LATEST NEWS
“ಇಂಟರ್ ಕಾಸ್ಟ್ ಮ್ಯಾರೇಜ್ ಹೆಚ್ಚಬೇಕು” : ಸಿಎಂ ಸಿದ್ಧರಾಮಯ್ಯ
Published
3 hours agoon
ಮಂಗಳೂರು/ವಿಜಯನಗರ : “ಬಸವಣ್ಣ ಶತಮಾನದಲ್ಲಿ ಅಂತರ್ಜಾತಿ ವಿವಾಹಕ್ಕೆ ಉತ್ತೇಜನ ನೀಡಿದ್ದರು. ಅದೇ ರೀತಿ ಈಗ ನಾವೆಲ್ಲ ಅಂತಹ ವಿವಾಹ ಉತ್ತೇಜಿಸುವ ಆಗತ್ಯವಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿರಾಜ್ ಶೇಖ್‌ನ ಮಗನ ಮದುವೆಯೊಡನೆ ಹಮ್ಮಿಕೊಂಡ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿರು.
ನಿನ್ನೆ (ಜ.12) ಈ ಕುರಿತು ಮಾತನಾಡುತ್ತಾ, “ಜಾತಿ ವ್ಯವಸ್ಥೆ ನಾಶವಾಗಿ ಸಮ ಸಮಾಜ ನಿರ್ಮಾಣವಾಗಲು ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು” ಎಂದು ಸಿ.ಎಂ. ಹೇಳಿದ್ದಾರೆ. ಲಂಬಾಣಿ ಸಮುದಾಯ ತಾಂಡಾ ಬಿಟ್ಟು ಹೊರಬಂದಿದ್ದನ್ನು ಕೊಂಡಾಡಿದ ಸಿ.ಎಂ “ಇಂತಹ ಮದುವೆಗಳು ಹೆಚ್ಚು ಹೆಚ್ಚು ನಡೆಯಬೇಕು, ಶ್ರೀಮಂತರು ತಮ್ಮ ಸಂಪತ್ತನ್ನು ಇಂತಹ ಕಾರ್ಯಗಳಿಗೆ ಸ್ವಲ್ಪ ಬಳಸಬೇಕು ನಮ್ಮ ದೇಶದಲ್ಲಿ ಶ್ರೀಮಂತರು, ಬಡವರು ಇದ್ದಾರೆ. ಶ್ರೀಮಂತರು ಅದ್ದೂರಿಯಾಗಿ ಮದುವೆ ಮಾಡ್ತಾರೆ. ಬಡವರು ಮದುವೆ ಮಾಡಿಕೊಳ್ಳಲು ಕಷ್ಟ. ಇಂತಹ ಸಾಮೂಹಿಕ ಮದುವೆಯಲ್ಲಿ ಬಡವರ ಮದುವೆ ಮಾಡುವುದು ಉತ್ತಮ” ಎಂದು ಮುಖ್ಯಮಂತ್ರಿ ಹೇಳಿದರು.
“ಮದುವೆ ಮಾಡಲು ಸಾಲ ಮಾಡ್ತಾರೆ. ಮನೆ ಆಸ್ತಿ ಒಡವೆ ಮಾರಾಟ ಮಾಡ್ತಾರೆ. ಪ್ರತಿಯೊಬ್ಬರು ಸರಳ ಮದುವೆ ಆಗಬೇಕು. ಪಕ್ಕದ ಮನೆಯವಳು ಓಲೆ ಹಾಕಿದ್ರೆ ಕಿವಿ ಕಿತ್ತುಕೊಳ್ಳಲು ಸಾಧ್ಯನಾ. ಬಡವರು ಬಡವರಾಗಿಯೇ ಸಾಯಬೇಕಾ? ಬಡವರು ಶ್ರೀಮಂತರು ಆಗಬಹುದು. ನಾವು ಯಾವ ಜಾತಿಯಲ್ಲಿಯೇ ಇದ್ದೀವಿ ಅದೇ ಜಾತಿಯಲ್ಲಿಯೇ ಇರಬೇಕು ಅಂತಾ ಏನಿಲ್ಲ” ಎಂದು ಪ್ರತಿಪಾದಿಸಿದರು. “ಬಸವಣ್ಣನ ಆದರ್ಶಗಳನ್ನ ನಾವು ಪಾಲನೆ ಮಾಡಬೇಕು. ಬಸವಣ್ಣನವರು ಜನರಿಗೆ ಅರ್ಥವಾಗುವ ರೀತಿಯಲ್ಲಿ ಬೋಧನೆ ಮಾಡಿದ್ದಾರೆ. ಬಸವಣ್ಣನವರನ್ನು ನಮ್ಮ ಸರ್ಕಾರ ಸಾಂಸ್ಕೃತಿಕ ನಾಯಕ ಅಂತ ಮಾಡಿದೆ. ಕುವೆಂಪು ಹೇಳಿದಂತೆ ಹುಟ್ಟುವಾಗ ವಿಶ್ವಮಾನವರಾಗಿ ಇರುತ್ತಾರೆ. ಆದರೆ ಜಾತಿ ವ್ಯವಸ್ಥೆಯಿಂದಾಗಿ ನಾವು ಅಲ್ಪ ಮಾನವರಾಗುತ್ತೇವೆ. ನಾವು ಇಂತಿಂಥ ಜಾತಿಯಲ್ಲಿ ಹುಟ್ಟುಬೇಕು ಅಂತಾ ಅರ್ಜಿ ಹಾಕಿದ್ದೀವಾ? ಒಂದು ಜಾತಿಯವರು ಇನ್ನೊಂದು ಜಾತಿಯನ್ನ ದ್ವೇಷಿಸಬಾರದು, ಪ್ರೀತಿಸಬೇಕು. ಆರ್ಥಿಕ ಸ್ವಾವಲಂಬನೆ ಆಗದಿದ್ರೆ ಜಾತಿ ವ್ಯವಸ್ಥೆ ಚಲನೆ ಆಗುವುದಿಲ್ಲ. ಜಾತಿ ವ್ಯವಸ್ಥೆ ಇನ್ನೂ ಹೋಗಿಲ್ಲ” ಎಂದು ಮಾರ್ಮಿಕವಾಗಿ ನುಡಿದರು.
“ನಾವು ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ತರುವ ಕೆಲ್ಸ ಮಾಡುತ್ತೇವೆ. ಶ್ರೀಮಂತರು ಸಾಮಾಜಿಕ ಒಳ್ಳೆಯ ಕೆಲಸ ಮಾಡಬೇಕು. ನಾವು ಸಮಾಜದಿಂದಲೇ ಸಿಎಂ ಆಗಿದ್ದೇವೆ. ನಾವು ಸಮಾಜಕ್ಕೆ ಖುಣ ತೀರಿಸುವ ಕೆಲ್ಸ ಮಾಡಬೇಕು. ಅಂಬೇಡ್ಕರ್ ಸಮಾನ ಹಕ್ಕು ಕೊಡದಿದ್ರೆ ನಾವು ಸಿಎಂ ಆಗುತ್ತಿರಲಿಲ್ಲ. ಸಂವಿಧಾನದ ಪೀಠಿಕೆಯನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕು. ನಮ್ಮ ದೇಶದಲ್ಲಿ 140 ಕೋಟಿ ಜನಸಂಖ್ಯೆ ಇದೆ. ಚೀನಾ ದೇಶವನ್ನು ನಾವು ಹಿಂದಕ್ಕೆ ಹಾಕಿದ್ದೇವೆ. ಅರತಿಗೊಬ್ಬ ಕೀರ್ತಿಗೊಬ್ಬ ಮಕ್ಕಳು ಸಾಕು. ದೇಶದಲ್ಲಿ ಜನಸಂಖ್ಯೆ ನಿಯಂತ್ರಣ ಕೂಡ ಅವಶ್ಯಕ. ಅಧಿಕಾರ, ಸಂಪತ್ತು ಸರಿಯಾದ ರೀತಿ ಹಂಚಿಕೆಯಾಗಬೇಕು” ಎಂದು ಸಿಎಂ ಹೇಳಿದರು.
ಉಡುಪಿ : ಡ್ರೈವರ್ ಇಲ್ಲದೆ ಬಸ್ಸೊಂದು ಚಲಾಯಿಸಿ ನಿಂತಿದ್ದ ಕಾರಿಗೆ ಡಿ*ಕ್ಕಿಹೊಡೆದ ಘಟನೆ ಇಂದು (ಜ.13) ಬೆಳಿಗ್ಗೆ ಕುಂದಾಪುರ ಹೊರವಲಯ ಹಂಗಲೂರು ಎಂಬಲ್ಲಿ ನಡೆದಿದೆ.
ಡಿಪೋದಲ್ಲಿ ನಿಲ್ಲಿಸಿದ್ದ ಖಾಸಗೊ ಬಸ್ ಚಾಲಕನಿಲ್ಲದೆಯೇ ಚಲಾಯಿಸಿ ಎರಡು ಸರ್ವೀಸ್ ರೋಡ್ ಹಾಗೂ ಹೆದ್ದಾರಿ ಬ್ಯಾರಿಕೇಡ್ ದಾಟಿ ಹೋಟೆಲೊಂದರ ಮುಂದೆ ನಿಲ್ಲಿಸಿದ್ದ ಕಾರಿಗೆ ಸರಿಸುಮಾರು ಬೆಳಿಗ್ಗೆ 7 ಗಂಟೆಗೆ ಡಿ*ಕ್ಕಿ ಹೊಡೆದು ನಿಂತಿದೆ.
ಬಸ್ ಶುಚಿಗೊಳಿಸಿ ಸಿಬ್ಬಂದಿಗಳು ಬಸ್ಸಿಂದ ಇಳಿದಿದ್ದರು. ಇದಾದ ಬಳಿಕ ಡಿಪೋದಿಂದ ಬಸ್ಸು ಮುಂದಕ್ಕೆ ಚಲಿಸಿ ಸರ್ವೀಸ್ ರದ್ತೆಗೆ ಅಡ್ಡಲಾಗಿದ್ದ ಬ್ಯಾರಿಕೇಡ್ ಮುರಿದು ಸಾಗಿದೆ. ಹೆದ್ದಾರಿ ಹಾಗೂ ಸರ್ವೀಸ್ ರಸ್ತೆಯಲ್ಲಿ ವಾಹನಗಳು ಕಮ್ಮಿಯಿದ್ದರಿಂದ ಜೊತೆಗೆ ಪಾದಚಾರಿಗಳ ಓಡಾಟ ಅಷ್ಟಾಗಿ ಇರದ ಕಾರಣ ಭಾರೀ ಅ*ವಘಡ ತಪ್ಪಿದೆ.
ಕುಂದಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ
LATEST NEWS
ಫ್ರಿಡ್ಜ್ ಸ್ಪೋಟಗೊಂಡು ಲಕ್ಷಾಂತರ ರೂ.ವಸ್ತುಗಳು ಭಸ್ಮ!
Published
29 minutes agoon
13/01/2025By
NEWS DESK2ಹಾವೇರಿ: ಇಂದು ರಾಜ್ಯದಲ್ಲಿ ಪ್ರತ್ಯೇಕ ಮೂರು ಅಗ್ನಿ ಅವಘಡಗಳು ಸಂಭವಿಸಿವೆ. ಮೊದಲನೆಯದಾಗಿ ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು 7 ಜನ ಗಾಯಗೊಂಡಿದ್ದಾರೆ. ಬಳಿಕ ಬೆಂಗಳೂರಿನ ನೆಲಮಂಗಲದಲ್ಲಿ ಗಾರ್ಮೆಂಟ್ಸ್ ಅಂಗಡಿಗೆ ಬೆಂಕಿ ತಗುಲಿ 40 ಲಕ್ಷಕ್ಕೂ ಅಧಿಕ ಬಟ್ಟೆಗಳು ಸುಟ್ಟು ಕರಕಲಾಗಿವೆ. ಇದೀಗ ಹಾವೇರಿಯಲ್ಲಿ ಫ್ರಿಡ್ಜ್ ಸ್ಪೋಟಗೊಂಡು ಎರಡು ಲಕ್ಷಕ್ಕೂ ಅಧಿಕ ವಸ್ತುಗಳು ಸುಟ್ಟು ಭಸ್ಮವಾಗಿದೆ.
ಹೌದು ಹಾವೇರಿಯ ಮಂಜುನಾಥ ನಗರದಲ್ಲಿ ಫ್ರಿಡ್ಜ್ ಸ್ಫೋಟಗೊಂಡಿರುವ ಘಟನೆ ನಡೆದಿದೆ. ನಗರದ ಚನ್ನಬಸಪ್ಪ ಗೂಳಪ್ಪನವರ್ ಎಂಬುವರಿಗೆ ಸೇರಿದ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ಮನೆಯಲ್ಲಿದ್ದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.ಅಗ್ನಿ ಅವಘಡದ ಕುರಿತು ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಯಾವ ಕಾರಣಕ್ಕಾಗಿ ಫ್ರಿಡ್ಜ್ ಸ್ಪೋಟಗೊಂಡಿದೆ ಎಂದು ಪೊಲೀಸರು ಇದೀಗ ತನಿಖೆ ಕೈಗೊಂಡಿದ್ದಾರೆ.
LATEST NEWS
ಮಹಾ ಕುಂಭಮೇಳದಿಂದ ಉತ್ತರಪ್ರದೇಶ ಸರ್ಕಾರ ಗಳಿಸುವ ಆದಾಯ ಎಷ್ಟು ?
Published
52 minutes agoon
13/01/2025By
NEWS DESK3ಮಂಗಳೂರು/ಪ್ರಯಾಗರಾಜ್ : ಇಂದು ಬೆಳಗ್ಗೆ ಉತ್ತರಪ್ರದೇಶದ ಪ್ರಯಾಗರಾಜ್ ನಲ್ಲಿ ಮಹಾ ಕುಂಭಮೇಳ ಆರಂಭಗೊಂಡಿದ್ದು, ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳು ಸಂಗಮಿಸುವ ಸ್ಥಳವಾದ ಸಂಗಮ್ ನಲ್ಲಿ 50 ಲಕ್ಷಕ್ಕೂ ಹೆಚ್ಚು ಜನರು ಮೊದಲ ಪವಿತ್ರ ಸ್ನಾನ ಮಾಡಿದರು.
ಈ ಮಹಾ ಕುಂಭಮೇಳವು ಹೊಸ ವರ್ಷದ ಮೊದಲ ಹುಣ್ಣಿಮೆ ಅಂದರೆ ಇಂದು (ಜನವರಿ 13) ಆರಂಭವಾಗಿ 2025ರ ಮಹಾ ಶಿವರಾತ್ರಿಯ ದಿನ ಅಂದರೆ ಫೆಬ್ರವರಿ 26ರವರೆಗೆ ನಡೆಯಲಿದೆ.
ವಿಶ್ವದ ಮಾನವೀಯತೆಯ ಅತಿ ದೊಡ್ಡಸಭೆ ಎಂದು ಕರೆಯಲ್ಪಡುವ, ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಮಹಾ ಕುಂಭಮೇಳವು 40 ಕೋಟಿಗೂ ಹೆಚ್ಚು ಜನರನ್ನು ಪ್ರಯಾಗರಾಜ್ ಗೆ ಕರೆತರುವ ನಿರೀಕ್ಷೆಯಿದೆ. ಇದು ಅಮೆರಿಕ ಮತ್ತು ರಷ್ಯಾದ ಜನಸಂಖ್ಯೆಗಿಂತಲೂ ಹೆಚ್ಚಾಗಿದೆ.
ಮೂರು ನದಿಗಳ ಸಂಗಮದಲ್ಲಿ ಭಕ್ತರ ಪವಿತ್ರ ಸ್ನಾನ
ದೇಶದ ಮೂರು ಮಹಾನದಿಗಳ (ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳು) ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾ ಕುಂಭಮೇಳದಲ್ಲಿ ಶಾಹಿ ಸ್ನಾನ ಮಾಡುವುದರಿಂದ ಜನರು ಮೋಕ್ಷವನ್ನು ಪಡೆಯುತ್ತಾರೆ ಎನ್ನುವ ನಂಬಿಕೆ ಇದೆ.
ಹೀಗಾಗಿ ದೇಶದ ಮೂಲೆ ಮೂಲೆಯಿಂದ ಜನ ಕುಂಭಮೇಳಕ್ಕೆ ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಭಕ್ತರಿಗಾಗಿ 10,000 ಹೆಕ್ಟೇರ್ ಗಳ ವಿಶಾಲವಾದ ಪ್ರದೇಶದಲ್ಲಿ 1.5 ಲಕ್ಷ ಟೆಂಟ್ ಗಳನ್ನು ನಿರ್ಮಿಸಲಾಗಿದೆ. ಶೌಚಾಲಯ, ಸ್ವಚ್ಛತೆ ಸೇರಿದಂತೆ ಮೊದಲೆಂದಿಗಿಂತಲೂ ಈ ಬಾರಿ ಭಕ್ತರಿಗಾಗಿ ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ಮಾಡಲಾಗಿದೆ.
ಇದನ್ನೂ ಓದಿ: ಮಹಾಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಕಲ್ಲು ತೂರಾಟ
ಮಹಾ ಕುಂಭಮೇಳದಿಂದ ಉತ್ತರಪ್ರದೇಶ ಸರ್ಕಾರ ಗಳಿಸುವ ಆದಾಯ ಎಷ್ಟು?
2025ರ ಮಹಾ ಕುಂಭಮೇಳದಿಂದ ಉತ್ತರಪ್ರದೇಶದ ಆರ್ಥಿಕತೆ, 2 ಲಕ್ಷ ಕೋಟಿ ತಲುಪಲಿದೆ ಎಂದು ಅಂದಾಜಿಸಲಾಗಿದೆ. ಅಂದರೆ ಪ್ರತಿ 40 ಕೋಟಿ ಸಂದರ್ಶಕರು ಸರಾಸರಿ 5,000 ರೂಪಾಯಿಗಳನ್ನು ಖರ್ಚು ಮಾಡಿದರೆ, ಮಹಾ ಕುಂಭಮೇಳದಿಂದ 2 ಲಕ್ಷ ಕೋಟಿ ಗಳಿಸಬಹುದು ಎಂದು ನೀರಿಕ್ಷಿಸಲಾಗಿದೆ.
ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ (ಸಿಎಐಟಿ) ಪ್ರಕಾರ, ಪ್ಯಾಕ್ ಮಾಡಿದ ಆಹಾರಗಳು, ನೀರು, ಬಿಸ್ಕೆಟ್ ಗಳು, ಜ್ಯೂಸ್ ಮತ್ತು ಊಟ, ತಂಪು ಪಾನೀಯಗಳು ಸೇರಿದಂತೆ ಒಟ್ಟು ವ್ಯಾಪಾರದ ಮೂಲಕ 20,000 ಕೋಟಿ ಗಳಿಸಬಹುದು ಎಂದು ಅಂದಾಜಿಸಲಾಗಿದೆ.
ಅಲ್ಲದೆ ತೈಲ, ದೀಪಗಳು, ಗಂಗಾಜಲ, ವಿಗ್ರಹಗಳು, ಧೂಪದ್ರವ್ಯಗಳು, ಧಾರ್ಮಿಕ ಪುಸ್ತಕಗಳು ಮತ್ತು ಕೊಡುಗೆಗಳು ಆರ್ಥಿಕತೆಯ ಮತ್ತೊಂದು ಭಾಗವಾಗಿದ್ದು, ಅಂದಾಜು 20,000 ಕೋಟಿ ರೂ. ತಲುಪಬಹುದು ಎಂದು ನೀರಿಕ್ಷಿಸಲಾಗಿದೆ.
ಸ್ಥಳೀಯ ಮತ್ತು ಅಂತರಾಜ್ಯ ಸಾರಿಗೆ ಸೇವೆಗಳು, ಸರಕು ಸಾಗಣೆ ಮತ್ತು ಟ್ಯಾಕ್ಸಿಗಳು ಸೇರಿದಂತೆ ಸಾರಿಗೆ ಮತ್ತು ಲಾಜಿಸ್ಟಿಕ್ಸ್ 10,000 ಕೋಟಿ ರೂಪಾಯಿಗಳನ್ನು ಅಂದಾಜಿಸಲಾಗಿದೆ. ಅಲ್ಲದೆ ಪ್ರವಾಸೋದ್ಯಮ ಸೇವೆಗಳಾದ ಟೂರ್ ಗೈಡ್ ಗಳು, ಟ್ರಾವೆಲ್ ಪ್ಯಾಕೇಜ್ ಗಳು ಮತ್ತು ಇತರೆ ಮೂಲಗಳಿಂದ 10,000 ಕೋಟಿ ರೂಪಾಯಿಗಳು ಬರುವ ಸಾಧ್ಯತೆಯಿದೆ.
ತಾತ್ಕಲಿಕ ವೈದ್ಯಕೀಯ ಶಿಬಿರಗಳು, ಆಯುರ್ವೇದ ಉತ್ಪನ್ನಗಳು ಮತ್ತು ಔಷಧಗಳಿಂದ 3,000 ಕೋಟಿ ರೂ. ಆದಾಯ ನೀರಿಕ್ಷಿಸಿದರೆ, ಇ-ಟಿಕೆಟಿಂಗ್, ಡಿಜಿಟಲ್ ಪಾವತಿಗಳು, ವೈ-ಫೈ ಸೇವೆಗಳು ಮತ್ತು ಮೊಬೈಲ್ ಚಾರ್ಜಿಂಗ್ ಸ್ಟೇಷನ್ ಗಳಂತಹ ವಲಯಗಳಿಂದ 1,000 ಕೋಟಿ ರೂ. ಆದಾಯ ನೀರಿಕ್ಷಿಸಲಾಗಿದೆ. ಜಾಹೀರಾತು ಮತ್ತು ಪ್ರಚಾರ, ಮನರಂಜನೆ ಮತ್ತು ಮಾಧ್ಯಮಗಳ ಮೂಲಕ 10,000 ಕೋಟಿ ರೂ. ಆದಾಯ ಗಳಿಸಬಹುದೆಂದು ಅಂದಾಜಿಸಲಾಗಿದೆ.
2019ರಲ್ಲಿ ನಡೆದ ಪ್ರಯಾಗ್ ರಾಜ್ ನ ಅರ್ಧ ಕುಂಭಮೇಳವು ರಾಜ್ಯಕ್ಕೆ 1.2 ಲಕ್ಷ ಕೋಟಿ ರೂ. ಆದಾಯ ತಂದುಕೊಟ್ಟಿತ್ತು. ಇದರಲ್ಲಿ 24 ಕೋಟಿ ಭಕ್ತರು ಭಾಗಿಯಾಗಿದ್ದರು.
LATEST NEWS
ದಾಖಲೆ ಬರೆದ ಲವ – ಕುಶ ಜೋಡುಕರೆ ‘ನರಿಂಗಾನ ಕಂಬಳ’; ಫಲಿತಾಂಶ ವಿವರ ಇಲ್ಲಿದೆ
ಮಹಾಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಕಲ್ಲು ತೂರಾಟ
ತುಳುನಾಡು ಕಂಡ ಅಪೂರ್ವ ರಾಜಕಾರಣಿ ಉಳ್ಳಾಲ ಶ್ರೀನಿವಾಸ ಮಲ್ಯ
ಜಾಸ್ತಿ ರೀಲ್ಸ್ ನೋಡೋದನ್ನು ಬಿಟ್ಟು ಬಿಡಿ; ಇಲ್ಲಾಂದ್ರೆ ನಿಮ್ಮನ್ನು ಆವರಿಸುತ್ತೆ ಈ ರೋಗ
“ಇಂಟರ್ ಕಾಸ್ಟ್ ಮ್ಯಾರೇಜ್ ಹೆಚ್ಚಬೇಕು” : ಸಿಎಂ ಸಿದ್ಧರಾಮಯ್ಯ
ಉಡುಪಿ : ಡಿವೈಡರ್ ಹಾರಿ ಟೆಂಪೋಗೆ ಡಿ*ಕ್ಕಿ ಹೊಡೆದ ಕಾರು; ಚಾಲಕರಿಗೆ ಗಂಭೀ*ರ ಗಾ*ಯ
Trending
- BIG BOSS2 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS3 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- FILM5 days ago
ಗೋವಾದಲ್ಲಿ ಕೇಕ್ ಕತ್ತರಿಸಿ ಯಶ್ ಬರ್ತ್ಡೇ ಸಂಭ್ರಮ
- FILM4 days ago
ಮಗುವಿನೊಂದಿಗೆ ಕೊಲ್ಲೂರು ದೇಗುಲಕ್ಕೆ ಹರ್ಷಿಕಾ ದಂಪತಿ ಭೇಟಿ