Connect with us

    LATEST NEWS

    ಭಿಕ್ಷುಕಿಯ ಪ್ಲಾಸ್ಟಿಕ್ ಚೀಲದೊಳಗೆ 40 ಪರ್ಸ್, 75000 ರೂ. ನಗದು ಪತ್ತೆ

    Published

    on

    ಇಂದೋರ್: ಮಧ್ಯಪ್ರದೇಶದ ಎರಡನೇ ಅತಿದೊಡ್ಡ ನಗರ ಮತ್ತು ಆ ರಾಜ್ಯದ ವಾಣಿಜ್ಯ ರಾಜಧಾನಿಯಾದ ಇಂದೋರ್ ನಗರದಲ್ಲಿ ಜನವರಿ 1, 2025ರಿಂದ ಭಿಕ್ಷೆ ಬೇಡುವ ಭಿಕ್ಷುಕರಿಗೆ ಮತ್ತು ಭಿಕ್ಷೆ ನೀಡುವ ವ್ಯಕ್ತಿಗಳ ವಿರುದ್ಧ ಎಫ್​ಐಆರ್​ ದಾಖಲಿಸುವುದು ಸೇರಿದಂತೆ ಇತರೆ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಇಂದೋರ್ ಜಿಲ್ಲಾಡಳಿತ ಪ್ರಕಟಿಸಿದೆ. ಈ ನಡುವೆ ಇಂದೋರ್​ನಲ್ಲಿ ಭಿಕ್ಷುಕಿಯೊಬ್ಬಳು ಪತ್ತೆಯಾಗಿದ್ದು, ಆಕೆಯನ್ನು ತನಿಖೆ ನಡೆಸಿದಾಗ, ಆಕೆಯ ಬಳಿ ಇದ್ದ ಹಣ ಕಂಡು ಅಧಿಕಾರಿಗಳು ಶಾಕ್​ ಆಗಿದ್ದಾರೆ.

    ಇಂದೋರ್​ನ ಹೈಕೋರ್ಟಿನ ಅನತಿ ದೂರದಲ್ಲಿರುವ ಮಸೀದಿಯ ಹೊರಗೆ ಕುಳಿತು ಭಿಕ್ಷೆ ಬೇಡುತ್ತಿದ್ದ ಭಿಕ್ಷುಕಿಯೊಬ್ಬಳನ್ನು ವಶಕ್ಕೆ ಪಡೆಯಲಾಗಿದ್ದು,ಆಕೆಯ ಬಳಿ ಇದ್ದ ಪ್ಲಾಸ್ಟಿಕ್ ಚೀಲ ಪರಿಶೀಲಿಸಲಾಗಿದೆ. ಭಿಕ್ಷುಕಿಯ ಬ್ಯಾಗ್‌ನಲ್ಲಿ ಸುಮಾರು 30-40 ಪರ್ಸ್‌ಗಳು ಪತ್ತೆಯಾಗಿದ್ದು, ಅದರಲ್ಲಿ ಸುಮಾರು 75 ಸಾವಿರ ರೂ. ಇರುವುದನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಭಿಕ್ಷುಕಿ ಮಸೀದಿಯ ಬಳಿ ಬಹಳ ಸಮಯದಿಂದ ಭಿಕ್ಷೆ ಬೇಡುತ್ತಿರುವುದು ತಿಳಿದುಬಂದಿದೆ. ನಂತರ ಆಕೆಯನ್ನು ಅಲ್ಲಿಂದ ಉಜ್ಜಯಿನಿಯ ಆಶ್ರಮಕ್ಕೆ ಸ್ಥಳಾಂತರಿಸಲಾಗಿದೆ.

    ಮಹಿಳೆಯೊಂದಿಗೆ ಮತ್ತೊಬ್ಬ ಭಿಕ್ಷುಕನನ್ನೂ ವಶಕ್ಕೆ ಪಡೆದ ಸರ್ಕಾರಿ ತಂಡ ಆತನಿಂದ 20 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ. ತಾನು ಪ್ರತಿದಿನ ಬೇರೆ ಬೇರೆ ಪ್ರದೇಶದಿಂದ ಇಂದೋರ್‌ಗೆ ಭಿಕ್ಷೆ ಬೇಡಲು ಬರುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾನೆ. ಜನವರಿ 1ರ ನಂತರ ನಗರದಲ್ಲಿ ಯಾರೇ ಭಿಕ್ಷಾಟನೆ ಮಾಡುತ್ತಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

    LATEST NEWS

    ಹೊಸ ವರ್ಷಕ್ಕೆ ರಾಜ್ಯದಲ್ಲಿ ಮದ್ಯದ ಹೊಳೆ : ನಿನ್ನೆ ಒಂದೇ ದಿನ ಭರ್ತಿ 308 ಕೋಟಿ ರೂ. ಮದ್ಯ ಸೇಲ್.!

    Published

    on

    ಬೆಂಗಳೂರು: ರಾಜ್ಯದಲ್ಲಿ ಹೊಸವರ್ಷ 2025 ನ್ನು ಅತ್ಯಂತ ಸಂಭ್ರಮದಿಂದ ಸ್ವಾಗತಿಸಲಾಗಿದ್ದು, ಈ ನಡುವೆ ಕರ್ನಾಟಕದಲ್ಲಿ ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ.

    ಹೌದು, 2024 ರ ಡಿಸೆಂಬರ್ 31 ರಂದು ರಾಜ್ಯಾದ್ಯಂತ ಬರೋಬ್ಬರಿ 308 ಕೋಟಿ ರೂ. ಮದ್ಯ ಮಾರಾಟ ಮಾಡಲಾಗಿದೆ. 2023 ರ ಡಿಸೆಂಬರ್ 31 ರಂದು 193 ಕೋಟಿ ರೂ. ಮದ್ಯ ಮಾರಾಟ ಮಾಡಲಾಗಿತ್ತು. 2,92,339 ಬಿಯರ್ ಬಾಕ್ಸ್ ಮಾರಾಟದಿಂದ 57.75 ಕೋಟಿ ರೂ. ಒಟ್ಟು 7,76,042 ಬಾಕ್ಸ್ ಮದ್ಯ ಮಾರಾಟದಿಂದ 308 ಕೋಟಿ ರೂ. ಬಂದಿದೆ.

    ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡಿಸೆಂಬರ್ 28ರ ಶನಿವಾರ 408.53 ಕೋಟಿ ರೂಪಾಯಿ ಮದ್ಯ ಮಾರಾಟವಾಗಿದೆ. ಡಿಸೆಂಬರ್ 27ರಂದು ರಜೆ ಘೋಷಣೆ ಮಾಡಿದ್ದರಿಂದ ಮದ್ಯ ಖರೀದಿ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 28 ರಂದು ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ. ರಾಜ್ಯಾದ್ಯಂತ ಡಿ. 28ರಂದು 6,22,062 ಕೇಸ್ ವಿಸ್ಕಿ ಮತ್ತು ಇತರ ಸ್ಪಿರಿಟ್ ಖರೀದಿ ಮಾಡಲಾಗಿದೆ. 4,04,998 ಕೇಸ್ ಬಿಯರ್ ಸೇರಿದಂತೆ 10,27,060 ಕೇಸ್ ಮದ್ಯ ಮಾರಾಟ ಆಗಿದೆ. ಇದರಲ್ಲಿ 80.58 ಕೋಟಿ ಮೊತ್ತದ ಬಿಯರ್ ಇದ್ದರೆ, 327,50 ಕೋಟಿ ಮೌಲ್ಯದ ಸ್ಪಿರಿಟ್ಸ್ ಮಾರಾಟವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    Continue Reading

    LATEST NEWS

    ಸೇನಾ ವಾಹನ ದು*ರಂತ ಪ್ರಕರಣ; ಹುತಾತ್ಮ ಯೋಧ ದಿವಿನ್ ಅಂತ್ಯಕ್ರಿಯೆ

    Published

    on

    ಮಂಗಳೂರು/ಮಡಿಕೇರಿ: ಜಮ್ಮು ಕಾಶ್ಮೀರದ ಪೂಂಚ್ ನಲ್ಲಿ ನಡೆದ ಸೇನಾ ವಾಹನ ದುರಂತದಲ್ಲಿ ಗಂ*ಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ದಿವಿನ್ (28) ಭಾನುವಾರ ರಾತ್ರಿ ಹುತಾತ್ಮರಾಗಿದ್ದಾರೆ. ಅವರ ಪಾರ್ಥಿ*ವ ಶರೀರ ಹೂಟ್ಟುರು ತಲುಪಿದೆ.

    ಓದಿದ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
    ಹುತಾತ್ಮ ಯೋಧ ದಿವಿನ್ ವಿದ್ಯಾಭ್ಯಾಸ ಮಾಡಿದ ಕುಶಾಲನಗರದ ಜಿಎಂಪಿ ಶಾಲಾ ಮೈದಾನದಲ್ಲಿ ಕೆಲ ಗಂಟೆಗಳ ಕಾಲ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.
    ಬಳಿಕ ಕುಶಾಲನಗರದಿಂದ ನೇರವಾಗಿ ಆಲೂರು ಸಿದ್ದಾಪುರಕ್ಕೆ ಪಾರ್ಥಿವ ಶರೀರ ಕೊಂಡೊಯ್ಯಲಾಗುತ್ತದೆ.

    ಇದನ್ನೂ ಓದಿ: ಸೇನಾ ವಾಹನ ಅಪಘಾತ ಪ್ರಕರಣ : ಕೋಮಾದಲ್ಲಿದ್ದ ಕೊಡಗಿನ ಯೋಧ ವಿಧಿವಶ..!

    ಬಳಿಕ ದಿವಿನ್ ಅವರ ತೋಟದಲ್ಲಿರುವ ಅವರ ತಂದೆ ಸಮಾಧಿ ಪಕ್ಕದಲ್ಲಿ ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

    ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಪ್ರಪಾತಕ್ಕೆ ಉರುಳಿದ ದುರಂ*ತದಲ್ಲಿ ಕೊಡಗಿನ ಯೋಧ ಗಂ*ಭೀರ ಗಾಯಗೊಂಡಿದ್ದರು. ದುರಂತದಲ್ಲಿ ಕರ್ನಾಟಕದ ಮೂವರು ಸೈನಿಕರು ಹುತಾತ್ಮರಾಗಿದ್ದರು.

    Continue Reading

    LATEST NEWS

    ಹೊಸ ವರ್ಷದ ಮೊದಲ ದಿನವೇ ಗ್ರಾಹಕರಿಗೆ ಗುಡ್ ನ್ಯೂಸ್ !

    Published

    on

    ಮಂಗಳೂರು: ಹೊಸ ವರ್ಷದ ಸಂಭ್ರಮದಲ್ಲಿದ ಜನರಿಗೆ ಈಗ ಗೂಡ್ ನ್ಯೂಸ್ ಒಂದು ಸಿಕ್ಕಿದೆ. ಎಲ್ ಪಿಜಿ ಗ್ಯಾಸ್ ಸಿಲಿಂಡರ್ ರಿಫಿಲ್ ಮತ್ತಷ್ಟು ಅಗ್ಗವಾಗಿದೆ.

    ಸರ್ಕಾರಿ ತೈಲ ಕಂಪನಿಗಳು ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ ಇಳಿಕೆ ಮಾಡಲು ನಿರ್ಧರಿಸಿದ್ದು, ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಲ್ಲಿದೆ.

    ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ
    ಪ್ರತಿ ಎಲ್​​ಪಿಜಿ ಸಿಲಿಂಡರ್ ಬೆಲೆಯಲ್ಲಿ 14.50 ರೂಪಾಯಿ ಇಳಿಕೆ ಆಗಿದೆ. ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ನ ಹೊಸ ಬೆಲೆ 1818.50 ರೂಪಾಯಿಯಿಂದ 1804 ರೂಪಾಯಿಗೆ ಇಳಿಕೆ ಆಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ತಿಂಗಳ ಮೊದಲನೇ ದಿನದಂದು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪರಿಶೀಲಿಸಿ ಹೊಸ ಬೆಲೆ ಪ್ರಕಟಿಸುತ್ತವೆ.

    ಹೊಸ ವರ್ಷದಂದು ತಮ್ಮ ಗ್ರಾಹಕರಿಗೆ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಲು ನಿರ್ಧರಿಸಿವೆ. ಕೋಲ್ಕತ್ತಾದಲ್ಲಿ 1911 ರೂಪಾಯಿಗೆ ಇಳಿಕೆ ಆಗಿದೆ. ಈ ಮುಂಚೆ 1927 ರೂಪಾಯಿ ಪಾವತಿ ಮಾಡಬೇಕಾಗಿತ್ತು. ಮುಂಬೈನಲ್ಲಿ ಸಿಲಿಂಡರ್ ಬೆಲೆ 1756 ರೂಪಾಯಿಗೆ ಇಳಿಕೆ ಆಗಿದೆ. ಚೆನ್ನೈನಲ್ಲಿ ಇವತ್ತಿನಿಂದ 19 ಕೆಜಿ ಸಿಲಿಂಡರ್​ಗೆ 1966 ರೂಪಾಯಿ ಪಾವತಿ ಮಾಡಬೇಕಾಗುತ್ತದೆ.
    ಈ ಮೂಲಕ ಹೊಸ ವರ್ಷದ ಸಂಭ್ರಮದಲ್ಲಿದ್ದ ಗ್ರಾಹಕರಿಗೆ ಎಲ್ ಪಿಜಿ ಬೆಲೆ ಇಳಿಕೆಯಾಗಿರುವುದು ಭರ್ಜರಿ ಸಿಹಿ ಸುದ್ದಿ ಸಿಕ್ಕಿದಂತಾಗಿದೆ.

    Continue Reading

    LATEST NEWS

    Trending