Connect with us

DAKSHINA KANNADA

Mangaluru: ಫೆ.10,11ರಂದು ತಣ್ಣೀರುಬಾವಿ ಬೀಚ್‌ನಲ್ಲಿ ಅಂತರಾಷ್ಟ್ರೀಯ ಮಟ್ಟದ ಗಾಳಿಪಟ ಉತ್ಸವ

Published

on

ಮಂಗಳೂರು: ಫೆ. 10, 11 ರಂದು ಮಂಗಳೂರಿನಲ್ಲಿ ಆರನೇ ಅಂತರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜಿಸಲಾಗಿದ್ದು, ಇದರ ಲೋಗೋ ಅನಾವರಣ ಇಂದು ನಡೆದಿದೆ. ವಿಧಾನಸಭಾ ಆಧ್ಯಕ್ಷರಾಗಿರುವ ಯು.ಟಿ.ಖಾದರ್ ಅವರು ಗಾಳಿಪಟ ಉತ್ಸವದ ಲೋಗೋ ಅನಾವರಣೆ ಮಾಡಿದ್ದಾರೆ.

ಪಣಂಬೂರು ಬೀಚ್ ಮಂಗಳೂರಿನ ಸೌಂದರ್ಯವನ್ನು ನೋಡಲೇಬೇಕು! - Sanchara - ಸಂಚಾರಈ ಹಿಂದೆ ಐದು ಬಾರಿ ನಡೆದಿದ್ದ ಗಾಳಿಪಟ ಉತ್ಸವ ಪಣಂಬೂರು ಬೀಚ್‌ನಲ್ಲಿ ಆಯೋಜಿಸಲಾಗಿದ್ದು, ಭಾರಿ ಜನಾಕರ್ಷಣೆ ಪಡೆದುಕೊಂಡಿತ್ತ. ಆದರೆ ಈ ಬಾರಿ ಆರನೇ ಗಾಳಿಪಟ ಉತ್ಸವವನ್ನು ತಣ್ಣೀರುಬಾವಿ ಬೀಚ್‌ನಲ್ಲಿ ಆಯೋಜಿಸಲಾಗುತ್ತಿದ್ದು, ಎಲ್ಲಾ ವ್ಯವಸ್ಥೆಗಳು ಭರದಿಂದ ಸಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಟೀಮ ಮಂಗಳೂರಿನ ಸಂಯೋಜಕರಾದ ಗಿರಿದರ್ ಕಾಮತ್, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಿದ್ದಾರೆ.

ಅಂತರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ 8 ದೇಶಗಳ 13 ತಂಡಗಳು ಆಗಮಿಸಲಿದ್ದು, ವಿಶೇಷವಾದ ಗಾಳಿಪಟಗಳನ್ನು ಹಾರಿಸಲಿದ್ದಾರೆ. ಹಾಗೂ ಬೇರೆ ಬೇರೆ ರಾಜ್ಯಗಳಿಂದ ಸುಮಾರು 35 ತಂಡಗಳೂ ಕೂಡಾ ಆಗಮಿಸಿ ಅವರ ಗಾಳಿಪಟಗಳನ್ನು ತಣ್ಣೀರುಬಾವಿ ಬೀಚ್‌ನಲ್ಲಿ ಹಾರಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಗಾಳಿಪಟ ಉತ್ಸವ ಶನಿವಾರ ಸಂಜೆ 3 ಗಂಟೆಗೆ ಆರಂಭವವಾಗಲಿದ್ದು, ರಾತ್ರಿ 8 ಗಂಟೆಯ ವರೆಗೂ ನಡೆಯಲಿದೆ. 8 ಗಂಟೆಯ ಬಳಿಕ ಲೈಟ್‌ ಬೆಳಕಿನಲ್ಲಿ ಆಕರ್ಷವಾಗಿ ಕಾಣುವ ಗಾಳಿಪಟಗಳ ಹಾರಾಟ ಕೂಡಾ ನಡೆಯಲಿದೆ. ಗಾಳಿ ಪಟ ಉತ್ಸವದಲ್ಲಿ ಭಾಗವಹಿಸಲು ಸ್ಥಳಿಯರಿಗೂ ಅವಕಾಶ ಕಲ್ಪಿಸಲಾಗಿದ್ದು, ಗಾಳಿಪಟ ಮಾರಾಟ ವ್ಯವಸ್ಥೆ ಕೂಡಾ ಇರಲಿದೆ.

Arboretum Kite Fest - Stellar Experiences

ಇನ್ನು ಟೀಮ್ ಮಂಗಳೂರಿನ ತಂಡದಿಂದ ಹಲವು ಗಾಳಿಪಟ ಹಾರಿಸಲಿದ್ದು, ವಿಶೇಷವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ ಕಥಕ್ಕಳಿ, ಯಕ್ಷಗಾನ, ಪುಷ್ಪಕ ವಿಮಾನ ಗಾಳಿಪಟ ಬಾನಿನಲ್ಲಿ ಹಾರಲಿದೆ. ಜಿಲ್ಲಾಡಳಿತ , ಪ್ರವಾಸೋದ್ಯಮ ಇಲಾಖೆ, ಮಂಗಳೂರು ಬಂದರು ಪ್ರಾದಿಕಾರ, ಹಾಗೂ ಎಂಆರ್‌ಪಿಎಲ್ ಸಹಭಾಗಿತ್ವದಲ್ಲಿ ಟೀಂ ಮಂಗಳೂರು ಈ ಆರನೇ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಆಯೋಜಸಿದೆ. ತಣ್ಣೀರುಬಾವಿ ಬೀಚ್‌ನಲ್ಲಿ 2 ಸಾವಿರ ವಾಹನಗಳಿಗೆ ನಿಲುಗಡೆಗೆ ವ್ಯವಸ್ಥೆ ಮಾಡಲಾಗುತ್ತಿದ್ದು, ಪಣಂಬೂರು ಪೊಲೀಸ್ ಇಲಾಖೆ ಈ ಬಗ್ಗೆ ಕ್ರಮ ಕೈಗೊಂಡಿದೆ. ಅದೇ ರೀತಿ ಮಂಗಳೂರು ನಗರದ ಜನರು ಸುಲ್ತಾನ್ ಬತ್ತೇರಿಯಿಂದ ಫೆರಿ ಮೂಲಕ ತಣ್ಣೀರುಬಾವಿಗೆ ಆಗಮಿಸುವಂತೆ ಆಯೋಜಕರು ಕೋರಿದ್ದಾರೆ.

DAKSHINA KANNADA

ಮಂಗಳೂರು ಮೇಯರ್ ಫೋನ್‌ ಇನ್ ಕಾರ್ಯಕ್ರಮ; ಬಿಲ್‌ಗಳನ್ನು ಆನ್‌ಲೈನ್ ಮೂಲಕ ಪಾವತಿಸುವ ವ್ಯವಸ್ಥೆ ಜಾರಿ

Published

on

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಜನರ ಸಮಸ್ಯೆ ಆಲಿಸಲು ಮೇಯರ್ ಇಂದು ಫೋನ್‌ ಇನ್ ಕಾರ್ಯಕ್ರಮ ನಡೆಸಿದ್ದಾರೆ. ಮೇಯರ್ ಆಗಿ ಅಧಿಕಾರ ವಹಿಸಿಕೊಂಡ ಸುಧೀರ್ ಕುಮಾರ್ ಶೆಟ್ಟಿ ಕಣ್ಣೂರು ಅವರು ಪ್ರತಿ ತಿಂಗಳು ಈ ಫೋನ್ ಇನ್ ಕಾರ್ಯಕ್ರಮ ನಡೆಸಿ ಜನಸ್ನೇಹಿ ಆಡಳಿತ ನೀಡಲು ಪ್ರಯತ್ನಿಸಿದ್ದಾರೆ. ಫೋನ್ ಮೂಲಕ ಬರುವ ದೂರುಗಳನ್ನು ಸ್ವೀಕರಿಸಿ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಸಮಸ್ಯೆಯನ್ನು ತಕ್ಷಣ ಬಗೆ ಹರಿಸಲು ಇದರಿಂದ ಸಾಧ್ಯವಾಗಿದೆ. ಕಳೆದ ತಿಂಗಳು ನಡೆದಿದ್ದ ಫೋನ್‌ ಇನ್ ಕಾರ್ಯಕ್ರಮದಲ್ಲಿ ಸುಮಾರು 27 ದೂರುಗಳಲ್ಲಿ 24 ದೂರುಗಳನ್ನು ತಕ್ಷಣ ಬಗೆ ಹರಿಸಿದ್ದಾರೆ. ಈ ಬಾರಿಯೂ ಕೂಡಾ ಸುಮಾರು 26 ಕರೆಗಳು ಬಂದಿದ್ದು ಬಹುತೇಕ ಕರೆಗಳು ನಗರದ ಸ್ವಚ್ಚತೆ , ಸ್ವಯಂ ಘೋಷಿತ ಆಸ್ತಿ ತೆರಿಗೆ , ಹಾಗೂ ಲೈಸೆನ್ಸ್‌ ವಿಚಾರವಾಗಿತ್ತು.

ನಗರದ ಪಂಪ್‌ವೆಲ್‌ನ ಮಹಾವೀರ ವೃತ್ತವನ್ನು ಸುಂದರವಾಗಿಸಿದ್ರೂ ಅಲ್ಲಿ ಅಲೆಮಾರಿ ಕುಟುಂಬಗಳು ನಗರ ಸೌಂದರ್ಯ ಕೆಡಿಸಿರುವ ಬಗ್ಗೆ ದೂರು ಬಂದಿದೆ. ಅವರನ್ನು ಪೊಲೀಸರ ಸಹಾಯದಿಂದ ತೆರವು ಗೊಳಿಸಲಾಗುವುದು ಎಂದು ಮೇಯರ್ ಹೇಳಿದ್ದಾರೆ.

ಅಲ್ಲದೇ, ಆಸ್ತಿ ತೆರಿಗೆ ವಿಚಾರದಲ್ಲಿ ಜನರಿಗೆ ಸಹಾಯ ಆಗುವ ನಿಟ್ಟಿನಲ್ಲಿ ಎಲ್ಲಾ ಬಿಲ್‌ಗಳನ್ನು ಆನ್‌ಲೈನ್ ಮೂಲಕ ಪಾವತಿಸುವ ವ್ಯವಸ್ಥೆ ಮಾಡಲಾಗುವುದು. ಈ ಬಗ್ಗೆ ನಾಳೆ ನಡೆಯುವ ಸಾಮಾನ್ಯ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಮೇಯರ್ ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಜನಸ್ನೇಹಿ ಆಡಳಿತ ನೀಡಲು ಪೋನ್ ಇನ್ ಕಾರ್ಯಕ್ರಮ ಸಹಕಾರಿಯಾಗಿದ್ದು, ಜನರು ಸಮಸ್ಯೆಗಳನ್ನು ಗಮನಕ್ಕೆ ತಂದಾಗ ತಕ್ಷಣ ಕ್ರಮ ಕೈಗೊಳ್ಳಲು ಸಹಕಾರಿ ಆಗುತ್ತದೆ ಎಂದು ಅವರು ಹೇಳಿದ್ದಾರೆ.

Continue Reading

DAKSHINA KANNADA

Mangaluru: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ಯುವಮೋರ್ಚಾ

Published

on

ಮಂಗಳೂರು : ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದ ಆರೋಪದ ವಿಚಾರವಾಗಿ ಮಂಗಳೂರಿನಲ್ಲೂ ಪ್ರತಿಭಟನೆ ನಡೆಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

 


ನಾಸಿರ್ ಹುಸೇನ್ ರಾಜೀನಾಮೆ ನೀಡಬೇಕು ಹಾಗೂ ಘೋಷಣೆ ಕೂಗಿದ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕುವ ವಿಚಾರ ತಿಳಿದ ಪೊಲೀಸರು ಕಚೇರಿ ಬಳಿ ಹೆಚ್ಚಿನ ಭದ್ರತೆ ಏರ್ಪಡಿಸಿದ್ದರು.

ಕಾಂಗ್ರೆಸ್ ಕಚೇರಿ ಸುತ್ತ ಬ್ಯಾರಿಕೇಡ್ ಅಳವಡಿಸಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕದಂತೆ ತಡೆ ಒಡ್ಡಿದ್ದಾರೆ. ಕಚೇರಿ ಬಳಿ ಬಂದು ನಾಸಿರ್ ಹುಸೇನ್ ಹಾಗೂ ಕಾಂಗ್ರೆಸ್‌ಗೆ ಧಿಕ್ಕಾರ ಕೂಗಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Continue Reading

DAKSHINA KANNADA

ಕಾಗೆ ರಾಷ್ಟ್ರೀಯ ಪಕ್ಷಿಯಾಗಬೇಕಿತ್ತು, ಹಸು ರಾಷ್ಟ್ರೀಯ ಪ್ರಾಣಿಯಾಗಬೇಕಿತ್ತು- ನಟ ಪ್ರಕಾಶ್ ರಾಜ್

Published

on

ಉಳ್ಳಾಲ: ತೊಕ್ಕೊಟ್ಟಿನಲ್ಲಿ ನಡೆದ ಡಿವೈಎಫ್‌ಐನ 12ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾವೇಶಕ್ಕೆ ಅತಿಥಿಯಾಗಿ ಆಗಮಿಸಿದ ಬಹುಬಾಷಾ ನಟ ಪ್ರಕಾಶ್ ರಾಜ್‌ ಭಾಷಣದ ಉದ್ದಕ್ಕೂ ಪ್ರಧಾನಿ ಮೋದಿಯವರನ್ನು ಏಕವಚನದಲ್ಲೇ ಸಂಭೋದಿಸಿ ಟೀಕೆ ಮಾಡಿದ್ದಾರೆ.

ಅಲ್ಲದೇ  ಬಹುಮತ ಎಲ್ಲ ದೇಶದಲ್ಲಿ ನಡೆಯಲ್ಲ, ಪ್ರಕೃತಿಗೆ ಬಹುಮತ ಸರಿಯಲ್ಲ, ಬಹುಮತನೇ ಆಗಬೇಕಾದ್ರೆ ಕಾಗೆ ರಾಷ್ಟ್ರೀಯ ಪಕ್ಷಿಯಾಗಬೇಕಿತ್ತು. ಹಸು ರಾಷ್ಟ್ರೀಯ ಪ್ರಾಣಿಯಾಗಬೇಕಿತ್ತು ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

Continue Reading

LATEST NEWS

Trending