ಅಪಘಾತ ತಡೆಗೆ ಹಾಕಿದ್ದ ತಡೆ ಬೇಲಿಗೆ ಡಿಕ್ಕಿ ಹೊಡೆದು ಸುಮಾರು 12 ಅಡಿ ಆಳದ ಅಂಡರ್ ಪಾಸ್ ಕೆಳಗಡೆ ಬಿದ್ದಿದೆ.

    ಇದನ್ನೂ ಓದಿ: ಕೊಣಾಜೆ : ಸ್ಕೂಟರ್ – ಟೆಂಪೋ ನಡುವೆ ಅಪ*ಘಾತ; ಸವಾರ ಸಾವು

    ಅಪಘಾತದಿಂದ ಬೈಕ್ ಸವಾರ ಸಹಿತ ಬೊಲೆರೋ ಪಿಕಪ್ ನಲ್ಲಿದ್ದ ವಾಹನದ ಚಾಲಕ ಹಾಗೂ ಪ್ರಯಾಣಿಕರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಕ್ರೇನ್ ಮೂಲಕ ಎರಡು ವಾಹನಗಳನ್ನು ತೆರವುಗೊಳಿಸಲಾಯಿತು. ಅಪಘಾತದ ಗಾಯಾಳುಗಳ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.

    Continue Reading

    DAKSHINA KANNADA

    ಮಂಗಳೂರು : ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಶಿಲಾನ್ಯಾಸ

    Published

    on

    ಮಂಗಳೂರು : ಸುಮಾರು 50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅತ್ಯಾಧುನಿಕ ಸೌಲಭ್ಯ ಹೊಂದಿರುವ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಶಿಲಾನ್ಯಾಸ ನೆರವೇರಿಸಿದ್ದಾರೆ. ಮೇರಿ ಹಿಲ್‌ನಲ್ಲಿ ನಿರ್ಮಾಣವಾಗಲಿರುವ ಈ ಪ್ರಾದೇಶಿಕ ಕೇಂದ್ರ ವೈದ್ಯಕೀಯ ಶಿಕ್ಷಣ ಸಂಬಂಧಿತ ವಿಚಾರಗಳಿಗೆ ಪೂರಕವಾಗಲಿರುವ ವ್ಯವಸ್ಥೆಗಳು ಈ ಕೇಂದ್ರದಲ್ಲಿ ಇರಲಿದೆ. ಇದು ವಿದ್ಯಾರ್ಥಿಗಳಿಂದ ಹಿಡಿದು ಸಂಶೋಧನೆ ನಡೆಸುವ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ.

    ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಏಷ್ಯಾದಲ್ಲೇ ಅತೀ ದೊಡ್ಡ ಸಂಸ್ಥೆಯಾಗಿದ್ದು, ಮಂಗಳೂರಿನಲ್ಲಿ ನಿರ್ಮಾಣವಾಗುವ ಪ್ರಾದೇಶಿಕ ಕೇಂದ್ರ ದೇಶದಲ್ಲೇ ದೊಡ್ಡ ಕೇಂದ್ರವಾಗಲಿದೆ. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಈ ಕೇಂದ್ರ ಸ್ಥಾಪನೆಗೆ 2024-25ರ ಬಜೆಟ್‌ನಲ್ಲಿ ಅನುದಾನ ನೀಡಲಾಗಿದ್ದು, ಈಗ ಚಾಲನೆ ನೀಡಲಾಗುತ್ತಿದೆ. ಈ ಕೇಂದ್ರ ಸ್ಥಾಪನೆ ಬಳಿಕ ಕರಾವಳಿ ಭಾಗದ ಜನರಿಗೆ ವೈದ್ಯಕೀಯ ಶಿಕ್ಷಣ ಸಂಬಂಧಿತ ವಿಚಾರವಾಗಿ ಬೆಂಗಳೂರಿಗೆ ಹೋಗುವುದು ತಪ್ಪಲಿದೆ ಎಂದು ಹೇಳಿದ್ದಾರೆ.

    ಬಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಸಿಗುವಂತಹ ಸೌಲಭ್ಯಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡಬೇಕು ಎಂಬ ಚಿಂತನೆ ಸರ್ಕಾರಕ್ಕೆ ಇದೆ. ಇದಕ್ಕೆ ಬೇಕಾದ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

    ಇದನ್ನೂ ಓದಿ : ಆ ನಟ ಕಿಸ್ ಮಾಡಿದಕ್ಕೆ ವಾಂತಿ ಮಾಡಿಕೊಂಡಿದ್ದರಂತೆ ಸ್ಟಾರ್ ನಟಿ

    ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್‌, ಸಚಿವ ದಿನೇಶ್ ಗುಂಡೂರಾವ್, ಸಂಸದ ಬ್ರಿಜೇಶ್ ಚೌಟ ಸೇರಿದಂತೆ ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗಿಯಾಗಿದ್ದರು.

    Continue Reading

    FILM

    ಆ ನಟ ಕಿಸ್ ಮಾಡಿದಕ್ಕೆ ವಾಂತಿ ಮಾಡಿಕೊಂಡಿದ್ದರಂತೆ ಸ್ಟಾರ್ ನಟಿ

    Published

    on

    ಮಂಗಳೂರು/ಮುಂಬೈ : ಕೆಲವು ನಟಿಯರು ನೋ ಕಿಸ್ಸಿಂಗ್ ನೀತಿಯನ್ನು ಅನುಸರಿಸುತ್ತಾರೆ. ಈ ಬಗ್ಗೆ ಸಿನಿಮಾ ಒಪ್ಪಿಕೊಳ್ಳುವ ಮೊದಲೇ ಮಾತುಕತೆ ನಡೆಸಿರುತ್ತಾರೆ. ಇದನ್ನು ಬಾಲಿವುಡ್‌ನ ಈ ಸ್ಟಾರ್ ನಟಿ ಕೂಡ ಅನುಸರಿಸುತ್ತಿದ್ದರು.

    ಆದರೆ ಆ ಒಬ್ಬ ನಟ ಬಲವಂತವಾಗಿ ಕಿಸ್ ಮಾಡಿದಕ್ಕೆ ವಾಂತಿ ಮಾಡಿ 100 ಸಲ ಮುಖ ತೊಳೆದಿದ್ದೆ ಎಂದು ಸ್ಟಾರ್ ನಟಿ ಹೇಳಿದ್ದಾರೆ.

    ಬಾಲಿವುಡ್ ನಟಿ ರವೀನಾ ಟಂಡನ್ ಮೂರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ. ರವಿನಾ ಟಂಡನ್ ನೋ ಕಿಸ್ಸಿಂಗ್ ನೀತಿಯನ್ನು ಅನುಸರಿಸಿದ ನಟಿಯರಲ್ಲಿ ರವೀನಾ ಟಂಡನ್ ಕೂಡ ಒಬ್ಬರು.

    ಆದರೆ ಸಿನಿಮಾವೊಂದರ ಶೂಟಿಂಗ್ ವೇಳೆ ಸಹ ನಟರೊಬ್ಬರು ಆಕಸ್ಮಿಕವಾಗಿ ರವೀನಾ ಟಂಡನ್ ತುಟಿಗಳಿಗೆ ಮುತ್ತಿಟ್ಟ ಘಟನೆ ನಡೆದಿತ್ತು. ಆ ನಂತರ ಏನಾಯಿತು ಎಂಬುದನ್ನು ಸ್ವತಃ ರವೀನಾ ಅವರೇ ಹೇಳಿದ್ದಾರೆ.

    ಇದನ್ನೂ ಓದಿ: ಎಲಿಮಿನೇಟ್ ಆದ ಸ್ಪರ್ಧಿಗಳ ರೀ ಎಂಟ್ರಿ; ಕುತೂಹಲ ಕೆರಳಿಸಿದ ಎಲಿಮಿನೇಷನ್

    ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಈ ಬಗ್ಗೆ ರವೀನಾ ಮಾತನಾಡಿದ್ದಾರೆ. ರವೀನಾ ಟಂಡನ್ ಅವರೊಂದಿಗೆ ಒಂದು ಘಟನೆ ನಡೆದಿತ್ತಂತೆ. ಅವರ ಸಹ ನಟರೊಬ್ಬರು ತಪ್ಪಾಗಿ ಅವರನ್ನು ಚುಂಬಿಸಿದ್ದರಂತೆ. ಈ ದೃಶ್ಯವು ಸ್ಕ್ರಿಪ್ಟ್ ನ ಭಾಗವೂ ಆಗಿರಲಿಲ್ಲ. ಇದಾದ ನಂತರ ರವೀನಾ ಟಂಡನ್ ತುಂಬಾ ಅನ್‌ಕಂಫರ್ಟ್ ಫೀಲ್ ಮಾಡಿಕೊಂಡರಂತೆ.

    ಆ ಬಳಿಕ ವಾಂತಿ ಕೂಡ ಮಾಡಿದರಂತೆ. 100 ಸಲ ತಮ್ಮ ಬಾಯಿ ತೊಳೆದುಕೊಂಡಿದ್ದಾರಂತೆ. ನಂತರ ಆ ನಟ ರವೀನಾ ಟಂಡನ್ ಅವರ ಬಳಿಕ ಕ್ಷಮೆಯಾಚಿಸಿದರಂತೆ. ಸಂದರ್ಶನ ಸಮಯದಲ್ಲಿ ರವೀನಾ ಟಂಡನ್ ಈ ವಿಚಾರ ಹೇಳಿದ್ದಾರೆ. ಸಿನಿಮಾಗಳಲ್ಲಿ ಕಿಸ್ ಮಾಡದಿರುವುದು ನನ್ನ ಆಯ್ಕೆ ಎಂದು ರವೀನಾ ಟಂಡನ್ ಹೇಳಿದ್ದಾರೆ.

     

    Continue Reading

    LATEST NEWS

    Trending