Connect with us

DAKSHINA KANNADA

ದೈವಾರಾಧನೆಗೆ ಅವಮಾನ;ಯುವ ತುಳುನಾಡ್ ಕುಡ್ಲ ಆರೋಪ; ದೂರು ದಾಖಲು..!

Published

on

ದೈವಾರಾಧನೆಗೆ ಅವಮಾನ;ಯುವ ತುಳುನಾಡ್ ಕುಡ್ಲ ಆರೋಪ; ದೂರು ದಾಖಲು..!

ಮಂಗಳೂರು: ತುಳುನಾಡಿನ ನಂಬಿಕೆ ಎಂದೇ ಪರಿಗಣಿಸಲ್ಪಟ್ಟಿರುವ ದೈವಾರಾಧನೆಯನ್ನು ಚಿತ್ರವಿಚಿತ್ರ ರೀತಿಯಲ್ಲಿ ಬಿಂಬಿಸಿ, ಎಡಿಟ್ ಮಾಡಿ ಅಸಂಖ್ಯಾತ ದೈವ ಭಕ್ತರ ಧಾರ್ಮಿಕ ನಂಬಿಕೆಗಳಿಗೆ ನೋವು ಉಂಟು ಮಾಡುತ್ತಿರುವ ಘಟನೆಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿದೆ.

ಈ ಹಿನ್ನೆಲೆ ಯಲ್ಲಿ”ಯುವ ತುಳುನಾಡ್ ® ಕುಡ್ಲ” ಎಂಬ ಸಂಘಟನೆ ದೂರು ಸಲ್ಲಿಸಿದೆ.ದೈವಗಳ ಫೊಟೋಗಳನ್ನು ಬಳಸಿ ಅಸಭ್ಯವಾಗಿ ಎಡಿಟ್ ಮಾಡುವುದು, ತಮ್ಮದೇ ಕಲ್ಪನೆಯಲ್ಲಿ ಚಿತ್ರವಿಚಿತ್ರ ಚಿತ್ರಗಳನ್ನು ಬಿಡಿಸುವುದು,

ದೈವ ನರ್ತನಗಳ ವಿಡಿಯೋಗಳಿಗೆ ಸಿನಿಮಾ ಹಾಡುಗಳು, DJ ಹಾಡುಗಳನ್ನು ಹಾಕಿ ಎಡಿಟ್ ಮಾಡುವುದು, ವಿಚಿತ್ರ ಭಂಗಿಯಲ್ಲಿ ದೈವದ ಫೊಟೋ ತೆಗೆಯುವುದು, ಸಂಧಿ, ಪಾಡ್ದನ, ಬೀರಗಳಲ್ಲಿ ಇಲ್ಲದ ಕಥೆಕಟ್ಟಿ ಅದಕ್ಕೆ ತಕ್ಕುದಾದ ವಿಡಿಯೋಗಳನ್ನು ಮಾಡಿ ನಂಬಿಕೆಗೆ ನೋವುಂಟು ಮಾಡುವ ಕೃತ್ಯಗಳು ನಡೆಯುತ್ತಿವೆಂದು ಆರೋಪಿಸಲಾಗಿದೆ‌.

ಈ ಎಲ್ಲಾ ಸಂಗತಿಗಳನ್ನು ಗಮನದಲ್ಲಿಟ್ಟುಕೊಂಡು ಅನೇಕ ಸಾಮಾಜಿಕ ಜಾಲತಾಣಗಳ ಪೇಜ್, ಗ್ರೂಪ್, ಖಾತೆಗಳ ಮೇಲೆ ದೂರು ಸಲ್ಲಿಸಲಾಗಿದೆ.

ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಯುವ “ತುಳುನಾಡ್ ® ಕುಡ್ಲ” ಸಂಘಟನೆಯು ಮಂಗಳೂರು ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಸೈಬರ್ ಕ್ರೈಮ್ ಸ್ಟೇಷನ್ ಹಾಗೂ ಮಂಗಳೂರು ನಗರದ ಪೊಲೀಸ್ ಠಾಣೆಗಳಲ್ಲಿ ದೂರು ಸಲ್ಲಿಸಿದೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending