Connect with us

DAKSHINA KANNADA

ಪುತ್ತೂರಿನಲ್ಲಿ ಗಾಂಧಿ ಪ್ರತಿಮೆ ತಲೆಗೆ ಟೀ ಶರ್ಟ್ ಹಾಕಿ ವಿಕೃತಿ

Published

on

ಪುತ್ತೂರು: ಗಾಂಧಿ ಪ್ರತಿಮೆಗೆ ಟೀ ಶರ್ಟ್‌ ಹಾಕಿ ಕನ್ನಡಕ ತೆಗೆದು ವಿರೂಪಗೊಳಿಸಿದ ಘಟನೆ ಪುತ್ತೂರು ನಗರದ ಹೃದಯಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ನಡೆದಿದೆ.

ಘಟನೆ ಘಟನೆ ನಿನ್ನೆ ಬೆಳಕಿಗೆ ಬಂದಿದೆ. ಕಿಡಿಗೇಡಿಗಳು ಗಾಂಧಿ ಪ್ರತಿಮೆಯ ಕನ್ನಡಕ ತೆಗೆದು ಪ್ರತಿಮೆಯ ತಲೆಗೆ ಇಟ್ಟು ಹಾಗೂ ಟೀ ಶರ್ಟ್ ಹಾಕಿ ಅವಮಾನಗೊಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪುತ್ತೂರು ಡಿವೈಎಸ್​ಪಿ ಡಾ. ಗಾನ ಪಿ.ಕುಮಾರ್‌ ಮತ್ತು ಪುತ್ತೂರು ನಗರ ಠಾಣೆಯ ಸರ್ಕಲ್‌ ಇನ್ಸ್​ಪೆಕ್ಟರ್​ ಗೋಪಾಲ್‌ ನಾಯ್ಕ್‌ ಅವರು ಕಿಡಿಗೇಡಿಗಳ ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರಕರಣದ ಪುತ್ತೂರಿನ ಗಾಂಧಿ ಕಟ್ಟೆ ಸಮಿತಿಯವರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ

 

DAKSHINA KANNADA

ಮಸ್ಕತ್ ನಲ್ಲಿ ಬಿರುವ ಜವನೆರ್ ಸಂಯೋಜನೆಯ ಕ್ರೀಡಾಕೂಟ

Published

on

ಮಂಗಳೂರು/ಮಸ್ಕತ್  : ಬಿರುವ ಜವನೆರ್ ಮಸ್ಕತ್ ಆಯೋಜಿಸಿದ ಕರ್ನಾಟಕ ಪ್ರೀಮಿಯಾರ್ ಲೀಗ್ ನ 2024 ನೇ ಸಾಲಿನ ಕ್ರೀಡಾಕೂಟ ಮಸ್ಕತ್ ನ ಅಲ್ ಹೈಲ್ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು  ಓಮನ್ ಕ್ರಿಕೆಟ್ ನ ಟಿ20 ತಂಡದ ನಾಯಕ ವಿನಾಯಕ್ ಶುಕ್ಲ ನೆರವೇರಿಸಿದರು.

ಈ ಸಂದರ್ಭ  ಉತ್ತಮ್ ಕೋಟ್ಯಾನ್, ಮುಸ್ತಫಾ, ರಮಾನಂದ್ ಬಂಗೇರ, ಚಂದ್ರಕಾಂತ್ ಕೋಟ್ಯಾನ್, ದಾಮೋದರ್ ಶೆಟ್ಟಿ, ಪದ್ಮಾಕರ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.

ಪುದರ್ ದೀತಿಜಿ ನಾಟಕದ ಪೋಸ್ಟರ್ ಬಿಡುಗಡೆ :

ಇದೇ ಸಂದರ್ಭದಲ್ಲಿ ಜನವರಿ 10 ರಂದು ಮಸ್ಕತ್ ನ ಆಲ್ ಫಾಜಾಜ್ ಹೋಟೆಲ್ ನಲ್ಲಿ ನಡೆಯಲಿರುವ  ಕಾಪಿಕಾಡ್ ಅವರ ಚಾ ಪರ್ಕ ತಂಡದ ” ಪುದರ್ ದೀತಿಜಿ ” ನಾಟಕದ ಪೋಸ್ಟರ್ ಬಿಡುಗಡೆ ಹಾಗೂ ಪ್ರಚಾರ ಅಭಿಯಾನಕ್ಕೆ ಡಾ. ದೇವದಾಸ್ ಕಾಪಿಕಾಡ್ ಹಾಗೂ ಅರ್ಜುನ್ ಕಾಪಿಕಾಡ್ ಚಾಲನೆ ನೀಡಿದರು.

Continue Reading

DAKSHINA KANNADA

‘ಕಾಂತಾರ ಚಾಪ್ಟರ್ – 1’ ಗೆ ವಿ*ಘ್ನ; ಬಸ್ ಪ*ಲ್ಟಿಯಾಗಿ 6 ಮಂದಿ ಗಂ*ಭೀರ !

Published

on

ಉಡುಪಿ : ರಿಷಬ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಕಾಂತಾರ ಸಿನಿಮಾ ಕಲಾವಿದರಿದ್ದ ಬಸ್ ಪ*ಲ್ಟಿಯಾಗಿದ್ದು, ಆರು ಮಂದಿ ಗಂ*ಭೀರ ಗಾ*ಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಮುದೂರಿನಲ್ಲಿ ನಡೆದಿದೆ.

ಕರಾವಳಿ ಭಾಗದ ಬೇರೆ ಬೇರೆ ಕಡೆಗಳಲ್ಲಿ ‘ಕಾಂತಾರ ಚಾಪ್ಟರ್​ 1’ ಸಿನಿಮಾಗೆ ಶೂಟಿಂಗ್ ಮಾಡಲಾಗುತ್ತಿದೆ. ವಿವಿಧ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ಕಲಾವಿದರು ಕೊಲ್ಲೂರಿಗೆ ಹೋಗುತ್ತಿದ್ದ ವೇಳೆ ಅ*ಪಘಾತ ಸಂಭವಿಸಿದೆ. ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ವಿಜಯ್ ಕಿರಗಂದೂರು ಅವರು ‘ಕಾಂತಾರ: ಚಾಪ್ಟರ್​ 1’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಿಷಬ್​ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಭೂಮಿಕೆಯಲ್ಲೂ ನಟಿಸುತ್ತಿದ್ದಾರೆ. ‘ಕಾಂತಾರ’ ಚಿತ್ರದ ಪ್ರೀಕ್ವೆಲ್​ ಆಗಿ ‘ಕಾಂತಾರ: ಚಾಪ್ಟರ್​ 1’ ಸಿನಿಮಾ ಮೂಡಿಬರುತ್ತಿದೆ. ಬಸ್​ ಪ*ಲ್ಟಿ ಆಗಿದ್ದರಿಂದ ಚಿತ್ರತಂಡದಲ್ಲಿ ಬೇಸರ ಆವರಿಸಿದೆ.

ಪಲ್ಟಿಯಾದ ಹಿನ್ನಲೆ ಚಾಲಕನ ಮೇಲೆ ಹಲ್ಲೆಗೆ ವಾಹನದಲ್ಲಿದ್ದ ಹುಡುಗರು ಮುಂದಾಗಿದ್ದಾರೆ . ಬಸ್ ನಲ್ಲಿ ಹುಡುಗರು ವಾಹನ ಚಾಲಕ ನಿರ್ಲಕ್ಷದಿಂದ ವಾಹನ ಚಲಾಯಿಸಿದ್ದಾನೆ ಎಂದು ಆರೋಪಿಸಿ ಹ*ಲ್ಲೆ ನಡೆಸಿದ್ದಾರೆ. ಲೋಕಲ್ ಚಾಲಕನ ಮೇಲೆ ಹ*ಲ್ಲೆಯಾದ ಹಿನ್ನೆಲೆ ಸ್ಥಳೀಯರ ಅಕ್ರೋಶ, ರಿಷಬ್ ಶೆಟ್ಟಿ ಮಧ್ಯವರ್ತಿಯಲ್ಲಿ ಸಂಧಾನ ನಡೆದಿದ್ದು, ಎಲ್ಲರಿಗೂ ಕರೆದು ಮಾತನಾಡುತ್ತೇನೆ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಕಾಂತಾರ ಚಿತ್ರವು ದೈವ ಹಾಗೂ ದೈವಾರಾಧನೆಗೆ ಸಂಬಂಧಿಸಿದ ಕಥಾ ಹಂದರವನ್ನುಹೊಂದಿದ್ದು, ಈ ಚಿತ್ರ ಬಿಡುಗಡೆಗೊಂಡು ಬಹಳಷ್ಟು ಮೆಚ್ಚುಗೆಯನ್ನು ಗಳಿಸಿತ್ತು. ಚಿತ್ರ ಬಿಡುಗಡೆಗೊಂಡ ಬಳಿಕ ಹಲವುಕಡೆ ದೈವದ ವೇಷವನ್ನುಅಸಭ್ಯವಾಗಿ ತೊಟ್ಟು ಅಭಿಮಾನಿಗಳು ನರ್ತಿಸಿ ದೈವಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದು, ದೈವಾರಾಧಕರು ಚಿತ್ರದ ವಿರುದ್ಧ ಅಸಮಧಾನ ಹೊಂದಿದ್ದಾರೆ.

ಕಾಂತಾರ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ – 1’ ಮಾಡುವುದಾಗಿ ಘೋಷಿಸಿದ ಬಳಿಕ ತುಳುನಾಡಿನ್ಲಿ ತೀವ್ರ ಆಕ್ರೋಷ ಕೇಳಿ ಬಂದಿತ್ತು. ಚಿತ್ರತಂಡವು ಚಿತ್ರೀಕರಣ ನಡೆಸುವ ಈ ಸಂದರ್ಭ ಹಲವು ವಿಘ್ನಗಳು ಎದುರಾಗುತ್ತಿದ್ದು, ಇದು ದೈವದ ಕೋಪವೋ, ಇಲ್ಲ ದೈವನರ್ತಕರ ಶಾಪವಿರಬೇಕು ಎಂಬ ಗುಮನಿಗಳು ಶುರುವಾಗಿದೆ.

ಚಿತ್ರೀಕರಣ ಮುಗಿಸಿ ತೆರಳುವಾಗ ಕೊಲ್ಲೂರು ಮಾರ್ಗದಲ್ಲಿ ಈ ದು*ರ್ಘಟನೆ ಸಂಭವಿಸಿದ್ದು, ಬಸ್‌ನಲ್ಲಿ 25 ಕಲಾವಿದರಿದ್ದರು. ಹಲವರು ಸಣ್ನ ಪುಟ್ಟ ಗಾ*ಯಗಳಿಂದ ಪಾರಾಗಿದ್ದರೆ, ಆರು ಜನರಿಗೆ ಗಂಭೀರ ಗಾ*ಯವಾಗಿದೆ. ಗಾಯಾಳುಗಳನ್ನು ಕುಂದಾಪುರ  ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು.  ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Continue Reading

DAKSHINA KANNADA

ಉಳ್ಳಾಲ: ಚಲಿಸುತ್ತಿದ್ದ ರಿಕ್ಷಾ ಮರಕ್ಕೆ ಡಿ*ಕ್ಕಿ: ಓರ್ವ ಮೃ*ತ್ಯು, ಮೂವರಿಗೆ ಗಾ*ಯ

Published

on

ಉಳ್ಳಾಲ: ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಮೃ*ತಪಟ್ಟು ಮೂವರು ಗಾ*ಯಗೊಂಡಿರುವ ಘಟನೆ ಉಳ್ಳಾಲ ತಾಲೂಕಿನ ಕೊಣಾಜೆ ಸಮೀಪದ ಪುಳಿಂಚಾಡಿ ಎಂಬಲ್ಲಿ ಭಾನುವಾರ (ನ.24) ಸಂಜೆ ಸಂಭವಿಸಿದೆ.

ಕಾಸರಗೋಡು ಜಿಲ್ಲೆಯ ಕುಂಬಳೆ ಮಂಜತ್ತಡ್ಕ ನಿವಾಸಿ ನಾರಾಯಣ ಗಟ್ಟಿ (50) ಮೃ*ತರು ಎಂದು ಗುರುತಿಸಲಾಗಿದೆ.

ಸಂಬಂಧಿಕರೊಬ್ಬರ ಆರೋಗ್ಯ ವಿಚಾರಿಸಲೆಂದು ಕೊಣಾಜೆ ಪುಳಿಂಚಾಡಿಯ ಕಲ್ಕಾರ್ ಎಂಬಲ್ಲಿಗೆ ನಾರಾಯಣ ಗಟ್ಟಿ ಅವರು ರಿಕ್ಷಾದಲ್ಲಿ ತೆರಳಿದ್ದರು. ಅಲ್ಲಿ ಇಳಿಜಾರು ಪ್ರದೇಶದಲ್ಲಿ ರಿಕ್ಷಾ ಇಳಿಯುತ್ತಿದ್ದಂತೆ ಬ್ರೇಕ್ ವೈಫಲ್ಯಕ್ಕೀಡಾಗಿ ಮರವೊಂದಕ್ಕೆ ಡಿ*ಕ್ಕಿ ಹೊಡೆದಿದೆ.

ಈ ಸಂದರ್ಭ ಗಂಭೀರ ಗಾಯಗೊಂಡ ನಾರಾಯಣ ಗಟ್ಟಿ ಅವರು ಮೃ*ತಪಟ್ಟಿದ್ದು, ಘಟನೆಯಲ್ಲಿ ರಿಕ್ಷಾದೊಳಗಿದ್ದ ಸಂಬಂಧಿ ಮಹಿಳೆ, ಅವರ ಪುತ್ರ ಹಾಗೂ ಇನ್ನೋರ್ವರಿಗೆ ಗಾ*ಯಗಳಾಗಿವೆ. ನಾರಾಯಣ ಗಟ್ಟಿ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಟ್ರಾಫಿಕ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending

Exit mobile version