ಮಂಗಳೂರು/ಬೀಜಿಂಗ್: ಭಾರತದ ಜೇಮ್ಸ್ ಬಾಂಡ್ ಚೀನಾಕ್ಕೆ ಭೇಟಿ ಕೊಟ್ಟಿದ್ದು ಇಂಡಿ-ಚೀನಿ ಭಾಯ್ ಭಾಯ್ ಎಂಬ ಚರ್ಚೆ ಶುರುವಾಗಿದೆ.
ಭಾರತ-ಚೀನಾ ಸಂಬಂಧ 2020ರ ಸಮಯದಲ್ಲಿ ಅತ್ಯಂತ ಸೂಕ್ಷ್ಮ ಸ್ಥಿತಿಗೆ ತಲುಪಿತ್ತು. ಇನ್ನೇನು ಎರಡೂ ದೇಶಗಳ ನಡುವೆ ಯುದ್ದ ಗ್ಯಾರೆಂಟಿ ಎಂಬ ಭಯ ಆವರಿಸಿತ್ತು. ಆದ್ರೆ ಕೆಲವು ತಿಂಗಳಿನಿಂದ ಭಾರತ ಮತ್ತು ಚೀನಾ ಸಂಬಂಧ ದೊಡ್ಡ ಮಟ್ಟದಲ್ಲಿ ಸುಧಾರಣೆ ಕಾಣುತ್ತಿದೆ. ಭಾರತದ ಜೇಮ್ಸ್ ಬಾಂಡ್ ಚೀನಾ ನೆಲಕ್ಕೆ ಎಂಟ್ರಿ ಕೊಟ್ಟು ಸಂಚಲನ ಮೂಡಿಸಿದ್ದಾರೆ.
ಬೀಜಿಂಗ್ ನಲ್ಲಿ ವಿಶೇಷ ಪ್ರತಿನಿಧಿಗಳ ಸಭೆ
ಗಡಿ ವಿಚಾರವಾಗಿ ಚೀನಾ ಯಾವಾಗಲೂ ಭಾರತದೊಂದಿಗೆ ಕಿರಿಕ್ ಮಾಡಿಕೊಂಡೇ ಬಂದಿದೆ. ಇದೀಗ ಚೀನಾ ಪ್ರವಾಸದಲ್ಲಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನಿನ್ನೆ ಚೀನಾ ವಿದೇಶಾಂಗ ಸಚಿವ ವಾಂಗ್ ಯಿಯನ್ನ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಬರೋಬ್ಬರಿ ಐದು ವರ್ಷದ ಬಳಿಕ ಭಾರತ ಮತ್ತು ಚೀನಾ ಗಡಿ ಪ್ರಶ್ನೆಗೆ ಸಂಬಂಧಿಸಿದಂತೆ ಬೀಜಿಂಗ್ ನಲ್ಲಿ ವಿಶೇಷ ಪ್ರತಿನಿಧಿಗಳ ಸಭೆ ನಡೆದಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಬೀಜಿಂಗ್ ಗೆ ಭೇಟಿ ನೀಡಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ ಚೀನಾ ಈಗ ಭಾರತದೊಂದಿಗೆ ಕೆಲಸ ಮಾಡಲು ಸಿದ್ದ ಎಂದು ಹೇಳಿದೆ.
ದ್ವಿಪಕ್ಷೀಯ ಸಂಬಂಧಗಳ ಮರುಸ್ಥಾಪನೆ
ಪೂರ್ವ ಲಡಾಖ್ ನಲ್ಲಿ ಅಕ್ಟೋಬರ್ 21ರ ಒಪ್ಪಂದ ಮತ್ತು ಗಸ್ತು ತಿರುಗುವಿಕೆ ನಂತರದ ದ್ವಿಪಕ್ಷೀಯ ಸಂಬಂಧಗಳನ್ನು ಸಾಮಾನ್ಯಗೊಳಿಸಲು ಉಭಯ ದೇಶಗಳ ಮಧ್ಯೆ ಚರ್ಚೆ ನಡೆದಿದೆ. ಪೂರ್ವ ಲಡಾಖ್ ನಲ್ಲಿನ ಮಿಲಿಟರಿ ಬಿಕ್ಕಟ್ಟಿನಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡ ದ್ವಿಪಕ್ಷೀಯ ಸಂಬಂಧಗಳ ಮರುಸ್ಥಾಪನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ದೋವಲ್ ಮತ್ತು ವಾಂಗ್ ಯಿ ಚರ್ಚೆ ನಡೆಸಿದ್ದಾರೆ. ಈ ಮೂಲಕ ಎಲ್ ಎಸಿಯಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ.
4.28 ಶತಕೋಟಿ ಡಾಲರ್ ಮೊತ್ತದ ವಿದ್ಯಾರ್ಥಿ ಸಾಲವನ್ನು ಮನ್ನಾ ಮಾಡುವ ಯೋಜನೆಯನ್ನು ಅಧ್ಯಕ್ಷರು ಘೋಷಿಸಿದ್ದಾರೆ. ಇದರೊಂದಿಗೆ ವಿದ್ಯಾರ್ಥಿ ಸಾಲದಿಂದ ಮುಕ್ತರಾದವರ ಸಂಖ್ಯೆ ಸುಮಾರು 5 ದಶಲಕ್ಷಕ್ಕೆ ತಲುಪಿದೆ ಎಂದು ಶ್ವೇತಭವನದ ಹೇಳಿಕೆಯಲ್ಲಿ ತಿಳಿಸಿದೆ.
ಮಂಗಳೂರು/ಕೀವ್: ಉಕ್ರೇನ್ ನ 8 ಸ್ಪೋಟಕ ಡ್ರೋನ್ ವಿಮಾನಗಳು ರಷ್ಯಾದ ಕಜನ್ ನಗರದ ಮೇಲೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಇದೇ ನಗರದಲ್ಲಿ ಇತ್ತೀಚೆಗೆ ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆ ನಡೆದಿದ್ದು, ಭಾರತದ ಪ್ರಧಾನಿ ಸೇರಿದಂತೆ ಹಲವು ವಿಶ್ವ ನಾಯಕರು ಆಗಮಿಸಿದ್ದರು.
ಇತ್ತೀಚೆಗೆ ಉಕ್ರೇನ್ ಮೇಲೆ ಕ್ಷೀಪಣಿ ದಾಳಿ ನಡೆಸಿದ್ದ ರಷ್ಯಾಗೆ ಡ್ರೋನ್ ದಾಳಿ ಮೂಲಕ ಉಕ್ರೇನ್ ತಿರುಗೇಟು ನೀಡಿದ್ದು, ಉಕ್ರೇನ್ ದಿಢೀರ್ ಕ್ರಮಕ್ಕೆ ರಷ್ಯಾದ ಕಜಾನ್ ಜನತೆ ಬೆಚ್ಚಿ ಬಿದ್ದಿದ್ದಾರೆ.
ಘಟನೆಯಲ್ಲಿ ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಆದರೆ ಕಟ್ಟಡಗಳು ವ್ಯಾಪಕವಾಗಿ ಹಾನಿಗೊಳಗಾಗಿರುವುದಾಗಿ ವರದಿಗಳು ತಿಳಿಸಿವೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳು ರಷ್ಯಾದ ಕಜಾನ್ ನಗರದ ಮೇಲೆ ದಾಳಿ ನಡೆಸಿವೆ ಎಂದು ಹೇಳಲಾಗುತ್ತಿದೆ. ದಾಳಿಯಲ್ಲಿ 3 ಕಟ್ಟಡಗಳು ಹಾನಿಗೊಳಗಾಗಿದ್ದು, ಜನರನ್ನು ಅಲ್ಲಿಂದ ಸ್ಥಳಾಂತರಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಸ್ಥಳೀಯ ಆಡಳಿತವು ಜನರಿಗೆ ಊಟ, ಬಟ್ಟೆಗಳನ್ನು ಒದಗಿಸಿದೆ ಎಂದು ತಿಳಿದುಬಂದಿದೆ.
ಕಜನ್ ಮಾಸ್ಕೋದಿಂದ ಪೂರ್ವಕ್ಕೆ ಸುಮಾರು 800 ಕಿಲೋಮೀಟರ್ ದೂರದಲ್ಲಿದೆ. ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ಪ್ರಕಾರ, ರಷ್ಯಾದ ವಾಯು ರಕ್ಷಣಾ ವ್ಯವಸ್ಥೆಯ ಕಜಾನ್ ನಗರದಲ್ಲಿ ಡ್ರೋನ್ ಅನ್ನು ಉರುಳಿಸಿದ್ದು, ಕೆಲವು ಡ್ರೋನ್ ಗಳು ಅದನ್ನು ಭೇದಿಸಿ ದಾಳಿನಡೆಸಿವೆ ಎಂದು ತಿಳಿಸಿದೆ.
9/11 ಶೈಲಿಯ ದಾಳಿ
ಉಕ್ರೇನ್ ದಾಳಿಯು, ಸಪ್ಟೆಂಬರ್ 11, 2001ರಂದು ನ್ಯೂಯಾರ್ಕ್ ವಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಕ್ಕೆ ವಿಮಾನದ ಮೂಲಕ ದಾಳಿ ನಡೆಸಿದ ಘಟನೆಯನ್ನು ನೆನಪಿಸುವಂತಿದೆ.
ಸೆಪ್ಟೆಂಬರ್ 11, 2001ರಂದು ಅಮೆರಿಕಗೆ ಅಲ್ ಕೈದಾ ಉಗ್ರ ಸಂಘಟನೆ ಶಾಕ್ ಕೊಟ್ಟಿದ್ದರು. ಈ ಭೀಕರ ಉಗ್ರ ದಾಳಿಯಲ್ಲಿ 2977 ಅಮಾಯಕರು ಮೃತರಾಗಿದ್ದರು.
ಅಲ್ ಖೈದಾ ಎಂಬ ಇಸ್ಲಾಮಿಕ್ ಉಗ್ರ ಸಂಘಟನೆ ಅಧಿನಾಯಕ ಒಸಾಮಾ ಬಿನ್ ಲಾಡೆನ್ ನೇತೃತ್ವದಲ್ಲಿ ಅಮೆರಿಕದ ಮೇಲೆ ಉಗ್ರ ದಾಳಿ ನಡೆಸಿತ್ತು. ನ್ಯೂಯಾರ್ಕ್ ನ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರದ ಮೇಲೆ ವಿಮಾನ ದಾಳಿ ನಡೆದಿತ್ತು. ಸೆಪ್ಟೆಂಬರ್ 11, 2001 ಈ ಘಟನೆ ನಡೆದಿದ್ದು ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಉಕ್ರೇನ್ ನ ಈ ದಢೀರ್ ದಾಳಿಯು 9/11ರ ಅಟ್ಯಾಕ್ ಸ್ಮರಿಸುವಂತೆ ಮಾಡಿದೆ.
ಮಂಗಳೂರು/ನವದೆಹಲಿ: ಭಾರತದ ವಿರುದ್ಧ ಯಾವಾಗ್ಲೂ ಕುತಂತ್ರಿ ಚೀನಾ ಕತ್ತಿಮಸಿಯುತ್ತಲೇ ಇರುತ್ತೆ. ಸುಮ್ಮನೆ ಇರಲಾರದೇ ಗಡಿಯಲ್ಲಿ ಭಾರತವನ್ನು ಕೆಣಕುತ್ತೆ. ಇತ್ತೀಚೆಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಚೀನಾ ವಿದೇಶಾಂಗ ಸಚಿವ ವಾಂಗ್ ಯಿಯನ್ನ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದರು.
ಆದರೆ, ಭೂತಾನ್ ಭಾಗ ಎನ್ನಲಾಗುವ ಪ್ರದೇಶದಲ್ಲಿ ಕಳೆದ ಎಂಟು ವರ್ಷಗಳಲ್ಲಿ ಚೀನಾ 22 ಗ್ರಾಮಗಳನ್ನು ನಿರ್ಮಾಣ ಮಾಡಿದೆ. ಉಪಗ್ರಹ ಚಿತ್ರಗಳನ್ನು ಆಧರಿಸಿ ಈ ವರದಿಯನ್ನು ತಯಾರಿಸಲಾಗಿದೆ. ಭಾರತದ ಸಿಕ್ಕಿಂ ಸಮೀಪ ಈ ಗ್ರಾಮಗಳ ನಿರ್ಮಾಣವಾಗಿದ್ದು, ಕಳವಳ ವ್ಯಕ್ತವಾಗಿದೆ.
ಚೀನಾದ ಸೇನಾಪಡೆಗಳಿಗೆ ಸುಲಭ ಸಂಚಾರ
ಡೋಕ್ಲಾಂನಲ್ಲಿ ಗ್ರಾಮ ನಿರ್ಮಾಣವಾಗುತ್ತಿರುವುದರಿಂದ ಈ ಪ್ರಸ್ಥಭೂಮಿಯ ಅತ್ಯಂತ ದಕ್ಷಿಣಕ್ಕೆ ಚೀನಾದ ಸೇನಾಪಡೆಗಳು ಸಂಚಾರ ಮಾಡಲು ಅವಕಾಶ ದೊರೆಯುತ್ತದೆ. ಇದು ಭಾರತಕ್ಕೆ ತೀರ ಸಮೀಪವಾಗಿದ್ದು, ಇದು ಚೀನಾದ ಮಿಲಿಟರಿ ನೆಲೆಗಳಿಗೂ ಸಮೀಪದಲ್ಲಿದೆ.
ಡೋಕ್ಲಾಂ ಬಿಕ್ಕಟ್ಟು
2017ರಲ್ಲಿ ಡೋಕ್ಲಾಂನ ಈ ಪ್ರದೇಶವು ಭಾರತ ಮತ್ತು ಚೀನಾದ ಸೈನಿಕರ ನಡುವೆ 73 ದಿನಗಳ ಕಾಲದ ಬಿಕ್ಕಟ್ಟಿನ ಪ್ರದೇಶವಾಗಿತ್ತು. ಹೀಗಾಗಿ ಈ ಪ್ರಸ್ಥಭೂಮಿಯ ದಕ್ಷಿಣಕ್ಕೆ ಚೀನಾದ ಸೇನೆಗಳು ತಲುಪುವ ರಸ್ತೆ ಮಾರ್ಗಗಳ ನಿರ್ಮಾಣವನ್ನು ತಡೆಯಲು ಭಾರತ ಸರಕಾರ ಮಧ್ಯಪ್ರವೇಶಿಸಿತ್ತು.
ಇದೀಗ ಮತ್ತೆ ಡೋಕ್ಲಾಂನಲ್ಲಿ ಗ್ರಾಮಗಳ ನಿರ್ಮಾಣ ವೇಗ ಪಡೆಯುತ್ತಿದ್ದು ಉಪಗ್ರಹ ಚಿತ್ರಗಳು ಭಾರತದ ಆತಂಕಕ್ಕೆ ಕಾರಣವಾಗಿದೆ.
Pingback: ಸಾರಿಗೆ ನೌಕರರ ಮುಷ್ಕರ; ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹ ! - NAMMAKUDLA NEWS - ನಮ್ಮಕುಡ್ಲ ನ್ಯೂಸ್