Connect with us

LATEST NEWS

ಕಾರ್ಕಳ ಕ್ಷೇತ್ರದ ಶಾಸಕರು ಜನರ ಕಣ್ಣಿಗೆ ಮಣ್ಣೆರೆಚಿದ್ದಾರೆ-ಶುಭದ ರಾವ್ ಆರೋಪ..!

Published

on

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಯರ್ಲಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಂ ಪಾರ್ಕಿನಲ್ಲಿ ಕೆಲವೊಂದು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರವಾಸಿಗರ ವೀಕ್ಷಣೆಗೆ ಇಲ್ಲಿ ಅವಕಾಶವನ್ನು ನಿರ್ಬಂಧಿಸಲಾಗಿದೆ.

ಆದರೆ ಕಾರ್ಕಳ ಕ್ಷೇತ್ರದ ಶಾಸಕರು ಇಲ್ಲಿನ ಜನರ ಕಣ್ಣಿಗೆ ಮಣ್ಣೆರೆಚಿದ್ದು, ಜನರನ್ನು ವಂಚಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಶುಭದ ರಾವ್ ಆರೋಪಿಸಿದ್ದಾರೆ. ಈಗಾಗಲೇ ಇಲ್ಲಿದ್ದ ಪರಶುರಾಮನ ಮೂರ್ತಿಯನ್ನು ಬದಲಾಯಿಸಿ ಬೇರೆ ಕಂಚಿನ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಈ ಮೂಲಕ ಇಲ್ಲಿ ಶಾಸಕರು ಜನತೆಯನ್ನು ಹೇಗೆ ಮೋಸ ಮಾಡಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ ಎಂದರು. ಪರಶುರಾಮನ ಥೀಂ ಪಾರ್ಕ್‌ನಲ್ಲಿ ಇದ್ದ ಮೂರ್ತಿ ನಕಲಿ ಎನ್ನುವುದು ಇದೀಗ ಸ್ಪಷ್ಟವಾಗಿದೆ. ಕಾರ್ಕಳದ ಶಾಸಕರು ನಕಲಿ ಪ್ರತಿಮೆ ಸ್ಥಾಪನೆ ಮಾಡಿ ಜನತೆಗೆ ದ್ರೋಹ ಎಸಗಿದ್ದಾರೆ. ಅವರ ಈ ಕೆಲಸ ಖಂಡಿಸಿ ನಾವು ಪ್ರತಿಭಟನೆ ಮಾಡಲಿದ್ದೇವೆ. ಅವರು ಮಾಡಿದ ಮೋಸದ ಸಂಗತಿಯನ್ನು ನಾವು ಜನತೆ ಮುಂದಿಡಲಿದ್ದೇವೆ ಎಂದು ಶುಭದ ರಾವ್ ಹೇಳಿದ್ದಾರೆ.

 

Click to comment

Leave a Reply

Your email address will not be published. Required fields are marked *

DAKSHINA KANNADA

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರಿಸಿಕೊಂಡಿದ್ದ ಪ್ರಮುಖ ಆರೋಪಿ ಅರೆಸ್ಟ್

Published

on

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನ ಬಂಧನವಾಗಿದೆ. ಆರೋಪಿ ಮಹಮ್ಮದ್ ಮುಸ್ತಾಫಾನನ್ನು ಎನ್‌ಐಎ ಅಧಿಕಾರಿಗಳು ಹಾಸನದ ಸಕಲೇಶಪುರ ತಾಲೂಕಿನ ಗ್ರಾಮವೊಂದರಲ್ಲಿ ಬಂಧಿಸಿದ್ದಾರೆ. ಆರೋಪಿ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪೈಚಾರು ಗ್ರಾಮದ ಶಾಂತಿನಗರ ನಿವಾಸಿ.

nettaru

2022 ರ ಜುಲೈ 26 ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆ ನಡೆಸಲಾಗಿತ್ತು. ಕೋಳಿ ಅಂಗಡಿ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು ಅಂಗಡಿ ಬಂದ್ ಮಾಡುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದರು.

ಮುಂದೆ ಓದಿ..; ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತ ಚಲಾವಣೆ.!! ವಿವಾದಕ್ಕೆ ಕಾರಣವಾದ ವೀಡಿಯೋ

ಬಾರಿ ಸದ್ದು ಮಾಡಿದ್ದ ಪ್ರವೀಣ್ ನೆಟ್ಟಾರು ಹತ್ಯಾ ಪ್ರಕರಣದಲ್ಲಿ ಪಿಎಫ್‌ಐ ಕೈವಾಡ ಇದೆ ಎಂದು ಆರೋಪಿಸಿ ಅಂದಿನ ಸರ್ಕಾರ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿತ್ತು. ತನಿಖೆ ನಡೆಸಿದ ಎನ್‌ಐಎ ತಂಡ ಕರ್ನಾಟಕ ಹಾಗೂ ಕೇರಳದಲ್ಲಿ ಜಾಲಾಡಿ ಹಲವು ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಿತ್ತು. ಗೌಪ್ಯ ಸಭೆ ನಡೆಸಿದ ಸಭಾಂಗಾಣ, ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಛೇರಿಗಳಿಗೆ ಭೀಗ ಜಡಿದಿತ್ತು. ಆದ್ರೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಮಾಹಿತಿ ನೀಡಿದವರಿಗೆ ಎನ್‌ಐಎ ಬಹುಮಾನದ ಘೋಷಣೆ ಮಾಡಿತ್ತು. ಇಷ್ಟೇ ಅಲ್ಲದೆ ಆರೋಪಿಗಳ ಆಸ್ತಿಮುಟ್ಟುಗೋಲು ಹಾಕುವ ಬಗ್ಗೆಯೂ ನೋಟಿಸು ಜಾರಿ ಮಾಡಿತ್ತು.

ಇದೀಗ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಎನ್‌ಐಎ ತಂಡ ಆರೋಪಿಗೆ ಆಶ್ರಯ ನೀಡಿದವನ ಸಹಿತ ಮೂವರನ್ನು ಬಂಧಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಂಧಿತರಲ್ಲಿ ಓರ್ವ ಆರೋಪಿ ಮಹಮ್ಮದ್ ಮುಸ್ತಾಫಾ ಅನ್ನೋದು ಸ್ಪಷ್ಟವಾಗಿದ್ದು ಮತ್ತೋರ್ವ ಯಾರು ಅನ್ನೋದು ಇನ್ನೂ ಮಾಹಿತಿ ಲಭ್ಯವಾಗಬೇಕಾಗಿದೆ. ಇನ್ನು ಆರೋಪಿ ಮುಸ್ತಫಾ ಪೈಚಾರ್ ಪತ್ತೆಗಾಗಿ  5 ಲಕ್ಷ ರೂ ಬಹುಮಾನವನ್ನು ಎನ್.ಐ.ಎ.ವಿಶೇಷ ನ್ಯಾಯಾಲಯ ಘೋಷಣೆ ಮಾಡಿತ್ತು.

ಆರೋಪಿಗಳ ಪತ್ತೆಗೆ ಬಹುಮಾನ ಘೋಷಿಸಿದ ಎನ್‌ಐಎ:

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೊಡಾಜೆಯ ಕೊಡಾಜೆ ಅದ್ದ ಎಂಬವರ ಮಗ ಮೊಹಮ್ಮದ್ ಷರೀಫ್(53)- 5 ಲಕ್ಷ ಹಾಗೂ ನೆಕ್ಕಿಲಾಡಿಯ ಅಗ್ನಾಡಿ ಹೌಸ್ ನ ಅಬೂಬಕರ್ ಮಗ ಮಸೂದ್ ಕೆ.ಎ (40)-5 ಲಕ್ಷ ಒಟ್ಟು 10 ಲಕ್ಷ ಬಹುಮಾನವನ್ನು ಎನ್‍ಐಎ ಘೋಷಿಸಿದೆ.

ಆರೋಪಿಗಳು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಡಂಗಡಿ ‌ಗ್ರಾಮದ ನೌಷದ್ (32 ವರ್ಷ), ಕೊಡಗು ಜಿಲ್ಲೆ ಸೋಮವಾರಪೇಟೆಯ ಚೌಡ್ಲಿ ನಿವಾಸಿ ಅಬ್ದುಲ್‌ ನಾಸಿರ್‌ (41 ವರ್ಷ), ಸೋಮವಾರಪೇಟೆಯ ಹನಗಲ್‌ ಕಲಂದಕೂರ್‌ ನಿವಾಸಿ, ಅಬ್ದುಲ್‌ ರಹಿಮಾನ್‌ (36 ವರ್ಷ)ಈ ಮೂವರ ಬಗ್ಗೆ ಸುಳಿವು ನೀಡಿದವರಿಗೆ ತಲಾ 2 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‌ಐಎ ತಿಳಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಮುಸ್ತಫಾ ಪೈಚಾರ್ ಮತ್ತು ಅಬುಬಕ್ಕರ್ ಸಿದ್ಧೀಕ್ ಅವರು ತಲೆಮರೆಸಿಕೊಂಡಿದ್ದು, ಇವರು ಬೆಳ್ಳಾರೆ ಗ್ರಾಮದವರಾಗಿದ್ದಾರೆ. ಇವರನ್ನು ಹುಡುಕಿಕೊಟ್ಟಲ್ಲಿ ತಲಾ 5 ಲಕ್ಷ ಮತ್ತು 2 ಲಕ್ಷ ರೂ ಬಹುಮಾನವನ್ನು ಎನ್.ಐ.ಎ.ವಿಶೇಷ ನ್ಯಾಯಾಲಯ ಘೋಷಣೆ ಮಾಡಿತ್ತು.

Continue Reading

LATEST NEWS

ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತ ಚಲಾವಣೆ.!! ವಿವಾದಕ್ಕೆ ಕಾರಣವಾದ ವೀಡಿಯೋ

Published

on

ಮಧ್ಯ ಪ್ರದೇಶದ/ಮಂಗಳೂರು: ಮಧ್ಯಪ್ರದೇಶ ಬಿಜೆಪಿ ನಾಯಕನ ಪುತ್ರ ಅಪ್ರಾಪ್ತ ಬಾಲಕ ಮತಗಟ್ಟೆಗೆ ಹೋಗಿ ಮತ ಚಲಾಯಿಸಿದ್ದಾನೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ವೀಡಿಯೋ ಬಾರಿ ವಿವಾದಕ್ಕೆ ಕಾರಣವಾಗಿದೆ.

bjp voting

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

ಮಧ್ಯ ಪ್ರದೇಶದ ಬೆರಾಸಿಯಾ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಂಚಾಯತ್ ನಾಯಕ ವಿನಯ್ ಮೆಹ್ರಾ ಚುನಾವಣೆ ವೇಳೆ ಮಗನನ್ನು ಮತಗಟ್ಟೆಗೆ ಕರೆದುಕೊಂಡು ಹೋಗಿದ್ದಾರೆ. ಮಗನಿಂದಲೇ ಬಿಜೆಪಿ ಚಿಹ್ನೆಯನ್ನು ಒತ್ತಿಸಿದ್ದಾರೆ. ಅಲ್ಲದೇ ಅದನ್ನು ವೀಡಿಯೋ ಮಾಡಿ  ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.  ಇನ್ನು ಮಧ್ಯಪ್ರದೇಶ ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು ಈ ಬಗ್ಗೆ ಆಕ್ಷೇಪ ವ್ಯಕ್ತ ಪಡಿಸಿದ್ದು ಇದೀಗ ವಿವಾದಕ್ಕೆ ಎಡೆಮಾಡಿದೆ.

Continue Reading

LATEST NEWS

ಶಾಲೆಗೆ 100% ಫಲಿತಾಂಶ ತಂದುಕೊಟ್ಟ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯ ಭೀಕರ ಹ*ತ್ಯೆ

Published

on

ಕೊಡಗು : ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯ ಭೀಕರ ಹ*ತ್ಯೆ ಮಾಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಕೃತ್ಯ ನಡೆದಿದೆ. ವಿದ್ಯಾರ್ಥಿನಿ ತಲೆ ಕತ್ತರಿಸಿ ಬರ್ಬರವಾಗಿ ಹ*ತ್ಯೆ ಮಾಡಲಾಗಿದೆ. ಮೀನಾ ಹ*ತ್ಯೆಯಾದ ವಿದ್ಯಾರ್ಥಿನಿ.

ಶೇ. 100 ಫಲಿತಾಂಶ ತಂದು ಕೊಟ್ಟಿದ್ದ ವಿದ್ಯಾರ್ಥಿನಿ :

ಸೂರ್ಲಬ್ಬಿ ಸರ್ಕಾರಿ ‌ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಏಕೈಕ ವಿದ್ಯಾರ್ಥಿನಿಯಾಗಿದ್ದ ಮೀನಾ, ಪರೀಕ್ಷೆಯಲ್ಲಿ ಪಾಸಾಗುವ ಮೂಲಕ ತನ್ನ ಶಾಲೆಗೆ ಶೇಕಡಾ 100 ಫಲಿತಾಂಶ ತಂದು ಕೊಟ್ಟಿದ್ದಳು. ಬೆಳಗ್ಗೆಯಿಂದಲೂ ತಾನು ಪಾಸಾದ ಖುಷಿಯಲ್ಲಿ ಇದ್ದ ಮೀನಾ, ಶಾಲೆಯತ್ತ ಬಂದು ತೇರ್ಗಡೆಯಾದ ಖುಷಿಯಲ್ಲಿ ಮನೆಗೆ ಹೋಗುತ್ತಿದ್ದಳು. ಇದೇ ಸಂದರ್ಭದಲ್ಲಿ ಆಕೆಯನ್ನು ಅಡ್ಡಗಟ್ಟಿ ಕಿರಾತಕ ಹ*ತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ : ಎಸ್‌ಎಸ್‌ಎಲ್‌ಸಿ ಅಲ್ಲಿ ಫೇಲ್ ಎಂದು ತಿಳಿದು ಆತ್ಮಹತ್ಯೆ ಮಾಡಿದ ಯುವತಿ

ಮದುವೆ ರದ್ದಾದ ಹಿನ್ನೆಲೆ ಕೃತ್ಯ : 

ಅಪ್ರಾಪ್ತ ಬಾಲಕಿಯ ವಿವಾಹ ಮಾಡುವುದಕ್ಕೆ ಪೋಷಕರು ಸಿದ್ಧತೆ ನಡೆಸಿದ್ರು‌ ಎನ್ನಲಾಗಿದೆ. ಈ ವಿಷಯ ಗ್ರಾಮಸ್ಥರ ಗಮನಕ್ಕೆ ಬಂದಿತ್ತು. ಹೀಗಾಗಿ ಸೋಮವಾರಪೇಟೆ ಪೊಲೀಸರಿಂದ ಅಪ್ರಾಪ್ತ ಬಾಲಕಿಯ ಎಂಗೆಜ್‌ಮೆಂಟ್ ತಡೆಯಲಾಗಿತ್ತು ಎನ್ನಲಾಗಿದೆ.

ಗುರುವಾರ ಶಾಲೆಗೆ ಹೋಗಿ ಬರುವ ವೇಳೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗಬೇಕಾಗಿದ್ದ ಯುವಕ ಹ*ತ್ಯೆ ಮಾಡಿರುವ‌ ಶಂಕೆ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

LATEST NEWS

Trending