bangalore
ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟಾ ಅವರ ಒಂದಿಷ್ಟು ಪರಿಚಯ..!
Published
9 months agoon
By
Adminನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ 42 ವರ್ಷದ ಬೃಜೇಶ್ ಚೌಟ ಅವರನ್ನು ಅಭ್ಯರ್ಥಿಯಾಗಿಸಿದೆ. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಅಭ್ಯರ್ಥಿಯನ್ನಾಗಿ ಮಾಡಿದೆ. ರಾಜ್ಯದಿಂದ ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಸೇನೆಯಲ್ಲಿ ದೇಶಕ್ಕಾಗಿ ದುಡಿದು ಬಂದ ವ್ಯಕ್ತಿಯೊಬ್ಬರಿಗೆ ಸಂಸತ್ ಸ್ಪರ್ಧೆಯ ಟಿಕೆಟ್ ಕೊಡಲಾಗಿದೆ.
ಕ್ಯಾಪ್ಟನ್ ಬ್ರಿಜೇಶ್ ಚೌಟಾ ಯಾರು … ಅವರ ಹಿನ್ನೆಲೆ ಏನು..?
ಕ್ಯಾಪ್ಟನ್ ಬ್ರಿಜೇಶ್ ಚೌಟಾ ಯಾರು … ಅವರ ಹಿನ್ನೆಲೆ ಏನು..?
ತುಳುನಾಡಿನ ಪ್ರತಿಷ್ಠಿತ ಬಂಟ ಸಮೂದಾಯದ ಗುತ್ತಿನ ಮನೆತನದಲ್ಲಿ ಜನಿಸಿರುವ ಬೃಜೇಶ್ ಚೌಟ ಮಂಗಳೂರಿನ ರಥ ಬೀದಿಯಲ್ಲಿ ವಾಸವಾಗಿದ್ದಾರೆ. ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಕೊಂಡಿದ್ದು ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂ ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಯುಪಿಎಸ್ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು. ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು.
ಸಂಘ ಪರಿವಾರದ ನಂಟು ಹೇಗೆ ..?
ಬಾಲ್ಯದಲ್ಲಿಯೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ಸೇವೆ ಆರಂಭಿಸಿದ್ದರು. ಸಂಘದ ಪ್ರೇರಣೆಯಿಂದ ಮುಂದೆ ಭಾರತೀಯ ಸೇನೆಗೆ ಸೇರಿದ್ದರು. ಸೇನಾ ನಿವೃತ್ತಿಯ ಬಳಿಕ ಮಂಗಳೂರಿಗೆ ಆಗಮಿಸಿ ಆರೆಸ್ಸೆಸ್ ನ ವಿವಿಧ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದರು. ದೇಶ ಸೇವೆಗೆ ತನ್ನನ್ನು ಮುಡಿಪಾಗಿಟ್ಟುಕೊಂಡ ಚೌಟಾ ಇದೇ ಕಾರಣದಿಂದ ಅವಿವಾಹಿತರಾಗಿ ಉಳಿದುಕೊಂಡಿದ್ದಾರೆ ಅನ್ನೋದೇ ಅವರ ದೇಶ ಪ್ರೇಮಕ್ಕೆ ಸಾಕ್ಷಿ .
ರಾಜಕೀಯಕ್ಕೆ ಕ್ಯಾಪ್ಟನ್ ಎಂಟ್ರಿ…!
2013ರಲ್ಲಿ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯ ರಾಜಕೀಯಕ್ಕಿಳಿದಿದ್ದರು. 2016-19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡು ಸಂಸದ ನಳಿನ್ ಕುಮಾರ್ ಜೊತೆಗೂಡಿ ಪಕ್ಷದ ಕೆಲಸ ಮಾಡಿದ್ದರು. 2019ರಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಚೌಟ, 2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಪ್ರಭಾರಿಯಾಗಿದ್ದರು. ಇದಲ್ಲದೆ, 2015ರಿಂದ ಕೇರಳ, ಕರ್ನಾಟಕ, ದೆಹಲಿ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಕರ್ತವ್ಯ ನಿರ್ವಹಿಸಿದ್ದರು. ರಾಜ್ಯ ಬಿಜೆಪಿಯ ಚುನಾವಣಾ ಸಮಿತಿ ಭಾಗವಾಗಿರುವ ಯುವ ಸಂವಾದ ಘಟಕದಲ್ಲಿ ರಾಜ್ಯ ಸಹ ಸಂಚಾಲಕರಾಗಿ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಮಲೈ ಅವರ ಜೊತೆ ರಾಜ್ಯಾದ್ಯಂತ ಪ್ರವಾಸ ಮಾಡಿದ್ದರು.
ಪಕ್ಷದ ಜೊತೆಗೆ ಸಾಮಾಜಿಕ ಸೇವೆಯಲ್ಲೂ ಕ್ಯಾಪ್ಟನ್..!
ಪಕ್ಷದ ಚಟುವಟಿಕೆ ಜೊತೆಗೆ ಸಮರ್ಥನ್ ಫೌಂಡೇಶನ್ ಮೂಲಕ ಮಂಗಳೂರಿನಲ್ಲಿ ಸಾಮಾಜಿಕ ಸೇವಾ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಫೌಂಡೇಶನ್ ಮೂಲಕ ತಮ್ಮದೇ ಸ್ನೇಹಿತರನ್ನು ಕಟ್ಟಿಕೊಂಡು ಸದ್ದಿಲ್ಲದೆ ಸೇವಾ ಚಟುವಟಿಕೆಯನ್ನು ನಡೆಸಿದ್ದರು. ಇದಲ್ಲದೆ, ಮೆಟ್ರೋ ಪಾಲಿಟನ್ ನಗರಗಳಲ್ಲಿ ಮಾತ್ರ ಇರುತ್ತಿದ್ದ ಲಿಟ್ ಫೆಸ್ಟ್ ಎನ್ನುವ ರಾಷ್ಟ್ರ ಮಟ್ಟದ ಸಾಹಿತ್ಯ ಕೂಟವನ್ನು ಮಂಗಳೂರಿನಲ್ಲಿ ಸಮಾನ ಮನಸ್ಕರೊಂದಿಗೆ ಸೇರಿ ಸಂಘಟಿಸಿದ್ದರು. ರಾಷ್ಟ್ರೀಯ ಮಟ್ಟದ ವಾಗ್ಮಿಗಳು, ಬೇರೆ ಬೇರೆ ಕ್ಷೇತ್ರದ ಸಾಧಕರನ್ನು ಜೊತೆಗೂಡಿಸಿ ಸಂವಾದ, ಧನಾತ್ಮಕ ಸಾಹಿತ್ಯ ಚಟುವಟಿಕೆಗೆ ವೇದಿಕೆ ಒದಗಿಸಿದ್ದಲ್ಲದೆ, 2019ರಿಂದ ಪ್ರತಿ ವರ್ಷ ಲಿಟ್ ಫೆಸ್ಟ್ ಸಂಘಟಿಸುತ್ತಿದ್ದಾರೆ, ಆಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಯುವ ಸಾಹಿತ್ಯ ಪ್ರಿಯರಿಗೆ ರಾಷ್ಟ್ರ ಮಟ್ಟದ ದಿಗ್ಗಜರ ಜೊತೆಗೆ ಸಂವಾದಕ್ಕೆ ವೇದಿಕೆ ಸೃಷ್ಟಿಸಿದ್ದರು.
ಕರಾವಳಿಯ ಜಾನಪದ ಕ್ರೀಡೆ ಕಂಬಳದ ಆಯೋಜನೆ
2015ರಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬೃಜೇಶ್ ಚೌಟ ಒಬ್ಬರು. ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿಯೇ ಕಂಬಳ ಆಯೋಜಿಸಲು ತೀರ್ಮಾನಿಸಿದರು, ಯುವ ಸ್ನೇಹಿತರ ಬಳಗವನ್ನು ಕಟ್ಟಿಕೊಂಡು ಸತತ ಏಳು ವರ್ಷಗಳಿಂದ ಕುಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಕಂಬಳ ಆಯೋಜನೆ. ಹೀಗೆ ಎಲ್ಲಾ ಕ್ಷೇತ್ರದಲ್ಲೂ ಮಿಂಚಿರುವ ವಿದ್ಯಾವಂತ, ಅವಿವಾಹಿತ, ಹಾಗೂ ಪ್ರತಿಷ್ಟಿತ ಮನೆತನದ ಬ್ರಿಜೇಶ್ ಚೌಟ ಬಿಜೆಪಿಯ ಸರಿಯಾದ ಆಯ್ಕೆ ಅನ್ನಲೇ ಬೇಕಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
bangalore
ಮಂಜುಮ್ಮೆಲ್ ಬಾಯ್ಸ್ ಸಿನಿಮಾ ರೀತಿಯ ಘಟನೆ; ಸೆಲ್ಫಿ ಹುಚ್ಚಿಗೆ ಬಲಿಯಾಗಬೇಕಿದ್ದ ಯುವತಿ ರೋಚಕ ಪಾರು !
Published
4 weeks agoon
28/10/2024ಕೊಚ್ಚಿಯಿಂದ ಹತ್ತು ಜನ ಸ್ನೇಹಿತರು ಕೊಡೈಕೆನಾಲ್‌ಗೆ ಹೋಗುತ್ತಾರೆ. ಕಮಲ್ ಹಾಸನ್ ಅಭಿನಯದ ಗುಣ ಚಿತ್ರದಲ್ಲಿನ ಗುಹೆಗಳನ್ನು ನೋಡಲೆಂದು ತೆರಳುತ್ತಾರೆ. ನಿರ್ಬಂಧಿತ ಪ್ರದೇಶ ಎಂದು ಗೊತ್ತಿದ್ದರೂ ಆಳವಾದ ಗುಹೆಗಳನ್ನು ಪ್ರವೇಶಿಸುತ್ತಾರೆ. ಆದರೆ, ಸ್ನೇಹಿತನೊಬ್ಬ ಆಕಸ್ಮಿಕವಾಗಿ ಆಳವಾದ ಕಣಿವೆಯಲ್ಲಿ ಬೀಳುತ್ತಾನೆ. ಉಳಿದ ಸ್ನೇಹಿತರು ಅವನನ್ನು ಹೇಗೆ ಹೊರಗೆ ಕರೆತಂದರು ಎಂಬುದೇ ಮಂಜುಮ್ಮೆಲ್ ಬಾಯ್ಸ್ ಸಿನಿಮಾದ ಕತೆ.
ನಿನ್ನೆ (ಅ.27) ತುಮಕೂರು ನಗರದ ಸಮೀಪದ ಮಂದಾರಗಿರಿ ಬೆಟ್ಟದ ತಪ್ಪಲಿನಲ್ಲಿರುವ ಮೈದಾಳ ಕೆರೆ ಕೋಡಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ವಿದ್ಯಾರ್ಥಿನಿ ಹಂಸ (20) ಕೆಳಕ್ಕೆ ಬಿದ್ದು ಕಾಣೆಯಾಗಿದ್ದಳು. ಸಂಜೆಯಾದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಪಾಯಕ್ಕೆ ಸಿಲುಕಿರುವ ಸಾಧ್ಯತೆಯಿದೆ ಎನ್ನಲಾಗಿತ್ತು. ಅಲ್ಲದೆ, ಒಂದು ಹಂತದಲ್ಲಿ ಹಂಸ ಸತ್ತೇ ಹೋಗಿದ್ದಾಳೆ ಎಂದು ಭಾವಿಸಲಾಗಿತ್ತು. ಆದರೆ, ಅದೃಷ್ಟವಶಾತ್ ಹಂಸ ಬದುಕಿದ್ದಾಳೆ. ಪೊಟರೆಯಲ್ಲಿ ಸಿಲುಕಿಕೊಂಡಿದ್ದ ಆಕೆಯನ್ನು ಇದೀಗ ರಕ್ಷಣೆ ಮಾಡಲಾಗಿದೆ.
ಗುಬ್ಬಿ ತಾಲೂಕಿನ ಶಿವಪುರದ ಸೋಮನಾಥ್ ಎಂಬುವವರ ಪುತ್ರಿ ಹಂಸ ಸ್ನೇಹಿತರೊಂದಿಗೆ ಮೈದಾಳ ಕೆರೆ ನೋಡಲು ತೆರಳಿದ್ದರು. ಈ ವೇಳೆ ಕೋಡಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದಿದ್ದರು. ನೀರಿನಲ್ಲಿ ಜಾರಿ ಕಲ್ಲಿನ ಪೊಟರೆಯಲ್ಲಿ ಸಿಲುಕಿದ್ದರು.
bangalore
ಅತ್ತಿಗೆ ಮೇಲೆ ಸ್ನೇಹಿತನ ಕಣ್ಣು ; ವಾರ್ನ್ ಮಾಡಿದ್ದಕ್ಕೆ ಬರ್ಬರ ಹ*ತ್ಯೆ
Published
4 weeks agoon
27/10/2024ಮಂಗಳೂರು/ಬೆಂಗಳುರು : ನಿನ್ನೆ (ಅ.26) ತಡರಾತ್ರಿ ಸುಲ್ತಾನ್ ತಿಪ್ಪಸಂದ್ರದ ಅಮ್ಜಾದ್ ಎಂಬಾತ ರೋಹಿದ್ ಅಲಿಯಾಸ್ ಅರ್ಬಾಜ್ನನ್ನು ಕೊ*ಲೆ ಮಾಡಿರುವ ಘಟನೆ ಜಮಾಲ್ ಷಾ ನಗರದಲ್ಲಿ ನಡೆದಿದೆ.
ರೋಹಿದ್ ಅಲಿಯಾಸ್ ಅರ್ಬಾಜ್(26) ಮೃ*ತ ವ್ಯಕ್ತಿ.
ಘಟನೆ ಹಿನ್ನಲೆ :
ರೋಹಿದ್ ಮತ್ತು ಅಮ್ಜಾದ್ ದೂರದ ಸಂಬಂಧಿಗಳು ಮತ್ತು ಸ್ನೇಹಿತರಾಗಿದ್ದರು. ಹೀಗಿರುವಾಗ ಅಮ್ಜಾದ್ ಆಗಾಗ ರೋಹಿದ್ ಮನೆಗೆ ಬರುತ್ತಿದ್ದ. ಈ ವೇಳೆ ರೋಹಿದ್ ಅಣ್ಣನ ಹೆಂಡತಿ ಅಂದರೆ ಅತ್ತಿಗೆ ಮೇಲೆ ಕಣ್ಣು ಹಾಕಿದ್ದಾನೆ. ರೋಹಿದ್‌ಗೆ ತಿಳಿಯದಂತೆ ತನ್ನ ಅತ್ತಿಗೆ ಮೊಬೈಲ್ ನಂಬರ್ ಪಡೆದುಕೊಂಡು ಆಗ್ಗಾಗ ಫೋನ್ ಹಾಗೂ ವಿಡಿಯೋ ಕಾಲ್ ಮಾಡಿ ರೋಹಿದ್ ಅತ್ತಿಗೆಗೆ ಪಿಡಿಸುತ್ತಿದ್ದ ವಿಷಯ ತಿಳಿದ ರೋಹಿದ್ ಮತ್ತು ಸಂಬಂಧಿಕರು ಕಳೆದ ಎರಡು ತಿಂಗಳ ಹಿಂದೆ ಅಮ್ಜಾದ್ ಮನೆ ಬಳಿ ಹೋಗಿ ಗಲಾಟೆ ಮಾಡಿ ಎಚ್ಚರಿಕೆ ಕೊಟ್ಟು ಬಂದಿದ್ದರು.
ನಿನ್ನೆ (ಅ.26) ಬೆಂಗಳೂರಿಗೆ ಕೆಲಸದ ಮೇಲೆ ಹೋಗಿದ್ದ ರೋಹಿದ್ ರಾತ್ರಿ ವಾಸಪ್ ಬರುತ್ತಿದ್ದಂತೆ ‘ನಿನ್ನ ಜೊತೆಗೆ ಮಾತನಾಡಬೇಕು ಬಾ’ ಎಂದು ಅಮ್ಜಾದ್ ಜಮಾಲ್ ಷಾ ನಗರದ ಹೊರಗೆ ಕರೆದಿದ್ದಾನೆ. ಅಮ್ಜಾದ್ ಕರೆದ ಜಾಗಕ್ಕೆ ರೋಹಿದ್ ಹೋಗಿದ್ದಾನೆ. ಈ ವೇಳೆ ಜಗಳ ತೆಗೆದು ರೋಹಿದ್ ಎದೆಗೆ ಚಾಕು*ವಿನಿಂದ ಇ*ರಿದು ಅಲ್ಲಿಂದ ಅಮ್ಜಾದ್ ಪರಾರಿಯಾಗಿದ್ದಾನೆ.
ಆರೋಪಿ ಬಂಧನ :
ಇನ್ನು ವಿಷಯ ತಿಳಿಯುತ್ತಿದ್ದಂತೆ ಕೋಲಾರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಕ್ಷಿಪ್ರಕಾರ್ಯಾಚರಣೆ ನಡೆಸಿ ಕೊ*ಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಅಮ್ಜದ್ನನ್ನು ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಕಲೆ*ಹಾಕುತ್ತಿದ್ದಾರೆ. ಇತ್ತ ಮಾಡಿದ ತಪ್ಪನ್ನು ಪ್ರಶ್ನೆ ಮಾಡಿದ್ದಕ್ಕೆ ರೋಹಿದ್ ಕುಟುಂಬ ಇವತ್ತು ಅನಾಥವಾಗಿ ಕಣ್ಣೀಕು ಹಾಕುವಂತಾಗಿದೆ.
LATEST NEWS
ಪತ್ನಿಗೆ ಬೆಂ*ಕಿ ಹಚ್ಚಿ ತಲೆಮರೆಸಿಕೊಂಡಿದ್ದ ವ್ಯಕ್ತಿ 12 ವರ್ಷಗಳ ಬಳಿಕ ಅರೆಸ್ಟ್
ಯಶ್ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ ಖ್ಯಾತ ಕ್ರಿಕೆಟಿಗನ ಪತ್ನಿ
ಬಿಗ್ಬಾಸ್ ಮನೆಯಲ್ಲಿನ ಸ್ಪರ್ಧಿಗಳ ವಯಸ್ಸೆಷ್ಟು ಗೊತ್ತಾ..?
ಮಂಗಳೂರಲ್ಲಿ ಸಮುದ್ರಕ್ಕೆ ಜಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆಗೆ ಯತ್ನ
ಚಲಿಸುತ್ತಿರುವ ಬಸ್ಸಿನಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟ ಯುವಕ
ನಿದ್ದೆಯಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ: ನಿಮಗೆ ಗೊತ್ತಾ!
Trending
- LATEST NEWS4 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru2 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION4 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- LATEST NEWS6 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!