Connect with us

    DAKSHINA KANNADA

    ತೀವ್ರಗೊಳ್ಳುತ್ತಿರುವ ತಾಪಮಾನ; ಹೆಚ್ಚುತ್ತಿದೆ ಫುಡ್ ಪಾಯಿಸನಿಂಗ್ ಪ್ರಕರಣ

    Published

    on

    ಹೆಚ್ಚುತ್ತಿರುವ ಬಿಸಿಲಿನ ತಾಪ, ನೀರಿನ ಬಿಕ್ಕಟ್ಟು ಇತ್ಯಾದಿ ಕಾರಣಗಳಿಂದಾಗಿ ಮಂಗಳೂರಿನ ಮತ್ತು ಕರಾವಳಿ ಭಾಗದ ಇತರ ಬಹುತೇಕ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಫುಡ್ ಪಾಯಿಸನ್ ನ ಹಲವು ಪ್ರಕರಣಗಳು ದೃಢಪಡುತ್ತಿವೆ. ದಿನಕ್ಕೆ ಐದಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ.

    ಹೆಚ್ಚುತ್ತಿರುವ ಬಿಸಿಲಿನ ತಾಪ ಮತ್ತು ನೀರಿನ ಗುಣಮಟ್ಟದಲ್ಲಿನ ಬದಲಾವಣೆಗಳು ಈ ಸಮಸ್ಯೆಗೆ ಕಾರಣವಾಗಿರಬಹುದು ಎಂದು ಆರೋಗ್ಯ ತಜ್ಞರು ಅನುಮಾನ ವ್ಯಕ್ತಪಡಿಸಿದ್ದಾರೆ. ಮಕ್ಕಳು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಸುಮಾರು 100 ಮಂದಿ ಫುಡ್ ಪಾಯಿಸನ್ ಅಥವಾ ವಿಷಾಹಾರ ಸಮಸ್ಯೆಯಿಂದ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿರುವುದಾಗಿ ವರದಿಯಾಗಿದೆ.

    ವಿಷಾಹಾರ ಅಥವಾ ಫುಡ್ ಪಾಯಿಸನ್ ಗೆ ಕಾರಣವೇನು?

    ಕಲುಷಿತ ನೀರು ಸೇವನೆ ಮುಖ್ಯ ಕಾರಣವಾಗುತ್ತದೆ. ಇಷ್ಟೇ ಅಲ್ಲದೆ, ಆಹಾರದಲ್ಲಿರುವ ಕಲ್ಮಶಗಳು, ಆಹಾರದಲ್ಲಿನ ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳು, ಅವಧಿ ಮೀರಿದ ಅಥವಾ ಬೇಯಿಸದ ಆಹಾರದ ಬಳಕೆ, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ದೀರ್ಘಾವಧಿಯ ಆಹಾರ ಸಂಗ್ರಹಣೆ, ಹಾಳಾದ ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನುವುದು ಮತ್ತು ಹೆಚ್ಚು ಸಂಸ್ಕರಿಸಿದ ಆಹಾರಗಳ ಸೇವನೆಯೂ ವಿಷಾಹಾರಕ್ಕೆ ಕಾರಣವಾಗತ್ತವೆ. ಮನೆಯಲ್ಲಿ ಚೆನ್ನಾಗಿ ಬೇಯಿಸಿದ ಆಹಾರವನ್ನು ಸೇವಿಸುವುದರಿಂದ ಸಮಸ್ಯೆಯನ್ನು ತಡೆಗಟ್ಟಬಹುದಾಗಿದೆ. ತರಕಾರಿಗಳು ಮತ್ತು ಹಣ್ಣುಗಳನ್ನು ಬಳಸುವ ಮೊದಲು ಸಂಪೂರ್ಣವಾಗಿ ತೊಳೆಯಬೇಕು.

    ಇದನ್ನೂ ಓದಿ : ಈ ಅಣಬೆ ರೇಟ್ ಕೇಳಿದ್ರೆ ನಿಮ್ಮ ತಲೆ ತಿರುಗುತ್ತೆ…! ಹಾಗಂತ ಇದು ಮೋದಿ ತಿನ್ನೋ ಅಣಬೆಯಲ್ಲ..!

    ಫುಡ್ ಪಾಯಿಸನ್ ಲಕ್ಷಣಗಳೇನು?

    ಜ್ವರ, ವಾಂತಿ, ಅತಿಸಾರ, ತಲೆನೋವು ಮತ್ತು ಹೊಟ್ಟೆ ನೋವು, ಕೆಲವೊಮ್ಮೆ ಚರ್ಮದ ದದ್ದುಗಳು ಮತ್ತು ತುರಿಕೆಗಳು ಫುಡ್ ಪಾಯಿಸನ್ನ ಪ್ರಮುಖ ಲಕ್ಷಣಗಳಾಗಿವೆ. ಅಂತಹ ಸಂದರ್ಭಗಳಲ್ಲಿ ತಕ್ಷಣದ ವೈದ್ಯಕೀಯ ಚಿಕಿತ್ಸೆ ಅಗತ್ಯ.

    ಪರಿಹಾರ ಏನು?

    ಕೆಲವು ಮನೆಮದ್ದುಗಳು ಫುಡ್ ಪಾಯಿಸನ್ ಲಕ್ಷಣಗಳನ್ನು ಸ್ವಲ್ಪ ಮಟ್ಟಿಗೆ ನಿವಾರಿಸಬಹುದಾದರೂ, ಯಾವುದೇ ಪ್ರತಿಕೂಲ ಪರಿಣಾಮಗಳನ್ನು ತಡೆಗಟ್ಟಲು ವೈದ್ಯರನ್ನು ಸಂಪರ್ಕಿಸುವುದು ಅತ್ಯಗತ್ಯ. ಜೀರಿಗೆಯನ್ನು ಜಗಿಯುವುದು ಅಥವಾ ಜೀರಿಗೆ ಪುಡಿಯನ್ನು ಸೇವಿಸುವುದರಿಂದ ರೋಗಲಕ್ಷಣಗಳನ್ನು ನಿವಾರಿಸಲು ಪ್ರಯೋಜನವಾಗಬಹುದು. ಜೇನುತುಪ್ಪವು ಆ್ಯಂಟಿಫಂಗಲ್ ಏಜೆಂಟ್ ಆಗಿರುವುದರಿಂದ ವಿಷಾಹಾರದ ತೀವ್ರತೆಯನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending