Connect with us

ಮಾರ್ಚ್ 22 ರಿಂದ ವಿದೇಶ ವಿಮಾನಗಳಿಗೆ ಭಾರತದಲ್ಲಿ ಲ್ಯಾಂಡಿಗ್ ರದ್ದು

Published

on

ಮಾರ್ಚ್ 22 ರಿಂದ ವಿದೇಶ ವಿಮಾನಗಳಿಗೆ ಭಾರತದಲ್ಲಿ ಲ್ಯಾಂಡಿಗ್ ರದ್ದು

ಬೆಂಗಳೂರು: ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ವಿದೇಶದಿಂದ ಆಗಮಿಸಿದವರ ಮೂಲಕ ದೇಶದಲ್ಲಿ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ವಿದೇಶದಿಂದ ಜನರು ಬರುವುದನ್ನು ತಡೆಯಲು ಸರ್ಕಾರ ಅಂತರಾಷ್ಟ್ರೀಯ ವಿಮಾನಗಳಿಗೆ ಲ್ಯಾಂಡಿಂಗ್ ನೀಡದಿರಲು ಭಾರತ ಸರ್ಕಾರ ತೀರ್ಮಾನಿಸಿದೆ.

ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಅಂತಾರಾಷ್ಟ್ರೀಯ ವಿಮಾನಗಳು ಬಂದ್ ಆಗಲಿವೆ. ಕೊರೊನಾ ಹರಡದಂತೆ ತಡೆಯಲು ವಿದೇಶದಿಂದ ಆಗಮಿಸುವವರನ್ನು ತಡೆಯುವುದು ಅನಿವಾರ್ಯವಾಗಿದೆ. ಆದ್ದರಿಂದ, ವಿದೇಶಿ ವಿಮಾನಗಳಿಗೆ ಲ್ಯಾಂಡಿಂಗ್ ನೀಡದಿರಲು ತೀರ್ಮಾನಿಸಲಾಗಿದೆ.ಕೊರೊನಾ ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮಗಳನ್ನು ವಿಮಾನ ನಿಲ್ದಾಣದಲ್ಲಿ ತೆಗೆದುಕೊಳ್ಳಲಾಗಿದೆ.

ಪ್ರಸ್ತುತ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಬೆಂಗಳೂರಿಗೆ ಬರುತ್ತಿರುವ ಪ್ರಯಾಣಿಕರ ಕೈಗಳ ಮೇಲೆ ಆರೋಗ್ಯ ಇಲಾಖೆ ತಂಡದ ಸಿಬ್ಬಂದಿಗಳು ಚುನಾವಣೆ ಸಂದರ್ಭದಲ್ಲಿ ಬಳಸುವ ಶಾಹಿಯಿಂದ ಸ್ಟ್ಯಾಂಪಿಂಗ್ ಮಾಡುತ್ತಿದ್ದಾರೆ. ನಿಲ್ದಾಣದಲ್ಲಿ ಸ್ಟ್ಯಾಂಪಿಂಗ್ ಮಾಡಿಸಿಕೊಂಡವರು 14 ದಿನಗಳ ಪ್ರತ್ಯೇಕವಾಗಿರುವುದು ಅತ್ಯಾವಶ್ಯಕ. ವಿದೇಶದಿಂದ ಬಂದ ಪ್ರಯಾಣಿಕರಿಗೆ ಹಲವು ಮಾರ್ಗಸೂಚಿಗಳನ್ನು ಕೂಡ ಸರ್ಕಾರ ಬಿಡುಗಡೆ ಮಾಡಿದೆ.

ವಿಡಿಯೋಗಾಗಿ

Click to comment

Leave a Reply

Your email address will not be published. Required fields are marked *

DAKSHINA KANNADA

ಕಬಕ-ಮುರ ರೈಲ್ವೇ ಹಳಿಯಲ್ಲಿ ವ್ಯಕ್ತಿಯ ಶ*ವ ಪತ್ತೆ

Published

on

ಪುತ್ತೂರು: ಇಲ್ಲಿನ ಮುರ ಎಂಬಲ್ಲಿ ಕಬಕ-ಪುತ್ತೂರು ರೈಲು ಸಂಚಾರದ ರೈಲ್ವೇ ಹಳಿಯಲ್ಲಿ ವ್ಯಕ್ತಿಯೊಬ್ಬರ ಮೃ*ತದೇಹ ಪತ್ತೆಯಾಗಿರುವ ಘಟನೆ ಎ.23ರಂದು ಬೆಳಗಿನ ಜಾವ ಬೆಳಕಿಗೆ ಬಂದಿದೆ.

death

ಮೃತಪಟ್ಟ ವ್ಯಕ್ತಿಯ ದೇಹ ಹಳಿಯಿಂದ ಸ್ವಲ್ಪ ದೂರಕ್ಕೆ ಎಸೆಯಲ್ಪಟ್ಟಿದ್ದು ಕಾಲು ತುಂಡಾದ ಸ್ಥಿತಿಯಲ್ಲಿ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಇದು ಆತ್ಮಹ*ತ್ಯೆಯೋ? ಅಥವಾ ರೈಲು ಡಿಕ್ಕಿಯಾಗಿ ಸಂಭವಿಸಿದ ಘಟನೆಯೋ ಅನ್ನುವುದು ತನಿಖೆ ವೇಳೆ ಬೆಳಕಿಗೆ ಬರಲಿದೆ.

ಮುಂದೆ ಓದಿ..; ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

death

Continue Reading

BELTHANGADY

ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

Published

on

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮ‌ಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.

bison

ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Continue Reading

bangalore

ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

Published

on

ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶಿಸಿ ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದೆ.

ishwarappaishwarappa

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕೆಎಸ್‌ ಈಶ್ವರಪ್ಪ, ತಮ್ಮ ನಾಮಪತ್ರವನ್ನು ಹಿಂಪಡೆಯಲು ನಿನ್ನೆ(ಎ.22) ಕೊನೆಯ ದಿನವಾಗಿತ್ತು. ಆದರೆ, ಈಶ್ವರಪ್ಪ ನಾಮಪತ್ರವನ್ನು ಹಿಂಪಡೆಯಲು ನಿರಾಕರಿಸಿದ ಕಾರಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಆರು ವರ್ಷಗಳ ಕಾಲ ಅವರು ಬಿಜೆಪಿ ಪಕ್ಷದಡಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.

ಮುಂದೆ ಓದಿ..; ಚೌಟ ಪರ ಪ್ರಚಾರಕ್ಕೆ ಪುತ್ತೂರಿಗೆ ಬರಲಿದ್ದಾರೆ ಅಣ್ಣಾಮಲೈ

ಬಿಜೆಪಿ ಪಕ್ಷದಲ್ಲೇ ಇದ್ದುಕೊಂಡ ಕೆ ಎಸ್ ಈಶ್ವರಪ್ಪ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡು ನಿಂದಿಸುತ್ತಿದ್ದರು. ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ರಾಜಕಾರಣವನ್ನು ಕೆ ಎಸ್ ಈಶ್ವರಪ್ಪ ತೀವ್ರವಾಗಿ ಟೀಕಿಸುತ್ತಿದ್ದರು. ತನ್ನ ಬೆಂಬಲ ಮೋದಿ ಪ್ರಧಾನಿಗೆ ಇದೆ ಎಂದು ಹೇಳಿಕೊಂಡಿದ್ದ ಈಶ್ವರಪ್ಪ ತಾನು ಗೆದ್ದ ಬಳಿಕ ಮೋದಿಗೆ ಬೆಂಬಲ ನೀಡುವುದಾಗಿ ಹೇಳಿಕೆ ನೀಡುತ್ತಿದ್ದರು. ಆದರೆ ಇದೀಗ ಪಕ್ಷದಿಂದಲೇ ಇವರನ್ನು ಉಚ್ಛಾಟಿಸಲಾಗಿದೆ.

Continue Reading

LATEST NEWS

Trending