Connect with us

DAKSHINA KANNADA

ಅಯ್ಯಯ್ಯೋ.. ತುಳುನಾಡ ದೈವಾರಾಧ್ಯನಿಗೆ ಸರ್ಕಾರದ ಅಧಿಕೃತ ವೆಬ್ ಸೈಟ್‌ನಲ್ಲೇ ಅವಮಾನ..!  

Published

on

ಮಂಗಳೂರು: ಕರಾವಳಿಯ ಜನರು ಭಕ್ತಿಯಿಂದ ಪೂಜಿಸುವ ದೈವಾರಾಧನೆಗೆ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ವೆಬ್ ಸೈಟ್‌ನಲ್ಲಿ ಅವಮಾನ ಮಾಡಲಾಗಿದೆ.

ವೆಬ್ ಸೈಟ್‌ನಲ್ಲಿ ದೈವಾರಾಧನೆ ವಿಚಾರದಲ್ಲಿ ಅನುಚಿತವಾಗಿ ಬರೆಯಲಾಗಿದ್ದು, ತುಳುವರ ವ್ಯಾಪಕ ವಿರೋಧದ ಬಳಿಕ ಇಲಾಖೆ ವೆಬ್ ಸೈಟ್‌ನ ಪೇಜ್ ಅನ್ನೇ ಡಿಲೀಟ್ ಮಾಡಿದ್ದಾರೆ.

ಪ್ರವಾಸೋದ್ಯಮ ಇಲಾಖೆಯ ವೆಬ್ ಸೈಟ್‌ನಲ್ಲಿ ದೈವಾರಾಧನೆಯ ಪರಿಕಲ್ಪನೆಯನ್ನೇ ಅಡಿಮೇಲು ಮಾಡಿದ್ದಾರೆ ಎಂದು ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಆಕ್ಷೇಪಾರ್ಹ ಪದ ಉಪಯೋಗಿಸಿರುವುದನ್ನು ತುಳುವಿನ ಟ್ರೋಲ್ ಪೇಜ್‌ನವರು ಟ್ರೋಲ್ ಮಾಡಿದ್ದರು. ಇದು ಗಮನಕ್ಕೆ ಬರುತ್ತಿದ್ದಂತೆ ಪ್ರವಾಸೋದ್ಯಮ ಇಲಾಖೆಯು ವೆಬ್ ಸೈಟ್‌ನಲ್ಲಿನ ‘ಭೂತ ಕೋಲ’ ಪೇಜ್ ಅನ್ನು ಡಿಲಿಟ್ ಮಾಡಿದೆ.

ಭೂತಾರಾಧನೆ ಎಂಬ ತಲೆಬರಹದಲ್ಲಿರುವ ದೈವಾರಾಧನೆ ವಿಚಾರ ಟ್ರೋಲ್ ಆಗಿದೆ. ಇಲ್ಲಿ ಭೂತದ ಕೋಲ ಎಂಬ ಪದವು “ಭೂತದ ಕೊಳ” ಎಂದಾಗಿದೆ‌. ಅಲ್ಲದೆ ಭೂತಾರಾಧನೆಯನ್ನು ದೆವ್ವದ ಆರಾಧನೆ ಎಂದು ಬರೆಯಲಾಗಿದೆ.

ಭೂತಗಳನ್ನು ಪ್ರತಿನಿಧಿಸುವ ವಿಗ್ರಹಗಳನ್ನು ಮೆರವಣಿಗೆಯಲ್ಲಿ ಡ್ರಮ್‌ಗಳನ್ನು ಬಾರಿಸುವುದು ಮತ್ತು ಪಟಾಕಿಗಳನ್ನು ಸಿಡಿಸುವ ಮೂಲಕ ಮೆರವಣಿಗೆ ಮಾಡುತ್ತಾರೆ.

ಕತ್ತಿ ಮತ್ತು ಗಂಟೆಗಳೊಂದಿಗೆ ಕುಣಿಯುತ್ತ ನರ್ತಕಿ ತಾನು ಪ್ರತಿನಿಧಿಸುವ ದೆವ್ವದ ಅನುಕರಣೆಯಲ್ಲಿ ಸುತ್ತುತ್ತಾನೆ‌. ಉದ್ರಿಕ್ತವಾಗಿ ಮೇಲಕ್ಕೆ ಕೆಳಕ್ಕೆ ಹೆಜ್ಜೆ ಹಾಕುತ್ತಾನೆ ಎಂದು ಆಕ್ಷೇಪಾರ್ಹವಾಗಿ ಬರೆಯಲಾಗಿದೆ.

ದೈವಾರಾಧನೆಯ ಅರಿವೇ ಇಲ್ಲದ ವ್ಯಕ್ತಿಯಿಂದ ಈ ಬರಹವನ್ನು ಬರೆಯಲಾಗಿದೆ. ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ವೆಬ್ ಸೈಟ್ ಅನ್ನು ನಂಬಿ ಕರಾವಳಿಗೆ ಬರುವ ಜನರು ಭೂತಾರಾಧನೆಯ ಪರಿಕಲ್ಪನೆಯನ್ನೇ ಅಪಾರ್ಥಮಾಡಿಕೊಳ್ಳುವ ಸಾಧ್ಯತೆಗಳಿವೆ.

ಇಲಾಖೆ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿ ಈ ಅವಮಾನದ ಬರಹಗಳನ್ನು ಬರೆದವರು ಮತ್ತು ಬರೆಸಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending