Tuesday, July 5, 2022

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವತೆಗಳಿಗೆ ಅವಮಾನ: ಅನ್ಯಕೋಮಿನ ಯುವಕನ ಬಂಧನಕ್ಕೆ  ಆಗ್ರಹ..!

 ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವತೆಗಳಿಗೆ ಅವಮಾನ: ಅನ್ಯಕೋಮಿನ ಯುವಕನ ಬಂಧನಕ್ಕೆ  ಆಗ್ರಹ ..!

ಮಂಗಳೂರು : ಹಿಂದೂ ದೇವಿ ದೇವತೆಗಳನ್ನು ಅವಹೇಳನ ಶಬ್ದಗಳಲ್ಲಿ ನಿಂದಿಸುವ ಮೂಲಕ ಕೋಮು ಗಲಭೆ ವಾತಾವರಣ ಸೃಷ್ಟಿ ಮಾಡಿರುವ ರಿಜ್ವಾನ್ ಖಾನ್ ಎಂಬಾತನನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ  ವಿಟ್ಲ ಆರಕ್ಷಕ ಠಾಣೆಗೆ ಪುತ್ತೂರು ಹಿಂದೂ ಜಾಗರಣ ವೇದಿಕೆ ವತಿಯಿಂದ ದೂರು ನೀಡಲಾಯಿತು.

ಆರೋಪಿ ವಿರುದ್ಧ ಕೂಡಲೇ  ಎಫ್ ಐ ಆರ್ ದಾಖಲು ಮಾಡಿ, ಆತನನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಸಂಘಟನೆ ಸದಸ್ಯರು ಒತ್ತಾಯಿಸಿದ್ದಾರೆ. ನಿಯೋಗದಲ್ಲಿ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ, ವಿಟ್ಲ ತಾಲ್ಲೂಕು ಉಪಾಧ್ಯಕ್ಷ ರಾಜೇಶ್ ಕರೋಪಾಡಿ, ಕಾರ್ಯದರ್ಶಿ ಹರ್ಷೇಂದ್ರ ರೈ ಹಾಗೂ ಚೇತನ್ ಕಡಂಬು ಉಪಸ್ಥಿತರಿದ್ದರು..

LEAVE A REPLY

Please enter your comment!
Please enter your name here

Hot Topics

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ : ಶಾಲಾ- ಕಾಲೇಜುಗಳಿಗೆ ಇಂದು (ಜು5) ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಮಂಗಳೂರು " ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ...