Monday, July 4, 2022

ಮಂಗಳೂರು: ಫೆ. 26ರಂದು ಕೊಂಕಣಿ ಭವನಕ್ಕೆ ಶಿಲಾನ್ಯಾಸ

ಮಂಗಳೂರು: ನಗರದ ಉರ್ವಾಸ್ಟೋರ್‌ನಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕೊಂಕಣಿ ಭವನಕ್ಕೆ ಫೆ. 26ರ ಶನಿವಾರ ಬೆಳಗ್ಗೆ 11 ಗಂಟೆಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ.


ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜಗದೀಶ್ ಪೈ ಅಧ್ಯಕ್ಷತೆ ವಹಿಸಲಿದ್ದಾರೆ.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದರಾದ ನಳೀನ್ ಕುಮಾರ್ ಕಟೀಲ್,

ದಕ್ಷಿಣ ವಿಧಾನಸಭಾ ಶಾಸಕ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಕೆ., ಚಿಕ್ಕಮಗಳೂರು ವಿಧಾನಸಭಾ ಶಾಸಕ ಸಿ.ಟಿ. ರವಿ, ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ,

ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‍ಸಾರ್, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಮ್ ಉಚ್ಚಿಲ, ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮಿನಾರಾಯಣ ಕಜೆಗದ್ದೆ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕಣಿವೆಗೆ ಉರುಳಿದ ಶಾಲಾ ಬಸ್‌: 16 ವಿದ್ಯಾರ್ಥಿಗಳು ಕೊನೆಯುಸಿರು

ಕುಲು: ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್‌ ಕಣಿವೆಗೆ ಉರುಳಿ ಬಿದ್ದ ಪರಿಣಾಮ 16 ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.‘ಸಾಯಿಂಜ್‌ಗೆ ತೆರಳುತ್ತಿದ್ದ ಬಸ್ ಬೆಳಿಗ್ಗೆ 8.30ರ...

‘ಕುಡ್ಲ ನಾದುಂಡುಯೇ’: ಮಂಗಳೂರಿನಲ್ಲಿ ಮುಗಿಯುತ್ತಿಲ್ಲ ಪೌರಕಾರ್ಮಿಕರ ಧರಣಿ

ಮಂಗಳೂರು: ರಾಜ್ಯದಾದ್ಯಂತ ಪೌರ ಕಾರ್ಮಿಕರ ಮುಷ್ಕರ ನಾಲ್ಕನೇ ದಿನದತ್ತ ಸಾಗಿದ ಹಿನ್ನೆಲೆ  ಮಂಗಳೂರಿನಲ್ಲಿ ತ್ಯಾಜ್ಯ ವಿಲೇವಾರಿ ಮಾಡದೆ ಗಬ್ಬುನಾತ ಹೊಡೆಯುತ್ತಿದೆ.ಧಾರಾಕಾರವಾಗಿ ಮಳೆಯೂ ಸುರಿಯುತ್ತಿರುವುದರಿಂದ ತ್ಯಾಜ್ಯಗಳು ಚರಂಡಿಯಲ್ಲಿ, ನೀರಿನಲ್ಲಿ ತೇಲುತ್ತಿದೆ. ದ್ರವ ತ್ಯಾಜ್ಯಗಳು ಜನರ...

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲು-ಓರ್ವನ ರಕ್ಷಣೆ

ಬಂಟ್ವಾಳ: ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರಲ್ಲಿ ಇಬ್ಬರು ನೀರು ಪಾಲಾಗಿದ್ದು, ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದರೆ, ಮತ್ತೋರ್ವ ಬಾಲಕ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಳ್ಳಾಲ ತಾಲೂಕಿನ ಸಜಿಪಪಡು...