Connect with us

BANTWAL

ಕೊಳೆ ರೋಗ ಪರಿಹಾರ ಕೇಳಿದ್ದಕ್ಕೆ “ಪರಿಹಾರ ತಿಕ್ಕುಜಿ‌ ಪೊರ್ಬುಲೆ, ಈರ್ ನೈಂಟಿ ಪರ್ದ್ ಜೆಪ್ಪುಲೆ”

Published

on

ಬಂಟ್ವಾಳ: ಬಂಟ್ವಾಳದ ಗೋಳ್ತಮಜಲು ಗ್ರಾಮದಲ್ಲಿ ನಡೆದ ಗ್ರಾಮವಾಸ್ತವ್ಯದಲ್ಲಿ ಗ್ರಾಮಸ್ಥರೋರ್ವರು, ತಾಲೂಕು ಆಡಳಿತ ವಿರುದ್ಧ ಕಿಡಿಕಾರಿದ್ದು, ತಮಗೆ ಬಾರದೆ ಇರುವ ಕೊಳೆರೋಗದ ಪರಿಹಾರ ಮೊತ್ತ ಕೇಳಿದ್ದಕ್ಕೆ ತಾಲೂಕು ಕಚೇರಿಯ ಸಿಬ್ಬಂದಿ ಹೇಳಿದ ಅವಹೇಳನಕಾರಿ ಮಾತನ್ನು ತಹಶೀಲ್ದಾರ್ ಅವರ ಮುಂದಿಟ್ಟಿದ್ದಾರೆ.

ಕೊಳೆ ರೋಗದ ಪರಿಹಾರ ಕೇಳಿರುವುದಕ್ಕೆ, ಗೋಳ್ತಮಜಲು ಗ್ರಾಮದ ಕಲಾವನ ನಿವಾಸಿ ವಲೇರಿಯನ್ ಡಿ.ಸೋಜ ಅವರಿಗೆ ತಾಲೂಕು ಕಚೇರಿ ಸಿಬ್ಬಂದಿಯೋರ್ವರು “ಪರಿಹಾರ ತಿಕ್ಕುಜಿ‌ ಪೊರ್ಬುಲೆ, ಈರ್ ನೈಂಟಿ ಪರ್ದ್ ಜೆಪ್ಪುಲೆ” ( ಪರಿಹಾರ ಸಿಗುವುದಿಲ್ಲ , 90 ಹಾಕಿ ಮಲಗಿ) ಎಂದು ಹೀಯಾಳಿಸಿರುವ ವಿಚಾರವನ್ನು ಬಿಚ್ಚಿಟ್ಟಿದ್ದಾರೆ.

ಜೊತೆಗೆ ತನ್ನನ್ನು ಹೀಯಾಳಿಸಿರುವ ವ್ಯಕ್ತಿ ಇದೇ ವೇದಿಕೆಯಲ್ಲಿ ಇದ್ದಾರೆ, ಆದರೆ ನಾನು ಹೆಸರು ಈ ಸಂದರ್ಭದಲ್ಲಿ ಹೇಳುವುದಿಲ್ಲ ಎಂದು ಮಾತನಾಡಿ ತಾಲೂಕು ‌ಕಚೇರಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ತಹಶಿಲ್ದಾರ್ ಸ್ಮಿತಾರಾಮು ಮಾತನಾಡಿ ‘ನಿಮ್ಮ ಸಮಸ್ಯೆಯನ್ನು ಹೇಳಿ, ಹಿಂದೆ ಆದ ಘಟನೆಯನ್ನು ಕೆದಕಬೇಡಿ ಎಂದಿದ್ದಾರೆ. ಬಳಿಕ ಸಮಸ್ಯೆಯನ್ನು ಜಿಲ್ಲಾಧಿಕಾರಿ ಗಳ ಗಮನಕ್ಕೆ ತಂದು ಪರಿಹರಿಸುವುದಾಗಿ ಭರವಸೆ ನೀಡಿದರು.

ಅದೇ ವ್ಯಕ್ತಿ ಇನ್ನೊಂದು ‌ಸಮಸ್ಯೆ ಹೇಳಿದ್ದು, ತೋಡಿನ ಬಳಿಯ ಪರಂಬೋಕು ಸ್ಥಳಕ್ಕೆ ಮಣ್ಣು ತುಂಬಿಸಿರುವುದರಿಂದ ತೋಡಿನ‌ನೀರು ತನ್ನ ತೋಟಕ್ಕೆ ಬಿದ್ದು ನಷ್ಟವುಂಟಾಗಿದೆ, ಈ ಕುರಿತು ಪಿ.ಡಿ.ಒ.ಅವರ ಗಮನಕ್ಕೆ ತಂದರೂ‌ ಸ್ಪಂದನೆ ಸಿಕ್ಕಿಲ್ಲ ಎಂದು ಆರೋಪಿಸಿದರು.


ಇದರ ಬಗ್ಗೆ ವಿಜಯಶಂಕರ್ ಅವರಲ್ಲಿ ತಹಶೀಲ್ದಾರ್ ಮಾಹಿತಿ ಕೇಳಿದ್ದು, ಸಂಬಂಧ ಪಟ್ಟ ವ್ಯಕ್ತಿ ಗೆ ನೋಟಿಸ್ ನೀಡಿರುವುದಾಗಿ ತಿಳಿಸಿದರು.

ಗ್ರಾಮವಾಸ್ತವ್ಯದಲ್ಲಿ ಗರಿಷ್ಠ ಮನವಿಗಳು ಕಂದಾಯ ಇಲಾಖೆಗೆ ಬಂದಿದ್ದು, ಹಾಗಾದರೆ ಬರೀ ಗ್ರಾಮ ವಾಸ್ತವ್ಯದಲ್ಲಿ ಮಾತ್ರ ಮನವಿ, ದೂರು ನೀಡುವುದಾದರೆ ಉಳಿದ ದಿನಗಳಲ್ಲಿ ತಾಲೂಕು ‌ಕಚೇರಿಯವರು ಏನು ಮಾಡುತ್ತಿದ್ದಾರೆ, ? ಎಂದು ಸಾರ್ವಜನಿಕರು ಪ್ರಶ್ನೆ ಮಾಡುವಂತಾಗಿದೆ.
ಗ್ರಾಮ ವಾಸ್ತವ್ಯಕ್ಕೆ ಕಲೆಕ್ಷನ್ ಯಾಕೆ.

ಹಿಂದೆ ವೀರಕಂಬದಲ್ಲಿ ನಡೆದ ಗ್ರಾಮ ವಾಸ್ತವ್ಯದಲ್ಲಿ ದೇಣೆಗೆ ಸಂಗ್ರಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಸ್ವತಃ ಐದು ಸಾವಿರ ರೂ ನೀಡಿರುವ ವ್ಯಕ್ತಿ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ.
ಒಬ್ಬರಿಂದಲೇ ಇಷ್ಟು ಮೊತ್ತ ಸಂಗ್ರಹವಾಗಿದ್ದರೆ, ಗ್ರಾಮದ ಇತರರಿಂದ ಎಷ್ಡು ಸಂಗ್ರಹವಾಗಿರಬಹುದು.

ಈ ರೀತಿ ಜನರಿಂದ ಹಣ ವಸೂಲಿ ಮಾಡಿ ಗ್ರಾಮ ವಾಸ್ತವ್ಯ ಯಾವ ಪುರುಷಾರ್ಥಕ್ಕೆ ಮಾಡುತ್ತಾರೆ ಎಂದು ತಾಲೂಕು ಕಚೇರಿಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಜೊತೆಗೆ ಗ್ರಾಮವಾಸ್ತವ್ಯದ ಖರ್ಚು ಎಷ್ಟು? ಅದರ ವೆಚ್ಚವನ್ನು ಯಾವ ಮೂಲದಿಂದ ಭರಿಸಬೇಕು ಎಂಬುದನ್ನು ಜಿಲ್ಲಾಧಿಕಾರಿಗಳು ಬಹಿರಂಗ ಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Click to comment

Leave a Reply

Your email address will not be published. Required fields are marked *

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!

Published

on

ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading

LATEST NEWS

Trending