Thursday, June 30, 2022

ಮಾಜಿ ಸಚಿವ ಬಿ.ಜೆ ಪುಟ್ಟಸ್ವಾಮಿ ಪಟ್ಟಾಭಿಷೇಕಕ್ಕೆ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಬಿ.ಜೆ ಪುಟ್ಟಸ್ವಾಮಿ ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿ ಸ್ಥಾನ ಅಲಂಕರಿಸಲು ಬ್ರೇಕ್ ಬಿದ್ದಿದೆ. ಇದರೊಂದಿಗೆ ಗಾಣಿಗ ಮಠದ ಪೀಠಾಧಿಪತಿ ವಿವಾದಕ್ಕೆ ಹೊಸ ತಿರುವು ಸಿಕ್ಕಿದೆ.

ಪುಟ್ಟಸ್ವಾಮಿ ಪೀಠಾರೋಹಣ ಮಾಡುವುದಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಮಧ್ಯಂತರ ಆದೇಶಿಸಿದೆ.


ಇವರು ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಸ್ಥಾನ ಅಧಿರೋಹಣ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ ಜೂ. 13ಕ್ಕೆ ವಿಚಾರಣೆ ಮುಂದೂಡಿದೆ.

ನಾಳೆ ಮಾದನಾಯ್ಕನಹಳ್ಳಿಯಲ್ಲಿ ಇರುವ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿಯಾಗಿ ಅಧಿಕಾರ ವಹಿಸಿಕೊಳ್ಳುತ್ತೇನೆ.

ಕೈಲಾಸ ಮಠದ ಜಯತೀರ್ಥ ಸ್ವಾಮೀಜಿಗಳು ಪಟ್ಟಾಭಿಷೇಕ ಮಹೋತ್ಸವ ನೆರವೇರಿಸಿಕೊಡಲಿದ್ದಾರೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

Hot Topics

ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಆಯ್ಕೆ : ಇಂದು ಸಂಜೆ 7.30 ಪ್ರಮಾಣವಚನ..!

ಮುಂಬೈ : ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ದೇವೇಂದ್ರ ಫಡ್ನವೀಸ್​ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿದ ನಂತರ ಜಂಟಿ ಸುದ್ದಿಗೋಷ್ಠಿ...

ಕುಂದಾಪುರ: ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗಲೇ ಕುಸಿದು ಕೃಷಿಕ ಜೀವಾಂತ್ಯ…

ಕುಂದಾಪುರ: ಭತ್ತದ ಗದ್ದೆಯಲ್ಲಿ ಕೃಷಿ ಕೆಲಸ ಮಾಡುತ್ತಿರುವಾಗಲೇ ಕೃಷಿಕರೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕುಂದಾಪುರದ ಕೆರಾಡಿ ಗ್ರಾಮದ ದೀಟಿ ಎಂಬಲ್ಲಿ ನಿನ್ನೆ ನಡೆದಿದೆ.ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ನಿವಾಸಿ ಪ್ರಸ್ತುತ ಕುಂದಾಪುರ...

ಸುಳ್ಯ: ಭೂಕಂಪನ ಪೀಡಿತ ಗ್ರಾಮಕ್ಕೆ ಸಚಿವ ಅಂಗಾರ ಭೇಟಿ

ಸುಳ್ಯ: ಇತ್ತೀಚೆಗೆ ಕೊಡಗು ಜಿಲ್ಲೆಯ ಚೆಂಬುವಿನಲ್ಲಿ ಉಂಟಾದ ಭೂಕಂಪನದಿಂದಾಗಿ ಸುಳ್ಯ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದ್ದು ಇದರ ಪರಿಣಾಮವಾಗಿ ತಾಲೂಕಿನ ಸಂಪಾಜೆ ಗ್ರಾಮ ವ್ಯಾಪ್ತಿಯಲ್ಲಿ ಹಾನಿಯಾದ ಪ್ರದೇಶಗಳಲ್ಲಿನ ಮನೆಗಳಿಗೆ ಸಚಿವರಾದ ಎಸ್. ಅಂಗಾರರವರು...