Monday, May 23, 2022

ಕೊರಗಜ್ಜನ ವೇಷ ಧರಿಸಿದ ಪ್ರಕರಣ: ವರನ ಮನೆಗೆ ದುಷ್ಕರ್ಮಿಗಳಿಂದ ದಾಳಿ

ಕಾಸರಗೋಡು: ಕೊರಗಜ್ಜನ ವೇಷ ಧರಿಸಿ ವಿವಾದಕ್ಕೆ ಕಾರಣನಾಗಿದ್ದ ವರನ ಮನೆ ಮೇಲೆ ದಾಳಿ ನಡೆದಿದ್ದು, ಗೇಟ್‌ನ ಗೋಡೆಗೆ ಕಾವಿ ಬಣ್ಣ ಬಳಿಯಲಾಗಿದೆ ಎಂದು ತಿಳಿದು ಬಂದಿದೆ.
ಬೇಕೂರು ಅಗರ್ತಿಮೂಲೆಯಲ್ಲಿರುವ ಮನೆಗೆ ಕಲ್ಲೆಸೆಯಲಾಗಿದ್ದು, ಮುಂಭಾಗದ ಎರಡು ಕಿಟಿಕಿ ಗಾಜುಗಳು ಹುಡಿಯಾಗಿವೆ.


ಜ.17 ರಂದು ಮುಂಜಾನೆ ಬೈಕ್ ನಲ್ಲಿ ಬಂದ ಕಿಡಿಗೇಡಿಗಳು ಕೃತ್ಯ ನಡೆಸಿದ್ದು, ಈ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.
ಮುಂಜಾನೆ ಶಬ್ದ ಕೇಳಿ ಮನೆಯಲ್ಲಿದ್ದವರು ಬೊಬ್ಬೆ ಹಾಕಿದಾಗ ಇಬ್ಬರು ಬೈಕ್ ನಲ್ಲಿ ಪರಾರಿಯಾಗಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಆರೋಪಿಗಳಿಗಾಗಿ ಮಂಜೇಶ್ವರ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಭಾರಿ ಅಲೆಗೆ ದೋಣಿ ಮುಳುಗಡೆ-ಐವರು ಮೀನುಗಾರರ ರಕ್ಷಣೆ

ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ...

ಉಜಿರೆ SDM ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ನಿಧನ

ಬೆಳ್ತಂಗಡಿ: ಉಜಿರೆಯ ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ (66) ಅನಾರೋಗ್ಯದಿಂದಾಗಿ ನಿನ್ನೆ ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನರಾಗಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ...

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.ಲೆಬನಾನ್, ಸಿರಿಯಾ, ಟರ್ಕಿ,...