Sunday, December 4, 2022

ಪಾಕಿಸ್ತಾನದ ನೂತನ ಪ್ರಧಾನಿಗೆ ಶುಭಾಷಯ ಕೋರಿದ ಮೋದಿ

ನವದೆಹಲಿ: ಪಾಕಿಸ್ತಾನದಲ್ಲಿ ರಾಜಕೀಯ ಮೇಲಾಟದಲ್ಲಿ ಹೊಸ ಪ್ರಧಾನಿ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಶೆಹಬಾಜ್ ಷರೀಫ್ ಅವರಿಗೆ ಪ್ರಧಾನಿ ಮೋದಿ ಟ್ವೀಟ್‌ ಮೂಲಕ ಶುಭಾಷಯ ಕೋರಿದ್ದಾರೆ.


ಇಮ್ರಾನ್ ಖಾನ್ ಪ್ರಧಾನಿ ಸ್ಥಾನದಿಂದ ಕೆಳಗಿಳಿದಿದ್ದು, ಆ ಸ್ಥಾನಕ್ಕೆ ಶೆಹಬಾಜ್ ಷರೀಫ್ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶೆಹಬಾಜ್ ಷರೀಫ್ ಅವರನ್ನು ಅಭಿನಂದಿಸಿದ್ದಾರೆ. ಶಾಂತಿ ಮತ್ತು ಸ್ಥಿರತೆಯನ್ನು ಭಾರತ ಬಯಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.


ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾದ ಹೆಚ್​.ಇ. ಮಿಯಾನ್ ಮುಹಮ್ಮದ್ ಶೆಹಬಾಜ್ ಷರೀಫ್ ಅವರಿಗೆ ಅಭಿನಂದನೆಗಳು.

ಭಾರತವು ಭಯೋತ್ಪಾದನೆ ಮುಕ್ತ, ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತದೆ. ಇದರಿಂದ ನಾವು ನಮ್ಮ ಅಭಿವೃದ್ಧಿಗೆ ಇರುವ ಸವಾಲುಗಳ ಮೇಲೆ ಗಮನ ಕೇಂದ್ರೀಕರಿಸಬಹುದು.

ಇದರ ಜೊತೆಗೆ ನಮ್ಮ ಜನರ ಯೋಗಕ್ಷೇಮ ಮತ್ತು ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಬಹುದು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Hot Topics