ನವದೆಹಲಿ : 2022ನೇ ಸಾಲಿನ ದೇಶದ ಉತ್ಯುನ್ನತ ಗೌರವ ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಿದರು.
ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿಗೆ ಮರಣೋತ್ತರವಾಗಿ ಘೋಷಿಸಲಾಗಿದ್ದ ಪದ್ಮ ವಿಭೂಷಣ ಪ್ರಶಸ್ತಿಯನ್ನು ರಾವತ್ ಅವರ ಪುತ್ರಿಯರಾದ ಕ್ರಿತಿಕಾ ಮತ್ತು ತರಿಣಿ ಅವರು ಸ್ವೀಕರಿಸಿದರು. ಸಮಾರಂಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿದ್ದರು.
ಕಳೆದ ವರ್ಷ ಡಿಸೆಂಬರ್‌ನಲ್ಲಿ ತಮಿಳುನಾಡಿನಲ್ಲಿ ನಡೆದಿದ್ದ ಸೇನಾ ಹೆಲಿಕಾಪ್ಟರ್‌ನಲ್ಲಿ ಅಪಘಾತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಅವರ ಪತ್ನಿ ಮಧುಲಿಕಾ ರಾವತ್ ಸೇರಿ 13 ಮಂದಿ ಮೃತಪಟ್ಟಿದ್ದರು.
ರಾವತ್ ಅವರು ಸೇನೆಗೆ ಸಲ್ಲಿಸಿದ್ದ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿಯನ್ನು ಘೋಷಿಸಿತ್ತು.