Connect with us

DAKSHINA KANNADA

ಉಡುಪಿಯಲ್ಲಿ ಶಾರೀಕ್‌ ಸಂಚಾರದ ತನಿಖೆ ತೀವ್ರ-ಸ್ಫೋಟದ ಬಳಿಕ ಉಡುಪಿಯಲ್ಲಿ ಹೈಅಲರ್ಟ್‌ ಎಂದ SP ಅಕ್ಷಯ್ ಮಚೀಂದ್ರ

Published

on

ಮಂಗಳೂರು: ಮಂಗಳೂರಿನಲ್ಲಿ ಬಾಂಬ್‌ ಸ್ಪೋಟಿಸಿದ ಉಗ್ರ ಶಾರಿಕ್ ಉಡುಪಿ ಕೃಷ್ಣ ಮಠದ ಪರಿಸರದಲ್ಲಿ ಸಂಚಾರ ಮಾಡಿದ್ದ ಎಂಬ ಮಾಹಿತಿ ಆಧಾರದಲ್ಲಿ ತನಿಖೆ ನಡೆಸಲಾಗಿತ್ತು. ಹೀಗಾಗಿ ಮಂಗಳೂರು ಪೊಲೀಸರು ಉಡುಪಿಗೆ ಬಂದು ತನಿಖೆ ನಡೆಸಿ ಹೋಗಿದ್ದರು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಹಾಕೆ ಹೇಳಿದ್ದಾರೆ.


ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತಮಾಡಿದ ಅವರು ಅಕ್ಟೋಬರ್ ತಿಂಗಳಲ್ಲಿ ಒಂದು ಬಾರಿ ಈ ಭಾಗದಲ್ಲಿ ಆತ ಪ್ರವಾಸ ಮಾಡಿದ್ದ. ಆದರೆ ಉಡುಪಿ ಪೊಲೀಸರು ಈ ಪ್ರಕರಣದ ತನಿಖಾಧಿಕಾರಿಗಳಲ್ಲ ಎಂದು ಅಕ್ಷಯ್ ಹೇಳಿದರು. ಅಲ್ಲದೆ ಈ ಬಗ್ಗೆ ಮಂಗಳೂರು ಪೊಲೀಸರೇ ವಿವರವಾದ ಮಾಹಿತಿ ನೀಡುತ್ತಾರೆ ಎಂದರು.

ಇನ್ನು ಉಡುಪಿಗೆ ಕಾರ್ಮಿಕರಾಗಿ ಬರುವವರ ದಾಖಲೆ ಸತ್ಯಾಸತ್ಯತೆ ಪರಿಶೀಲನೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು ಮಲ್ಪೆ ಮೀನುಗಾರಿಕಾ ಬಂದರಿಗೆ ಹೊರ ರಾಜ್ಯಗಳಿಂದ ಅನೇಕ ಕಾರ್ಮಿಕರು ಬರುತ್ತಾರೆ. ಮೀನುಗಾರ ಸಂಘಟನೆಗಳ ಜೊತೆ ನಾವು ಈಗಾಗಲೇ ಮಾತನಾಡಿದ್ದೇವೆ.

ಮೀನುಗಾರಿಕಾ ಬೋಟುಗಳಲ್ಲಿ ಮತ್ತು ಮೀನು ಫ್ಯಾಕ್ಟರಿಗಳಲ್ಲಿ ಕೆಲಸ ಮಾಡಲು ಹೊರರಾಜ್ಯದ ಕಾರ್ಮಿಕರು ಹೆಚ್ಚಾಗಿ ಬರುತ್ತಾರೆ. ಬಲೆ ನೇಯುವ ಕಾರ್ಖಾನೆಗಳು ಐಸ್ ಫ್ಯಾಕ್ಟರಿಗಳಲ್ಲಿ ದುಡಿಯುತ್ತಾರೆ. ಮೀನುಗಾರಿಕಾ ಸಂಘಟನೆಗಳು ಈ ಕಾರ್ಮಿಕರ ಎಲ್ಲಾ ವಿವರ ಸಂಗ್ರಹಿಸುವಂತೆ ಸೂಚಿಸಲಾಗಿದೆ.

ತಾತ್ಕಾಲಿಕ ನೆಲೆಯಲ್ಲಿ ಕಾರ್ಮಿಕರು ಬಂದಿದ್ದರೂ ಕೂಡಾ ಮಾಹಿತಿ ಕಲೆಹಾಕಲಾಗುವುದು ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಮತ್ತಷ್ಟು ಸಿಸಿ ಕ್ಯಾಮೆರಾ ಅಳವಡಿಸಲಾಗುವುದು ಎಂದರು. ದೇಗುಲಗಳಲ್ಲಿ ಭದ್ರತೆ ನಿಯೋಜನೆ ಕ್ರಮ ಕೈಗೊಳ್ಳಲಾಗುವುದು.

ದೇವಸ್ಥಾನಗಳನ್ನು ಒಳಗೊಂಡ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಮಾಡುತ್ತೇವೆ. ನಿಯಮಿತವಾಗಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಲು ಕ್ರಮ ಕೈಗೊಳ್ಳುತ್ತೇವೆ ಎಂದರು.

DAKSHINA KANNADA

ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ…! ಯಾವ ಕ್ಷೇತ್ರದಿಂದ ಸ್ಪರ್ಧೆ..!?

Published

on

ಕ್ಷಿಣ ಕನ್ನಡ ಜಿಲ್ಲೆಯ ಚೆಲುವೆ…ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸದ್ಯ ರಾಜಕೀಯ ವಲಯದಲ್ಲಿ ಸುದ್ದಿಯಾಗಿದ್ದಾರೆ. ಟಾಲಿವುಡ್‌ನ ಬ್ಯೂಟಿ ಕ್ವೀನ್‌ ಆಗಿ ಮೆರೆದಿದ್ದ ಅನುಷ್ಕಾ ಶೆಟ್ಟಿಗೆ ಇರುವ ದೊಡ್ಡ ಅಭಿಮಾನಿ ಬಳಗ ಕೂಡಾ ಇಂತಹ ಒಂದು ಚರ್ಚೆ ನಡೆಸ್ತಾ ಇದೆ. ಆಂಧ್ರ ಹಾಗೂ ತೆಲಂಗಾಣದಲ್ಲಿ ಅನುಷ್ಕಾ ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಹೀಗಾಗಿ ಈ ಬಾರಿ ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಅನ್ನೋ ದೊಡ್ಡ ಚರ್ಚೆ ಆರಂಭವಾಗಿದೆ.

ಲೋಕಸಭೆ ಚುನಾವಣೆಯ ಜೊತೆಯಲ್ಲೇ ಆಂಧ್ರ ವಿಧಾನಸಭೆಗೂ ಚುನಾವಣೆ ನಡೆಯುತ್ತಿರುವುದೇ ಈ ಚರ್ಚೆಗೆ ಕಾರಣವಾಗಿದೆ. ಅನುಷ್ಕಾ ಶೆಟ್ಟಿ ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಅಭಿಮಾನಿಗಳು ಮಾತ್ರವಲ್ಲದೆ, ರಾಜಕೀಯ ವಲಯದಲ್ಲೂ ಚರ್ಚೆ ನಡೆದಿದೆ.

ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷದಿಂದ ಅನುಷ್ಕಾ ಶೆಟ್ಟಿ ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ ಅನ್ನೋ ಸುದ್ದಿ ಹರಡಿದೆ. ಬಿಜೆಪಿ ಹಾಗೂ ಟಿಡಿಪಿ ಪಕ್ಷದ ಬೆಂಬಲ ಹೊಂದಿರುವ ಜನಸೇನಾ ಪಕ್ಷದ ಪ್ರಮುಖ ನಾಯಕರ ಜೊತೆ ಅನುಷ್ಕಾ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಆದ್ರೆ ಅನುಷ್ಕಾ ಜನಸೇನಾ ಪಕ್ಷಕ್ಕೆ ಸ್ಟಾರ್ ಪ್ರಚಾರಕಿಯಾಗಿ ಹೋಗಲಿದ್ದಾರೆ. ಚುನಾವಣೆಗೆ ನಿಲ್ಲೋದು ಸುಳ್ಳು ಸುದ್ದಿ ಎಂದು ಕೆಲ ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡ್ತಾರೆ ಅನ್ನೋದೊಂದು ನಕಲಿ ಸುದ್ದಿ ಎಂದು ಕೆಲ ಸುದ್ದಿ ವಾಹಿನಿಗಳು ಕೂಡಾ ವರದಿ ಮಾಡಿದೆ. ಅನುಷ್ಕಾ ಶೆಟ್ಟಿ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದು, ರಾಜಕೀಯದಿಂದ ದೂರ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನು ಓದಿ ಹಿಂದಿಗೆ ರಿಮೇಕ್ ಆಗುತ್ತಿದೆ ಝೀ ಕನ್ನಡದ ಫೇಮಸ್‌ ಸೀರಿಯಲ್‌…! ಪ್ರೋಮೋ ರಿಲೀಸ್‌..! 

ಮಲಯಾಳಂ ಸಿನಿಮಾದಲ್ಲಿ ಬಿಝಿ :

‘ಬಾಹುಬಲಿ’ ಸಿನಿಮಾದ ಬಳಿಕ ಅನುಷ್ಕಾ ಶೆಟ್ಟಿ ಭಾರಿ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದಾರೆ. ‘ಬಾಹುಬಲಿ 2’ ಸಿನಿಮಾದ ಬಳಿಕ ಕೇವಲ ಎರಡು ಸಿನಿಮಾಗಳಲ್ಲಿ ಮಾತ್ರವೇ ಅನುಷ್ಕಾ ನಟಿಸಿದ್ದಾರೆ. ಅನುಷ್ಕಾ ಶೆಟ್ಟಿ ನಟನೆಯ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಸಿನಿಮಾ ಕಳೆದ ವರ್ಷ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡಿದೆ. ಕಾಮಿಡಿ ಹಾಗೂ ಡ್ರಾಮಾ ಕಥೆಯಾಗಿದ್ದ ಇದು ಪ್ರೇಕ್ಷಕರನ್ನು ರಂಜಿಸಿದೆ.ಇದೀಗ ಅನುಷ್ಕಾ ಶೆಟ್ಟಿ ಮಲಯಾಳಂ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ.

ಮಲಯಾಳಂನಲ್ಲಿ RIAL 5- ಹಾರ‌ರ್ ಸಿನಿಮಾ ಒಂದರಲ್ಲಿ ಅನುಷ್ಕಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡುವ ಬದಲಿಗೆ ಹೆಚ್ಚು ಹೆಚ್ಚು ಸಿನಿಮಾಗಳಲ್ಲಿ ನಟಿಸುತ್ತಾ ಪ್ರೇಕ್ಷಕರನ್ನು ರಂಜಿಸುತ್ತಿರಲಿ ಎಂಬುದು ಅಭಿಮಾನಿಗಳ ಆಶಯ. ಆದ್ರೆ, ಅನುಷ್ಕಾ ರಾಜಕೀಯ ಎಂಟ್ರಿಯನ್ನೂ ತಳ್ಳಿ ಹಾಕಲು ಸಾದ್ಯವಿಲ್ಲ ಅನ್ನೋದು ಸದ್ಯ ಚಾಲ್ತಿಯಲ್ಲಿರುವ ಚರ್ಚಾ ವಿಷಯ.

Continue Reading

DAKSHINA KANNADA

ಟಿಕೆಟ್ ಕೈ ತಪ್ಪಿದ್ರೂ ಕೈ ಬಿಡದ ಹೈಕಮಾಂಡ್‌..! ಕೇರಳದ ಸಹ ಉಸ್ತುವಾರಿಯಾದ ನಳಿನ್ ಕುಮಾರ್ ಕಟೀಲ್‌

Published

on

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ್ದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್‌ ಅವರಿಗೆ ಬಿಜೆಪಿ ಹೈಕಮಾಂಡ್ ಮಹತ್ವದ ಜವಾಬ್ದಾರಿ ವಹಿಸಿದೆ. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳದ ಚುನಾವಣಾ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆ ಆಗಿದ್ದ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದು ಬಾರಿ ನಿರಾಸೆ ತಂದಿತ್ತು. ಕ್ಯಾಪ್ಟನ್ ಬ್ರಿಜೇಶ್ ಚೌಟರ ಮೂಲಕ ಹೊಸ ಮುಖವನ್ನು ಪಕ್ಷ ಕಣಕ್ಕೆ ಇಳಿಸಿದೆ. ಇದು ನಳಿನ್ ಕುಮಾರ್ ಕಟೀಲ್‌ ಅವರಿಗೆ ಬೇಸರ ತಂದಿದ್ದರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದರು. ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ ಬಹಳಷ್ಟು ಭಾವುಕರಾಗಿದ್ದ ನಳಿನ್ ಕುಮಾರ್ ಕಟೀಲ್ ಪಕ್ಷ ನಿಂತ ನೀರಾಗಬಾರದು, ಹೊಸ ಮುಖಗಳು ಬರುತ್ತಿರಬೇಕು, ನಾನು ಪಕ್ಷ ಗುಡಿಸಿ ಒರೆಸು ಅಂತ ಹೇಳಿದ್ರೂ ಮಾಡ್ತೇನೆ ಅಂತ ಹೇಳಿದ್ದರು. ಆದ್ರೆ ಇದೀಗ ಪಕ್ಷ ಅವರಿಗೆ ಕೇರಳದ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಪಕ್ಷದಲ್ಲಿ ದೊಡ್ಡ ಜವಾಬ್ದಾರಿಯನ್ನೇ ನೀಡಿದೆ.

ಇದನ್ನೂ ಓದಿ : ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ…! ಯಾವ ಕ್ಷೇತ್ರದಿಂದ ಸ್ಪರ್ಧೆ..!?

Continue Reading

DAKSHINA KANNADA

ಗಾಂ*ಜಾ ಸಾಗಾಟದ ವೇಳೆ ಪೊಲೀಸರ ಬಲೆಗೆ ಬಿದ್ದ ಆರೋಪಿ..!

Published

on

ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ನಗರಕ್ಕೆ ನಿಷೇಧಿತ ಮಾ*ದಕ ವಸ್ತು ಗಾಂ*ಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು 6.325 ಕೆಜಿ ಗಾಂ*ಜಾವನ್ನು ಬುಧವಾರ(ಮಾ.27) ದಂದು ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ವಾಮಂಜೂರು ಸಮೀಪದ ಕುಡುಪು ಪೆದಮಲೆಯ ನಿಶಾಂತ್ ಶೆಟ್ಟಿ (36)ಎಂದು ಗುರುತಿಸಲಾಗಿದೆ.  ಈತ ಸಣ್ಣ ಸಣ್ಣ ಪ್ಯಾಕೆಟ್‌ನಲ್ಲಿ ರೈಲಿನಲ್ಲಿ ಸಾಗಾಟ ಮಾಡಿಕೊಂಡು ಬಂದು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ತೊಕ್ಕೊಟ್ಟು ಒಳಪೇಟೆಯ ಕೃಷ್ಣನಗರ ಪರಿಸರದಲ್ಲಿ ಗೂಡ್ಸ್ ಟೆಂಪೋವೊಂದರಲ್ಲಿ ಗಾಂ*ಜಾ ಸಾಗಿಸಿ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಬಂಧಿಸಿದ್ದಾರೆ.

ಆರೋಪಿಯಿಂದ ಗೂಡ್ಸ್ ಟೆಂಪೋ, 1.50 ಲಕ್ಷ ರೂ.ಮೌಲ್ಯದ 6 ಕೆಜಿ 325 ಗ್ರಾಂ ಗಾಂ*ಜಾ, 2 ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕ ಮಾಪಕ ಮತ್ತಿತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ 9,11,500 ರೂ  ಎಂದು ಅಂದಾಜಿಸಲಾಗಿದೆ. ಈ ಬಗ್ಗೆ  ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಹ*ಲ್ಲೆ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ಅಕ್ರಮ ಪಿಸ್ತೂಲ್ ಹೊಂದಿದ ಮತ್ತು ಕಳವು ಪ್ರಕರಣ, ಬರ್ಕೆ ಠಾಣೆಯಲ್ಲಿ ಸರಕಳ್ಳತನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಹ*ಲ್ಲೆ ಪ್ರಕರಣ, ವಿಟ್ಲ ಠಾಣೆಯಲ್ಲಿ ಹ*ಲ್ಲೆ ಮತ್ತು ಕಳ್ಳತನ ಪ್ರಕರಣ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಗಾಂ*ಜಾ ಮಾರಾಟ ಸಹಿತ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುತ್ತದೆ.

Continue Reading

LATEST NEWS

Trending