Sunday, August 14, 2022

ಪೊಲೀಸ್ ಆಯುಕ್ತರನ್ನು ‘ಸುಳ್ಳುಗಾರ’ಎನ್ನುವುದು ಸಿಎಂ ಮತ್ತು ಸರ್ಕಾರವನ್ನು ಅವಮಾನಿಸಿದಂತೆ-ಭಾಸ್ಕರ್‌ ರಾವ್ ಕಿಡಿ

ಬೆಂಗಳೂರು: ಮಾಧ್ಯಮಗಳಲ್ಲಿ ಪೊಲೀಸ್ ಆಯುಕ್ತರನ್ನು ‘ಸುಳ್ಳುಗಾರ’ ಎಂದು ಕರೆಯುವುದು ಮುಖ್ಯಮಂತ್ರಿ ಮತ್ತು ಸರ್ಕಾರವನ್ನು ಅವಮಾನಿಸಿದಂತೆ ಎಂದು ಬೆಂಗಳೂರು ಮಾಜಿ ಪೊಲೀಸ್‌ ಆಯುಕ್ತ ಹಾಗೂ ಎಎಪಿ ನಾಯಕ ಭಾಸ್ಕರ್‌ ರಾವ್‌ ಹೇಳಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಟ್ವೀಟ್ ಮಾಡುವ ಮೂಲಕ ಅಭಿಪ್ರಾಯ ಹಂಚಿಕೊಂಡಿರುವ ಅವರು ‘ಬೆಂಗಳೂರು ಪೊಲೀಸ್‌ ಕಮಿಷನರ್ ಸುಳ್ಳು ಹೇಳಿದ್ದಾರೆ’ ಎಂಬ ರಾಜಕಾರಣಿಗಳ ಮಾತು ಮುಖ್ಯಮಂತ್ರಿಗೆ ಮತ್ತು ಸರ್ಕಾರಕ್ಕೆ ಮಾಡಿದ ಅಪಮಾನ. ಹಾಗೆಯೇ ಬೆಂಗಳೂರು ಪೊಲೀಸ್ ಆಯುಕ್ತರು ಎಂದರೆ 1.5 ಕೋಟಿ ನಾಗರಿಕರ ರಕ್ಷಿಸುವ ಸಂಸ್ಥೆಯಿದ್ದಂತೆ.

ರಾಜ್ಯದ ಆಡಳಿತಾರೂಢ ಪಕ್ಷ ಮತ್ತು ಅದರ ನಾಯಕರೊಬ್ಬರು ಎಂದು ಅವರು ಬರೆದುಕೊಂಡಿದ್ದಾರೆ.
‘ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ಜೆ.ಜೆ. ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಚಂದ್ರಶೇಖರ ಎಂಬ ಯುವಕನ ಕೊಲೆ ನಡೆದಿತ್ತು ಎಂದು ಗೃಹ ಸಚಿವರು ನೀಡಿದ್ದ ಹೇಳಿಕೆ ಸತ್ಯ.

ಬೈಕ್‌ಗಳು ತಗುಲಿದ ವಿಚಾರಕ್ಕೆ ಗಲಾಟೆಯಾಗಿ ಕೃತ್ಯ ನಡೆದಿದೆ ಎಂದು ಪೊಲೀಸ್ ಕಮಿಷನರ್ ಹೇಳಿರುವುದು ಸುಳ್ಳು’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌. ರವಿ ಕುಮಾರ್ ಇತ್ತೀಚೆಗೆ ಹೇಳಿದ್ದರು.

LEAVE A REPLY

Please enter your comment!
Please enter your name here

Hot Topics

“ಬಂಟನಾಗಬೇಕಾದರೆ ಆತನಿಗೆ ಎಂಟೆದೆ ಬೇಕು ಅದು ನಿಮ್ಮ ರಕ್ತದಲ್ಲಿದೆ”

ಮಂಗಳೂರು: ಬಂಟನಾಗಬೇಕಾದರೆ ಆತನಿಗೆ ಎಂಟೆದೆ ಬೇಕು. ಅದು ನಿಮ್ಮ ರಕ್ತದ ಕಣದಲ್ಲಿದೆ. ಯಾವುದು ಜಗತ್ತಿಗೆ ಅಸಾಧ್ಯವೋ ಅದನ್ನು ನೀವು ಸಾಧ್ಯ ಮಾಡಿ ತೋರಿಸಿದ್ದು ಬಂಟರು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಮಹಾರಾಷ್ಟ್ರದ...

ಶಿರಾಡಿ ಘಾಟ್ ಹೆದ್ದಾರಿಗೆ ಶಾಶ್ವತ ಯೋಜನೆ ರೂಪಿಸುವಂತೆ ಗಡ್ಕರಿಗೆ ಮನವಿ ಮಾಡಿದ ಸಂಸದ ಡಾ. ಹೆಗ್ಗಡೆ

ಮಂಗಳೂರು: ರಾಜಧಾನಿ ಬೆಂಗಳೂರು ಮತ್ತು ಕರಾವಳಿಯನ್ನು ಬೆಸೆಯುವ ಶಿರಾಡಿ ಘಾಟ್ ಹಾದುಹೋಗುವ ಹೆದ್ದಾರಿ ಬಗ್ಗೆ ಶಾಶ್ವತ ಯೋಜನೆ ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ಕಳೆದ ಶನಿವಾರ ದೆಹಲಿಯಲ್ಲಿ...

ಉಡುಪಿ: ಬ್ರಿಡ್ಜ್‌ ಬಳಿ ಬೈಕ್ ಇಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಮೃತದೇಹ ಪತ್ತೆ

ಉಡುಪಿ: ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಮಾಬುಕಳ ಬ್ರಿಡ್ಜ್ ಬಳಿ ಬೈಕ್ ಇಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಮೃತದೇಹ ಪತ್ತೆಯಾಗಿದೆ.ಕೊಡಂಕೂರು ನಿವಾಸಿ ಅಶೋಕ್ ಸುವರ್ಣ(46) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಶುಕ್ರವಾರ ಮಧ್ಯಾಹ್ನದ ವೇಳೆ ಬ್ರಿಡ್ಜ್...